ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಕನ್ನಡಿಗ ಸುನೀಲ್ ಶೆಟ್ಟಿ

ವಾಹನಗಳ ಬಗ್ಗೆ ಕ್ರೇಜ್ ಅನ್ನೋದು ಯಾರಿಗೆ ಇರಲ್ಲ ಹೇಳಿ, ಅದರಲ್ಲಿಯು ಬಾಲಿವುಡ್ ಸಿನಿಮಾ ಸೆಲಬ್ರಿಟಿಗಳಿಗೆ ಈ ಕ್ರೇಜ್ ಸ್ವಲ್ಪ ಹೆಚ್ಚೆ ಇರುತ್ತದೆ. ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ಐಷಾರಾಮಿ ಮತ್ತು ಸ್ಪೋರ್ಟ್ಸ್ ಕಾರುಗಳ ಮೇಲೆ ಹೆಚ್ಚು ಕ್ರೇಜ್ ಹೊಂದಿದ್ದಾರೆ.

ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಕನ್ನಡಿಗ ಸುನೀಲ್ ಶೆಟ್ಟಿ

ಇದೀಗ ನಟ ಸುನೀಲ್ ಶೆಟ್ಟಿ ಕಾರು ಅವರು ಹೊಸ ಲ್ಯಾಂಡ್ ರೋವರ್ ಡಿಫೆಂಡರ್ 110 ಎಸ್‍ಯುವಿಯನ್ನು ಖರೀದಿಸಿದ್ದಾರೆ. ಸುನೀಲ್ ಶೆಟ್ಟಿ ಎಸ್‍ಯುವಿ ಕಾರುಗಳ ಅಭಿಮಾನಿಯಾಗಿದ್ದಾರೆ. ಡಿಫೆಂಡರ್ 110 ಎಸ್‍ಯುವಿಯ ಆನ್-ರೋಡ್ ಬೆಲೆಯು ರೂ.1.05 ಕೋಟಿಯಾಗಿದೆ. ಒರಟಾದ ಮತ್ತು ಸಮರ್ಥ ಆಫ್ ರೋಡರ್, ಲ್ಯಾಂಡ್ ರೋವರ್ ಡಿಫೆಂಡರ್ ಪ್ರಪಂಚದಾದ್ಯಂತ ಆರಾಧನೆಯನ್ನು ಹೊಂದಿದೆ. ಅನೇಕ ಸೆಲೆಬ್ರಿಟಿಗಳು ಈ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍ಯುವಿಯನ್ನು ಹೊಂದಿದ್ದಾರೆ.

ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಕನ್ನಡಿಗ ಸುನೀಲ್ ಶೆಟ್ಟಿ

ಮಲಯಾಳಂನ ಮೆಗಾಸ್ಟಾರ್ ಮಮ್ಮುಟ್ಟಿ, ಅರ್ಜುನ್ ಕಪೂರ್, ಸನ್ನಿ ಡಿಯೋಲ್, ಆಯುಷ್ ಶರ್ಮಾ, ರವಿತೇಜ ಮತ್ತು ಪೃಥ್ವಿರಾಜ್ ಸೇರಿದಂತೆ ಹಲವರು ಸೆಲಬ್ರಿಟಿಗಳು ಲ್ಯಾಂಡ್ ರೋವರ್ ಡಿಫೆಂಡರ್ ಅನ್ನು ಹೊಂದಿದ್ದಾರೆ. ಹೆಸರಾಂತ ಉದ್ಯಮಿ ಮತ್ತು ರಾಜಕಾರಣಿಗಳು ಸಹ ಲ್ಯಾಂಡ್ ರೋವರ್ ಡಿಫೆಂಡರ್ ಅನ್ನು ಹೊಂದಿದ್ದಾರೆ.

ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಕನ್ನಡಿಗ ಸುನೀಲ್ ಶೆಟ್ಟಿ

ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಕನ್ಯಾಕುಮಾರಿ ಸಂಸದ ವಿಜಯ್ ವಸಂತ್, ಉದ್ಯಮಿ ಮುಖೇಶ್ ಅಂಬಾನಿ ಮತ್ತು ಇಂಡಿಯನ್ ಎಕ್ಸ್‌ಪ್ರೆಸ್ ಕುಡಿ ವಿವೇಕ್ ಗೋಯೆಂಕಾ ಅವರು ಈ ಎಸ್‍ಯುವಿಯನ್ನು ಹೊಂದಿದ್ದಾರೆ.

ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಕನ್ನಡಿಗ ಸುನೀಲ್ ಶೆಟ್ಟಿ

ಈ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ 110 ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಈ ಎಸ್‍ಯುವಿಯ ಗಾತ್ರದಿಂದ ಗಮನ ಸೆಳೆಯುತ್ತದೆ. ಈ ಎಸ್‌ಯುವಿಯಲ್ಲಿರುವ ಕಪ್ಪು ಬಣ್ಣದ ಬ್ಯಾಡ್ಜ್‌ಗಳನ್ನು ಹೊಂದಿರುವ ಪ್ಯಾಂಗಿಯಾ ಗ್ರೀನ್ ಬಣ್ಣವು ಆಕರ್ಷಕವಾಗಿ ಕಾಣುತ್ತದೆ. ಈ ಎಸ್‌ಯುವಿಯ ಮುಂಭಾಗದಲ್ಲಿ ಡಿಆರ್‌ಎಲ್‌ ಹೊಂದಿರುವ ಎಲ್‌ಇಡಿ ಹೆಡ್‌ಲೈಟ್ ಯುನಿಟ್ ಅಳವಡಿಸಲಾಗಿದೆ.

ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಕನ್ನಡಿಗ ಸುನೀಲ್ ಶೆಟ್ಟಿ

ಟಾಪ್ ಎಂಡ್ ಮಾದರಿಯಲ್ಲಿ ಎಲ್ಇಡಿ ಮ್ಯಾಟ್ರಿಕ್ಸ್ ಹೆಡ್ ಲೈಟ್ ಯುನಿಟ್ ನೀಡಲಾಗುತ್ತದೆ. ಬಂಪರ್ ಕೆಳಭಾಗದಲ್ಲಿ ಇಂಟಿಗ್ರೇಟೆಡ್ ಎಲ್ಇಡಿ ಫಾಗ್ ಲ್ಯಾಂಪ್'ಗಳನ್ನು ನೀಡಲಾಗಿದೆ. ಡಿಫೆಂಡರ್ ಎಸ್‌ಯುವಿಯಲ್ಲಿ ದೊಡ್ಡ ಬಂಪರ್ ನೀಡಲಾಗಿದೆ.ಬಾನೆಟ್‌ನಲ್ಲಿರುವ ರೇಖೆಗಳು ಹಾಗೂ ಕ್ರೀಸ್‌ಗಳು ಈ ಎಸ್‌ಯುವಿಗೆ ಹೆಚ್ಚು ಸ್ಟಾನ್ಸ್ ಅನ್ನು ನೀಡುತ್ತದೆ.

ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಕನ್ನಡಿಗ ಸುನೀಲ್ ಶೆಟ್ಟಿ

ಬಾನೆಟ್‌ನ ಮಧ್ಯಭಾಗದಲ್ಲಿ ಕಪ್ಪು ಬಣ್ಣದ ದಪ್ಪವಾಗಿರುವ ಡಿಫೆಂಡರ್ ಬ್ಯಾಡ್ಜ್ ಅಳವಡಿಸಲಾಗಿದೆ. ಈ ಎಸ್‌ಯುವಿಯಲ್ಲಿ 20 ಇಂಚಿನ ಅಲಾಯ್ ವ್ಹೀಲ್ ನೀಡಲಾಗಿದೆ. ಲೋ ಎಂಡ್ ಮಾದರಿಯಲ್ಲಿ 19 ಇಂಚಿನ ವ್ಹೀಲ್'ಗಳನ್ನು ಹೊಂದಿವೆ.

ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಕನ್ನಡಿಗ ಸುನೀಲ್ ಶೆಟ್ಟಿ

ಈ ಡಿಫೆಂಡರ್‌ ಎಸ್‌ಯುವಿಯ ಹೊರಭಾಗದಲ್ಲಿ ಒಟ್ಟು ಆರು ಕ್ಯಾಮೆರಾ ಹಾಗೂ ಸುತ್ತಲೂ ಸೆನ್ಸಾರ್'ಗಳಿವೆ. ಈ ಕ್ಯಾಮರಾ 360 ಡಿಗ್ರಿ, ಆಫ್ ರೋಡಿಂಗ್'ನಲ್ಲಿ ನೆರವಿಗೆ ಬರುತ್ತದೆ. ಐಆರ್‌ವಿ‌ಎಂ ಹಿಂದೆ ಇರುವ ಕ್ಯಾಮೆರಾ ಆಕ್ಟಿವ್ ಲೇನ್ ಅಸಿಸ್ಟ್ ಹಾಗೂ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಆಗಿ ಕಾರ್ಯನಿರ್ವಹಿಸುತ್ತದೆ.

ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಕನ್ನಡಿಗ ಸುನೀಲ್ ಶೆಟ್ಟಿ

ಮತ್ತೊಂದೆಡೆ, ಐಆರ್‌ವಿ‌ಎಂನಲ್ಲಿ ವೀಡಿಯೊ ಪ್ರದರ್ಶಿಸುವ ಶಾರ್ಕ್-ಫಿನ್ ಆಂಟೆನಾದಲ್ಲಿ ಕ್ಯಾಮೆರಾ ಇನೀಡಲಾಗಿದೆ. ಬೂಟ್‌ನಲ್ಲಿ ಹೆಚ್ಚುವರಿ ಲಗೇಜ್ ಇದ್ದರೆ ಮಿರರ್ ಮೂಲಕ ಹಿಂದೆ ನೋಡಲು ಸಾಧ್ಯವಾಗದಿದ್ದರೆ ಈ ಫೀಚರ್ ನೆರವಿಗೆ ಬರುತ್ತದೆ. ಈ ಎಸ್‌ಯುವಿಯು ಸುಮಾರು 218 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಹೊಂದಿದೆ.

ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಕನ್ನಡಿಗ ಸುನೀಲ್ ಶೆಟ್ಟಿ

ಲ್ಯಾಂಡ್ ರೋವರ್ ಡಿಫೆಂಡರ್ 110 ಎಸ್‌ಯುವಿಯು ಏರ್ ಸಸ್ಪೆಂಷನ್ ಹೊಂದಿರುವುದರಿಂದ ಆಫ್-ರೋಡ್ ಮೋಡ್‌ನಲ್ಲಿ ಎತ್ತರವನ್ನು 291 ಎಂಎಂಗಳವರೆಗೆ ಹೆಚ್ಚಿಸಬಹುದು. ಈ ಎಸ್‌ಯುವಿಯ ಹಿಂಭಾಗದಲ್ಲಿ ಟೇಲ್‌ಲೈಟ್‌ಗಳಿಗಾಗಿ ಹೊಸ ವಿನ್ಯಾಸವನ್ನು ನೀಡಲಾಗಿದೆ.

ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಕನ್ನಡಿಗ ಸುನೀಲ್ ಶೆಟ್ಟಿ

ಡಿಫೆಂಡರ್ ಎಸ್‌ಯುವಿಯೊಂದಿಗೆ ಮೂರು ಇಂಟಿರಿಯರ್ ಬಣ್ಣಗಳನ್ನು ನೀಡಲಾಗುತ್ತದೆ. ಪ್ಯಾಂಗಿಯಾ ಗ್ರೀನ್ ಬಣ್ಣದಲ್ಲಿ ಕಪ್ಪು ಬಣ್ಣದ ಇಂಟಿರಿಯರ್ ನೀಡಲಾದರೆ, ಮತ್ತೊಂದು ಲೈಟ್ ಕ್ರೀಮ್ ಬಣ್ಣದ ಇಂಟಿರಿಯರ್ ಅನ್ನು ಹೊಂದಿದೆ. ಡಿಫೆಂಡರ್ ಎಸ್‌ಯುವಿಯಲ್ಲಿ ಒಟ್ಟು 14 ಯುಎಸ್‌ಬಿ ಹಾಗೂ ಚಾರ್ಜಿಂಗ್ ಸಾಕೆಟ್‌ಗಳನ್ನು ನೀಡಲಾಗಿದೆ. ಇದರಲ್ಲಿ ಬೂಟ್‌ನಲ್ಲಿರುವ 230 ವೋಲ್ಟ್ ಚಾರ್ಜರ್ ಸಹ ಹೊಂದಿದೆ.

ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಕನ್ನಡಿಗ ಸುನೀಲ್ ಶೆಟ್ಟಿ

ಈ ಚಾರ್ಜರ್ ಮೂಲಕ ಲ್ಯಾಪ್‌ಟಾಪ್, ಸ್ಪೀಕರ್ ಸೇರಿದಂತೆ ಹಲವು ಗೃಹೋಪಯೋಗಿ ಉಪಕರಣಗಳನ್ನು ಚಾರ್ಜ್ ಮಾಡಬಹುದು. ಟಾಪ್ ಎಂಡ್ ಮಾದರಿಯು ವೆಂಟಿಲೇಟೆಡ್ ಆಗಿದ್ದು, ಡ್ರೈವರ್ ಹಾಗೂ ಪ್ರಯಾಣಿಕರ ಸೀಟುಗಳಲ್ಲಿ ಮೆಮೊರಿ ಫಂಕ್ಷನ್ ನೀಡಲಾಗಿದೆ.

ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಕನ್ನಡಿಗ ಸುನೀಲ್ ಶೆಟ್ಟಿ

ಇನ್ನು ಸ್ಟೀಯರಿಂಗ್ ವ್ಹೀಲ್ ಎಲೆಕ್ಟ್ರಿಕ್ ಅಡ್ಜಸ್ಟಬಲ್ ಆಗಿದ್ದು, ಆಟೋ ಫೀಚರ್ ಹೊಂದಿದೆ. ಈ ಆಟೋ ಫೀಚರ್ ಸ್ಟೀಯರಿಂಗ್ ವ್ಹೀಲ್ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಚಾಲಕನ ಸೀಟ್ ಅನ್ನು ಎತ್ತರಕ್ಕೆ ಅನುಗುಣವಾಗಿ ಹೊಂದಿಸಲು ನೆರವಾಗುತ್ತದೆ. ಈ ಎಸ್‌ಯುವಿಯಲ್ಲಿ ಆಪಲ್ ಕಾರ್ ಪ್ಲೇ ಹಾಗೂ ಆಂಡ್ರಾಯ್ಡ್ ಆಟೋ ಹೊಂದಿರುವ 10 ಇಂಚಿನ ಇನ್ಫೋಟೇನ್ಮೆಂಟ್ ಸಿಸ್ಟಂ ನೀಡಲಾಗಿದೆ.

ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಕನ್ನಡಿಗ ಸುನೀಲ್ ಶೆಟ್ಟಿ

ಡಿಫೆಂಡರ್ ಎಸ್‌ಯುವಿಯಲ್ಲಿರುವ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಎಸ್‌ಯುವಿಯ ಬಗ್ಗೆ ಪ್ರತಿಯೊಂದು ಮಾಹಿತಿಯನ್ನು ಒದಗಿಸುತ್ತದೆ. ಸ್ಟೀರಿಂಗ್ ವ್ಹೀಲ್ ಅನ್ನುಲೆದರ್'ನಿಂದ ವ್ರಾಪ್ ಮಾಡಲಾಗಿದೆ. ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್'ಗಳು ಚಾಲಕನ ಗಮನವನ್ನು ರಸ್ತೆಯ ಮೇಲಿರುವಂತೆ ಮಾಡುತ್ತವೆ.

ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಕನ್ನಡಿಗ ಸುನೀಲ್ ಶೆಟ್ಟಿ

ಡಿಫೆಂಡರ್ ಎಸ್‌ಯುವಿಯಲ್ಲಿ ಕ್ರೂಸ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, 3 ಡಿ ಮೆರಿಡಿಯನ್ ಸರೌಂಡ್ ಸೌಂಡ್ ಸಿಸ್ಟಂ, ಆ ಸ್ಟ್ರೀಮ್ ಕ್ರಾಸಿಂಗ್‌ಗಳಿಗಾಗಿ ವೇಡ್ ಸೆನ್ಸಿಂಗ್, ಡ್ರೈವರ್ ಕಂಡಿಷನ್ ಮಾನಿಟರಿಂಗ್, ಏರ್‌ಬ್ಯಾಗ್, ಎಬಿಎಸ್, ಟ್ರಾಕ್ಷನ್ ಕಂಟ್ರೋಲ್ ಸೇರಿದಂತೆ ಹಲವಾರು ಫಿಚರ್ಸ್ ಗಳನ್ನು ಹೊಂದಿವೆ.

ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಕನ್ನಡಿಗ ಸುನೀಲ್ ಶೆಟ್ಟಿ

ಲ್ಯಾಂಡ್ ರೋವರ್ ಡಿಫೆಂಡರ್ ಎಸ್‌ಯುವಿಯಲ್ಲಿ 2.0 ಲೀಟರ್, ನಾಲ್ಕು ಸಿಲಿಂಡರ್, ಟರ್ಬೊ-ಪೆಟ್ರೋಲ್ ಪಿ 300 ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ ಸುಮಾರು 300 ಬಿ‌ಹೆಚ್‌ಪಿ ಪವರ್ ಹಾಗೂ 400 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ.ಈ ಎಂಜಿನ್'ಗೆ ಎಂಟು ಸ್ಪೀಡಿನ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಜೋಡಿಸಲಾಗಿದೆ. ಈ ಎಂಜಿನ್ ಎಲ್ಲಾ ನಾಲ್ಕು ವ್ಹೀಲ್'ಗಳಿಗೆ ಪವರ್ ಕಳುಹಿಸುತ್ತದೆ.

ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಕನ್ನಡಿಗ ಸುನೀಲ್ ಶೆಟ್ಟಿ

ಇನ್ನು 3.0 ಲೀಟರ್ ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ 298 ಬಿಹೆಚ್‌ಪಿ ಪವರ್ ಹಾಗೂ 650 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್'ನೊಂದಿಗೆ ಎಂಟು ಸ್ಪೀಡಿನ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಯುನಿಟ್ ಜೋಡಿಸಲಾಗಿದೆ. ಡಿಫೆಂಡರ್ 90 ಎಸ್‌ಯುವಿಯ ಡೀಸೆಲ್ ಆವೃತ್ತಿಯು 6.7 ಸೆಕೆಂಡುಗಳಲ್ಲಿ 0 - 100 ಕಿ.ಮೀ ವೇಗವನ್ನು ಆಕ್ಸಲರೇಟ್ ಮಾಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

ದುಬಾರಿ ಬೆಲೆಯ ಐಷಾರಾಮಿ ಕಾರು ಖರೀದಿಸಿದ ಕನ್ನಡಿಗ ಸುನೀಲ್ ಶೆಟ್ಟಿ

ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‌ಯುವಿಯು ಕಂಪನಿಯ ಇತ್ತೀಚಿನ ಟೆರೈನ್ ರೆಸ್ಪಾನ್ಸ್ 2 ಫೀಚರ್ ಹೊಂದಿದೆ. ಈ ಫೀಚರ್ ಗ್ರಾಹಕರಿಗೆ ಜನರಲ್ ಡ್ರೈವಿಂಗ್, ಗ್ರಾಸ್, ಗ್ರಾವೆಲ್, ಗ್ರಾಸ್, ಸ್ನೋ, ಮಡ್ ಅಂಡ್ ರಟ್ಸ್, ಸ್ಯಾಂಡ್, ರಾಕ್ ಕ್ರಾಲ್ ಹಾಗೂ ವೇಡ್ ಎಂಬ ವಿವಿಧ ಡ್ರೈವಿಂಗ್ ಮೋಡ್'ಗಳನ್ನು ನೀಡುತ್ತದೆ. ಡಿಫೆಂಡರ್ ಎಸ್‌ಯುವಿಯು 900 ಎಂಎಂವರೆಗಿನ ನೀರಿನಲ್ಲಿ ಸಾಗುತ್ತದೆ. ಈ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‌ಯುವಿಯು ಅದ್ಭುತವಾಗಿದ್ದು, ಸಮರ್ಥವಾದ ಐಷಾರಾಮಿ ಆಫ್ ರೋಡ್ ಎಸ್‌ಯುವಿಗಳಲ್ಲಿ ಒಂದಾಗಿದೆ

Most Read Articles

Kannada
English summary
Story first published: Sunday, November 13, 2022, 13:00 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X