Rajinikanth: ಸಾಮಾನ್ಯರಂತೆ ವಿಮಾನದ ಎಕಾನಮಿ ಕ್ಲಾಸ್‌ನಲ್ಲಿ ಪ್ರಯಾಣಿಸಿ ಸರಳತೆ ಮೆರೆದ ನಟ ರಜನಿಕಾಂತ್

ಸೂಪರ್ ಸ್ಟಾರ್ ರಜನಿಕಾಂತ್ (Super star Rajinikanth) 'ಜೈ ಭೀಮ್' ಸಿನಿಮಾ ಖ್ಯಾತಿಯ ನಿರ್ದೇಶಕ ಟಿಜೆ ಜ್ಞಾನವೇಲ್ ಆಕ್ಷನ್ ಕಟ್ ಹೇಳುತ್ತಿರುವ 'ವೆಟ್ಟೈಯನ್' ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಇತ್ತಿಚೆಗೆ, ತಲೈವಾ ವಿಮಾನದ ಎಕಾನಮಿ ಕ್ಲಾಸ್‌ನಲ್ಲಿ ಪ್ರಯಾಣಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಆಂಧ್ರಪ್ರದೇಶದ ಕಡಪದಿಂದ ರಜನಿಕಾಂತ್ ವಿಮಾನದಲ್ಲಿ ಪ್ರಯಾಣಿಸುವಾಗ ಅಭಿಮಾನಿಗಳು ಈ ವಿಡಿಯೋವನ್ನು ಸೆರೆಹಿಡಿದ್ದಾರೆ. ದೇಶ ಕಂಡ ಪ್ರಖ್ಯಾತ ನಟನೊಬ್ಬ ವಿಮಾನದ ಎಕಾನಮಿ ಕ್ಲಾಸ್‌ (Economy class)ನಲ್ಲಿ ಸಾಮಾನ್ಯರಂತೆ ಪ್ರಯಾಣಿಸಿರುವುದನ್ನು ನೋಡಿ ಆಶ್ಚರ್ಯವನ್ನು ವ್ಯಕ್ತಪಡಿಸಿದ್ದಾರೆ. ನಟ ರಜನಿಯ ಕಟ್ಟಾ ಅಭಿಮಾನಿಯೊಬ್ಬ ಅವರೊಂದಿಗೆ ಮಾತನಾಡುತ್ತಿರುವ ವಿಡಿಯೋವನ್ನು 'ಎಕ್ಸ್' ಖಾತೆಯಲ್ಲಿ ಹಂಚಿಕೊಂಡಿದ್ದು, 'ನಾನು ದೇವರಿಗೆ ಹತ್ತಿರವಾದವನು' ಎಂದು ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

Superstar Rajinikanth Travels Flight Economy Class As A Normal Person: Shows Simplicity

ಮತ್ತೊಂದು ವಿಡಿಯೋದಲ್ಲಿ ನಟ ರಜನಿಕಾಂತ್ ಅವರು ವಿಮಾನದ ಕಿಟಕಿ ಪಕ್ಕದ ಆಸನದಲ್ಲಿ ಕುಳಿತುಕೊಂಡು ತಮ್ಮ ಏರ್‌ಪೋಡ್‌ಗಳನ್ನು ಹಾಕಿಕೊಳ್ಳುತ್ತಿರುವುದನ್ನು ಕಾಣಬಹುದು. ತಲೈವಾ ನೀಲಿ ಬಣ್ಣದ ಶರ್ಟ್ ಹಾಗೂ ಉಣ್ಣೆಯ ಪ್ಯಾಂಟ್‌ ಧರಿಸಿರುವುದನ್ನು ನೋಡಬಹುದು. ಸದ್ಯ ರಜನಿಕಾಂತ್ ವಿಮಾನದ ಎಕಾನಮಿ ಕ್ಲಾಸ್‌ನಲ್ಲಿ ಪ್ರಯಾಣಿಸಿದ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದು, ನೆಟ್ಟಿಗರು ಸಹ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಹೈದರಾಬಾದ್‌ ವಿಮಾನ ನಿಲ್ದಾಣದಿಂದ ಹೊರಬರುವಾಗಲೂ ತಲೈವಾ ಕಾಣಿಸಿಕೊಂಡಿದ್ದರು.

ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲಿಯು ರಜನಿಕಾಂತ್ ಅವರು 'ವೆಟ್ಟೈಯನ್' ಶೂಟಿಂಗ್ ಸೆಟ್‌ಗೆ ಆಗಮಿಸುತ್ತಿರುವ ವಿಡಿಯೋ ಈಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಈ ಸಿನಿಮಾದಲ್ಲಿ ತಲೈವಾ ಮುಸ್ಲಿಂ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ. ವೆಟ್ಟೈಯನ್ ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು, ಮಾರ್ಚ್‌ನಲ್ಲಿ ಮುಗಿಯಲಿದೆ.

ಜೈ ಭೀಮ್ (Jai Bhim) ಸಿನಿಮಾ ಖ್ಯಾತಿಯ ನಿರ್ದೇಶಕ ಟಿಜೆ ಜ್ಞಾನವೇಲ್ ಅವರು, ವೆಟ್ಟೈಯನ್ (Vettaiyan) ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವುದರಿಂದ ನಿರೀಕ್ಷೆಗಳು ಹೆಚ್ಚಾಗಿವೆ. ಈ ಸಿನಿಮಾದಲ್ಲಿ ಘಟಾನುಘಟಿ ನಟ, ನಟಿಯರು ಕಾಣಿಸಿಕೊಂಡಿದ್ದು, ಬಾಲಿವುಡ್ ಖ್ಯಾತ ನಟ ಅಮಿತಾಬ್ ಬಚ್ಚನ್, ಮಲಯಾಳಂ ನಟ ಫಹದ್ ಫಾಸಿಲ್, ತೆಲುಗು ನಟ ರಾಣಾ ದಗ್ಗುಬಾಟಿ, ಮಂಜು ವಾರಿಯರ್, ರಿತಿಕಾ ಸಿಂಗ್, ದುಶಾರಾ ವಿಜಯನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಜೈಲರ್ (Jailer) ಚಿತ್ರದ ಯಶಸ್ಸಿನ ಬಳಿಕ ನಟ ರಜನಿಕಾಂತ್, ತಾವು ಕೆಲಸ ಮಾಡಿದ್ದ ಬೆಂಗಳೂರಿನ ಜಯನಗರದ ಬಿಎಂಟಿಸಿ (BMTC) 4ನೇ ಡಿಪೋಗೆ ಭೇಟಿ ನೀಡಿ, ಅಲ್ಲಿ ಕೆಲವೊತ್ತು ಕಾಲ ಕಳೆದಿದ್ದರು. ಡಿಪೋ ಸಿಬ್ಬಂದಿ ರಜನಿಕಾಂತ್ ಅವರೊಂದಿಗೆ ಸೆಲ್ಫಿ ತೆಗೆದುಕೊಂಡು ಖುಷಿ ಪಟ್ಟಿದ್ದರು.

ಬಿಎಂಟಿಸಿಯ ನಿವೃತ್ತ ಚಾಲಕರಾಗಿರುವ ರಾಜ್ ಬಹುದ್ದೂರ್, ಬಸ್ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದ ರಜನಿಕಾಂತ್ ಅವರನ್ನು ಚಿತ್ರರಂಗಕ್ಕೆ ಹೋಗುವಂತೆ ಪ್ರೋತ್ಸಾಹಿಸಿದ್ದರಂತೆ. ತಲೈವಾ ಭಾರತದ ಅತ್ಯುನ್ನತ ಚಲನಚಿತ್ರ ಗೌರವವಾದ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರವು ತಮ್ಮ ಭಾಷಣದಲ್ಲಿ ಬೆಂಗಳೂರಿನ ಸ್ನೇಹಿತನನ್ನು ನೆನಪಿಸಿಕೊಂಡಿದ್ದರು. ಅದು ಕೂಡ ಅವರ ಸರಳತೆಗೆ ಹಿಡಿದ ಕೈಗನ್ನಡಿಯಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, March 1, 2024, 15:37 [IST]
English summary
Superstar rajinikanth travels flight economy class normal person video viral
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+