ರಾಜಧಾನಿಯಲ್ಲಿ ಓಲಾ, ಊಬರ್ ಮತ್ತು ರ‍್ಯಾಪಿಡೋ ಸೇರಿದಂತೆ ಬೈಕ್ ಟ್ಯಾಕ್ಸಿಗಳು ನಿಷೇಧಿಸಿದ ಸುಪ್ರೀಂ ಕೋರ್ಟ್
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ರ‍್ಯಾಪಿಡೋ (Rapido) ಬೈಕ್ ಟ್ಯಾಕ್ಸಿಗಳು ಸಾಕಷ್ಟು ಸುದ್ದಿ ಮಾಡುತ್ತಿವೆ. ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ಆಟೋ ರಿಕ್ಷಾ ಚಾಲಕರು ಹಲ್ಲೆ ಮಾಡುವುದನ್ನು ನಾವು ಕಂಡಿದ್ದೇವೆ. ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೈಕ್ ಟ್ಯಾಕ್ಸಿಗಳನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆ.
ಈ ಕುರಿತಾತಿ ಅಂತಿಮ ಸುತ್ತೋಲೆ ಹೊರಡಿಸುವವರೆಗೆ ರಾಜಧಾನಿ ದೆಹಲಿಯಲ್ಲಿ ಓಲಾ, ಊಬರ್ ಮತ್ತು ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ಸುಪ್ರಿಂ ಕೋರ್ಟ್ ತೀರ್ಪು ನೀಡುವ ಮೂಲಕ ಬೈಕ್ ಟ್ಯಾಕ್ಸಿ ಸವಾರರಿಗೆ ಭಾರೀ ಶಾಕ್ ನೀಡಿದೆ. ಈ ಕುರಿತಂತೆ ದೆಹಲಿಯ ಸಾರಿಗೆ ಇಲಾಖೆಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದ್ದು, ಫೆಬ್ರವರಿಯಿಂದಲೇ ದೆಹಲಿಯಲ್ಲಿ ಬೈಕ್ ಟ್ಯಾಕ್ಸಿಗಳ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.

ಈ ಹಿಂದೆ ದೆಹಲು ಹೈಕೋರ್ಟ್ ಅಂತಿಮ ಸುತ್ತಿನ ಆದೇಶ ಹೊರಡಿಸುವವರೆಗೂ ದೆಹಲಿಯಲ್ಲಿ ಓಲಾ ಊಬರ್ ಮತ್ತು ರ‍್ಯಾಪಿಡೋ ಸೇರಿದಂತೆ ಖಾಸಗಿಯಾಗಿ ರಿಜಿಸ್ಟರ್ ಆದ ಬೈಕ್‌ಗಳು ಟ್ಯಾಕ್ಸಿಗಳ ರೀತಿಯಲ್ಲಿ ಕಾರ್ಯ ನಿರ್ವಹಿಸುವಂತೆ, ಮತ್ತು ಈ ಕುರಿತಾಗಿ ಯಾವುದೇ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿತ್ತು.
ಈ ಕುರಿತಾಗಿ ದೆಹಲಿ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದರ ಪರಿಣಾಮವಾಗಿ ಸುಪ್ರೀಂ ಕೋರ್ಟ್ ಬೈಕ್ ಟ್ಯಾಕ್ಸಿಗಳನ್ನು ಅಂತಿಮ ಸುತ್ತಿನ ಆದೇಶ ಹೊರಡಿಸುವವರೆಗೂ ಯಾವುದೇ ರೀತಿಯಲ್ಲಿ ಕಾರ್ಯ ನಿರ್ವಹಿಸದಂತೆ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ. ಇದರಿಂದ ರಿಕ್ಷಾ ಚಾಲಕರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

ಫೆಬ್ರವರಿಯಲ್ಲಿ ದೆಹಲಿ ಸರ್ಕಾರದ ಸಾರಿಗೆ ಇಲಾಖೆಯು ಮೋಟಾರ್ ವೆಹಿಕಲ್ ಆಕ್ಟ್ 1998, ಅನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣದಿಂದ ಬೈಕ್ ಟ್ಯಾಕ್ಸಿಗಳನ್ನು ಬ್ಯಾನ್ ಮಾಡಿತ್ತು. ಇದರ ಕುರಿತಾಗಿ ರ‍್ಯಾಪಿಡೋ ಸಂಸ್ಥೆಯು ದೆಹಲಿ ಹೈಕೋರ್ಟ್‌ನ ಮೊರೆ ಹೋಗಿತ್ತು. ಇದೀಗ ಸುಪ್ರೀಂ ಕೋರ್ಟ್ ಬೈಕ್ ಟ್ಯಾಕ್ಸಿಗಳ ವಿರೋಧವಾಗಿ ತೀರ್ಪು ನೀಡಿದ್ದು ಓಲಾ, ಊಬರ್ ಮತ್ತು ರ‍್ಯಾಪಿಡೋ ಸಂಸ್ಥೆಗಳು ತಲೆಯ ಮೇಲೆ ಕೈ ಹೊತ್ತು ಕೂರುವಂತಾಗಿದೆ.
ದೆಹಲಿ, ಬೆಂಗಳೂರು ಸೇರಿದಂತೆ ದೇಶದ ನಾನಾ ದೊಡ್ಡ ದೊಡ್ಡ ನಗರಗಳಲ್ಲಿ ಓಲಾ, ಊಬರ್ ಮತ್ತು ರ‍್ಯಾಪಿಡೋ ಕಂಪನಿಯ ಬೈಕ್ ಟ್ಯಾಕ್ಸಿಗಳು ಕಾರ್ಯ ನಿರ್ವಹಿಸುತ್ತಿವೆ. ಟ್ರಾಫಿಕ್ ಸಮಸ್ಯೆಗಳಿಲ್ಲದೇ, ಎಲ್ಲಿಯರೆಗೆ ಬೇಕಾದರೂ ಕಡಿಮೆ ಬೆಲೆಯಲ್ಲಿ ಪ್ರಯಾಣ ಮಾಡಲು ಬೈಕ್ ಟ್ಯಾಕ್ಸಿಗಳು ಸಹಾಯ ಮಾಡುತ್ತವೆ ಎಂಬುದು ಈ ಕಂಪನಿಗಳ ವಾದ.
ಆದರೆ ಬೈಕ್ ಟ್ಯಾಕ್ಸಿಗಳಲ್ಲಿ ಪ್ರಯಾಣಿಸುವಾಗ ಯಾವುದೇ ಸುರಕ್ಷತೆ ಇರುವುದಿಲ್ಲ. ಬೈಕ್ ಚಾಲಕರು ಎಲ್ಲೆಂದರಲ್ಲಿ ಬೈಕ್ ಚಲಾಯಿಸಿ ಪ್ರಯಾಣಿಕರು ಜೀವ ಕೈಯಲ್ಲಿ ಹಿಡಿದುಕೊಂಡು ಹೋಗುವ ಪರಿಸ್ಥಿತಿ ಇದೆ. ಬೈಕ್ ಟ್ಯಾಕ್ಸಿಗೆಂದೇ ನಿರ್ದಿಷ್ಟ ಪರವಾನಿಗೆಯ ವ್ಯವಸ್ಥೆಗಳಿಲ್ಲ ಎಂಬುದು ಬಹುತೇಕ ಎಲ್ಲಾ ಟೀಕಾಕಾರರ ವಾದ ಮತ್ತು ಪ್ರಯಾಣಿಕರು ಹಂಚಿಕೊಂಡಿರುವ ಅನುಭವವಗಳು ಇದಕ್ಕೆ ಇಂಬು ನೀಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications