ರಸ್ತೆ ಅಪಘಾತ ಸಂಬಂಧ ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್

ರಸ್ತೆ ಸುರಕ್ಷತೆ ಮತ್ತು ಅಪಘಾತಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಈ ತೀರ್ಪಿನ ಅನ್ವಯ ಒಂದು ವೇಳೆ ನೀವು ರಸ್ತೆಯಲ್ಲಿ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡುತ್ತಿರುವಾಗ ಬೇರೆಯವರಿಂದ ಅಪಘಾತಕ್ಕೀಡಾಗಿದರೆ ಆಗ ನಿಮ್ಮ ತಪ್ಪನ್ನು ಪರಿಗಣಿಸಲಾಗುವುದಿಲ್ಲ. ವ್ಯಕ್ತಿಯೊಬ್ಬರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ, ಅಪಘಾತವನ್ನು ತಪ್ಪಿಸಲು ವಿಫಲವಾದರೆ, ಇದನ್ನು ಆತನ ನಿರ್ಲಕ್ಷ್ಯವೆಂದು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ರಸ್ತೆ ಅಪಘಾತ ಸಂಬಂಧ ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್

ಆ ವ್ಯಕ್ತಿ ಯಾವುದೇ ನಿರ್ಲಕ್ಷ್ಯ ತೋರಿಲ್ಲವೆಂದು ಸಾಬೀತುಪಡಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯವು ತಿಳಿಸಿದೆ. ಅರ್ಜಿಯೊಂದರ ವಿಚಾರಣೆ ನಡೆಸುತ್ತಿದ್ದನ್ಯಾಯಾಲಯವು ರಸ್ತೆ ಅಪಘಾತಗಳಿಗೆ ಹಲವು ಕಾರಣಗಳಿವೆ. ವಾಹನ ಚಲಿಸುತ್ತಿರುವಾಗ ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ಅಡ್ಡ ಬಂದರೆ, ಅದರಿಂದ ಅಪಘಾತವಾಗಬಹುದು. ಈ ಸಂದರ್ಭದಲ್ಲಿ ಚಾಲಕನ ದೋಷವನ್ನು ಪರಿಗಣಿಸಲಾಗುವುದಿಲ್ಲವೆಂದು ಹೇಳಿದೆ.

ರಸ್ತೆ ಅಪಘಾತ ಸಂಬಂಧ ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್

ರಸ್ತೆಯಲ್ಲಿ ಜಾಗರೂಕತೆಯಿಂದ ನಡೆದುಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ, ಆದರೆ ಒಬ್ಬ ವ್ಯಕ್ತಿಯ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದರೆ ಅದಕ್ಕೆ ಬೇರೆಯವರು ಜವಾಬ್ದಾರರಾಗಿರುವುದಿಲ್ಲ. ಯಾವುದೇ ನ್ಯಾಯಾಲಯದ ಇಂತಹ ನಿರ್ಧಾರವು ಸಮರ್ಥನೀಯವಲ್ಲವೆಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ರಸ್ತೆ ಅಪಘಾತ ಸಂಬಂಧ ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್

ಪ್ರಕರಣದ ಹಿನ್ನೆಲೆ:

ಮಹಿಳೆ ಹಾಗೂ ಆಕೆಯ ಇಬ್ಬರು ಮಕ್ಕಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ರೀತಿ ಹೇಳಿದೆ. 2011 ರಲ್ಲಿ ಟ್ರಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಕಾರು ಚಾಲಕರೊಬ್ಬರು ಸಾವನ್ನಪ್ಪಿದ್ದರು. ಈ ಪ್ರಕರಣವು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಟ್ರಕ್ ಹಾಗೂ ಕಾರು ಚಾಲಕ ಇಬ್ಬರನ್ನೂ ತಪ್ಪಿತಸ್ಥರೆಂದು ಪರಿಗಣಿಸಿತ್ತು.

ರಸ್ತೆ ಅಪಘಾತ ಸಂಬಂಧ ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್

ಈ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ರದ್ದುಪಡಿಸಿತ್ತು. ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದೇ ಘರ್ಷಣೆಯನ್ನು ತಪ್ಪಿಸಲು ವಿಫಲವಾಗುವುದು ನಿರ್ಲಕ್ಷ್ಯವಲ್ಲ. ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪು ಸಾಕ್ಷ್ಯವನ್ನು ಆಧರಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೈಕೋರ್ಟ್ ಕೇವಲ ಊಹೆಯ ಮೇಲೆ ತೀರ್ಪು ನೀಡಿದೆ, ಇದು ಸಮರ್ಥನೀಯವಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ರಸ್ತೆ ಅಪಘಾತ ಸಂಬಂಧ ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್

ಕಾರು ಚಾಲಕ ಎಚ್ಚರಿಕೆಯಿಂದ ಕಾರ್ ಅನ್ನು ಚಾಲನೆ ಮಾಡುತ್ತಿದ್ದರೆ ಅಪಘಾತ ಸಂಭವಿಸುತ್ತಿರಲಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು. ಕಾರು ಚಾಲಕ ಅತಿ ವೇಗದಲ್ಲಿ ಕಾರು ಚಾಲನೆ ಮಾಡುತ್ತಿದ್ದಾನೆ ಅಥವಾ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಾನೆ ಎಂದು ಹೇಳಲು ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ರದ್ದುಗೊಳಿಸಿತು.

ರಸ್ತೆ ಅಪಘಾತ ಸಂಬಂಧ ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್

ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮೃತ ಕಾರು ಚಾಲಕನ ಪತ್ನಿಯ ಪರವಾಗಿ ತೀರ್ಪು ನೀಡಿ, ಸಂತ್ರಸ್ತೆಯ ಕುಟುಂಬಕ್ಕೆ 9% ನಷ್ಟು ಬಡ್ಡಿಯೊಂದಿಗೆ ರೂ. 5 ಲಕ್ಷ ಪಾವತಿಸುವಂತೆ ಆದೇಶ ನೀಡಿದೆ. ಈ ಘಟನೆ 2011 ರಲ್ಲಿ ಸಂಭವಿಸಿತ್ತು. ಘಟನೆಯಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದರು. ಕಾರು ಚಾಲಕನ ಪತ್ನಿ ಟ್ರಕ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ಕಾರು ಲಾರಿಗೆ ಡಿಕ್ಕಿ ಹೊಡೆದಿತ್ತು ಎಂದು ಆರೋಪಿಸಿದ್ದರು.

ರಸ್ತೆ ಅಪಘಾತ ಸಂಬಂಧ ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್

ಮತ್ತೊಂದು ಪ್ರಕರಣದಲ್ಲಿ, ಮಾನ್ಯವಾದ ನೋಂದಣಿ ಸಂಖ್ಯೆ ಹೊಂದಿಲ್ಲದ ವಾಹನಗಳಿಗೆ ಕಾರ್ ಇನ್ಶೂರೆನ್ಸ್ ಕ್ಲೈಮ್ ಅನ್ನು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಕಳೆದ ತಿಂಗಳು ಆದೇಶ ಹೊರಡಿಸಿದೆ. ತಾತ್ಕಾಲಿಕ ನೋಂದಣಿ ಹೊಂದಿರುವ ವಾಹನಗಳಿಗೆ ವಿಮಾ ಹಣವನ್ನು ನಿರಾಕರಿಸಿದ ವಿಮಾ ಕಂಪನಿಯ ಕ್ರಮವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.

ರಸ್ತೆ ಅಪಘಾತ ಸಂಬಂಧ ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್

ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್, ಭಾರತದ ಅತ್ಯಂತ ಜನಪ್ರಿಯ ವಾಹನ ವಿಮಾ ಕಂಪನಿಗಳಲ್ಲಿ ಒಂದಾಗಿದ್ದು, ಇನ್ಶೂರೆನ್ಸ್ ಕ್ಲೈಮ್ ವಿರುದ್ಧ ಮೇಲ್ಮನವಿ ಸಲ್ಲಿಸಿತ್ತು. ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿಯು ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ರಸ್ತೆ ಅಪಘಾತ ಸಂಬಂಧ ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ರಾಜಸ್ಥಾನದಲ್ಲಿ ಕಂಪನಿಯು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ವಿಮಾ ಹಣವನ್ನು ನೀಡುವಂತೆ ಆದೇಶಿಸಿತ್ತು. ಈ ಪ್ರಕರಣದಲ್ಲಿ ರೂ. 6.17 ಲಕ್ಷ ವಿಮಾ ಮೊತ್ತವನ್ನು ಹೊಂದಿದ್ದ Mahindra Bolero ಕಾರು ಮಾನ್ಯವಾದ ನೋಂದಣಿ ಸಂಖ್ಯೆಯನ್ನು ಹೊಂದಿರಲಿಲ್ಲ. ಪಾಲಿಸಿಯ ನಿಯಮಗಳು ಹಾಗೂ ಷರತ್ತುಗಳ ಮೂಲಭೂತ ಉಲ್ಲಂಘನೆಯಾಗಿದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್ ವಿಮಾ ಕ್ಲೈಮ್ ಅನ್ನು ವಜಾಗೊಳಿಸಿದೆ.

ರಸ್ತೆ ಅಪಘಾತ ಸಂಬಂಧ ಮಹತ್ವದ ಆದೇಶ ನೀಡಿದ ಸುಪ್ರೀಂ ಕೋರ್ಟ್

ಹೊಣೆಗಾರಿಕೆಗೆ ಕಾರಣವಾಗಬಹುದಾದ ವಿಮೆ ಮಾಡಲಾಗದ ಘಟನೆಯು ಸಂಭವಿಸಿದಾಗ, ವಿಮಾ ಒಪ್ಪಂದದಲ್ಲಿ ಒಳಗೊಂಡಿರುವ ಷರತ್ತುಗಳ ಯಾವುದೇ ಮೂಲಭೂತ ಉಲ್ಲಂಘನೆಯಾಗಬಾರದು ಎಂದು ನ್ಯಾಯಮೂರ್ತಿ ಯು.ಯು ಲಲಿತ್, ನ್ಯಾಯಮೂರ್ತಿ ಎಸ್ ರವೀಂದ್ರ ಭಟ್ ಹಾಗೂ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರಿದ್ದ ತ್ರಿ ಸದಸ್ಯ ಪೀಠ ಹೇಳಿದೆ.

ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Supreme court gives new order on road accident details
Story first published: Thursday, October 21, 2021, 12:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X