ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ

ಭಾರತೀಯ ಸಂಸ್ಕೃತಿಯಲ್ಲಿ ಹಬ್ಬದ ವಿಶೇಷತೆಗಾಗಿ ಉದ್ಯೋಗದಾತರು ತಮ್ಮ ಉದ್ಯೋಗಿಗಳಿಗೆ ವಿಶೇಷ ಉಡುಗೊರೆಗಳನ್ನು ನೀಡುವುದು ಸಾಮಾನ್ಯವಾಗಿದೆ. ಕೆಲವರು ಸಣ್ಣ ಪುಟ್ಟ ಉಡುಗೊರೆಗಳನ್ನು ನೀಡಿದರೆ ಇನ್ನು ಕೆಲವು ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ದುಬಾರಿ ಬೆಲೆ ಉಡುಗೊರೆ ನೀಡುವುದನ್ನು ಕಾಣಬಹುದು.

ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಿದ ಸೂರತ್ ಮೂಲದ ಕಂಪನಿ

ದೀಪಾವಳಿ ವಿಶೇಷತೆಗಾಗಿ ಪ್ರತಿ ವರ್ಷವು ವಿಶೇಷ ಉಡುಗೊರೆಗಳನ್ನು ನೀಡುತ್ತಿದ್ದ ಗುಜರಾತ್ ಮೂಲದ ಕಂಪನಿಯೊಂದು ಈ ಬಾರಿ ತಮ್ಮ ಉದ್ಯೋಗಿಗಳಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಿಂದ ಬೇಸತ್ತಿರುವ ತನ್ನ ಉದ್ಯೋಗಿಗಳಿಗೆ ದೀಪಾವಳಿ ವಿಶೇಷವಾಗಿ ಎಲೆಕ್ಟ್ರಿಕ್ ಸ್ಕೂಟರ್ ವಿತರಿಸಿದೆ.

ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಿದ ಸೂರತ್ ಮೂಲದ ಕಂಪನಿ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಪರಿಣಾಮ ಹೊಸ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ಮುಖ ಮಾಡುತ್ತಿದ್ದು, ಪೆಟ್ರೋಲ್ ಬೆಲೆ ಏರಿಕೆಗೆ ತತ್ತರಿಸಿರುವ ತನ್ನ ಉದ್ಯೋಗಿಗಳಿಗೆ ಸೂರತ್ ಮೂಲದ ಅಲಯನ್ಸ್ ಗ್ರೂಪ್ ಕಂಪನಿಯು ಇವಿ ಸ್ಕೂಟರ್ ಅನ್ನು ಉಡುಗೊರೆಯಾಗಿ ನೀಡಿದೆ.

ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಿದ ಸೂರತ್ ಮೂಲದ ಕಂಪನಿ

ಕಸೂತಿ ಯಂತ್ರಗಳನ್ನು ತಯಾರಿಸುವಲ್ಲಿ ಮುಂಚೂಣಿಯಲ್ಲಿರುವ ಅಲಯನ್ಸ್ ಗ್ರೂಪ್ ಕಂಪನಿಯು ತನ್ನ 35 ಉದ್ಯೋಗಿಗಳಿಗೂ ಒಕಿನಾವ ನಿರ್ಮಾಣದ ಪ್ರೈಸ್ ಪ್ರೋ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಉಡುಗೊರೆಯಾಗಿ ನೀಡಿದ್ದು, ಪೆಟ್ರೋಲ್ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿರುವ ತಮ್ಮ ಉದ್ಯೋಗಿಗಳಿಗೆ ಪರಿಸರ ಸ್ನೇಹಿ ವಾಹನಗಳನ್ನು ನೀಡಲು ನಿರ್ಧರಿಸಿದೆವು ಎಂದು ಅಲಯ್ಸ್ ಗೂಪ್ಸ್ ಸಂಸ್ಥೆಯ ಅಧ್ಯಕ್ಷ ಸುಭಾಷ್ ದವಾರ್ ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಿದ ಸೂರತ್ ಮೂಲದ ಕಂಪನಿ

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಕ್ಸ್‌ಶೋರೂಂ ಪ್ರಕಾರ ರೂ. 76,884 ಮೌಲ್ಯದ ಒಕಿನಾವ ಪ್ರೈಸ್ ಪ್ರೊ ಇವಿ ಸ್ಕೂಟರ್ ಮಾದರಿಯನ್ನು ಉಡುಗೊರೆಯಾಗಿ ನೀಡಿದ್ದು, ಹೊಸ ಇವಿ ಸ್ಕೂಟರ್ ಮಾದರಿಯು ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಹೆಚ್ಚಿನ ಮಟ್ಟದ ಮೈಲೇಜ್ ರೇಂಜ್ ಹೊಂದಿದೆ.

ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಿದ ಸೂರತ್ ಮೂಲದ ಕಂಪನಿ

ದುಬಾರಿ ಮೌಲ್ಯದ ಎಲೆಕ್ಟ್ರಿಕ್ ಸ್ಕೂಟರ್ ಉಡುಗೊರೆಯಾಗಿ ಸಿಕ್ಕಿರುವುದಕ್ಕೆ ಅಲಯನ್ಸ್ ಗ್ರೂಪ್ ಕಂಪನಿಯ ಸಿಬ್ಬಂದಿ ಕೂಡಾ ಸಂತಸ ವ್ಯಕ್ತಪಡಿಸಿದ್ದು, ಇನ್ಮುಂದೆ ಪೆಟ್ರೋಲ್ ವಾಹನಗಳ ಬದಲಾಗಿ ಪರಿಸರ ಸ್ನೇಹಿ ವಾಹನಗಳನ್ನೇ ಬಳಕೆ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದು ವಿಶೇಷವಾಗಿತ್ತು.

ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಿದ ಸೂರತ್ ಮೂಲದ ಕಂಪನಿ

ಇನ್ನು ಹೆಚ್ಚುತ್ತಿರುವ ಇಂಧನ ಬೆಲೆ ಹಾಗೂ ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗಿದೆ.

ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಿದ ಸೂರತ್ ಮೂಲದ ಕಂಪನಿ

ಅತಿ ಹೆಚ್ಚು ಮಾಲಿನ್ಯ ಉಂಟು ಮಾಡುತ್ತಿರುವ ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ತಮ್ಮ ರಾಜ್ಯಗಳಲ್ಲಿ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಿದ ಸೂರತ್ ಮೂಲದ ಕಂಪನಿ

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಿದ ಸೂರತ್ ಮೂಲದ ಕಂಪನಿ

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ರಾಜ್ಯಗಳ ಮಟ್ಟದಲ್ಲಿ ದೆಹಲಿ ಸರ್ಕಾರವು ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು, ತದನಂತರ ವಿವಿಧ ಸರ್ಕಾರವು ಸಹ ರಾಜ್ಯ ಮಟ್ಟದಲ್ಲಿ ಹೊಸ ಇವಿ ನೀತಿ ಅಳವಡಿಸಿಕೊಳ್ಳುತ್ತಿವೆ.

ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಿದ ಸೂರತ್ ಮೂಲದ ಕಂಪನಿ

ಹೊಸ ಸಬ್ಸಡಿ ಯೋಜನೆ ಅಡಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು, ತ್ರಿ ಚಕ್ರ ವಾಹನಗಳು ಮತ್ತು ಇವಿ ಕಾರು ಮಾದರಿಗಳಿ ನೋಂದಣಿಯನ್ನು ಶುಲ್ಕಕ್ಕೆ ವಿನಾಯ್ತಿ ಸೇರಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದು, ಇವಿ ವಾಹನಗಳತ್ತ ಗಮನಸೆಳೆಯುವಂತೆ ಆಕರ್ಷಕ ಯೋಜನೆಗಳನ್ನು ಪ್ರಕಟಿಸಲು ಮುಂದಾಗಿದೆ.

ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಿದ ಸೂರತ್ ಮೂಲದ ಕಂಪನಿ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ.

ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಮಾಡಿದ ಸೂರತ್ ಮೂಲದ ಕಂಪನಿ

ಸದ್ಯ ಕೇಂದ್ರ ಸರ್ಕಾರದ ಹೊಸ ಯೋಜನೆಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸುತ್ತಿವೆ.

Most Read Articles

Kannada
English summary
Surat based alliance group company offered okinawa e scooters as diwali gift to employees
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X