ಫೇಸ್‌ಮಾಸ್ಕ್ ಧರಿಸಿದರೇ ಉಸಿರುಗಟ್ಟುವುದಂತೆ ಈ ಸ್ವಾಮೀಜಿಗಳಿಗೆ
ಕರೋನಾ ವೈರಸ್ ಎರಡನೇ ಅಲೆ ಭಾರತದಲ್ಲಿ ಹೆಚ್ಚು ಹಾನಿಯನ್ನುಂಟು ಮಾಡುತ್ತಿದೆ. ಕರೋನಾ ವೈರಸ್ ಹರಡುವುದನ್ನು ತಡೆಯಲು ಜನರಿಗೆ ಫೇಸ್‌ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ. ಜನರು ಮನೆಯಿಂದ ಹೊರ ಬಂದಾಗ ಕಡ್ಡಾಯವಾಗಿ ಫೇಸ್‌ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ.

ವಾಹನಗಳಲ್ಲಿ ಏಕಾಂಗಿಯಾಗಿ ಪ್ರಯಾಣಿಸುವಾಗಲೂ ಫೇಸ್‌ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಆದರೂ ಹಲವಾರು ಜನರು ಫೇಸ್‌ಮಾಸ್ಕ್ ಧರಿಸುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಕರೋನಾ ವೈರಸ್ ಸೋಂಕು ಹಿಂದಿಗಿಂತ ಹೆಚ್ಚು ವೇಗವಾಗಿ ಹರಡುತ್ತಿದೆ.

ಇದೇ ಪರಿಸ್ಥಿತಿ ಮುಂದುವರೆದರೆ ಭಾರತದ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು ಎಂಬ ಆತಂಕ ಎದುರಾಗಿದೆ. ಕರೋನಾ ವೈರಸ್ ಹರಡುವುದನ್ನು ತಡೆಯಲು ರಾಜ್ಯ ಸರ್ಕಾರಗಳು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿವೆ.
MOST READ:ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್‌ಟಿಒ ಫಾರಂಗಳಿವು!

ಫೇಸ್‌ಮಾಸ್ಕ್ ಧರಿಸದೇ ಮನೆಯಿಂದ ಹೊರ ಬರುವವರಿಗೆ ದಂಡ ವಿಧಿಸಲಾಗುತ್ತಿದೆ. ಜನರು ಮನೆಯಿಂದ ಹೊರ ಬರುವಾಗ ಸರಿಯಾದ ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತಿದ್ದಾರೆಯೇ ಇಲ್ಲವೇ ಎಂಬುದನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ.

ಸರ್ಕಾರದಲ್ಲಿ ಉನ್ನತ ಸ್ಥಾನಗಳಲ್ಲಿ ಇರುವ ಅಧಿಕಾರಿಗಳಿಂದ ಹಿಡಿದು ಕೆಳ ಹಂತದ ಸಿಬ್ಬಂದಿಯವರೆಗೆ ಹಲವಾರು ಜನರು ಕರೋನಾ ವೈರಸ್ ನಿಯಂತ್ರಣ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂಬುದು ಅಧ್ಯಯನದಲ್ಲಿ ಕಂಡು ಬಂದಿದೆ.
MOST READ:ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಫೇಸ್‌ಮಾಸ್ಕ್ ಧರಿಸದ ಪ್ರತಿಯೊಬ್ಬರಿಗೂ ದಂಡ ವಿಧಿಸಲಾಗುತ್ತಿದೆ. ಫೇಸ್‌ಮಾಸ್ಕ್ ಧರಿಸದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸ್ವಾಮೀಜಿಯೊಬ್ಬರು ತಮ್ಮನ್ನು ಪ್ರಶ್ನಿಸಿದಪೊಲೀಸರೊಂದಿಗೆ ವಾಗ್ವಾದ ನಡೆಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪೊಲೀಸರೊಂದಿಗೆ ವಾಗ್ವಾದದಲ್ಲಿ ತೊಡಗಿದ್ದ ಸ್ವಾಮೀಜಿಗಳು ಮಧ್ಯಪ್ರದೇಶದ ತಮೋ ಮೂಲದ ಅಯೋಧ್ಯಾ ರಾಮ್ ಗೆನ್ಬುಮಿ ನಿರ್ಮನ್ ಟ್ರಸ್ಟ್‌ನ ರಾಷ್ಟ್ರೀಯಉಪಾಧ್ಯಕ್ಷ ಸ್ವಾಮಿ ಆತ್ಮಾನಂದ ಸರಸ್ವತಿ ಎಂದು ತಿಳಿದು ಬಂದಿದೆ.
MOSTREAD: 10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಅವರು ಫೇಸ್‌ಮಾಸ್ಕ್ ಧರಿಸದೆ ಸಾರ್ವಜನಿಕ ರಸ್ತೆಯಲ್ಲಿ ಮಹೀಂದ್ರಾ ಎಕ್ಸ್‌ವಿ 500 ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅವರ ವಾಹನವನ್ನು ತಡೆದ ಪೊಲೀಸರು ಫೇಸ್‌ಮಾಸ್ಕ್ ಧರಿಸುವಂತೆ ಹೇಳಿದ್ದಾರೆ. ಫೇಸ್‌ಮಾಸ್ಕ್ ಧರಿಸಲು ನಿರಾಕರಿಸಿದ ಅವರು ವಿಲಕ್ಷಣ ಉತ್ತರ ನೀಡಿದ್ದಾರೆ.

ಪ್ರಧಾನಿ ಮೋದಿ ನಮ್ಮನ್ನು ನಾವು ರಕ್ಷಿಸಿಕೊಳ್ಳುವಂತೆ ಹೇಳಿದ್ದಾರೆ. ಅದನ್ನೇ ನಾನು ಮಾಡುತ್ತಿದ್ದೇನೆ. ಫೇಸ್‌ಮಾಸ್ಕ್ ಧರಿಸಿದರೇ ನನಗೆ ಉಸಿರುಗಟ್ಟುತ್ತದೆ. ಏನಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆ. ಈ ಕಾರಣಕ್ಕೆ ನಾನು ಫೇಸ್‌ಮಾಸ್ಕ್ ಧರಿಸುವುದಿಲ್ಲವೆಂದು ಹೇಳಿದ್ದಾರೆ.
MOSTREAD: ವರ್ಷಗಳ ಕಾಲ ಉಪ್ಪು ನೀರಿನಲ್ಲಿದ್ದರೂ ಹಡಗುಗಳ ಆಂಕರ್‌ಗಳಿಗೆ ತುಕ್ಕು ಹಿಡಿಯದಿರಲು ಕಾರಣಗಳಿವು

ಪೊಲೀಸರು ಅವರಿಗೆ ಫೇಸ್‌ಮಾಸ್ಕ್ ಧರಿಸುವಂತೆ ಪದೇ ಪದೇ ಕೇಳಿಕೊಂಡಿದ್ದಾರೆ. ಆದರೆ ಅವರು ತಮ್ಮ ಹಠವನ್ನು ಬಿಟ್ಟಿಲ್ಲ. ಈ ಕಾರಣಕ್ಕೆ ಪೊಲೀಸರು ಅವರಿಗೆ ದಂಡ ವಿಧಿಸಿದ್ದಾರೆ. ಭಾರತದಲ್ಲಿ ಕೋವಿಡ್ 19 ವೈರಸ್ ಸೋಂಕಿಗೆ ಒಳಗಾದವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರತಿದಿನ ಮೂರು ಲಕ್ಷ ಹೊಸ ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ.
ಜೊತೆಗೆ ವೈರಸ್‌ನಿಂದ ಸಾವನ್ನಪ್ಪುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಈ ಪರಿಸ್ಥಿತಿಯಲ್ಲಿ ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳುವುದು ಅಗತ್ಯವೆಂದು ಭಾವಿಸುದ್ದಾರೆ. ಆದರೆ ಕೆಲವರು ಫೇಸ್‌ಮಾಸ್ಕ್ ಧರಿಸುವುದನ್ನು ಅಡ್ಡಿ ಎಂದು ಪರಿಗಣಿಸುತ್ತಾರೆ. ಆದರೆ ಫೇಸ್‌ಮಾಸ್ಕ್ ಧರಿಸುವುದು ಹಿಂದೆಂದಿಗಿಂತ ಈಗ ಹೆಚ್ಚು ಅಗತ್ಯವಾಗಿದೆ.
MOSTREAD: ಜೀವದ ಹಂಗು ತೊರೆದು ಮಗುವಿನ ಪ್ರಾಣ ಉಳಿಸಿದ ರಿಯಲ್ ಹೀರೋಗೆ ಬೈಕ್ ಉಡುಗೊರೆ ನೀಡಿದ ಜಾವಾ ಕಂಪನಿ

ವಾಹನದಲ್ಲಿ ಏಕಾಂಗಿಯಾಗಿ ಪ್ರಯಾಣಿಸುವಾಗಲೂ ಫೇಸ್‌ಮಾಸ್ಕ್ ಧರಿಸುವುದರಿಂದ ಪೊಲೀಸರು ದಂಡ ವಿಧಿಸುವುದರಿಂದ ಪಾರಾಗಬಹುದು. ಜೊತೆಗೆ ಮಹಾಮಾರಿ ಕರೋನಾ ವೈರಸ್ ಸೋಂಕು ಹರಡುವುದನ್ನು ತಡೆಯಬಹುದು.
ಚಿತ್ರಕೃಪೆ: ಕೋಬ್ರಾಪೋಸ್ಟ್


Click it and Unblock the Notifications