RCB: ಈ ಸಲ ಕಪ್ ನಮ್ದೆ: ಆರ್‌ಸಿಬಿ ತಂಡದ ಮೇಲೆ ಸ್ವಿಗ್ಗಿ ಡೆಲಿವರಿ ಬಾಯ್‌ನ ಅಭಿಮಾನಕ್ಕೆ ನೆಟ್ಟಿಗರು ಫಿದಾ
ಟಿ20 ಕ್ರಿಕೆಟ್ ನಲ್ಲಿ ಐಪಿಎಲ್ ವಿಶ್ವಾದ್ಯಂತ ಕ್ರೇಜ್ ಹುಟ್ಟು ಹಾಕಿತು. ಐಪಿಎಲ್ ಕ್ರೇಜ್ ಬಗ್ಗೆ ಹೇಳಬೇಕಾಗಿಲ್ಲ .ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲಿ ಒಮ್ಮೆಯೂ ಕಪ್ ಗೆಲ್ಲಲು ಸಾಧ್ಯವಾಗದೇ ಇದ್ದರೂ ಆರ್‌ಸಿಬಿ ತಂಡಕ್ಕೆ, ಇತರೆ ಎಲ್ಲಾ ತಂಡಗಳಿಗಿಂತಲೂ ಅತ್ಯಂತ ಹೆಚ್ಚಿನ ಅಭಿಮಾನಿಗಳನ್ನು ಹೊಂದಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರರಿಗೆ ದೇಶದಲ್ಲಿ ಸಖತ್ ಕ್ರೇಜ್ ಇದೆ. ಐಪಿಎಲ್ ನಲ್ಲಿ ಆರ್‌ಸಿಬಿ ತಂಡ ಹಾಗೂ ಆಟಗಾರರು ಮಾಡಿರುವ ದಾಖಲೆಗಳು ಅವಿಸ್ಮರಣೀಯ. ಐಪಿಎಲ್ ಸಹಜವಾಗಿಯೇ ಬ್ಯಾಟರ್ ಗಳಿಗೆ ಸ್ವರ್ಗ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಸ್ಟಾರ್ ಬ್ಯಾಟರ್ ಗಳಿದ್ದಾರೆ. ಈ ವರ್ಷ ಸ್ಟಾರ್ ಬ್ಯಾಟರ್ ಗಳಿದ್ದರೂ ಮಿಡಲ್ ಆರ್ಡರ್ ಬ್ಯಾಟಿಂಗ್ ತುಂಬಾ ವೀಕ್ ಆಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಟ್ವಿಟರ್ ಸೇರಿದಂತೆ ಸೋಶಿಯಲ್ ಮೀಡಿಯಾಗಳಲ್ಲಿ ಕೋಟ್ಯಂತರ ಫಾಲೋವರ್ಸ್ ಇದ್ದಾರೆ. ಪಂದ್ಯ ಗೆದ್ದರೂ, ಸೋತರೂ ಆರ್‌ಸಿಬಿ ತಂಡವನ್ನ ಬೆಂಬಲಿಸುವ ಪ್ರಾಮಾಣಿಕ ಅಭಿಮಾನಿಗಳಿದ್ದಾರೆ. ಕಳೆದ 15 ಆವೃತ್ತಿಗಳಲ್ಲಿ ಒಮ್ಮೆಯೂ ಆರ್‌ಸಿಬಿ ಪ್ರಶಸ್ತಿ ಗೆದ್ದಿಲ್ಲವಾದರೂ ಅಭಿಮಾನಿಗಳ ಪ್ರೀತಿ, ಬಲ, ನಂಬಿಕೆ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ.
ಒಂದಲ್ಲ ಒಂದು ದಿನ ಆರ್‌ಸಿಬಿ ಕಪ್ ಗೆದ್ದೇ ಗೆಲ್ಲುತ್ತೆ ಎಂಬ ವಿಶ್ವಾಸದೊಂದಿಗೆ ಅಭಿಮಾನಿಗಳು ಮೈದಾನಕ್ಕೆ ಬಂದು ತಮ್ಮ ನೆಚ್ಚಿನ ತಂಡಕ್ಕೆ ಬೆಂಬಲ ವ್ಯಕ್ತಪಡಿಸುತ್ತಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್‌ನಲ್ಲಿ ಸಾಧಿಸಿರುವ ಯಶಸ್ಸು ಅಷ್ಟಕ್ಕಷ್ಟೇ ಆಗಿದ್ದರೂ, ತಂಡದ ಅಭಿಮಾನಿ ಬಳಗವೇನೂ ಕಡಿಮೆಯಾಗಿಲ್ಲ. ಕನ್ನಡಿಗರೇ ಇರದಂಥ ಐಪಿಎಲ್‌ನ ಕರ್ನಾಟಕ ಟೀಮ್ ಎನ್ನುವ ಟೀಕೆಗಳ ನಡುವೆಯೂ 2023ರ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡಕ್ಕೆ ಭರ್ಜರಿ ಬೆಂಬಲ ವ್ಯಕ್ತವಾಗುತ್ತಿದೆ.

ಇತ್ತೀಚೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಾಮಾಣಿಕ ಅಭಿಮಾನಿಯೊಬ್ಬನ ವೀಡಿಯೊ ವೈರಲ್ ಆಗಿದೆ. ಟ್ವಿಟ್ಟರ್ ಬಳಕೆದಾರರು ಪುಲ್ಕಿತ್ ಅವರು ಸ್ವಿಗ್ಗಿ ಡೆಲಿವರಿ ಎಕ್ಸಿಕ್ಯೂಟಿವ್‌ನ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಸ್ವಿಗ್ಗಿ ಡೆಲಿವರಿ ಬಾಯ್ ಆರ್‌ಸಿಬಿ ತಂಡದ ಪರ ಆಡುವ ಕ್ರಿಕೆಟಿಗರ ಸ್ಟಿಕ್ಕರ್‌ಗಳನ್ನು ಅವರ ಬೈಕಿನಲ್ಲಿ ಅಟ್ಟಿಸಿದ್ದಾರೆ. ಇದಲ್ಲದೆ, ವ್ಯಕ್ತಿಯು ಬೈಕ್ ಹ್ಯಾಂಡಲ್‌ನಲ್ಲಿ ಆರ್‌ಸಿಬಿ ತಂಡದ ಎರಡು ಧ್ವಜಗಳನ್ನು ಸಹ ಹಾಕಿದ್ದಾರೆ.
ತಾನು ಆರ್‌ಸಿಬಿಯ ಅಭಿಮಾನಿ ಮತ್ತು ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಅವರ ಅಭಿಮಾನಿಯಾಗಿದ್ದು, ಅವರನ್ನು ನೋಡುವುದನ್ನು ಇಷ್ಟಪಡುತ್ತೇನೆ ಎಂದು ಅವರು ವೀಡಿಯೊದಲ್ಲಿ ಹೇಳುವುದನ್ನು ಕೇಳಬಹುದು. ಐಪಿಎಲ್‌ನ ಈ ಸೀಸನ್‌ನಲ್ಲಿ ಎಬಿ ಡಿವಿಲಿಯರ್ಸ್ ಇಲ್ಲದ ಕಾರಣ ಅವರು ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ ಎಂದು ಹೇಳಿಕೊಂಡಿದ್ದಾರೆ. ಪುಲ್ಕಿತ್, ಪೋಸ್ಟ್‌ನ ಶೀರ್ಷಿಕೆಯಲ್ಲಿ, "ಬಹುಶಃ ಅತಿದೊಡ್ಡ RCB ಅಭಿಮಾನಿ" ಎಂದು ಬರೆದುಕೊಂಡಿದ್ದಾರೆ.
ಈ ಪೋಸ್ಟ್ ಮಾಡಿ ಎರಡು ದಿನಗಳಲ್ಲಿ 1.2 ಮಿಲಿಯನ್ ಬಾರಿ ವೀಕ್ಷಿಯಾಗಿದೆ. ಶೇರ್‌ಗೆ ಹಲವಾರು ಲೈಕ್ಸ್ ಮತ್ತು ಕಾಮೆಂಟ್‌ಗಳು ಕೂಡ ಬಂದಿವೆ. ವ್ಯಕ್ತಿಯೊಬ್ಬರು, ಈ ಸ್ವಿಗ್ಗಿ ಡೆಲವರಿ ಬಾಯ್ಗೆ ಯಾರದರೂ ಆರ್‌ಸಿಬಿ ಉಚಿತ ಟಿಕೆಟ್ ನೀಡಿ ಪ್ಲೀಸ್ ಎಂದು ಬರೆದುಕೊಂಡಿದ್ದಾರೆ. ಇನ್ನೊಬ್ಬರು "ಅವರು ತುಂಬಾ ಸ್ವೀಟ್ ಯಾರ್" ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನು ಆರ್‌ಸಿಬಿ ತಂಡದ ಅಭಿಮಾನಿಗಳು ಇವರಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸಂಬದಿಸಿದ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಕೂಡ ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.


Click it and Unblock the Notifications