Just In
Don't Miss!
- Movies
ಜನವರಿ 22ರಂದು ಐದು ಕನ್ನಡ ಸಿನಿಮಾ ಬಿಡುಗಡೆ
- News
ಲಿಂಗಾಂಬೂದಿಪಾಳ್ಯ ಕೆರೆಗೆ ಹರಿಯಲಿದೆ ಕೆಆರ್ಎಸ್ ನೀರು
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಪಘಾತಕ್ಕೀಡಾದ ಮುಖ್ಯಮಂತ್ರಿಗಳ ಬೆಂಗಾವಲು ಪಡೆಯ ವಾಹನ
ಭಾರತದಲ್ಲಿ ಸಂಭವಿಸುವ ರಸ್ತೆ ಅಪಘಾತಗಳಿಂದಾಗಿ ಪ್ರತಿವರ್ಷ ಸುಮಾರು 1.50 ಲಕ್ಷ ಜನರು ಸಾವನ್ನಪ್ಪುತ್ತಿದ್ದಾರೆ. ವಾಹನ ಸವಾರರು ಸಂಚಾರ ನಿಯಮಗಳನ್ನು ಉಲ್ಲಂಘಿಸುವುದೇ ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣ.

ರಸ್ತೆ ಅಪಘಾತಗಳು ವೇಗವಾಗಿ ಚಲಿಸುವ ವಾಹನಗಳಿಂದಲೂ ಸಂಭವಿಸುತ್ತವೆ. ಈ ಕಾರಣಕ್ಕೆ ಪೊಲೀಸರು, ನಿಗದಿಪಡಿಸಿರುವುದಕ್ಕಿಂತ ವೇಗವಾಗಿ ಚಲಿಸುವ ವಾಹನಗಳಿಗೆ ದಂಡ ವಿಧಿಸುತ್ತಿದ್ದಾರೆ. ಆದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಭಾರತದ ರಸ್ತೆಗಳಲ್ಲಿ ಯಾವಾಗ ಏನಾಗುತ್ತದೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ.

ಇದ್ದಕ್ಕಿದ್ದಂತೆ ಜಾನುವಾರುಗಳು ಅಥವಾ ಮನುಷ್ಯರು ವಾಹನಗಳಿಗೆ ಅಡ್ಡ ಬರಬಹುದು. ಇದರಿಂದ ಹೆಚ್ಚಿನ ವೇಗದಲ್ಲಿ ಸಾಗುತ್ತಿದ್ದರೆ ತಕ್ಷಣ ವಾಹನವನ್ನು ನಿಯಂತ್ರಿಸುವುದು ಕಷ್ಟವಾಗುತ್ತದೆ. ಆಗ ಅಪಘಾತಗಳು ಸಂಭವಿಸುತ್ತವೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಹೆಚ್ಚಿನ ವೇಗದಲ್ಲಿ ಸಂಚರಿಸುವುದರಿಂದ ಉಂಟಾಗುವ ಅಪಾಯಗಳ ಬಗ್ಗೆ ಸರ್ಕಾರಗಳೇ ಜನರಲ್ಲಿ ಜಾಗೃತಿ ಮೂಡಿಸುತ್ತಿವೆ. ಆದರೆ ಮುಖ್ಯಮಂತ್ರಿಗಳ ಬೆಂಗಾವಲು ವಾಹನಗಳೇ ಅತಿ ವೇಗವಾಗಿ ಚಲಿಸಿ ಅಪಘಾತಕ್ಕೀಡಾಗಿರುವುದು ವಿಪರ್ಯಾಸವೇ ಸರಿ.

ಇನ್ನು ಕೆಲವೇ ತಿಂಗಳುಗಳಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ರಾಜಕೀಯ ಪಕ್ಷಗಳು ಈಗಾಗಲೇ ಪ್ರಚಾರವನ್ನು ಆರಂಭಿಸಿವೆ. ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಕೂಡ ಪ್ರವಾಸದಲ್ಲಿದ್ದಾರೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಅವರು ಜನವರಿ 4ರಂದು ತೂತುಕುಡಿ ಜಿಲ್ಲೆಯಲ್ಲಿ ಪ್ರಚಾರ ನಡೆಸಿದರು. ಪ್ರಚಾರ ಮುಗಿಸಿ ತಿರುನೆಲ್ವೇಲಿ ಜಿಲ್ಲೆಯ ಚೆರಣ್ಮಖದೇವಿ ಸನ್ನಿಧಿಗೆ ತೆರಳುತ್ತಿದ್ದರು. ಅವರ ಸುರಕ್ಷತೆಗಾಗಿ ಪೊಲೀಸ್ ವಾಹನಗಳು ಅವರನ್ನು ಸುತ್ತುವರೆದಿದ್ದವು.

ಈ ವಾಹನಗಳು ಸಿನಿಮೀಯ ಶೈಲಿಯಲ್ಲಿ ಮುಖ್ಯಮಂತ್ರಿಗಳನ್ನು ಕರೆದೊಯ್ಯುತ್ತಿದ್ದವು. ಈ ರೀತಿ ಸಾಗುವಾಗ ಮುಖ್ಯಮಂತ್ರಿಯವರ ಬೆಂಗಾವಲು ಪಡೆಯ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಅತಿ ವೇಗದಲ್ಲಿ ಮತ್ತೊಂದು ಕಾರನ್ನು ಹಿಂದಿಕ್ಕಲು ಪ್ರಯತ್ನಿಸಿದ್ದರಿಂದ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೀಡಾದ ಕಾರಿನ ಮುಂಭಾಗಕ್ಕೆ ತೀವ್ರ ಹಾನಿಯಾಗಿದೆ. ಮತ್ತೊಂದು ಕಾರು ರಸ್ತೆಯ ಮಧ್ಯದಲ್ಲಿದ್ದ ಡಿವೈಡರ್ ಮೇಲೆ ಏರಿದೆ.

ಈ ಘಟನೆ ತೂತುಕುಡಿ ಜಿಲ್ಲೆಯ ವಲ್ಲನಾಡ್ ಬಳಿ ಸಂಭವಿಸಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿಯವರ ಕಾರಿಗೆ ಯಾವುದೇ ಹಾನಿಯಾಗಿಲ್ಲ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಅಪಘಾತಕ್ಕೀಡಾದ ಎರಡೂ ಕಾರುಗಳ ಮಾಲೀಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾರುಗಳು ಅತಿ ವೇಗವಾಗಿ ಚಲಿಸಿದ್ದೇ ಈ ಅಪಘಾತಕ್ಕೆ ಮುಖ್ಯ ಕಾರಣವೆಂದು ಹೇಳಲಾಗಿದೆ.

ಈ ಕಾರಣಕ್ಕೆ ವಾಹನಗಳಲ್ಲಿ ಸಂಚರಿಸುವಾಗ ಅತಿ ವೇಗವಾಗಿ ಹೋಗದಿರುವುದು ಒಳ್ಳೆಯದು. ಸಮಯದ ಅಭಾವದಿಂದಾಗಿ ಬಹುತೇಕ ಜನರು ಅತಿ ವೇಗವಾಗಿ ಚಲಿಸುತ್ತಾರೆ. ಆದ್ದರಿಂದ ಎಲ್ಲಿಗಾದರೂ ಹೋಗಬೇಕಾದಾಗ ಮುಂಚಿತವಾಗಿ ಹೊರಡುವುದು ಒಳ್ಳೆಯದು.
MOST READ: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ
ಇದರಿಂದ ವೇಗದ ಮಿತಿಯಲ್ಲಿಯೇ ತಲುಪಬೇಕಾದ ಸ್ಥಳವನ್ನು ತಲುಪಬಹುದು. ವಾಹನವನ್ನು ಎಷ್ಟು ವೇಗದಲ್ಲಿ ಚಾಲನೆ ಮಾಡಲಾಗುತ್ತಿದೆ ಎಂಬುದನ್ನು ಸ್ಪೀಡೋಮೀಟರ್ ನಲ್ಲಿ ಪರೀಕ್ಷಿಸುವುದು ಒಳ್ಳೆಯದು.

ಜೊತೆಗೆ ರಸ್ತೆಯ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಅಗತ್ಯ. ಕೆಲವೊಮ್ಮೆ ಜನರು ಕುಡಿದು ವಾಹನ ಚಾಲನೆ ಮಾಡುವಾಗ ಅತಿ ವೇಗದಲ್ಲಿ ಚಲಿಸುತ್ತಾರೆ. ಇದರಿಂದಲೂ ಹೆಚ್ಚಿನ ಅಪಘಾತಗಳು ಸಂಭವಿಸುತ್ತವೆ.