ಫೇಸ್ ಮಾಸ್ಕ್ ಬಗ್ಗೆ ಹೊಸ ನಿಯಮ ಜಾರಿಗೆ ತಂದ ಪೆಟ್ರೋಲ್ ಬಂಕ್ ಮಾಲೀಕರ ಸಂಘ

ಕರೋನಾ ವೈರಸ್ ಎರಡನೇ ಅಲೆ ಭಾರತದಲ್ಲಿ ತೀವ್ರಗತಿಯಲ್ಲಿ ಹರಡುತ್ತಿದೆ. ಕೋವಿಡ್ 19 ಸೋಂಕಿಗೆ ಒಳಗಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿವೆ.

ಫೇಸ್ ಮಾಸ್ಕ್ ಬಗ್ಗೆ ಹೊಸ ನಿಯಮ ಜಾರಿಗೆ ತಂದ ಪೆಟ್ರೋಲ್ ಬಂಕ್ ಮಾಲೀಕರ ಸಂಘ

ದೆಹಲಿ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ಹಲವು ರಾಜ್ಯ ಸರ್ಕಾರಗಳು ಕೆಲವು ನಿರ್ಬಂಧಗಳನ್ನು ಘೋಷಿಸಿವೆ. ಕೋವಿಡ್ 19 ವೈರಸ್ ಹರಡುವುದನ್ನು ತಡೆಗಟ್ಟುವಲ್ಲಿ ಫೇಸ್ ಮಾಸ್ಕ್'ಗಳು ಪ್ರಮುಖ ಪಾತ್ರವಹಿಸುತ್ತವೆ. ಈ ಕಾರಣಕ್ಕೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಬೇಕೆಂದು ಸೂಚನೆ ನೀಡಲಾಗಿದೆ.

ಫೇಸ್ ಮಾಸ್ಕ್ ಬಗ್ಗೆ ಹೊಸ ನಿಯಮ ಜಾರಿಗೆ ತಂದ ಪೆಟ್ರೋಲ್ ಬಂಕ್ ಮಾಲೀಕರ ಸಂಘ

ಆದರೂ ಕೆಲವರು ಫೇಸ್ ಮಾಸ್ಕ್ ಧರಿಸುತ್ತಿಲ್ಲ. ಕೋವಿಡ್ 19 ವೈರಸ್ ವೇಗವಾಗಿ ಹರಡಲು ಇದು ಸಹ ಮತ್ತೊಂದು ಕಾರಣವಾಗಿದೆ. ಪ್ರತಿಯೊಬ್ಬರೂ ಫೇಸ್ ಮಾಸ್ಕ್ ಧರಿಸುವಂತೆ ಮಾಡುವ ಸಲುವಾಗಿ ತಮಿಳುನಾಡು ಪೆಟ್ರೋಲಿಯಂ ಮರ್ಚೆಂಟ್ಸ್ ಅಸೋಸಿಯೇಷನ್ ​​ಈಗ ಹೊಸ ಅಧಿಸೂಚನೆ ಹೊರಡಿಸಿದೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಫೇಸ್ ಮಾಸ್ಕ್ ಬಗ್ಗೆ ಹೊಸ ನಿಯಮ ಜಾರಿಗೆ ತಂದ ಪೆಟ್ರೋಲ್ ಬಂಕ್ ಮಾಲೀಕರ ಸಂಘ

ಈ ಅಧಿಸೂಚನೆಯ ಪ್ರಕಾರ, ಪೆಟ್ರೋಲ್ ಬಂಕ್'ಗಳಿಗೆ ಬರುವ ಪ್ರತಿಯೊಬ್ಬ ಗ್ರಾಹಕರೂ ಫೇಸ್ ಮಾಸ್ಕ್ ಧರಿಸಬೇಕಾಗುತ್ತದೆ. ಫೇಸ್ ಮಾಸ್ಕ್ ಧರಿಸದೇ ಬರುವ ಗ್ರಾಹಕರಿಗೆ ಪೆಟ್ರೋಲ್, ಡೀಸೆಲ್ ನೀಡುವುದಿಲ್ಲವೆಂದು ಈ ಅಧಿಸೂಚನೆಯಲ್ಲಿ ಹೇಳಲಾಗಿದೆ.

ಫೇಸ್ ಮಾಸ್ಕ್ ಬಗ್ಗೆ ಹೊಸ ನಿಯಮ ಜಾರಿಗೆ ತಂದ ಪೆಟ್ರೋಲ್ ಬಂಕ್ ಮಾಲೀಕರ ಸಂಘ

ಈ ಕ್ರಮವು ಏಪ್ರಿಲ್ 10ರಿಂದ ಜಾರಿಗೆ ಬರಲಿದೆ. ಏಪ್ರಿಲ್ 10ರಿಂದ ತಮಿಳುನಾಡಿನ ಪೆಟ್ರೋಲ್ ಬಂಕ್'ಗಳಿಗೆ ಹೋಗುವವರು ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಲೇ ಬೇಕಾಗುತ್ತದೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಫೇಸ್ ಮಾಸ್ಕ್ ಬಗ್ಗೆ ಹೊಸ ನಿಯಮ ಜಾರಿಗೆ ತಂದ ಪೆಟ್ರೋಲ್ ಬಂಕ್ ಮಾಲೀಕರ ಸಂಘ

ಇದೇ ವೇಳೆ ದೆಹಲಿ ಹೈಕೋರ್ಟ್ ಸಹ ಕಾರಿನಲ್ಲಿ ಏಕಾಂಗಿಯಾಗಿ ಪ್ರಯಾಣಿಸುವವರು ಸಹ ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಬೇಕೆಂದು ಆದೇಶಿಸಿದೆ. ಕಾರಿನಲ್ಲಿ ಏಕಾಂಗಿಯಾಗಿ ಪ್ರಯಾಣಿಸುವಾಗ ಫೇಸ್ ಮಾಸ್ಕ್ ಧರಿಸದವರಿಗೆ ದೆಹಲಿ ಪೊಲೀಸರು ದಂಡ ವಿಧಿಸಿದ್ದರು.

ಫೇಸ್ ಮಾಸ್ಕ್ ಬಗ್ಗೆ ಹೊಸ ನಿಯಮ ಜಾರಿಗೆ ತಂದ ಪೆಟ್ರೋಲ್ ಬಂಕ್ ಮಾಲೀಕರ ಸಂಘ

ಇದರ ವಿರುದ್ಧ ಅವರು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಕಾರಿನಲ್ಲಿ ಏಕಾಂಗಿಯಾಗಿ ಪ್ರಯಾಣಿಸುವವರಿಗೆ ಫೇಸ್ ಮಾಸ್ಕ್ ಏಕೆ ಎಂದು ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು. ಆದರೆ ಈ ಅರ್ಜಿಯನ್ನು ಮಾನ್ಯ ಮಾಡದ ದೆಹಲಿ ಹೈಕೋರ್ಟ್ ಕಾರಿನಲ್ಲಿ ಏಕಾಂಗಿಯಾಗಿ ಪ್ರಯಾಣಿಸುವಾಗಲೂ ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸುವಂತೆ ಹೇಳಿದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಫೇಸ್ ಮಾಸ್ಕ್ ಬಗ್ಗೆ ಹೊಸ ನಿಯಮ ಜಾರಿಗೆ ತಂದ ಪೆಟ್ರೋಲ್ ಬಂಕ್ ಮಾಲೀಕರ ಸಂಘ

ಈ ಅರ್ಜಿಯ ವಿಚಾರಣೆ ವೇಳೆ ಫೇಸ್ ಮಾಸ್ಕ್ ಧರಿಸುವ ಅಗತ್ಯವನ್ನು ನ್ಯಾಯಾಧೀಶರು ವಿವರಿಸಿದ್ದಾರೆ. ಫೇಸ್ ಮಾಸ್ಕ್ ಧರಿಸದವರ ವಿರುದ್ಧ ಈಗ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಫೇಸ್ ಮಾಸ್ಕ್ ಬಗ್ಗೆ ಹೊಸ ನಿಯಮ ಜಾರಿಗೆ ತಂದ ಪೆಟ್ರೋಲ್ ಬಂಕ್ ಮಾಲೀಕರ ಸಂಘ

ಕಠಿಣ ಕ್ರಮದಿಂದ ಪಾರಾಗಲು ಫೇಸ್ ಮಾಸ್ಕ್ ಧರಿಸುವುದರೆ ಒಳ್ಳೆಯದು. ಹೆಲ್ಮೆಟ್ ಧರಿಸದವರಿಗೆ ಪೆಟ್ರೋಲ್ ನೀಡುವುದಿಲ್ಲವೆಂದು ಈ ಹಿಂದೆ ಘೋಷಿಸಲಾಗಿತ್ತು.ಆದರೆ ಈ ನಿಯಮವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲಿಲ್ಲ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಫೇಸ್ ಮಾಸ್ಕ್ ಬಗ್ಗೆ ಹೊಸ ನಿಯಮ ಜಾರಿಗೆ ತಂದ ಪೆಟ್ರೋಲ್ ಬಂಕ್ ಮಾಲೀಕರ ಸಂಘ

ಕರೋನಾ ವೈರಸ್‌ನಿಂದ ಫೇಸ್ ಮಾಸ್ಕ್ ರಕ್ಷಣೆ ನೀಡುವಂತೆ, ಹೆಲ್ಮೆಟ್ ರಸ್ತೆ ಅಪಘಾತಗಳಿಂದ ದ್ವಿಚಕ್ರ ವಾಹನ ಸವಾರರನ್ನು ರಕ್ಷಿಸುತ್ತದೆ. ಹೆಲ್ಮೆಟ್ ಧರಿಸುವುದರ ಅಗತ್ಯವನ್ನು ಮನಗಂಡು ಹೆಲ್ಮೆಟ್ ಧರಿಸದಿದ್ದರೆ ಪೆಟ್ರೋಲ್ ನೀಡುವುದಿಲ್ಲವೆಂದು ಘೋಷಿಸಲಾಗಿತ್ತು.

ಫೇಸ್ ಮಾಸ್ಕ್ ಬಗ್ಗೆ ಹೊಸ ನಿಯಮ ಜಾರಿಗೆ ತಂದ ಪೆಟ್ರೋಲ್ ಬಂಕ್ ಮಾಲೀಕರ ಸಂಘ

ಈಗ ಫೇಸ್ ಮಾಸ್ಕ್ ಧರಿಸದಿದ್ದರೆ ಪೆಟ್ರೋಲ್, ಡೀಸೆಲ್ ನೀಡುವುದಿಲ್ಲವೆಂದು ಘೋಷಿಸಲಾಗಿದೆ. ಫೇಸ್ ಮಾಸ್ಕ್ ನಿಯಮವು ಹೆಲ್ಮೆಟ್ ನಿಯಮದಂತೆ ಆಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Most Read Articles

Kannada
English summary
Tamilnadu petrol bunk owner association brings new rules about facemask. Read in Kannada.
Story first published: Friday, April 9, 2021, 12:33 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X