ರಾಷ್ಟ್ರೀಯ ಹೆದ್ದಾರಿ ಅಪಘಾತಗಳ ಪ್ರಮಾಣ ಈ ರಾಜ್ಯದಲ್ಲೇ ಹೆಚ್ಚು

ಭಾರತದ ರಸ್ತೆಗಳಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಅಪಘಾತಗಳು ವಾಹನ ಸವಾರರಿಗೆ ತಲೆನೋವು ತಂದಿಟ್ಟಿವೆ. ಅಪಘಾತಗಳಿಗೆ ಮುಖ್ಯ ಕಾರಣ ವಾಹನ ಸವಾರರ ನಿರ್ಲಕ್ಷ್ಯ ಹಾಗೂ ಅಜಾಗರೂಕತೆ. ಇದರ ಜೊತೆಗೆ ಸಂಚಾರ ನಿಯಮಗಳ ಉಲ್ಲಂಘನೆಯು ಸಹ ಅಪಘಾತಗಳಿಗೆ ಕಾರಣವಾಗುತ್ತಿದೆ.

ರಾಷ್ಟ್ರೀಯ ಹೆದ್ದಾರಿ ಅಪಘಾತಗಳ ಪ್ರಮಾಣ ಈ ರಾಜ್ಯದಲ್ಲೇ ಹೆಚ್ಚು

ಅಪಘಾತಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಷ್ಟೇ ಕಠಿಣ ಕ್ರಮಗಳನ್ನು ಕೈಗೊಂಡರೂ ಸಹ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪ್ರತಿದಿನ ದೇಶದ ಯಾವುದಾದರೂ ಮೂಲೆಯಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಇದರಿಂದಾಗಿ ಸಾವಿನ ಸಂಖ್ಯೆಯು ಹೆಚ್ಚುತ್ತಲೇ ಇದೆ.

ರಾಷ್ಟ್ರೀಯ ಹೆದ್ದಾರಿ ಅಪಘಾತಗಳ ಪ್ರಮಾಣ ಈ ರಾಜ್ಯದಲ್ಲೇ ಹೆಚ್ಚು

ವಿಶ್ವದಾದ್ಯಂತ ರಸ್ತೆ ಅಪಘಾತಗಳಿಂದ ಹೆಚ್ಚು ಸಾವಿಗೀಡಾಗುವವರ ಪಟ್ಟಿಯಲ್ಲಿ ಭಾರತವೂ ಸಹ ಸ್ಥಾನ ಪಡೆದಿದೆ. ಪ್ರತಿ ವರ್ಷವೂ ಭಾರತದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚು ಅಪಘಾತಗಳು ಸಂಭವಿಸುವ ರಾಜ್ಯಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ರಾಷ್ಟ್ರೀಯ ಹೆದ್ದಾರಿ ಅಪಘಾತಗಳ ಪ್ರಮಾಣ ಈ ರಾಜ್ಯದಲ್ಲೇ ಹೆಚ್ಚು

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸುವ ಅಪಘಾತಗಳ ಪಟ್ಟಿಯಲ್ಲಿ ತಮಿಳುನಾಡು ರಾಜ್ಯವು ಅಗ್ರಸ್ಥಾನದಲ್ಲಿದೆ. ಸಾರಿಗೆ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಲ್ಲಿನ ಸರ್ಕಾರವು ಎಂಟು ಪಥದ ರಸ್ತೆ ಹಾಗೂ ನಾಲ್ಕು ಪಥದ ರಸ್ತೆ ನಿರ್ಮಾಣ ಮಾಡುತ್ತಿದ್ದರೂ, ರಸ್ತೆ ಅಗಲೀಕರಣ ಕಾರ್ಯಗಳನ್ನು ಕೈಗೊಳ್ಳುತ್ತಿದ್ದರೂ ಸಹ ತಮಿಳುನಾಡು ಮೊದಲ ಸ್ಥಾನದಲ್ಲಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.

ರಾಷ್ಟ್ರೀಯ ಹೆದ್ದಾರಿ ಅಪಘಾತಗಳ ಪ್ರಮಾಣ ಈ ರಾಜ್ಯದಲ್ಲೇ ಹೆಚ್ಚು

ಇತ್ತೀಚಿನ ಅಧ್ಯಯನದ ಪ್ರಕಾರ, ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ 5,489 ಸ್ಥಳಗಳನ್ನು ಹೆಚ್ಚಿನ ಅಪಘಾತ ಪ್ರದೇಶಗಳೆಂದು ಗುರುತಿಸಲಾಗಿದೆ. ಈ ಪೈಕಿ 748 ಸ್ಥಾನಗಳು ತಮಿಳುನಾಡಿನಲ್ಲಿವೆ.

MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ರಾಷ್ಟ್ರೀಯ ಹೆದ್ದಾರಿ ಅಪಘಾತಗಳ ಪ್ರಮಾಣ ಈ ರಾಜ್ಯದಲ್ಲೇ ಹೆಚ್ಚು

ಈ ಸಂಖ್ಯೆ ದೇಶದ ಇತರ ರಾಜ್ಯಗಳಿಗಿಂತ ಹೆಚ್ಚಿನದಾಗಿದೆ. ದೆಹಲಿಯು ಅತಿ ಹೆಚ್ಚು ಅಪಘಾತ ಸಂಭವಿಸುವ ಕೇಂದ್ರಾಡಳಿತ ಪ್ರದೇಶಗಳ ಪೈಕಿ ಮೊದಲ ಸ್ಥಾನದಲ್ಲಿದೆ. ದೆಹಲಿಯಲ್ಲಿ 113 ಅಪಘಾತ ಪ್ರದೇಶಗಳನ್ನು ಗುರುತಿಸಲಾಗಿದೆ. ಈ ಎಲ್ಲ ಮಾಹಿತಿಯನ್ನು ರಾಜ್ಯಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ಪ್ರಕಟಿಸಲಾಗುತ್ತದೆ.

ರಾಷ್ಟ್ರೀಯ ಹೆದ್ದಾರಿ ಅಪಘಾತಗಳ ಪ್ರಮಾಣ ಈ ರಾಜ್ಯದಲ್ಲೇ ಹೆಚ್ಚು

ಅಪಘಾತ ಪ್ರದೇಶವನ್ನು ಹೇಗೆ ಗುರುತಿಸಲಾಗುತ್ತದೆ?

ರಾಷ್ಟ್ರೀಯ ಹೆದ್ದಾರಿಯ ಒಂದು ನಿರ್ದಿಷ್ಟ ಭಾಗದಲ್ಲಿ ಸಂಭವಿಸುವ ಅಪಘಾತಗಳು ಅಥವಾ ಆ ನಿರ್ದಿಷ್ಟ ಸ್ಥಳದಲ್ಲಿ ಸಂಭವಿಸುವ 10ಕ್ಕೂ ಹೆಚ್ಚು ಸಾವುನೋವುಗಳ ಆಧಾರದ ಮೇಲೆ ಅಪಘಾತ ಪ್ರದೇಶಗಳನ್ನು ಗುರುತಿಸಲಾಗುತ್ತದೆ. ಈ ರೀತಿಯಾಗಿ ಗುರುತಿಸಲ್ಪಟ್ಟ 748 ಸ್ಥಳಗಳು ತಮಿಳುನಾಡಿನಲ್ಲಿವೆ.

MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ರಾಷ್ಟ್ರೀಯ ಹೆದ್ದಾರಿ ಅಪಘಾತಗಳ ಪ್ರಮಾಣ ಈ ರಾಜ್ಯದಲ್ಲೇ ಹೆಚ್ಚು

ಅಂಕಿಅಂಶಗಳ ಪ್ರಕಾರ, ಕಳೆದ ಮೂರು ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿ 500 ಮೀಟರ್‌ಗೆ ಕನಿಷ್ಠ 5 ಅಪಘಾತಗಳು ಸಂಭವಿಸಿವೆ ಎಂದು ಹೇಳಲಾಗಿದೆ. ಕೆಲವು ರಾಜ್ಯಗಳು ಒದಗಿಸಿರುವ ಅಂಕಿಅಂಶಗಳು ತಪ್ಪಾಗಿವೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಅಪಘಾತಗಳ ಪ್ರಮಾಣ ಈ ರಾಜ್ಯದಲ್ಲೇ ಹೆಚ್ಚು

ಮಹಾರಾಷ್ಟ್ರದಲ್ಲಿ ಕೇವಲ 25 ಪ್ರದೇಶಗಳನ್ನು, ಹರಿಯಾಣದಲ್ಲಿ 23 ಪ್ರದೇಶಗಳನ್ನು ಹಾಗೂ ಬಿಹಾರದಲ್ಲಿ 92 ಪ್ರದೇಶಗಳನ್ನು ಹೆಚ್ಚಿನ ಅಪಘಾತ ಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ.

MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ರಾಷ್ಟ್ರೀಯ ಹೆದ್ದಾರಿ ಅಪಘಾತಗಳ ಪ್ರಮಾಣ ಈ ರಾಜ್ಯದಲ್ಲೇ ಹೆಚ್ಚು

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯ ಅಧಿಕಾರಿಗಳು ರಾಜ್ಯ ಸರ್ಕಾರಗಳು ನೀಡಿರುವ ಮಾಹಿತಿಗಳು ಸರಿಯಾಗಿಲ್ಲವೆಂದು ಹೇಳಿದ್ದಾರೆ. ಆ ರಾಜ್ಯಗಳ ಪೊಲೀಸರು ನೀಡಿರುವ ದತ್ತಾಂಶಗಳಲ್ಲಿ ವ್ಯತ್ಯಾಸವಿದೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಅಪಘಾತಗಳ ಪ್ರಮಾಣ ಈ ರಾಜ್ಯದಲ್ಲೇ ಹೆಚ್ಚು

ಪೊಲೀಸರು ಕೇವಲ ಪ್ರಕರಣದ ದಾಖಲೆಯೊಂದಿಗೆ ಮಾಹಿತಿಯನ್ನು ನೀಡಿರಬಹುದೆಂಬುದು ಅಧಿಕಾರಿಗಳ ಅಭಿಪ್ರಾಯವಾಗಿದೆ. ಈ ಪಟ್ಟಿಯಲ್ಲಿ ತಮಿಳುನಾಡು ಮಾತ್ರವಲ್ಲದೆ ಪಶ್ಚಿಮ ಬಂಗಾಳ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ರಾಜಸ್ಥಾನ ಹಾಗೂ ಮಧ್ಯಪ್ರದೇಶ ರಾಜ್ಯಗಳು ಸ್ಥಾನ ಪಡೆದಿವೆ.

MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್

ರಾಷ್ಟ್ರೀಯ ಹೆದ್ದಾರಿ ಅಪಘಾತಗಳ ಪ್ರಮಾಣ ಈ ರಾಜ್ಯದಲ್ಲೇ ಹೆಚ್ಚು

ರಸ್ತೆ ಸುರಕ್ಷತೆ ಹೆಚ್ಚಿಸಿ ಅಪಘಾತಗಳನ್ನು ಕಡಿಮೆ ಮಾಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು ಸಂಸತ್ತಿಗೆ ತಿಳಿಸಿದೆ.

Most Read Articles

Kannada
English summary
Tamil nadu tops most accidents on national highways list. Read in Kannada.
Story first published: Wednesday, September 30, 2020, 13:52 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X