ಸಾಮಾನ್ಯನ ಸ್ಟೋರಿ: ಬಹುಕಾಲದ ಕನಸನ್ನು ನನಸು ಮಾಡಿಕೊಂಡ ವಿಘ್ನೇಶ..! ನೆಚ್ಚಿನ ವ್ಯಾಗನ್ಆರ್ ಕಾರು ಖರೀದಿ
ಇಂದಿನ ದಿನಮಾನದಲ್ಲಿ ಸಾಮಾಜಿಕ ಜಾಲತಾಣವೆಂಬುದು ತನ್ನ ವ್ಯಾಪ್ತಿಯನ್ನು ಎಲ್ಲೆಡೆ ವಿಸ್ತರಿಸಿಕೊಂಡಿದೆ. ಇಲ್ಲಿ ವಿಷಯ ರಚನೆ (ಕಂಟೆಂಟ್ ಕ್ರಿಯೇಟ್) ಮಾಡುವವರೂ ಯಾವುದೇ ಸಿನಿಮಾ ನಟ, ನಟಿಯರಿಗಿಂತ ಕಮ್ಮಿಯಿಲ್ಲದಂತೆ ದೊಡ್ಡ ಪ್ರಮಾಣದಲ್ಲಿ ಜಪ್ರಿಯತೆಯನ್ನು ಗಳಿಸಿದ್ದಾರೆ. ಇದು ಕೆಲವರಿಗೆ ಪೂರ್ಣಕಾಲಿಕ ಉದ್ಯೋಗವಾಗಿದ್ದು, ಹೆಚ್ಚಿನ ಆದಾಯವನ್ನು ಪಡೆಯುತ್ತಿದ್ದಾರೆ.
ತಮಿಳಿನಲ್ಲಿ ವಿಘ್ನೇಶ್ ಕಿಚನ್ (Vignesh's Kitchen) ಹೆಸರಿನ ಯೂಟ್ಯೂಬ್ ಹೊಂದಿರುವ ವಿಘ್ನೇಶ್ ರಾಮನ್ ಅವರು ಹೊಚ್ಚ ಹೊಸ ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki Wagon R) ಹ್ಯಾಚ್‌ಬ್ಯಾಕ್ ಅನ್ನು ಕೊಂಡುಕೊಂಡಿದ್ದಾರೆ. ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ನೂತನ ಕಾರಿನ ಫೋಟೋಗಳನ್ನು ಹಂಚಿಕೊಂಡಿರುವ ಅವರು, 'ನನ್ನ ನೆಚ್ಚಿನ ವ್ಯಾಗನ್ಆರ್... ಬಹುಕಾಲದ ಕನಸು ನನಸಾದ ಕ್ಷಣಗಳಿವು.. ಧನ್ಯವಾದಗಳು' ಎಂದು ಶೀರ್ಷಿಕೆಯನ್ನು ಬರೆದಿದ್ದಾರೆ.

ವಿಘ್ನೇಶ್ ರಾಮನ್ ನಡೆಸುವ ಯೂಟ್ಯೂಬ್ ವಾಹಿನಿಯು 5 ಲಕ್ಷಕ್ಕೂ ಅಧಿಕ ಚಂದಾದಾರರನ್ನು ಹೊಂದಿದೆ. ಅವರಿಗೆ ಇನ್‌ಸ್ಟಾಗ್ರಾಮ್‌ನಲ್ಲಿ 1.22 ಲಕ್ಷ ಫಾಲೋವರ್ಸ್ ಇದ್ದು, ಅಡುಗೆಗೆ ಸಂಬಂಧಿಸಿದ ವಿಡಿಯೋಗಳನ್ನು ಪೋಸ್ಟ್ ಮಾಡುತ್ತಿರುತ್ತಾರೆ. ಇದರಿಂದ ಗಳಿಸಿದ ಹಣದಲ್ಲಿಯೇ ಅವರು ಹೊಸ ಮಾರುತಿ ವ್ಯಾಗನ್ಆರ್ ಕಾರನ್ನು ಕೊಂಡುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ, ವಿಘ್ನೇಶ್ ರಾಮನ್ ವ್ಯಾಗನ್ಆರ್ ಕಾರಿನ ಯಾವ ರೂಪಾಂತರವನ್ನು ಖರೀದಿಸಿದ್ದಾರೆ ಎನ್ನುವುದರ ಕುರಿತು ಸ್ಪಷ್ಟವಾದ ಮಾಹಿತಿ ಇಲ್ಲ. ದೇಶೀಯ ಮಾರುಕಟ್ಟೆಯಲ್ಲಿ ಈ ಹ್ಯಾಚ್‌ಬ್ಯಾಕ್, ರೂ.5.54 ಲಕ್ಷದಿಂದ ರೂ.7.38 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಎಲ್ಎಕ್ಸ್ಐ, ವಿಎಕ್ಸ್ಐ ಒಳಗೊಂಡಂತೆ ಹಲವು ರೂಪಾಂತರಗಳು ಮತ್ತು ಗ್ಯಾಲಂಟ್ ರೆಡ್, ಪೂಲ್‌ಸೈಡ್ ಬ್ಲೂ, ಸುಪೀರಿಯರ್ ವೈಟ್, ಸಿಲ್ಕಿ ಸಿಲ್ವರ್ ಸೇರಿದಂತೆ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki Wagon R) ಕಾರು ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್ ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಒಳಗೊಂಡಿದೆ. ಪೆಟ್ರೋಲ್ ರೂಪಾಂತರಗಳು 23.56 ರಿಂದ 25.19 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 34.05 ಕೆಎಂ/ ಕೆಜಿ ಮೈಲೇಜ್ ಕೊಡುತ್ತವೆ.
ನೂತನ ವ್ಯಾಗನ್ಆರ್ ಕಾರು ಅತ್ಯಾಕರ್ಷಕ ವಿನ್ಯಾಸವನ್ನು ಹೊಂದಿದ್ದು, 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಆಡಿಯೂ, ಫೋನ್ ಕಂಟ್ರೋಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಜೊತೆಗೆ 341 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಪಡೆದಿದೆ.
ಮಾರುತಿ ಸುಜುಕಿ ಕಾರು ಸುರಕ್ಷತೆ ವಿಚಾರದಲ್ಲಿಯೂ ಅತ್ಯುತ್ತಮವಾಗಿದೆ. ಡುಯಲ್ ಫ್ರಂಟ್ ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೇನಾರ್ಸ್ ಮತ್ತು ಹಿಲ್ ಹೋಲ್ಡ್ ಅಸಿಸ್ಟ್ ಅನ್ನು ಒಳಗೊಂಡಿದೆ. ಈ ಕಾರಿಗೆ ಟಾಟಾ ಟಿಯಾಗೊ ಹಾಗೂ ಸಿಟ್ರಸ್ ಸಿ3 ಮಾದರಿಗಳು ಪ್ರಬಲ ಎದುರಾಳಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications