ಮದುವೆ ಮನೆಯಲ್ಲಿ ಗೆಳೆಯರ ಸ್ಪೆಷಲ್ ಗಿಫ್ಟ್ ನೋಡಿ ನವದಂಪತಿ ಫುಲ್ ಶಾಕ್.!?

ಮದುವೆ ಮನೆಗಳಲ್ಲಿ ನವದಂಪತಿಗಳಿಗೆ ಶುಭ ಹಾರೈಸುವಾಗ ಏನಾದ್ರು ಗಿಫ್ಟ್ ಕೊಡುವುದು ಕಾಮನ್. ಕೆಲವರು ದುಬಾರಿ ಗಿಫ್ಟ್ ನೀಡಿದ್ರೆ ಇನ್ನು ಕೆಲವರು ತಮ್ಮ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಸಣ್ಣಪುಟ್ಟ ಗಿಫ್ಟ್ ನೀಡಿ ವಿಶ್ ಮಾಡುವುದನ್ನು ನಾವೆಲ್ಲಾ ನೋಡಿಯೇ ಇರುತ್ತೆವೆ. ಆದ್ರೆ ಇಲ್ಲೊಂದು ಮದುವೆ ಮನೆಯಲ್ಲಿ ನವದಂಪತಿಗೆ ನೀಡಿರುವ ಸ್ಪೆಷಲ್ ಗಿಫ್ಟ್‌ವೊಂದು ಇದೀಗ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ.

ಮದುವೆ ಮನೆಯಲ್ಲಿ ಗೆಳೆಯರ ಸ್ಪೆಷಲ್ ಗಿಫ್ಟ್ ನೋಡಿ ನವದಂಪತಿ ಫುಲ್ ಶಾಕ್.!?

ಹೌದು, ತಮಿಳುನಾಡಿನ ಕಡಲೂರಿನಲ್ಲಿ ನಡೆದ ಮದುವೆ ಮನೆಯೊಂದರಲ್ಲಿ ನವದಂಪತಿಗಳಿಗೆ ಅವರ ಗೆಳೆಯರು ನೀಡಿರುವ ಸ್ಪೆಷಲ್ ಗಿಫ್ಟ್‌ವೊಂದು ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಪೆಟ್ರೋಲ್ ತುಂಬಿರುವ ಕ್ಯಾನ್ ಅನ್ನು ಗಿಫ್ಟ್ ಆಗಿ ನೀಡುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಮದುವೆ ಮನೆಯಲ್ಲಿ ಗೆಳೆಯರ ಸ್ಪೆಷಲ್ ಗಿಫ್ಟ್ ನೋಡಿ ನವದಂಪತಿ ಫುಲ್ ಶಾಕ್.!?

ಮೊದಲೇ ಬೆಲೆ ಏರಿಕೆಯಿಂದ ದೇಶದ ಜನತೆ ರೋಷಿ ಹೋಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹಿಡಿತಕ್ಕೆ ಸಿಗದಿರುವುದು ಜನಸಾಮಾನ್ಯರನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಇದರಿಂದಾಗಿ ವಧು-ವರರಿಗೆ ನೀಡಿದ ಪೆಟ್ರೋಲ್ ಗಿಫ್ಟ್ ಸುದ್ದಿಯು ಮತ್ತಷ್ಟು ಚರ್ಚೆಯಾಗುವಂತೆ ಮಾಡಿದೆ.

ಮದುವೆ ಮನೆಯಲ್ಲಿ ಗೆಳೆಯರ ಸ್ಪೆಷಲ್ ಗಿಫ್ಟ್ ನೋಡಿ ನವದಂಪತಿ ಫುಲ್ ಶಾಕ್.!?

ತಮಿಳುನಾಡಿನ ಕಡಲೂರು ಜಿಲ್ಲೆಯ ಕುಮಾಚ್ಚಿ ಗ್ರಾಮದಲ್ಲಿ ಇಂತದೊಂದು ವಿಶೇಷ ಘಟನೆ ನಡೆದಿದ್ದು, ಎಲ್ಚೆಂಜಿಯನ್ ಮತ್ತು ಕಣಿಮೊಝಿ ವಿವಾಹ ಸಮಾರಂಭದಲ್ಲಿ ಸ್ನೇಹಿತರು 5 ಲೀಟರ್ ಪೆಟ್ರೋಲ್‍ ಕ್ಯಾನ್ ಅನ್ನು ಉಡುಗೊರೆಯಾಗಿ ನೀಡಿ ನೆರೆದಿದ್ದ ಸಂಬಂಧಿಗಳಿಗೆ ಅಚ್ಚರಿ ಮೂಡಿಸಿದ್ದಾರೆ.

ಮದುವೆ ಮನೆಯಲ್ಲಿ ಗೆಳೆಯರ ಸ್ಪೆಷಲ್ ಗಿಫ್ಟ್ ನೋಡಿ ನವದಂಪತಿ ಫುಲ್ ಶಾಕ್.!?

ವೇದಿಕೆಯ ಮೇಲೆ ನಿಂತಿದ್ದ ವಧು-ವರಿಗೆ ಅತಿಥಿಗಳು ಶುಭಾಶಯವನ್ನು ತಿಳಿಸುತ್ತಿದ್ದರು. ಈ ವೇಳೆ ಅವರ ಸ್ನೇಹಿತರು ಒಟ್ಟಾಗಿ ಬಂದು 5 ಲೀಟರ್ ನ ಪೆಟ್ರೋಲ್ ಕ್ಯಾನೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ವೇಳೆ ಸ್ನೇಹಿತರು ಗಿಫ್ಟ್ ಕೊಟ್ಟಾಗ ನಗುತ್ತಲೇ ವಧು-ವರ ಸ್ವೀಕರಿಸಿದ್ದಾರೆ.

ಮದುವೆ ಮನೆಯಲ್ಲಿ ಗೆಳೆಯರ ಸ್ಪೆಷಲ್ ಗಿಫ್ಟ್ ನೋಡಿ ನವದಂಪತಿ ಫುಲ್ ಶಾಕ್.!?

ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳು ಭಾರತ್ ಬಂದ್ ನಡೆಸಿದ್ದರೂ ಕೂಡಾ ಏನೂ ಪ್ರಯೋಜನವಾಗಿಲ್ಲ. ತೈಲ ಬೆಲೆ ಏರುತ್ತಲ್ಲೇ ಇದ್ದು, ಗ್ರಾಹಕರ ಜೇಬು ಸುಡುತ್ತಿದೆ. ಇಂತಹ ದುಬಾರಿ ದುನಿಯಾದಲ್ಲಿ ವಿವಾಹವಾಗುತ್ತಿರುವ ಜೋಡಿಗೆ ಪೆಟ್ರೋಲ್ ಗಿಫ್ಟ್ ನೀಡಿ ಸರ್ಕಾರದ ಗಮನಸೆಳೆಯುವ ಪ್ರಯತ್ನ ಮಾಡಲಾಗಿಯೆಂತೆ.

ಮದುವೆ ಮನೆಯಲ್ಲಿ ಗೆಳೆಯರ ಸ್ಪೆಷಲ್ ಗಿಫ್ಟ್ ನೋಡಿ ನವದಂಪತಿ ಫುಲ್ ಶಾಕ್.!?

ಸದ್ಯ ತಮಿಳುನಾಡಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ ರೂ. 85.45 ಆಗಿದ್ದು, ಡಿಸೇಲ್ ಬೆಲೆಯು ರೂ.78.10 ಬೆಲೆಯಿದ್ದು, ಇಂತಹ ಸಂದರ್ಭದಲ್ಲಿ ವಧುವರರಿಗೆ ಮೌಲ್ಯಯುತ ವಸ್ತುವನ್ನು ಗಿಫ್ಟ್ ಆಗಿ ನೀಡಬೇಕೆಂಬ ಉದ್ದೇಶದಿಂದ ಐದು ಲೀಟರ್ ಪೆಟ್ರೋಲ್ ಕ್ಯಾನ್ ನೀಡಲಾಗಿದೆ ಎಂದು ಎಲ್ಚೆಂಜಿಯನ್ ಸ್ನೇಹಿತರು ಹೇಳಿಕೊಂಡಿದ್ದಾರೆ.

MOST READ: ಪ್ರವಾಹ ಸಂತ್ರಸ್ತರ ಪಾಲಿನ ಹೀರೋ ಆಗಿದ್ದ ಮೀನುಗಾರನಿಗೆ ಮಹೀಂದ್ರಾ ಕಡೆಯಿಂದ ಭರ್ಜರಿ ಉಡುಗೊರೆ

ಮದುವೆ ಮನೆಯಲ್ಲಿ ಗೆಳೆಯರ ಸ್ಪೆಷಲ್ ಗಿಫ್ಟ್ ನೋಡಿ ನವದಂಪತಿ ಫುಲ್ ಶಾಕ್.!?

ಈ ಮಧ್ಯೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಕುರಿತಂತೆ ಹಲವು ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿದ್ದು, ಯೋಗಗುರು ಬಾಬಾ ರಾಮ್ ದೇವ್‌ರ ಪತಂಜಲಿ ಸಂಸ್ಥೆ ಮೂಲಕ ಪ್ರತಿ ಲೀಟರ್ ಪೆಟ್ರೋಲ್‌ ಅನ್ನು ರೂ. 35ರಿಂದ ರೂ.40ಕ್ಕೆ ಮಾರಾಟ ಮಾಡಲು ಸಿದ್ಧವಿರುವುದಾಗಿ ಹೇಳಿಕೆ ನೀಡಿರುವುದು ಇದೀಗ ಸಾಕಷ್ಟು ಚರ್ಚೆಯಾಗುತ್ತಿದೆ.

ಮದುವೆ ಮನೆಯಲ್ಲಿ ಗೆಳೆಯರ ಸ್ಪೆಷಲ್ ಗಿಫ್ಟ್ ನೋಡಿ ನವದಂಪತಿ ಫುಲ್ ಶಾಕ್.!?

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಪೆಟ್ರೋಲ್‍ ಮತ್ತು ಡೀಸೆಲ್ ಬೆಲೆಯು ರೂ. 85ಕ್ಕಿಂತಲೂ ಹೆಚ್ಚು ಇದ್ದು, ಇನ್ನು ಮಹಾರಾಷ್ಟ್ರದ ಕೆಲವು ನಗರಗಳಲ್ಲಿ ಇದು ರೂ.90ರ ಗಡಿ ದಾಟಿದೆ. ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಇಂಧನಗಳ ಬೆಲೆಯಿಂದಾಗಿ ಜನಸಾಮಾನ್ಯರು ಕಷ್ಟ ಪಡುತ್ತಿರುವಾಗ ಬಾಬಾ ರಾಮ್ ದೇವ್ ಹೇಳಿಕೆ ಸಂಚಲನ ಸೃಷ್ಠಿಸಿದೆ.

ಮದುವೆ ಮನೆಯಲ್ಲಿ ಗೆಳೆಯರ ಸ್ಪೆಷಲ್ ಗಿಫ್ಟ್ ನೋಡಿ ನವದಂಪತಿ ಫುಲ್ ಶಾಕ್.!?

ಏರಿಕೆಯಾಗುತ್ತಿರುವ ಇಂಧನದ ಬೆಲೆಯನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಹೊಸ ಆಲೋಚನೆಗಳನ್ನು ಮಾಡಲು ಮುಂದಾಗಿದ್ದು, ಕೆಲವರು ಇಂಧನದ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ತಮ್ಮ ರಾಜ್ಯ ಸರ್ಕಾರಗಳಿಗೆ ಮನವಿಯನ್ನು ಮಾಡುತ್ತಿದ್ದಾರೆ.

ಮದುವೆ ಮನೆಯಲ್ಲಿ ಗೆಳೆಯರ ಸ್ಪೆಷಲ್ ಗಿಫ್ಟ್ ನೋಡಿ ನವದಂಪತಿ ಫುಲ್ ಶಾಕ್.!?

ನೆನ್ನೆಯಷ್ಟೆ ಕರ್ನಾಟಕ ಸರ್ಕಾರ ಸಹ ಪೆಟ್ರೋಲ್ ಮತ್ತು ಡೀಸೆಲ್‍ ಮೇಲಿನ ತೆರಿಗೆಯನ್ನು ಕಡಿತಗೊಳಿಸಿ ಪ್ರತೀ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್‍‍ನ ಮೇಲೆ ರೂ.2 ಕಡಿಮೆ ಮಾಡಲಾಗಿದ್ದು, ಇದೇ ಯೋಜನೆಯನ್ನು ಇನ್ನಿತರೆ ರಾಜ್ಯ ಸರ್ಕಾರಗಳು ಜಾರಿಗೊಳಿಸಲು ಮುಂದಾಗಿವೆ.

MOST READ: ಬೈಕ್ ಮೂಲಕವೇ ಬೆಂಗಳೂರು ಟು ಸಿಡ್ನಿಗೆ ಹೊರಟಿರುವ ಹುಬ್ಬಳ್ಳಿ ಹುಡುಗಿಯ ಕನಸು ಏನು?

ಮದುವೆ ಮನೆಯಲ್ಲಿ ಗೆಳೆಯರ ಸ್ಪೆಷಲ್ ಗಿಫ್ಟ್ ನೋಡಿ ನವದಂಪತಿ ಫುಲ್ ಶಾಕ್.!?

ಈ ವೇಳೆ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಬಾಬಾ ರಾಮ್‍‍ದೇವ್ ಅವರು ಕೇಂದ್ರ ಸರ್ಕಾರವು ನಮಗೆ ಸಹಕರಿಸುವ ಮೂಲಕ ತೆರಿಗೆಯಲ್ಲಿ ಕೆಲವು ವಿನಾಯ್ತಿಗಳನ್ನು ನೀಡಿದ್ದೆ ಆದಲ್ಲಿ ನಾನು ಒಂದು ಲೀಟರ್‍ ಪೆಟ್ರೋಲ್ ಅನ್ನು ಕೇವಲ ರೂ.35 ರಿಂದ 40ಕ್ಕೆ ಮಾರಲು ಸಿದ್ಧ ಎಂದು ಎನ್‍‍ಡಿಟಿವಿ ಯೂತ್ ಕಾಂಕ್ಲೇವ್ ಟುಡೆ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದಾರೆ.

ಮದುವೆ ಮನೆಯಲ್ಲಿ ಗೆಳೆಯರ ಸ್ಪೆಷಲ್ ಗಿಫ್ಟ್ ನೋಡಿ ನವದಂಪತಿ ಫುಲ್ ಶಾಕ್.!?

ಬಾಬಾ ರಾಮ್‍‍ದೇವ್ ಅವರು ಈ ಸಂಚಲನಾತ್ಮಕ ಹೇಳಿಕೆಯು ಇದೀಗ ಎಲ್ಲೆಡೆ ವೈರಲ್ ಆಗಿದ್ದು, ಜೊತೆಗೆ ಮೋದಿಯವರು ಜನಸಾಮಾನ್ಯರಿಗೆ ಉಪಯುಕ್ತವಾದ ಎಷ್ಟೊ ಯೋಜನೆಗಳನ್ನು ನೀಡುತ್ತಲೇ ಬಂದಿದ್ದಾರೆ. ಆದ್ರೆ ಮೂರು ತಿಂಗಳಿನಿಂದ ಏರುತ್ತಿರುವ ಇಂಧನದ ಬೆಲೆಯಿಂದಾಗಿ ಜನರು ಗೊಂದಲಕ್ಕೆ ಒಳಗಾಗುತ್ತಿದ್ದರೂ, ಇದುವರೆಗೂ ಯಾವುದೇ ನಿರ್ಣಯವನ್ನು ತೆಗೆದುಕೊಳ್ಳದಿರುವುದು ಆಶ್ಚರ್ಯಕರವಾಗಿದೆ ಎಂದು ಹೇಳಿದ್ದಾರೆ.

ಮದುವೆ ಮನೆಯಲ್ಲಿ ಗೆಳೆಯರ ಸ್ಪೆಷಲ್ ಗಿಫ್ಟ್ ನೋಡಿ ನವದಂಪತಿ ಫುಲ್ ಶಾಕ್.!?

ಇಷ್ಟೆ ಅಲ್ಲದೆ, ಇಂಧನಗಳ ಮೇಲೆ ಈಗಿರುವ ತೆರಿಗೆಯನ್ನು ತೊಲಗಿಸಿ ಜಿಎಸ್‍‍‍ಟಿ ವ್ಯಾಪ್ತಿಗೆ ತರುವ ಅವಶ್ಯಕತೆ ಎಂದು ಪ್ರತಿಪಾದಿಸಿರುವ ಬಾಬಾ ರಾಮ್‌ದೇವ್ ಅವರು ಕೇಂದ್ರಕ್ಕೆ ಹೊಸದೊಂದು ಮನವಿ ಮಾಡಿದ್ದು, ಯಾವ ಮಾರ್ಗದ ಮೂಲಕ ಅವರು ಕಡಿಮೆ ಬೆಲೆಗಳಲ್ಲಿ ಅಗ್ಗದ ಬೆಲೆಗೆ ಪೆಟ್ರೋಲ್ ಮಾರಾಟ ಮಾಡುತ್ತಾರೆ ಎನ್ನುವುದನ್ನು ಸ್ಪಷ್ಟಪಡಿಸಿಲ್ಲ.

ಮದುವೆ ಮನೆಯಲ್ಲಿ ಗೆಳೆಯರ ಸ್ಪೆಷಲ್ ಗಿಫ್ಟ್ ನೋಡಿ ನವದಂಪತಿ ಫುಲ್ ಶಾಕ್.!?

ಈ ಬಗ್ಗೆ ಸಾಕಷ್ಟು ಪರ-ವಿರೋಧ ಕಮೆಂಟ್‌ಗಳು ಕೇಳಿಬರುತ್ತಿದ್ದು, ಒಂದು ವೇಳೆ ರಾಮ್‌ದೇವ್ ಅವರು ರೂ.40ಕ್ಕೆ ಪೆಟ್ರೋಲ್ ಮಾಡಿದ್ದೆ ಆದಲ್ಲಿ ಅದೊಂದು ಅದ್ಭುತ ಎಂದೇ ಹೇಳಬೇಕಾಗುತ್ತೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ.

Most Read Articles

ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಬಗ್ಗೆ ಚಿಂತೆ ಯಾಕೆ? ಇಲ್ಲಿದೆ ನೋಡಿ ಒಂದು ಬಾರಿ ಫುಲ್ ಚಾರ್ಜ್ ಮಾಡಿದ್ದಲ್ಲಿ ಬರೋಬ್ಬರಿ 350ಕಿ.ಮಿ ಮೈಲೇಜ್ ನೀಡಬಲ್ಲ ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರು..!

Kannada
Read more on off beat
English summary
Tamilnadu Couples Receives Petrol as a Wedding Gift From Friends.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X