ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಚಾರ್ಜಿಂಗ್ ಪೋರ್ಟ್‌ ಹಾನಿಗೊಳಿಸಿದ ಹಸು

ಭಾರತೀಯ ಹೆದ್ದಾರಿಗಳಲ್ಲಿ ಧನಗಳು ಬಿಡಾಡಿ ದನಗಳದ್ದೇ ದೊಡ್ಡ ಸಮಸ್ಯೆ. ಇಂತಹ ಅನೇಕ ಜಾನುವಾರುಗಳು ಹೆದ್ದಾರಿಗಳಲ್ಲಿ ದೊಡ್ಡ ಅಪಘಾತಗಳಿಗೆ ಕಾರಣವಾಗುತ್ತವೆ. ಅದರಲ್ಲೂ ರಾತ್ರಿ ವೇಳೆ ಒಂದ್ಕಡೆ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ ಸವಾರರಂತೂ ಜೀವವನ್ನ ಕೈಯಲ್ಲಿ ಹಿಡಿದು ಸಾಗಬೇಕಾಗುತ್ತದೆ. ಎಷ್ಟೋ ಮಂದಿ ಜಾನುವಾರುಗಳು ಕಾಣದೇ ಅಪಘಾತಕ್ಕೊಳಗಾಗಿ ಗಾಯಗೊಂಡ ಘಟನೆಗಳು ನಡೆಯುತ್ತದೆ.

ಸರಕು ಹೊತ್ತು ಸಾಗುವ ದೊಡ್ಡ ವಾಹನಗಳು ಡಿಕ್ಕಿ ಹೊಡೆದ ಸಂದರ್ಭದಲ್ಲಿ ಎಷ್ಟೋ ಜಾನುವಾರುಗಳು ಹೆದ್ದಾರಿಯಲ್ಲೇ ಪ್ರಾಣಬಿಟ್ಟಿವೆ. ಇನ್ನು ನಗರ ವ್ಯಾಪ್ತಿಯ ಒಳಗಿದ್ದರೂ ಅಡ್ಡಾದಿಡ್ಡಿ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಜಾನುವಾರುಗಳಿಂದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾಲೀಕ ಕಂಗಾಲಾದ ಘಟನೆ ನಡೆದಿದೆ. ನೆಕ್ಸಾನ್ ಇವಿಯ ಚಾರ್ಜಿಂಗ್ ಪೋರ್ಟ್ ಅನ್ನು ಜಾನುವಾರು ಹಾನಿ ಮಾಡಿದೆ, ಸಾಕೆಟ್‌ನಿಂದ ಚಾರ್ಜರ್‌ನಿಂದ ಹೊರಬರಲು ಹಸು ಸಾಕಷ್ಟು ಬಲವನ್ನು ಪ್ರಯೋಗಿಸಿರಬೇಕು. ಕನೆಕ್ಟರ್ ಪ್ಲಗ್ ಈಗ ನಿಷ್ಪ್ರಯೋಜಕವಾಗಿದೆ ಮತ್ತು ಸಂಪೂರ್ಣ ಚಾರ್ಜರ್‌ಗೆ ಈಗ ಬದಲಿಸುವ ಅಗತ್ಯವಿದೆ.

ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಚಾರ್ಜಿಂಗ್ ಪೋರ್ಟ್‌ ಹಾನಿಗೊಳಿಸಿದ ಹಸು

ಚಾರ್ಜಿಂಗ್ ಕೇಬಲ್‌ನ ನಿಖರವಾದ ಬೆಲೆ ತಿಳಿದಿಲ್ಲ. ಆದರೆ ಥರ್ಟ್ ಪಾರ್ಟಿ ಬದಲಿ ಕೇಬಲ್‌ಗಳಿಗೆ 20,000 ರಿಂದ 35,000 ರೂ. ವರೆಗೆ ಬೆಲೆ ಇರಬಹುದು. ಟಾಟಾ ಮೋಟಾರ್ಸ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಪ್ರಮುಖ ಇವಿ ಮಾದರಿಗಳೊಂದಿಗೆ ಮುಂಚೂಣಿ ಸಾಧಿಸುತ್ತಿದೆ. ಇನ್ನು ದೇಶದಲ್ಲಿ ಇಂಧನ ಬೆಲೆಗಳು ಗಗನಕ್ಕೆರಿದೆ. ಏರುತ್ತಿರುವ ಇಂಧನ ಬೆಲೆಗಳಿಂದ ಪಾರಾಗಲು ಜನರು ಪರ್ಯಾಯ ಆಯ್ಕೆಗಳನ್ನು ಹುಡುಕಲಾರಂಭಿಸಿದ್ದಾರೆ. ಇದರಿಂದ ಜನರು ನಿಧಾನವಾಗಿ ಎಲೆಕ್ಟ್ರಿಕ್ ಕಾರುಗಳ ಕಡೆ ಮುಖ ಮಾಡುತ್ತಿದ್ದಾರೆ.

ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಬೇಡಿಕೆಯನ್ನು ಪಡೆದುಕೊಳ್ಳುತ್ತಿದೆ. ಈ ವೇಳೆ ಟಾಟಾ ಎಲೆಕ್ಟ್ರಿಕ್ ಕಾರುಗಳ ವಿಭಾಗದಲ್ಲಿ ಪಾರುಪತ್ಯ ಮುಂದುವರೆಸಲು ಪ್ರಯತ್ನಿಸುತ್ತಿದೆ. ಸದ್ಯ ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ವಿಭಾಗದಲ್ಲಿ ಟಾಟಾ ಮೇಲುಗೈಯನ್ನು ಸಾಧಿಸಿದೆ. ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಮಾದರಿಯಲ್ಲಿ ಹೆಚ್ಚುವರಿ ಮೈಲೇಜ್ ಪ್ರೇರಿತ ನೆಕ್ಸಾನ್ ಇವಿ ಮ್ಯಾಕ್ಸ್ ವರ್ಷನ್ ಬಿಡುಗಡೆ ನಂತರ ಹೆಚ್ಚಿನ ಬೇಡಿಕೆ ದಾಖಲಿಸುತ್ತಿದ್ದು, ಗ್ರಾಹಕರು ಇದೀಗ ತಮ್ಮ ಬೇಡಿಕೆಗೆ ಅನುಗುಣವಾಗಿ ನೆಕ್ಸಾನ್ ಇವಿ ಮತ್ತು ನೆಕ್ಸಾನ್ ಇವಿ ಮ್ಯಾಕ್ ಮಾದರಿಗಳನ್ನು ಖರೀದಿ ಮಾಡಬಹುದಾಗಿದೆ.

ಈ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಸಾಮಾನ್ಯ ನೆಕ್ಸಾನ್ ಇವಿ ಮಾದರಿಗಿಂತಲೂ ಹೆಚ್ಚಿನ ಮೈಲೇಜ್‌ನೊಂದಿಗೆ ಹೆಚ್ಚುವರಿ ಫೀಚರ್ಸ್ ಪಡೆದುಕೊಂಡಿದ್ದು, ಅತ್ಯಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಆಯ್ಕೆ ಹೊಂದಿರುವ ಹಿನ್ನಲೆಯಲ್ಲಿ ಹೊಸ ಕಾರಿಗಾಗಿ ಮ್ಯಾಕ್ಸ್ ನೇಮ್‌ಪ್ಲೆಮ್ ಬಳಕೆ ಮಾಡಲಾಗಿದೆ. ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಸಾಮಾನ್ಯ ನೆಕ್ಸಾನ್ ಇವಿ ಮಾದರಿಗಿಂತಲೂ ಹೆಚ್ಚಿನ ಮೈಲೇಜ್‌ನೊಂದಿಗೆ ಹೆಚ್ಚುವರಿ ಫೀಚರ್ಸ್ ಪಡೆದುಕೊಂಡಿದ್ದು, ಅತ್ಯಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಆಯ್ಕೆ ಹೊಂದಿರುವ ಹಿನ್ನಲೆಯಲ್ಲಿ ಹೊಸ ಕಾರಿಗಾಗಿ ಮ್ಯಾಕ್ಸ್ ನೇಮ್‌ಪ್ಲೆಮ್ ಬಳಕೆ ಮಾಡಲಾಗಿದೆ.

ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳಲ್ಲಿ ಕಂಪನಿಯು ಎರಡು ಮಾದರಿಯ ಚಾರ್ಜಿಂಗ್ ಆಯ್ಕೆಗಳನ್ನು ನೀಡಿದ್ದು, 3.3 kW ಮತ್ತು 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ನೀಡಿದೆ. ಇದು 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಲಕ್ಸ್ ವೆರಿಯೆಂಟ್‌ಗಳು ಸಾಮಾನ್ಯ ಮಾದರಿಗಿಂತಲೂ ತುಸು ಹೆಚ್ಚುವರಿ ಬೆಲೆ ಹೊಂದಿರಲಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ ಅತಿ ಕಡಿಮೆ ಅವಧಿಯಲ್ಲಿ ಚಾರ್ಜ್ ಮಾಡಬಹುದಾಗಿದೆ.

ಈ 3.3 kW ಚಾರ್ಜಿಂಗ್ ಆಯ್ಕೆ ಹೊಂದಿರುವ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಸೊನ್ನೆಯಿಂದ ಶೇ.100 ರಷ್ಟು ಚಾರ್ಜ್ ಮಾಡಲು ಕನಿಷ್ಠ 14 ರಿಂದ 15 ಗಂಟೆಗಳ ಕಾಲ ಸಮಯಾವಕಾಶ ತೆಗೆದುಕೊಂಡರೆ 7.2 kW AC ಫಾಸ್ಟ್ ಚಾರ್ಜಿಂಗ್ ಆಯ್ಕೆ ಹೊಂದಿರುವ ಮಾದರಿಯು ಪೂರ್ತಿಯಾಗಿ ಚಾರ್ಜ್ ಆಗಲು ಕನಿಷ್ಠ 5 ರಿಂದ 6 ಗಂಟೆಗಳ ಕಾಲ ಸಮಯಾವಕಾಶ ತೆಗದುಕೊಳ್ಳುತ್ತದೆ. ಹೊಸ ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಈ ಹಿಂದಿನ 30kWh ಬ್ಯಾಟರಿ ಪ್ಯಾಕ್ ಸ್ಥಾನಕ್ಕೆ ಹೊಸದಾಗಿ 40.5kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದೆ.

ಇದು ARAI ಸಂಸ್ಥೆಯು ಪ್ರಮಾಣೀಕರಿಸಿದಂತೆ ಪ್ರತಿ ಚಾರ್ಜ್‌ಗೆ ಗರಿಷ್ಠ 437 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ. ನೆಕ್ಸಾನ್ ಇವಿ ಮ್ಯಾಕ್ಸ್ ಮಾದರಿಯು ಇಕೋ ಮೋಡ್‌ನಲ್ಲಿ 437 ಕಿ.ಮೀ ಮೈಲೇಜ್ ಹೊಂದಿದ್ದರೂ ಅದು ವಿವಿಧ ಡ್ರೈವಿಂಗ್ ಮೋಡ್ ಮತ್ತು ರಸ್ತೆ ಸೌಲಭ್ಯಕ್ಕೆ ಅನುಗುಣವಾಗಿ ರಿಯಲ್ ವರ್ಲ್ಡ್ ಮೈಲೇಜ್ ಪ್ರಮಾಣದಲ್ಲಿ ವ್ಯತ್ಯಾಸ ಉಂಟಾಗಲಿದ್ದು, ಇದು ವಿವಿಧ ಡ್ರೈವ್ ಮೋಡ್ ಮತ್ತು ರಸ್ತೆ ಸೌಲಭ್ಯಗಳಿಗೆ ಅನುಗುಣವಾಗಿ ಕನಿಷ್ಠ 300ರಿಂದ 320 ಕಿ.ಮೀ ಮೈಲೇಜ್ ಅನ್ನು ಅರಾಮವಾಗಿ ಪಡೆದುಕೊಳ್ಳಬಹುದಾಗಿದೆ.

Most Read Articles

Kannada
English summary
Tata nexon ev charging port damaged by cow details
Story first published: Tuesday, December 27, 2022, 16:16 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X