ಟಾಟಾ ನೆಕ್ಸಾನ್ ಗುಣಮಟ್ಟಕ್ಕೆ ಸರಿಸಾಟಿಯೇ ಇಲ್ಲ.. ಅತಿವೇಗದಲ್ಲಿ ಟ್ಯಾಂಕರ್‌ಗೆ ಡಿಕ್ಕಿ: ಜಖಂಗೊಂಡರೂ ಪ್ರಯಾಣಿಕ ಸೇಫ್!

ದೇಶದ ರಸ್ತೆಯಲ್ಲಿ ಪ್ರತಿದಿನ ಒಂದಿಲ್ಲೊಂದು ಅಪಘಾತಗಳು ನಡೆಯುತ್ತಲೇ ಇರುತ್ತವೆ. ಆ ಸಂಬಂಧ ಅನೇಕ ವರದಿಗಳನ್ನು ನಾನು, ನೀವು ಓದುತ್ತಲೇ ಇರುತ್ತವೆ. ಈಗಂತೂ ಹೊಸ ಕಾರು ಖರೀದಿಸುವವರೂ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಬಹುತೇಕರು, ನಿರ್ಮಾಣ ಗುಣಮಟ್ಟಕ್ಕೆ ಹೆಸರುವಾಸಿಯಾಗಿರುವ ಟಾಟಾ ಕಾರುಗಳನ್ನು ಕೊಂಡುಕೊಳ್ಳಲು ಆಸಕ್ತಿ ವಹಿಸುತ್ತಾರೆ.

ನಾವಿಂದು ಅಂತಹದೇ ಟಾಟಾ ಕಾರಿನ ಕಥೆಯೊಂದನ್ನು ಹೇಳಲು ಹೊರಟ್ಟಿದ್ದೇವೆ. ಟಾಟಾ ನೆಕ್ಸಾನ್ (Tata Nexon) ಎಸ್‌ಯುವಿಯು ಅತಿವೇಗದಲ್ಲಿ ಆಯಿಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನೆಕ್ಸಾನ್ ಕಾರಿನಲ್ಲಿದ್ದ ಚಾಲಕ ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವಿಡಿಯೋವನ್ನು ನಿಖಿಲ್ ರಾಣಾ ಎಂಬುವವರೂ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದಾರೆ.

ಟಾಟಾ ನೆಕ್ಸಾನ್ ಗುಣಮಟ್ಟಕ್ಕೆ ಸರಿಸಾಟಿಯೇ ಇಲ್ಲ.. ಅತಿವೇಗದಲ್ಲಿ ಟ್ಯಾಂಕರ್‌ಗೆ ಡಿಕ್ಕಿ: ಜಖಂಗೊಂಡರೂ ಪ್ರಯಾಣಿಕ ಸೇಫ್!

ಈ ಘಟನೆ ನಡೆದ ನಿಖರವಾದ ಸ್ಥಳದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಬಹುತೇಕ ದಕ್ಷಿಣ ಭಾರತದ ರಾಜ್ಯವೊಂದರಲ್ಲಿ ನಡೆದಿದೆ ಎಂದು ಹೇಳಲಾಗಿದೆ. ವಿಡಿಯೋದಲ್ಲಿ ಟಾಟಾ ನೆಕ್ಸಾನ್ ಎಸ್‌ಯುವಿ ಮುಂಭಾಗ ಸಂಪೂರ್ಣ ಹಾನಿಯಾಗಿರುವುದನ್ನು ಗಮನಿಸಬಹುದು. ದೃಶ್ಯಗಳನ್ನು ಚಿತ್ರೀಕರಿಸುವಾಗ ಡ್ರೈವರ್ ಕೂಡ ಕಾರಿನಲ್ಲಿದ್ದರು. ಎರಡು ವಾಹನಗಳು ವೇಗದಲ್ಲಿದ್ದ ಕಾರಣ ಅಪಘಾತ ಸಂಭವಿಸಿದೆ ಎಂದು ವಿಡಿಯೋದಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲಿಯೇ ಇದ್ದ ಸ್ಥಳೀಯರು, ಕಾರು ಚಾಲಕನನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇವೆರೆಡು ವಾಹನಗಳು, ರಸ್ತೆಯ ವಿರುದ್ಧ ದಿಕ್ಕುಗಳಿಂದ ಬರುತ್ತಿದ್ದರಿಂದ ಈ ಅಪಘಾತವಾಗಿದೆ ಎನ್ನಲಾಗಿದೆ. ಆದರೆ, ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಏನೇ ಆದರೂ ಟಾಟಾ ನೆಕ್ಸಾನ್ ಸುರಕ್ಷಿತ ಕಾರುಗಳಲ್ಲಿ ಒಂದಾಗಿದ್ದು, ಅದರ ನಿರ್ಮಾಣ ಗುಣಮಟ್ಟವನ್ನು ನಾವು ಮೆಚ್ಚಲೇಬೇಕು.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ನವೀಕರಿಸಿದ ರೂಪದಲ್ಲಿ ಟಾಟಾ ನೆಕ್ಸಾನ್ ಎಸ್‍ಯುವಿ ಖರೀದಿಗೆ ಲಭ್ಯವಿದೆ. 11 ವಿವಿಧ ರೂಪಾಂತರಗಳ ಆಯ್ಕೆಯಲ್ಲಿ ಸಿಗಲಿದ್ದು, ರೂ.8.10 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಭರಪೂರ ವೈಶಿಷ್ಟ್ಯಗಳನ್ನು ಹೊಂದಿದ್ದು, 6 ಏರ್‌ಬ್ಯಾಗ್ಸ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ISOFIX ಚೈಲ್ಡ್ ಸೀಟ್ ಆಂಕರಿಂಗ್ ಪಾಯಿಂಟ್ಸ್, ಪಾರ್ಕಿಂಗ್ ಸೆನ್ಸರ್ಸ್ ಒಳಗೊಂಡಂತೆ ವಿವಿಧ ಸೇಫ್ಟಿ ಫೀಚರ್ಸ್ ಇವೆ.

ಈ ಕಾರು, ನೆಕ್ಸಾನ್ ಫಿಯರ್‌ಲೆಸ್ ಪರ್ಪಲ್, ಕ್ರಿಯೇಟಿವ್ ಓಷನ್, ಪ್ರಿಸ್ಟಿನ್ ವೈಟ್, ಪ್ಯೂರ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ. ವೈಶಿಷ್ಟ್ಯದ ಬಗ್ಗೆ ಹೇಳುವುದಾದರೆ, 10.25 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 8 ಸ್ಪೀಕರ್ JBL ಆಡಿಯೊ ಸಿಸ್ಟಮ್‌, ಡುಯಲ್-ಕ್ಲಚ್ ಗೇರ್‌ಬಾಕ್ಸ್‌ಗಾಗಿ ಫ್ಯಾನ್ಸಿ ಶಿಫ್ಟರ್, ರೇರ್ ಎಸಿ ವೆಂಟ್ಸ್ ಸೇರಿದಂತೆ ಹಲವು ಫೀಚರ್ಸ್ ಹೊಂದಿದೆ.

ನವೀಕರಿಸಿದ ಟಾಟಾ ನೆಕ್ಸಾನ್ ಎಸ್‍ಯುವಿ, 1.2 - ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 1.5 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಜೊತೆಗೆ ರೂಪಾಂತರಗಳಿಗೆ ಅನುಗುಣವಾಗಿ 5/6 ಸ್ವೀಡ್ ಮ್ಯಾನುವಲ್, 6 ಸ್ವೀಡ್/ 7 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಲಭ್ಯವಿದೆ. ಮೈಲೇಜ್ ವಿಷಯವಾಗಿ ಹೇಳುವುದಾದರೆ, 17.44 kmpl (ARAI) ನಿಂದ 23.23 kmpl ಇಂಧನ ದಕ್ಷತೆ ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, October 5, 2023, 15:56 [IST]
English summary
Tata nexon suv crashes into oil tanker driver safe
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+