Tata Safari: ಕಲ್ಲು ಬಂಡೆಯಂತಿರುವ ಟಾಟಾ ಸಫಾರಿ ಕಾರನ್ನು ಮನೆಗೆ ತಂದ ಕನ್ನಡದ ಖ್ಯಾತ ನಟಿ
ಬೆಂಗಳೂರು ಮೂಲದ ನಟಿ ತೇಜಸ್ವಿನಿ ಗೌಡ ದಂಪತಿ (Tejaswini Gowda) ತೆಲುಗು, ತಮಿಳು ಧಾರಾವಾಹಿಗಳಲ್ಲಿ ಅಭಿನಯಿಸುವ ಮೂಲಕ ಭಾರೀ ಸಂಖ್ಯೆಯಲ್ಲಿ ಫ್ಯಾನ್ ಫಾಲೋಯಿಂಗ್‌ನ್ನು ಹೊಂದಿದ್ದಾರೆ. ಅವರಿಗೆ ತೆಲುಗಿನ 'ಕೊಯಿಲಮ್ಮ' ಸೀರಿಯಲ್ ದೊಡ್ಡ ಹೆಸರನ್ನು ತಂದುಕೊಟ್ಟಿತ್ತು. ಕನ್ನಡದ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾದ 'ಬಿಳಿ ಹೆಂಡ್ತಿ' ಧಾರಾವಾಹಿಯಲ್ಲಿಯೂ ನಟಿಸಿದ್ದರು.
2022ರಲ್ಲಿ ನಟಿ ತೇಜಸ್ವಿನಿ ಗೌಡ, ತೆಲುಗು ನಟ ಅಮರದೀಪ್ ಚೌಧರಿ ಅವರನ್ನು ವಿವಾಹವಾದರು. ಮೂಲತಃ ಅನಂತಪುರ ಜಿಲ್ಲೆಯವರಾದ ಅಮರದೀಪ್ ಅವರು ಕಿರುತೆರೆಯಲ್ಲಿ ಹೆಚ್ಚು ಜನಪ್ರಿಯತೆಯನ್ನು ಗಳಿಸಿದ್ದು, ವೆಬ್ ಸೀರಿಸ್‌ಗಳಲ್ಲಿಯೂ ನಟಿಸಿದ್ದಾರೆ. ಈಗ ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈಚೆಗೆ ದಂಪತಿಗಳಿಬ್ಬರು ಹೊಚ್ಚ ಹೊಸ ಟಾಟಾ ಸಫಾರಿ ಎಸ್‌ಯುವಿಯನ್ನು ಕೊಂಡುಕೊಂಡಿದ್ದಾರೆ..

ಈ ಕುರಿತು ನಟ ಅಮರದೀಪ್ ಹಾಗೂ ನಟಿ ತೇಜಸ್ವಿನಿ ಗೌಡ ಒಟ್ಟಿಗೆ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ದಂಪತಿಗಳಿಬ್ಬರು ಶೋರೂಂಗೆ ಹೋಗಿ, ಅಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿ ನೂತನ ಕಾರನ್ನು ವಿತರಣೆ ಪಡೆಯುತ್ತಿರುವುದನ್ನು ದೃಶ್ಯಗಳಲ್ಲಿ ಕಾಣಬಹುದು. ಸೆಲೆಬ್ರಿಟಿಗಳು, ಸ್ನೇಹಿತರು ಹಾಗೂ ಸಾಮಾಜಿಕ ಜಾಲತಾಣ ಬಳಕೆದಾರರು ಕೂಡ ಹೊಸ ಸಫಾರಿ ಎಸ್‌ಯುವಿಯನ್ನು ಖರೀದಿಸಿದ್ದಕ್ಕಾಗಿ ದಂಪತಿಗಳಿಗೆ ಶುಭ ಕೋರುತ್ತಿದ್ದಾರೆ.
ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ಸಫಾರಿ (Tata Safari) ಎಸ್‌ಯುವಿ ರೂ.16.19 ಲಕ್ಷದಿಂದ ರೂ.27.34 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಕಾರು ಸ್ಮಾರ್ಟ್, ಸ್ಮಾರ್ಟ್ (ಒ), ಅಡ್ವೆಂಚರ್, ಅಕಂಪ್ಲಿಶ್ಡ್ ಪ್ಲಸ್ ಸೇರಿದಂತೆ ವಿವಿಧ ರೂಪಾಂತರ (ವೇರಿಯೆಂಟ್)ಗಳು ಹಾಗೂ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. ಜೊತೆಗೆ 6 - 7 ಆಸನ ವ್ಯವಸ್ಥೆಯನ್ನು ಒಳಗೊಂಡಿದೆ.

ನೂತನ ಟಾಟಾ ಸಫಾರಿ ಎಸ್‌ಯುವಿಯು 2-ಲೀಟರ್ ಡೀಸೆಲ್ ಎಂಜಿನ್ ಪಡೆದಿದ್ದು, 170 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 350 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ 6-ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಹೊಂದಿದ್ದು, 14.50 ರಿಂದ 16.30 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.
ಈ ಕಾರು ಯಾವುದೇ ಐಷರಾಮಿ ಮಾದರಿಗಳಿಗೆ ಕಮ್ಮಿಯಿಲ್ಲದಂತಹ ವೈಶಿಷ್ಟ್ಯಗಳನ್ನು ಪಡೆದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಡುಯಲ್ ಜೋನ್ ಆಟೋಮೆಟಿಕ್ ಎಸಿ, ಸನ್‌ರೂಫ್ ಮತ್ತು ಆಂಬಿಯೆಂಟ್ ಲೈಟಿಂಗ್ ಅನ್ನು ಹೊಂದಿದೆ.
ಸುರಕ್ಷತೆಗೂ ಟಾಟಾ ಸಫಾರಿ ಹೆಸರುವಾಸಿಯಾಗಿದ್ದು, ಭಾರತ್ ಎನ್‌ಸಿಎಪಿ ಪರೀಕ್ಷೆಯಲ್ಲಿ 5-ಸ್ಟಾರ್ ರೇಟಿಂಗ್ ಪಡೆದಿದೆ. 7 ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾ ಒಳಗೊಂಡಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








