Tata Tiago: ಅಜ್ಜ-ಅಜ್ಜಿಯ ಜೀವ ಕಾಪಾಡಿದ ಕಡಿಮೆ ಬೆಲೆಯ ಟಾಟಾ ಟಿಯಾಗೊ ಕಾರು, ಒಂದು ಗಾಯಗಳಾಗಲಿಲ್ಲ!

ಭಾರತದ ರಸ್ತೆಯಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಕಾರಣಗಳಿಗೆ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಈ ರೀತಿಯ ಘಟನೆಗಳಲ್ಲಿ ಯಾವುದೇ ಗಾಯಗಳಿಲ್ಲದೇ ಹೊರಬರುವುದು ತೀರಾ ಅಪರೂಪ. ಆದರೆ, ಇಲ್ಲೊಂದು ಕಡೆ ಟಾಟಾ ಟಿಯಾಗೊ ಕಾರು ಅಪಘಾತಕ್ಕೆ ತುತ್ತಾಗಿದ್ದು, ಪವಾಡ ಸದೃಶ್ಯ ರೀತಿಯಲ್ಲಿ ವೃದ್ಧ ದಂಪತಿ ಸುರಕ್ಷಿತವಾಗಿ ಪಾರಾಗಿದ್ದಾರೆ.

ಉತ್ತರ ಪ್ರದೇಶದ ನೋಯ್ಡಾದಲ್ಲಿ (Noida, Uttar Pradesh) ಈ ಘಟನೆ ನಡೆದಿದ್ದು, ವೃದ್ಧ ದಂಪತಿಗಳಿಬ್ಬರು ತಮ್ಮ ಟಾಟಾ ಟಿಯಾಗೊದಲ್ಲಿ (Tata Tiago) ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ಪಲ್ಟಿಯಾಗಿದ್ದು, ಅವರಿಬ್ಬರೂ ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಕಾರಿನಿಂದ ಹೊರಬಂದಿದ್ದಾರೆ. ಸದ್ಯ, ಆ ವಿಡಿಯೋ ಆನ್‌ಲೈನ್ ನಲ್ಲಿ ಕಾಣಿಕೊಂಡಿದೆ.

Tata Tiago: ಅಜ್ಜ-ಅಜ್ಜಿಯ ಜೀವ ಕಾಪಾಡಿದ ಕಡಿಮೆ ಬೆಲೆಯ ಟಾಟಾ ಟಿಯಾಗೊ ಕಾರು, ಒಂದು ಗಾಯಗಳಾಗಲಿಲ್ಲ!

ವಿಡಿಯೋವನ್ನು ಗಮನಿದಾಗ ವೃದ್ಧ ದಂಪತಿ ಕಾರಿನ ಹೊರಭಾಗದಲ್ಲಿ ಬಂದು ಕುಳಿದುಕೊಂಡಿರುವುದುನ್ನು ಕಾಣಬಹುದು. ಪಲ್ಟಿಯಾದ ರಭಸಕ್ಕೆ ಟಿಯಾಗೊ ಕಾರಿಗೂ ಕೊಂಚ ಹಾನಿಯಾಗಿದ್ದು, ಈ ಅಪಘಾತ ಹೇಗೆ ಸಂಭವಿಸಿತು ಎನ್ನುವುದರ ಬಗ್ಗೆ ಯಾವುದೇ ವಿವರಗಳು ಲಭ್ಯವಿಲ್ಲ. ಏನೇ ಆದರೂ, ಕೈಗೆಟುಕುವ ಬೆಲೆಯ ಟಾಟಾ ಟಿಯಾಗೊದಿಂದ ವೃದ್ಧ ದಂಪತಿಯ ಪ್ರಾಣ ಉಳಿದಿದ್ದು, ಮತ್ತೊಮ್ಮೆ ಇದೊಂದು ಸೇಫ್ಟಿ ಕಾರೆಂದು ಸಾಬೀತಾಗಿದೆ.

ಟಾಟಾ ಟಿಯಾಗೊ (Tata Tiago) ಸುರಕ್ಷತೆಯ ದೃಷ್ಟಿಯಿಂದ ಅತ್ಯುತ್ತಮವಾಗಿದ್ದು, ಗ್ಲೋಬಲ್ ಎನ್‌ಸಿಎಪಿಯಿಂದ 4 ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿದೆ. ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್‌, ರೇರ್ ಪಾರ್ಕಿಂಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಕಾರ್ನೆರಿಂಗ್ ಸ್ಟೆಬಿಲಿಟಿ ಕಂಟ್ರೋಲ್ ಸೇರಿದಂತೆ ಹತ್ತಾರು ಸೇಫ್ಟಿ ಫೀಚರ್ಸ್ ಒಳಗೊಂಡಿದೆ.

Tata Tiago: ಅಜ್ಜ-ಅಜ್ಜಿಯ ಜೀವ ಕಾಪಾಡಿದ ಕಡಿಮೆ ಬೆಲೆಯ ಟಾಟಾ ಟಿಯಾಗೊ ಕಾರು, ಒಂದು ಗಾಯಗಳಾಗಲಿಲ್ಲ!

ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಟಾಟಾ ಟಿಯಾಗೊ, ರೂ.5.60 ಲಕ್ಷದಿಂದ ರೂ.8.20 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಎಕ್ಸ್ಇ, ಎಕ್ಸ್ಎಂ ಹಾಗೂ ಎಕ್ಸ್‌ಟಿ (ಒ) ರೂಪಾಂತರ ಹಾಗೂ ಮಿಡ್ನೈಟ್ ಪ್ಲಮ್, ಡೇಟೋನಾ ಗ್ರೇ, ಓಪಲ್ ವೈಟ್ ಸೇರಿದಂತೆ 5 ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ.

ಟಾಟಾ ಟಿಯಾಗೊ ಕಾರು 1.2 - ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಸಿಗಲಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5 - ಸ್ವೀಡ್ ಮ್ಯಾನುವಲ್ ಹಾಗೂ 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ. ಪೆಟ್ರೋಲ್ ವೇರಿಯೆಂಟ್ 19.43 kmpl ರಿಂದ 20.01kmpl ಮೈಲೇಜ್ ನೀಡುತ್ತದೆ. ಸಿಎನ್‌ಜಿ ರೂಪಾಂತರ 26.49km/kg ಇಂಧನ ದಕ್ಷತೆಯನ್ನು ಹೊಂದಿದೆ.

5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿರುವ ಟಾಟಾ ಟಿಯಾಗೊ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಡಿಜಿಟಲ್ ಡ್ರೈವರ್‌ಸ್ ಡಿಸ್ಪ್ಲೇ, 8-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕೂಲ್ಡ್ ಗ್ಲೋವ್‌ಬಾಕ್ಸ್ ಸೇರಿದಂತೆ ವಿವಿಧ ಫೀಚರ್ಸ್ ಇವೆ.

ಎಲೆಕ್ಟ್ರಿಕ್ ರೂಪದಲ್ಲಿ ಸಿಗುವ ಟಾಟಾ ಟಿಯಾಗೊ ಇವಿ ಬಗ್ಗೆ ಮಾತನಾಡುವುದಾದರೆ, ಈ ಕಾರು ರೂ.8.69 ಲಕ್ಷದಿಂದ ರೂ.12.04 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 19.2 kWh ಹಾಗೂ 24 kWh ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಸಿಗುವ ಈ ಕಾರು, ಸಂಪೂರ್ಣ ಚಾರ್ಜ್ ನಲ್ಲಿ 250 km ರಿಂದ 315 km ರೇಂಜ್ ಕೊಡುತ್ತದೆ.

ಡಿಸಿ ಫಾಸ್ಟ್ ಚಾರ್ಜರ್ ಆಯ್ಕೆಯಲ್ಲಿ ಟಿಯಾಗೊ ಇವಿ ಬ್ಯಾಟರಿ ಶೇಕಡ 10 - 80% ಚಾರ್ಜ್ ಆಗಲು 57 ನಿಮಿಷ ಬೇಕಾಗುತ್ತದೆ. 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸೇಫ್ಟಿ ಸಲುವಾಗಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಪಡೆದಿದೆ.

Article Published On: Tuesday, December 5, 2023, 14:49 [IST]
English summary
Tata tiago overturned old couple walk out in car without any injury
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+