ಹೊಸ ಮಹೀಂದ್ರಾ ಥಾರ್ ಎಸ್‌ಯುವಿ ವಿತರಣೆ ಪಡೆದ ಮತ್ತೊಬ್ಬ ವೇಗದ ಬೌಲರ್

ಇತ್ತೀಚೆಗಷ್ಟೇ ಟೀಂ ಇಂಡಿಯಾದ ವೇಗದ ಬೌಲರ್ ಟಿ ನಟರಾಜನ್ ಹೊಸ ಮಹೀಂದ್ರಾ ಥಾರ್ ಎಸ್‌ಯುವಿಯ ವಿತರಣೆಯನ್ನು ಪಡೆದಿದ್ದರು. ಈಗ ಮತ್ತೊಬ್ಬ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಹೊಸ ಮಹೀಂದ್ರಾ ಥಾರ್ ಎಸ್‌ಯುವಿಯನ್ನು ಪಡೆದಿದ್ದಾರೆ.

ಹೊಸ ಮಹೀಂದ್ರಾ ಥಾರ್ ಎಸ್‌ಯುವಿ ವಿತರಣೆ ಪಡೆದ ಮತ್ತೊಬ್ಬ ವೇಗದ ಬೌಲರ್

ಮೊಹಮ್ಮದ್ ಸಿರಾಜ್ ತಾವು ಥಾರ್ ಎಸ್‌ಯುವಿ ವಿತರಣೆ ಪಡೆಯುತ್ತಿರುವುದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಎಸ್‌ಯುವಿಯನ್ನು ಅವರಿಗೆ ಮಹೀಂದ್ರಾ ಕಂಪನಿಯ ಅಧ್ಯಕ್ಷರಾದ ಆನಂದ್ ಮಹೀಂದ್ರಾರವರು ಉಡುಗೊರೆಯಾಗಿ ನೀಡಿದ್ದಾರೆ.

ಹೊಸ ಮಹೀಂದ್ರಾ ಥಾರ್ ಎಸ್‌ಯುವಿ ವಿತರಣೆ ಪಡೆದ ಮತ್ತೊಬ್ಬ ವೇಗದ ಬೌಲರ್

ಆಸ್ಟ್ರೇಲಿಯಾ ವಿರುದ್ಧದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಆರು ಭಾರತೀಯ ಆಟಗಾರರಿಗೆ ಥಾರ್ ಎಸ್‌ಯುವಿಯನ್ನು ಉಡುಗೊರೆಯಾಗಿ ನೀಡುವುದಾಗಿ ಆನಂದ್ ಮಹೀಂದ್ರಾ ಭರವಸೆ ನೀಡಿದ್ದರು. ಅವರು ನೀಡಿದ್ದ ಭರವಸೆಯಂತೆ ಈ ಆಟಗಾರರಿಗೆ ಥಾರ್ ಎಸ್‌ಯುವಿಯನ್ನು ವಿತರಿಸಲಾಗುತ್ತಿದೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಹೊಸ ಮಹೀಂದ್ರಾ ಥಾರ್ ಎಸ್‌ಯುವಿ ವಿತರಣೆ ಪಡೆದ ಮತ್ತೊಬ್ಬ ವೇಗದ ಬೌಲರ್

ಶಾರ್ದುಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಶುಭಮನ್ ಗಿಲ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್ ಹಾಗೂ ಟಿ ನಟರಾಜನ್ ಆನಂದ್ ಮಹೀಂದ್ರರವರಿಂದ ಥಾರ್ ಎಸ್‌ಯುವಿಯನ್ನು ಪಡೆಯುತ್ತಿರುವ ಆಟಗಾರರಾಗಿದ್ದಾರೆ.

ಹೊಸ ಮಹೀಂದ್ರಾ ಥಾರ್ ಎಸ್‌ಯುವಿ ವಿತರಣೆ ಪಡೆದ ಮತ್ತೊಬ್ಬ ವೇಗದ ಬೌಲರ್

ನಟರಾಜನ್ ಹಾಗೂ ಮಹಮ್ಮದ್ ಸಿರಾಜ್ ಹೊರತುಪಡಿಸಿ ಉಳಿದ ಆಟಗಾರರು ಥಾರ್ ಎಸ್‌ಯುವಿಯನ್ನು ಪಡೆದಿದ್ದಾರೆಯೇ ಇಲ್ಲವೇ ಎಂಬುದು ತಿಳಿದು ಬಂದಿಲ್ಲ. ಥಾರ್ ಎಸ್‌ಯುವಿಯ ವಿತರಣೆಯನ್ನು ಪಡೆದ ನಂತರ ಟಿ ನಟರಾಜನ್ ಅವರು ಸಹಿ ಮಾಡಿದ ಟಿ ಶರ್ಟ್ ಅನ್ನು ಆನಂದ್ ಮಹೀಂದ್ರಾರವರಿಗೆ ಉಡುಗೊರೆಯಾಗಿ ನೀಡಿದರು.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಹೊಸ ಮಹೀಂದ್ರಾ ಥಾರ್ ಎಸ್‌ಯುವಿ ವಿತರಣೆ ಪಡೆದ ಮತ್ತೊಬ್ಬ ವೇಗದ ಬೌಲರ್

ಈ ಬಗ್ಗೆ ಮಾತನಾಡಿರುವ ಆನಂದ್ ಮಹೀಂದ್ರಾ ಭಾರತೀಯ ಕ್ರಿಕೆಟ್ ತಂಡದಲ್ಲಿ ಇರುವ ಯುವ ಆಟಗಾರರನ್ನು ಉತ್ತೇಜಿಸುವುದಕ್ಕಾಗಿ ಈ ಉಡುಗೊರೆ ನೀಡುತ್ತಿರುವುದಾಗಿ ತಿಳಿಸಿದ್ದರು.

ಹೊಸ ಮಹೀಂದ್ರಾ ಥಾರ್ ಎಸ್‌ಯುವಿ ವಿತರಣೆ ಪಡೆದ ಮತ್ತೊಬ್ಬ ವೇಗದ ಬೌಲರ್

ಮಹೀಂದ್ರಾ ಥಾರ್ ದೇಶದಲ್ಲಿರುವ ಜನಪ್ರಿಯ ಎಸ್‌ಯುವಿಗಳಲ್ಲಿ ಒಂದಾಗಿದೆ. ಹೊಸ ಅವತಾರದಲ್ಲಿ ಬಿಡುಗಡೆಯಾದ ನಂತರ ಈ ಎಸ್‌ಯುವಿಯು ಹೆಚ್ಚು ಜನಪ್ರಿಯತೆಯನ್ನು ಪಡೆದಿದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಹೊಸ ಮಹೀಂದ್ರಾ ಥಾರ್ ಎಸ್‌ಯುವಿ ವಿತರಣೆ ಪಡೆದ ಮತ್ತೊಬ್ಬ ವೇಗದ ಬೌಲರ್

ಹೊಸ ಥಾರ್ ಎಸ್‌ಯುವಿಯನ್ನು ಎಎಕ್ಸ್ ಹಾಗೂ ಎಲ್ಎಕ್ಸ್ ಎಂಬ ಎರಡು ಮಾದರಿಗಳಲ್ಲಿ ಬಿಡುಗಡೆಗೊಳಿಸಲಾಗಿದೆ. ಪೆಟ್ರೋಲ್ ಹಾಗೂ ಡೀಸೆಲ್‌ ಎಂಜಿನ್'ಗಳಲ್ಲಿ ಮಾರಾಟವಾಗುವ ಎಎಕ್ಸ್ ಮಾದರಿಯು ಮ್ಯಾನುವಲ್ ಗೇರ್‌ಬಾಕ್ಸ್‌ ಅನ್ನು ಮಾತ್ರ ಹೊಂದಿದೆ.

ಹೊಸ ಮಹೀಂದ್ರಾ ಥಾರ್ ಎಸ್‌ಯುವಿ ವಿತರಣೆ ಪಡೆದ ಮತ್ತೊಬ್ಬ ವೇಗದ ಬೌಲರ್

ಎಲ್‌ಎಕ್ಸ್ ಮಾದರಿಯನ್ನು ಪೆಟ್ರೋಲ್ ಎಂಜಿನ್‌ನಲ್ಲಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹಾಗೂ ಡೀಸೆಲ್ ಎಂಜಿನ್'ನಲ್ಲಿ ಮ್ಯಾನುವಲ್ ಹಾಗೂ ಆಟೋಮ್ಯಾಟಿಕ್ ಗೇರ್‌ಬಾಕ್ಸ್'ಗಳಲ್ಲಿ ಮಾರಾಟ ಮಾಡಲಾಗುತ್ತದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಹೊಸ ಮಹೀಂದ್ರಾ ಥಾರ್ ಎಸ್‌ಯುವಿ ವಿತರಣೆ ಪಡೆದ ಮತ್ತೊಬ್ಬ ವೇಗದ ಬೌಲರ್

ಹೊಸ ಥಾರ್ ಎಸ್‌ಯುವಿಯನ್ನು ಹೊಸ ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್‌ನೊಂದಿಗೆ ಬಿಡುಗಡೆಗೊಳಿಸಲಾಗಿದೆ. ಇದರಲ್ಲಿ 2.0-ಲೀಟರ್ ಪೆಟ್ರೋಲ್ ಹಾಗೂ 2.2-ಲೀಟರ್ ಡೀಸೆಲ್ ಎಂಜಿನ್'ಗಳು ಸೇರಿವೆ.

ಹೊಸ ಮಹೀಂದ್ರಾ ಥಾರ್ ಎಸ್‌ಯುವಿ ವಿತರಣೆ ಪಡೆದ ಮತ್ತೊಬ್ಬ ವೇಗದ ಬೌಲರ್

ಹೊಸ 2.0-ಲೀಟರ್ ಪೆಟ್ರೋಲ್ ಎಂಜಿನ್ 150 ಬಿಹೆಚ್‌ಪಿ ಪವರ್ ಹಾಗೂ 320 ಎನ್‌ಎಂ ಟಾರ್ಕ್ ಉತ್ಪಾದಿಸಿದರೆ, 2.2 ಲೀಟರ್ ಡೀಸೆಲ್ ಎಂಜಿನ್ 130 ಬಿಹೆಚ್‌ಪಿ ಪವರ್ ಹಾಗೂ 350 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಹೊಸ ಮಹೀಂದ್ರಾ ಥಾರ್ ಎಸ್‌ಯುವಿ ವಿತರಣೆ ಪಡೆದ ಮತ್ತೊಬ್ಬ ವೇಗದ ಬೌಲರ್

ಹೊಸ ಥಾರ್ ಎಸ್‌ಯುವಿಯನ್ನು ಹೊಸ 6-ಸ್ಪೀಡ್ ಮ್ಯಾನುವಲ್ ಹಾಗೂ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್'ನೊಂದಿಗೆ ಮಾರಾಟ ಮಾಡಲಾಗುತ್ತದೆ. ಇದೇ ಮೊದಲ ಬಾರಿಗೆ ಥಾರ್ ಎಸ್‌ಯುವಿಯನ್ನು ಪೆಟ್ರೋಲ್ ಹಾಗೂ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತದೆ.

ಹೊಸ ಮಹೀಂದ್ರಾ ಥಾರ್ ಎಸ್‌ಯುವಿ ವಿತರಣೆ ಪಡೆದ ಮತ್ತೊಬ್ಬ ವೇಗದ ಬೌಲರ್

ಈ ಎಸ್‌ಯುವಿಯಲ್ಲಿ 4 ವ್ಹೀಲ್ ಡ್ರೈವ್ ಸಿಸ್ಟಂ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತದೆ. ಹೊಸ ಮಹೀಂದ್ರಾ ಥಾರ್ ದೇಶದ ಕಡಿಮೆ ಬೆಲೆಯ ಫೋರ್ ವ್ಹೀಲ್ ಡ್ರೈವ್ ಸಿಸ್ಟಂ ಹೊಂದಿರುವ ಎಸ್‌ಯುವಿಯಾಗಿದೆ.

Most Read Articles

Kannada
English summary
Team India fast bowler Mohammed Siraj receives Mahindra Thar SUV delivery. Read in Kannada.
Story first published: Monday, April 5, 2021, 18:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X