ಹೊಸ ಮುಖ್ಯಮಂತ್ರಿ ಭದ್ರತೆಗೆ ಬಂದವು ಶಕ್ತಿಯುತ ಟೊಯೊಟಾ ಇನ್ನೋವಾ ಕ್ರಿಸ್ಟಾ ಕಾರುಗಳು: ವಿಶೇಷತೆಗಳೇನು?
ಪಂಚರಾಜ್ಯ ವಿಧಾನಸಭೆ ಮುಕ್ತಾಯಗೊಂಡಿದೆ. ತೆಲಂಗಾಣದಲ್ಲಿ 10 ವರ್ಷಗಳಿಂದ ಅಧಿಕಾರದಲ್ಲಿದ್ದ ಕೆ.ಸಿ.ಚಂದ್ರಶೇಖರ್ ರಾವ್ ನೇತೃತ್ವದ ಆಡಳಿತರೂಢ ಬಿಆರ್‌ಎಸ್ ಪಕ್ಷವನ್ನು ಸೋಲಿಸಿ ಕಾಂಗ್ರೆಸ್ ಪಕ್ಷ ಅಧಿಕಾರವನ್ನು ಹಿಡಿದಿದ್ದು, ರೇವಂತ್ ರೆಡ್ಡಿರನ್ನು ಅಲ್ಲಿನ ಮುಖ್ಯಮಂತ್ರಿಯಾಗಿ ಘೋಷಿಸಲಾಗಿದೆ. ಅದಕ್ಕೂ ಮೊದಲೇ ಆಡಳಿತ ಸುಧಾರಣೆ ಇಲಾಖೆ ಸಿಎಂ ಭದ್ರತೆಗೆ ಹೊಸ ಕಾರುಗಳನ್ನು ಸಿದ್ಧಪಡಿಸಿತ್ತು.
ಸಿಎಂ ಬೆಂಗಾವಲು ವಾಹನಗಳಾಗಿ ನಿಯೋಜನೆಗೊಂಡಿರುವ 6 ಇನ್ನೋವಾ ಕಾರುಗಳು, ಡಿಸೆಂಬರ್ 4ರಂದು ಹೈದರಾಬಾದ್ ನಗರದ ದಿಲ್ಕುಶಾ ಗೆಸ್ಟ್ ಹೌಸ್ ತಲುಪಿದ್ದವು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈಗಾಗಲೇ, ಬಿಳಿ ಬಣ್ಣದ ಕೆಲವು ಇನ್ನೋವಾಗಳಿಗೆ ನಂಬರ್ ಪ್ಲೇಟ್ ಇರುವುದನ್ನು ಕೂಡ ದೃಶ್ಯಗಳಲ್ಲಿ ಕಾಣಬಹುದು. ಪ್ರಮಾಣ ವಚನ ಸ್ವೀಕಾರದ ಬಳಿಕ, ಮುಖ್ಯಮಂತ್ರಿಗಳಿಗೆ ಇವು ಬೆಂಗಾವಲು ಪಡೆಯ ವಾಹನಗಳಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿವೆ ಎಂದು ವರದಿಯಾಗಿದೆ.

ವಿಡಿಯೋದಲ್ಲಿ ನೋಡಬಹುದಾದ ಈ ಟೊಯೊಟಾ ಇನ್ನೋವಾಗಳು, ಕ್ರಿಸ್ಟಾ ಸರಣಿ ಮಾದರಿಯಾಗಿವೆ. ಸದ್ಯ ಭಾರತದ ಮಾರುಕಟ್ಟೆಯಲ್ಲಿ ಈ ಎಂಪಿವಿ, ರೂ.19.99 ಲಕ್ಷದಿಂದ ರೂ.26.05 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. 7, 8 ಆಸನಗಳನ್ನು ಹೊಂದಿರುವ ಇನ್ನೋವಾ ಕ್ರಿಸ್ಟಾ, ಜಿಎಕ್ಸ್, ವಿಎಕ್ಸ್, ಝಡ್ಎಕ್ಸ್ ರೂಪಾಂತರ ಹಾಗೂ ವೈಟ್ ಪರ್ಲ್ ಕ್ರಿಸ್ಟಲ್ ಶೈನ್, ಸೂಪರ್ ವೈಟ್, ಸಿಲ್ವರ್, ಆಟಿಟ್ಯೂಡ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳಲ್ಲಿ ಸಿಗುತ್ತದೆ.
ಟೊಯೊಟಾ ಇನ್ನೋವಾ ಕ್ರಿಸ್ಟಾ ಎಂಪಿವಿ, 2.4 - ಲೀಟರ್ ಡಿಸೇಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 150 PS ಗರಿಷ್ಠ ಪವರ್ 343 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. ಜೊತೆಗೆ 5 - ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.

ಈ ಟೊಯೊಟಾ ಇನ್ನೋವಾ ಕ್ರಿಸ್ಟಾ ಎಂಪಿವಿ, 8 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 8 - ವೇ ಪವರ್ ಅಡ್ಜಸ್ಟಬಲ್ ಡ್ರೈವರ್ ಸೀಟ್, ರೇರ್ ಎಸಿ ವೆಂಟ್, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್ ಮತ್ತು ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಸುರಕ್ಷತೆಯ ವಿಚಾರದಲ್ಲೂ ಇನ್ನೋವಾ ಕ್ರಿಸ್ಟಾ ಅತ್ಯುತ್ತಮವಾಗಿದ್ದು, 7 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ABS (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ - ಸ್ಟಾರ್ಟ್ ಅಸಿಸ್ಟ್, ಫ್ರಂಟ್ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್ ಮತ್ತು ಬ್ರೇಕ್ ಅಸಿಸ್ಟ್ ಸೇರಿದಂತೆ ವಿವಿಧ ಫೀಚರ್ಸ್ ಒಳಗೊಂಡಿದೆ.
ಇನ್ನೋವಾ ಸರಣಿಯ ಮತ್ತೊಂದು ಹೈಕ್ರಾಸ್ ಮಾದರಿ ಬಗ್ಗೆ ಹೇಳುವುದಾದರೆ, ಈ ಕಾರು, ರೂ.18.82 ಲಕ್ಷದಿಂದ ರೂ.30.26 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. 2.0-ಲೀಟರ್, 4 ಸಿಲಿಂಡರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 2.0-ಲೀಟರ್, 4 ಸಿಲಿಂಡರ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 21 kmpl ಮೈಲೇಜ್ ನೀಡುತ್ತದೆ.
ಟೊಯೊಟಾ ಇನ್ನೋವಾ ಹೈಕ್ರಾಸ್ ಜಿ, ಜಿಎಕ್ಸ್, ವಿಕ್ಸ್ ಸೇರಿದಂತೆ 5 ರೂಪಾಂತರ ಹಾಗೂ ಗ್ಲಾಸ್ ಫ್ಲೇಕ್, ಸೂಪರ್ ವೈಟ್, ಪ್ಲಾಟಿನಂ ವೈಟ್ ಪರ್ಲ್, ಸಿಲ್ವರ್ ಮೆಟಾಲಿಕ್ ಒಳಗೊಂಡಂತೆ 7 ಬಣ್ಣಗಳ ಆಯ್ಕೆಯೊಂದಿಗೆ ಸಿಗಲಿದೆ. ಜೊತೆಗೆ 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, ಡಿಜಿಟಲ್ ಡ್ರೈವರ್ ಡಿಸ್ಪ್ಲೇ, 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications