ಚುನಾವಣಾ ಪ್ರಚಾರಕ್ಕಾಗಿ 5 ಹೊಸ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಗಳನ್ನು ಖರೀದಿಸಿದ ರಾಜಕಾರಣಿ

ಇತ್ತೀಚೆಗೆ ರಾಜಕೀಯ ಪಕ್ಷಗಳ, ಅಭ್ಯರ್ಥಿಗಳ ಪ್ರಚಾರದ ವೈಖರಿಯನ್ನೇ ಬದಲಾಯಿಸಿದೆ. ಈಗ ಪ್ರಚಾರದ ಖದರ್ ಹೈಟೆಕ್ ಆಗಿ ಬದಲಾಗಿದೆ. ಮೊದಲು ಬಾಡಿಗೆ ಕಾರುಗಳ ಮೂಲಕ ಚುನಾವಣಾ ಪ್ರಚಾರ ಮಾಡುತ್ತಿದ್ದರು. ಇಂದು ಐಷಾರಾಮಿ ಕಾರುಗಳಲ್ಲಿ ಪ್ರಚಾರ ಮಾಡುತ್ತಾರೆ.

ಚುನಾವಣಾ ಪ್ರಚಾರಕ್ಕಾಗಿ 5 ಹೊಸ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಗಳನ್ನು ಖರೀದಿಸಿದ ರಾಜಕಾರಣಿ

ಹೈದರಾಬಾದ್‌‌ನಲ್ಲಿ ರಾಜಕಾರಣಿ, ಕೆ.ಎ. ಪಾಲ್ ಅವರು ಹೊಸ 5 ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಗಳನ್ನು ಖರೀದಿಸಿದ್ದಾರೆ. ತೆಲಂಗಾಣದಲ್ಲಿ ಅವರ ಚುನಾವಣಾ ಪ್ರಚಾರಕ್ಕಾಗಿ ಈ ಹೊಸ ಎಸ್‌ಯುವಿಗಳನ್ನು ಬಳಸಲಾಗುವುದು. ಈ ಎಲ್ಲಾ ಐದು ಎಕ್ಸ್‌ಯುವಿ700 ಎಸ್‌ಯುವಿಗಳು ಬಿಳಿ ಬಣ್ಣವನ್ನು ಹೊಂದಿದೆ, ನಾವು ವೀಡಿಯೊದಲ್ಲಿ ನೋಡುವಂತೆ ಅವುಗಳು ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಯ ಟಾಪ್-ಸ್ಪೆಕ್ AX7 ರೂಪಾಂತರಗಳಾಗಿವೆ. ಪೆಟ್ರೋಲ್ ಎಂಜಿನ್ ಮಾದರಿಗಳನ್ನು ಆರಿಸಿಕೊಂಡಿದ್ದಾರೆ. ಈ ವೀಡಿಯೊವನ್ನು ಯೂಟ್ಯೂಬ್‌ನಲ್ಲಿ ಆಟೋಸ್ಮಾರ್ಟ್ ತೆಲುಗು ಅಪ್‌ಲೋಡ್ ಮಾಡಿದೆ.

ಚುನಾವಣಾ ಪ್ರಚಾರಕ್ಕಾಗಿ 5 ಹೊಸ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಗಳನ್ನು ಖರೀದಿಸಿದ ರಾಜಕಾರಣಿ

ಎಂಎಲ್ಎ 5 ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಗಳ ವಿತರಣೆಯನ್ನು ಪಡೆಯಲು ಸಾಧ್ಯವಾಯಿತು ಎಂದು ಸಾಕಷ್ಟು ಆಶ್ಚರ್ಯಕರವಾಗಿದೆ, ಮಹೀಂದ್ರಾ ಎಕ್ಸ್‌ಯುವಿ700 ಹೆಚ್ಚಿನ ಬೇಡಿಕೆಯಲ್ಲಿದೆ ಮತ್ತು ಬಹಳ ಕಾಯುವ ಅವಧಿಯನ್ನು ಹೊಂದಿದೆ. ಇವರು ಈ ಎಸ್‍ಯುವಿಗಳನ್ನು ಮುಂಚಿತವಾಗಿಯೇ ಕಾಯ್ದಿರಿಸಿರುವಂತೆ ತೋರುತ್ತಿದೆ.

ಚುನಾವಣಾ ಪ್ರಚಾರಕ್ಕಾಗಿ 5 ಹೊಸ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಗಳನ್ನು ಖರೀದಿಸಿದ ರಾಜಕಾರಣಿ

ಈ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಯು ಎಂಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಲಗ್ಷುರಿ ಎನ್ನುವ ವಿವಿಧ ವೆರಿಯೆಂಟ್‌ಗಳಲ್ಲಿ ಲಭ್ಯವಿದೆ. ಈ ಎಸ್‌ಯುವಿಯಲ್ಲಿ ಪವರ್ ಫುಲ್ ಎಂಜಿನ್ ಆಯ್ಕೆ ಹೊಂದಿದ್ದು, ಕಂಪನಿಯೇ ಜೋಡಣೆ ಮಾಡುವ 7 ಸೀಟರ್ ಮಾದರಿಗಳನ್ನು ಹೊರತುಪಡಿಸಿ 5 ಸೀಟರ್ ಹೊಂದಿರುವ ಮಾದರಿಗಳಲ್ಲಿ 7 ಸೀಟರ್ ಬಯಸುವ ಗ್ರಾಹಕರು ಹೆಚ್ಚುವರಿ ಮೊತ್ತ ಸಾವಿರ ಪಾವತಿ ಮಾಡಬೇಕಾಗುತ್ತದೆ.

ಚುನಾವಣಾ ಪ್ರಚಾರಕ್ಕಾಗಿ 5 ಹೊಸ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಗಳನ್ನು ಖರೀದಿಸಿದ ರಾಜಕಾರಣಿ

ಈ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಯಲ್ಲಿ ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್ ಮತ್ತು 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಹೊಂದಿದೆ.

ಚುನಾವಣಾ ಪ್ರಚಾರಕ್ಕಾಗಿ 5 ಹೊಸ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಗಳನ್ನು ಖರೀದಿಸಿದ ರಾಜಕಾರಣಿ

ಈ ಎಕ್ಸ್‌ಯುವಿ700 ಎಸ್‍ಯುವಿಯ ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ ಮತ್ತು ರೂಫ್ ಸ್ಪಾಯ್ಲರ್ ಅನ್ನು ಹೊಂದಿದೆ.

ಚುನಾವಣಾ ಪ್ರಚಾರಕ್ಕಾಗಿ 5 ಹೊಸ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಗಳನ್ನು ಖರೀದಿಸಿದ ರಾಜಕಾರಣಿ

ಈ ಎಕ್ಸ್‌ಯುವಿ700 ಎಸ್‍ಯುವಿಯಲ್ಲಿ 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಅನ್ನು ಹೊಂದಿದೆ.

ಚುನಾವಣಾ ಪ್ರಚಾರಕ್ಕಾಗಿ 5 ಹೊಸ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಗಳನ್ನು ಖರೀದಿಸಿದ ರಾಜಕಾರಣಿ

ಇದರೊಂದಿಗೆ ಈ ಎಸ್‍ಯುವಿಯಲ್ಲಿ ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಸೌಲಭ್ಯವು ಹೊಸ ಕಾರಿನ ಪ್ರಮುಖ ಸುರಕ್ಷಾ ಸೌಲಭ್ಯವಾಗಿದ್ದು, ಇದರ ಜೊತೆಗೆ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್ ಮತ್ತು ಲೆನ್ ಕಿಪ್ ಅಸಿಸ್ಟ್ ಹೊಂದಿದೆ.

ಚುನಾವಣಾ ಪ್ರಚಾರಕ್ಕಾಗಿ 5 ಹೊಸ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಗಳನ್ನು ಖರೀದಿಸಿದ ರಾಜಕಾರಣಿ

ಹೊಸ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಯಲ್ಲಿ 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಲಭ್ಯವಿದೆ, ಇದರಲ್ಲಿ 2.0-ಲೀಟರ್ ಪೆಟ್ರೋಲ್ ಎಂಜಿನ್ 198 ಬಿಹೆಚ್‍ಪಿ ಪವರ್ ಮತ್ತು 300 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ 183 ಬಿಹೆಚ್‌ಪಿ ಪವರ್ ಮತ್ತು 420 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಗಳೊಂದಿಗೆ 6-ಸ್ಪೀಡ್ ಎಂಟಿ ಮತ್ತು 6-ಸ್ಪೀಡ್ ಎಟಿ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಚುನಾವಣಾ ಪ್ರಚಾರಕ್ಕಾಗಿ 5 ಹೊಸ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಗಳನ್ನು ಖರೀದಿಸಿದ ರಾಜಕಾರಣಿ

ಹೊಸ ಎಕ್ಸ್‌ಯುವಿ700 ಮಾದರಿಗಳು ಮಹೀಂದ್ರಾ ಎಸ್‌ಯುವಿ ಪ್ರೂವಿಂಗ್ ಟ್ರ್ಯಾಕ್ ನಲ್ಲಿ ದಿನದ 24 ಗಂಟೆಗಳ ತಡೆರಹಿತ ಚಾಲನೆ ನಡೆಸಿ ಹೊಸ ದಾಖಲೆಗೆ ಕಾರಣವಾಗಿದ್ದು, ಟ್ರ್ಯಾಕ್ ಡ್ರೈವ್ ಮೂಲಕವೇ ಹೊಸ ಎಸ್‌ಯುವಿ ಸರಾಸರಿಯಾಗಿ 4 ಸಾವಿರ ಕಿ.ಮೀ ಚಲಿಸಿ ಹೊಸ ದಾಖಲೆಯನ್ನು ತಮ್ಮದಾಗಿಸಿಕೊಂಡಿದೆ.ಸ್ಪೀಡ್ ಎಂಡ್ಯೂರೆನ್ಸ್ ಚಾಲೆಂಜ್‌ನಲ್ಲಿ ಈ ಹಿಂದೆ ದಿನದ 24 ಗಂಟೆಗಳ ಚಲಿಸುವ ಮೂಲಕ 3,161 ಕಿ.ಮೀ ದಾಖಲೆ ಹೊಂದಿದ್ದ ಎಕ್ಸ್‌ಯುವಿ500 ದಾಖಲೆಯನ್ನು ಎಕ್ಸ್‌ಯುವಿ700 ಮಾದರಿಯು ಹೊಸ ದಾಖಲೆ ನಿರ್ಮಿಸಿದೆ.

ಚುನಾವಣಾ ಪ್ರಚಾರಕ್ಕಾಗಿ 5 ಹೊಸ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಗಳನ್ನು ಖರೀದಿಸಿದ ರಾಜಕಾರಣಿ

ಇನ್ನು ಅಗಾಧ ಬೇಡಿಕೆಯಿಂದ ಉತ್ತಮವಾಗಿ ಪೂರೈಸುವ ಸಲುವಾಗಿ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ700 ಉತ್ಪಾದನೆಯನ್ನು ಹೆಚ್ಚಿಸಿದೆ. ಕೆಲವು ದಿನಗಳ ಹಿಂದೆ, ಮಹೀಂದ್ರಾ ಕಂಪನಿಯು ಆಯ್ದ ರೂಪಾಂತರಗಳಿಂದ ಟೈಲ್‌ಲೈಟ್‌ಗಳಲ್ಲಿ ಅನುಕ್ರಮ ಟರ್ನ್ ಇಂಡಿಕೇಟರ್ಸ್ ಮತ್ತು ಎರಡನೇ ಸ್ಮಾರ್ಟ್ ಕೀ ಫೋಬ್. ಈ ವೈಶಿಷ್ಟ್ಯಗಳನ್ನು ತಾತ್ಕಾಲಿಕವಾಗಿ ಮಾತ್ರ ತೆಗೆದುಹಾಕಲಾಗಿದೆ.

ಚುನಾವಣಾ ಪ್ರಚಾರಕ್ಕಾಗಿ 5 ಹೊಸ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಗಳನ್ನು ಖರೀದಿಸಿದ ರಾಜಕಾರಣಿ

ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಯ ಆರಂಭಿಕ ಬೆಲೆಯು ನವದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.13.18 ಲಕ್ಷವಾಗಿದೆ. ಈ ಮಹೀಂದ್ರಾ ಎಕ್ಸ್‌ಯುವಿ700 ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ದಾಖಲೆಯ ಮಟ್ಟದಲ್ಲಿ ಮಾರಾಟವಾಗುತ್ತಿದೆ.

Most Read Articles

Kannada
English summary
Telangana politician k a paul buys five new mahindra xuv 700 suvs for election campaign details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X