ತೆಲುಗು ನಟ ನಾಗಾರ್ಜುನರಿಂದ ರಸ್ತೆ ಮೇಲಿನ ಅರಮನೆಯಂತಿರುವ ಕಾರು ಖರೀದಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
ಟಾಲಿವುಡ್ ಖ್ಯಾತ ನಟ ಅಕ್ಕಿನೇನಿ ನಾಗಾರ್ಜುನ (Akkineni Nagarjuna), ದೇಶಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಪುತ್ರ ನಾಗ ಚೈತನ್ಯ ಹಾಗೂ ನಟಿ ಶೋಭಿತಾ ಧುಲಿಪಾಲಾ ಅವರ ಮದುವೆ ತಯಾರಿಯಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಈ ಜೋಡಿ ಡಿ.4 ರಂದು ಹೈದರಾಬಾದ್‌ನ ಅನ್ನಪೂರ್ಣ ಸ್ಟುಡಿಯೋ ಆಯೋಜಿಸಿರುವ ಅದ್ದೂರಿ ವಿವಾಹ ಸಮಾರಂಭದಲ್ಲಿ ಸಪ್ತಪದಿ ತುಳಿಯಲಿದೆ. ಗುರುವಾರ ನಾಗಾರ್ಜುನ ಅವರು, ತಾವು ಕೆಲದಿನಗಳ ಹಿಂದೆ, ಖರೀದಿಸಿದ ಹೊಚ್ಚ ಹೊಸ 'ಲೆಕ್ಸಸ್ ಎಲ್ಎಂ' ಎಂಪಿವಿಯನ್ನು ನೋಂದಣಿ ಮಾಡಲು ಖೈರತಾಬಾದ್‌ನ ಪ್ರಾದೇಶಿಕ ಸಾರಿಗೆ ಆಯುಕ್ತರ ಕಚೇರಿಗೆ ಭೇಟಿ ನೀಡಿದ್ದರು. ಅದಕ್ಕೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿವೆ.
ಆರ್‌ಟಿಒ ಕಚೇರಿಗೆ ಆಗಮಿಸಿದ ನಟ ನಾಗಾರ್ಜುನರನ್ನು ಅಲ್ಲಿನ ಸಾರಿಗೆ ಇಲಾಖೆಯ ಅಧಿಕಾರಿಗಳು ಆತ್ಮೀಯವಾಗಿ ಸ್ವಾಗತಿದರು. ಬೇಗ-ಬೇಗ ಎಲ್ಲ ನೋಂದಣಿ ಪ್ರಕ್ರಿಯೆ ಕಾರ್ಯಗಳನ್ನು ಮಾಡಿ ಮುಗಿಸಿದರು. ಈ ವೇಳೆ ನಾಗಾರ್ಜುನ ಅವರನ್ನು ನೋಡಲು ಅಭಿಮಾನಿಗಳು ಕೂಡ ಆಗಮಿಸಿದ್ದರು. ಅವರ ಸೆಲ್ಪಿಗಳಿಗೂ ತಾಳ್ಮೆಯಿಂದ ಪೋಸ್ ನೀಡಿದರು.

ನಟ ನಾಗಾರ್ಜುನರ ಅವರು 65ರ ವಯಸ್ಸಿನಲ್ಲಿಯೂ ಸಿನಿಮಾದಲ್ಲಿ ಆಕ್ಟಿವ್ ಇದ್ದಾರೆ. ಸದ್ಯ ನಿರ್ದೇಶಕ ಶೇಖರ್ ಕಮ್ಮುಲ ಆಕ್ಷನ್ ಕಟ್ ಹೇಳುತ್ತಿರುವ ಕುಬೇರ (Kubera) ಚಿತ್ರದಲ್ಲಿಯೂ ನಟಿಸುತ್ತಿದ್ದಾರೆ. ನಾಗಾರ್ಜುನರೊಂದಿಗೆ ಧನುಷ್ ಹಾಗೂ ರಶ್ಮಿಕಾ ಮಂದಣ್ಣ ಸ್ಕ್ರೀನ್ ಶೇರ್ ಮಾಡಿದ್ದಾರೆ. ಈ ಸಿನಿಮಾ ಡಿಸೆಂಬರ್ ನಲ್ಲಿ ತೆರೆಕಾಣುವ ನಿರೀಕ್ಷೆಯಿದೆ.
ನಾಗಾರ್ಜುನ ಖರೀದಿ ಮಾಡಿರುವ ಲೆಕ್ಸಸ್ ಎಲ್ಎಂ ಎಂಪಿವಿ ವಿಶೇಷತೆಗಳೇನು: ಈ ಕಾರು ರೂ.2 ಕೋಟಿಯಿಂದ ರೂ.2.50 ಕೋಟಿ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಜೊತೆಗೆ 7 ಹಾಗೂ 4 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಇದು ನೋಡಲು ಒಂದು ರೀತಿಯಲ್ಲಿ ರಸ್ತೆಯ ಮೇಲಿನ ಅರಮನೆ ರೀತಿಯಲ್ಲಿ ಭಾಸವಾಗುತ್ತದೆ.

ಈ ಲೆಕ್ಸಸ್ ಎಲ್ಎಂ (Lexus LM) ಎಂಪಿಪಿ 2.5-ಲೀಟರ್ ಸಾಮರ್ಥ್ಯದ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 250 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹೊರಹಾಕುತ್ತದೆ. ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದ್ದು, ಎಡಬ್ಲ್ಯೂಡಿ (ಆಲ್ ವೀಲ್ ಡ್ರೈವ್) ಟೆಕ್ನಾಲಜಿಯನ್ನು ಪಡೆದಿದೆ.
ನೂತನ ಲೆಕ್ಸಸ್ ಎಲ್ಎಂ ಎಂಪಿವಿ 14-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 12.3-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, 4-ಜೋನ್ ಕ್ಲೇಮೇಟ್ ಕಂಟ್ರೋಲ್, 23-ಸ್ಪೀಕರ್ ಮಾರ್ಕ್ ಲೆವಿನ್ಸನ್ ಸೌಂಡ್ ಸಿಸ್ಟಮ್, ಹೀಟೆಡ್ ಸ್ಟೀರಿಂಗ್ ವೀಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 8 ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆಂಟ್ ಸಿಸ್ಟಮ್ಸ್) ಅನ್ನು ಹೊಂದಿದೆ.

ಕಳೆದ ವರ್ಷ ನಾಗಾರ್ಜುನ ಅವರು, ಕಿಯಾ ಇವಿ6 (Kia EV6) ಎಲೆಕ್ಟ್ರಿಕ್ ಕಾರನ್ನು ಖರೀದಿ ಮಾಡಿದ್ದರು. ಇದು ರೂ.60.97 ಲಕ್ಷದಿಂದ ರೂ.65.97 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 77.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 708 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿ 5 ಮಂದಿ ಓಡಾಟ ನಡೆಯಬಹುದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications