Just In
Don't Miss!
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- News
ಕೇಂದ್ರ ಸರ್ಕಾರ ಎನ್ಐಎ ನೋಟಿಸ್ ಮೂಲಕ ಕಿರುಕುಳ ನೀಡುತ್ತಿದೆ:ರೈತರ ಆರೋಪ
- Finance
ಸಿಲಿಂಡರ್ ಬುಕ್ ಮಾಡಿದ ಎರಡು ಗಂಟೆಯೊಳಗೆ ಮನೆ ಬಾಗಿಲಿಗೆ ಡೆಲಿವರಿ
- Sports
ಆಸಿಸ್ ಬೌಲರ್ಗಳಿಗೆ ಪಾಂಟಿಂಗ್ ಚಾಟಿ: ಶಾರ್ದೂಲ್- ಸುಂದರ್ ಆಟಕ್ಕೆ ಮೆಚ್ಚುಗೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರವಾಹದ ನೀರಿನಲ್ಲಿ ಮೀನಿನಂತೆ ಈಜುತ್ತಾ ಸಾಗಿದ ಟೆಸ್ಲಾ ಎಲೆಕ್ಟ್ರಿಕ್ ಕಾರು
ಪ್ರತಿವರ್ಷ ಭಾರೀ ಮಳೆಯಾದಾಗ ಮುಂಬೈನಂತಹ ಮಹಾನಗರದ ವಾಸಿಗಳು ವಿವಿಧ ತೊಂದರೆಗಳನ್ನು ಎದುರಿಸುತ್ತಾರೆ. ಅದರಲ್ಲೂ ಕಾರು ಮಾಲೀಕರು ಹಲವಾರು ಸವಾಲುಗಳನ್ನು ಎದುರಿಸುತ್ತಾರೆ.

ಮಳೆಗಾಲದಲ್ಲಿ ರಸ್ತೆಗಳು ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತವೆ. ಜಲಾವೃತ ರಸ್ತೆಗಳಲ್ಲಿ ಕಾರುಗಳನ್ನು ಚಾಲನೆ ಮಾಡುವುದು ನಿಜಕ್ಕೂ ಸವಾಲಿನ ಕೆಲಸ. ಮಳೆ ನೀರಿನಿಂದಾಗಿ ಕಾರುಗಳು ಸಹ ತೊಂದರೆಗೀಡಾಗುತ್ತವೆ. ಅವುಗಳನ್ನು ರಿಪೇರಿ ಮಾಡಲು ಸಾಕಷ್ಟು ಹಣ ಖರ್ಚು ಮಾಡಬೇಕಾಗುತ್ತದೆ. ಹಣ ಖರ್ಚಾದರೂ ಪರವಾಗಿಲ್ಲ. ಆದರೆ ಕೆಲವೊಮ್ಮೆ ಜೀವಕ್ಕೆ ಸಂಚಕಾರ ಎದುರಾಗುತ್ತದೆ.

ಮಳೆ ಬಂದಾಗ ಕಾರಿನ ಡೋರುಗಳು ತೆರೆಯಲು ಸಾಧ್ಯವಾಗದೇ ಪ್ರಯಾಣಿಕರು ಕಾರಿನೊಳಗೆ ಸಿಲುಕಿಕೊಂಡ ಹಲವಾರು ಘಟನೆಗಳು ನಡೆದಿವೆ. ಇತ್ತೀಚಿಗೆ ಬಿಡುಗಡೆಯಾಗಿರುವ ವೀಡಿಯೊದಲ್ಲಿ ಮಳೆ ನೀರಿನಲ್ಲಿ ಕಾರು ಮೀನಿನಂತೆ ಈಜುತ್ತಾ ಸಂಚರಿಸುತ್ತಿರುವುದನ್ನು ಕಾಣಬಹುದು.
MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ಸದ್ಯಕ್ಕೆ ಭಾರತದ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅದೇ ರೀತಿ ಚೀನಾದಲ್ಲಿಯೂ ಸಹ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಇದುವರೆಗೆ ಚೀನಾದ ವಿವಿಧ ಭಾಗಗಳಲ್ಲಿ 55 ದಶಲಕ್ಷ ಜನರು ತೊಂದರೆಗೆ ಸಿಲುಕಿದ್ದಾರೆ. ಭಾರೀ ಮಳೆಯಿಂದಾಗಿ ಚೀನಾದ ರಸ್ತೆಗಳು ಮಳೆ ನೀರಿನಿಂದ ತುಂಬಿ ತುಳುಕುತ್ತಿವೆ.

ರಸ್ತೆಯಲ್ಲಿ ನಿಂತಿರುವ ಮಳೆ ನೀರಿನಲ್ಲಿಯೇ ಟೆಸ್ಲಾ ಮಾಡೆಲ್ 3 ಕಾರು ಮೀನಿನಂತೆ ಈಜಿ ಕೊಂಡು ಮುಂದೆ ಸಾಗುತ್ತಿದೆ. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಂದ ಹಾಗೆ ಅಮೆರಿಕಾ ಮೂಲದ ಟೆಸ್ಲಾ ಕಂಪನಿಯು ಮಾಡೆಲ್ 3 ಎಲೆಕ್ಟ್ರಿಕ್ ಸೆಡಾನ್ ಕಾರುಗಳನ್ನು ಉತ್ಪಾದಿಸುತ್ತದೆ.
MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ಟೆಸ್ಲಾ ಕಂಪನಿಯ ಎಲೆಕ್ಟ್ರಿಕ್ ಕಾರುಗಳು ಪರ್ಫಾಮೆನ್ಸ್, ಐಷಾರಾಮಿ ಹಾಗೂ ಅತ್ಯಾಧುನಿಕ ಸೌಕರ್ಯಗಳಿಗೆ ಹೆಸರುವಾಸಿಯಾಗಿವೆ. ಈ ವೀಡಿಯೊದಲ್ಲಿರುವ ಟೆಸ್ಲಾ ಮಾಡೆಲ್ 3 ಕಾರು ಕೂಡ ಇದನ್ನು ಸಾಬೀತುಪಡಿಸಿದೆ. ಈ ವೀಡಿಯೊದಲ್ಲಿ ಟೆಸ್ಲಾ ಮಾಡೆಲ್ 3 ಕಾರು ಭಾರೀ ಪ್ರವಾಹಕ್ಕೆ ಸಿಲುಕಿದ ರಸ್ತೆಯಲ್ಲಿ ಬರುತ್ತಿರುವುದನ್ನು ಕಾಣಬಹುದು.

ಕಾರಿನ ಸುಮಾರು ಅರ್ಧದಷ್ಟು ಭಾಗವು ಪ್ರವಾಹದ ನೀರಿನಲ್ಲಿ ಮುಳುಗಿತ್ತು. ಆದರೂ ಟೆಸ್ಲಾ ಮಾಡೆಲ್ 3 ಆ ನೀರಿನಿಂದ ಯಶಸ್ವಿಯಾಗಿ ಹೊರಬಂದಿದೆ. ಆ ಕಾರಿನ ಚಾಲಕ ಯಾವುದೇ ಸಮಸ್ಯೆಗಳನ್ನು ಎದುರಿಸಲಿಲ್ಲವೆಂದು ಕಾಣುತ್ತದೆ.
MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ಭಾರೀ ಪ್ರಮಾಣದ ನೀರಿನ ಹೊರತಾಗಿಯೂ ಟೆಸ್ಲಾ ಮಾಡೆಲ್ 3 ಕಾರು ಸರಾಗವಾಗಿ ಆ ಪ್ರದೇಶದಿಂದ ಹೊರಬಂದಿದೆ. ಈ ವೀಡಿಯೊವನ್ನು ವೀಕ್ಷಿಸಿದವರು ಟೆಸ್ಲಾ ಕಾರಿನ ಕಾರ್ಯಕ್ಷಮತೆಯನ್ನು ಶ್ಲಾಘಿಸಿದ್ದಾರೆ. ಮತ್ತೊಬ್ಬರು ನನ್ನ ದುರಾದೃಷ್ಟಕ್ಕೆ ಟೆಸ್ಲಾ ಮಾಡೆಲ್ 3 ಕಾರು ನಾನು ವಾಸಿಸುವ ಪ್ರದೇಶದಲ್ಲಿ ಲಭ್ಯವಿಲ್ಲವೆಂದು ಹೇಳಿದ್ದಾರೆ.
ಟೆಸ್ಲಾ ಕಂಪನಿಯ ಕಾರುಗಳ ಮಾರಾಟವನ್ನು ಇನ್ನೂ ಸಹ ಭಾರತದಲ್ಲಿ ಆರಂಭಿಸಿಲ್ಲ. ಇದರಿಂದ ಭಾರತೀಯರು ನಿರಾಶಾರಾಗಿದ್ದಾರೆ. ಟೆಸ್ಲಾ ಕಂಪನಿಯು ಭಾರತದಲ್ಲಿ ಯಾವಾಗ ಕಾರುಗಳನ್ನು ಬಿಡುಗಡೆಗೊಳಿಸುತ್ತದೆ ಎಂಬುದನ್ನು ಭಾರತೀಯರು ಕಾತುರದಿಂದ ಕಾಯುತ್ತಿದ್ದಾರೆ.
MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಟೆಸ್ಲಾ ಮಾಡೆಲ್ 3 ಎಲೆಕ್ಟ್ರಿಕ್ ಕಾರು ಪ್ರವಾಹದ ನೀರಿನಲ್ಲಿ ಮೀನಿನಂತೆ ಈಜುತ್ತಾ ಹೊರ ಬರುತ್ತಿರುವ ವೀಡಿಯೊವನ್ನು ಟ್ವಿಟರ್ನಲ್ಲಿ ಈಗಾಗಲೇ 2.5 ಮಿಲಿಯನ್ ಗಿಂತ ಹೆಚ್ಚು ಬಾರಿ ವೀಕ್ಷಿಸಲಾಗಿದೆ.