ವಿರಾಟ್ ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ

ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ನಕಲಿ ಕಾಲ್ ಸೆಂಟರ್ ವ್ಯಕ್ತಿಗೆ ಆಡಿ ಆರ್8 ಕಾರನ್ನು ಮಾರಾಟ ಮಾಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.

By Nagaraja

ನಕಲಿ ಕಾರು ಸೆಂಟರ್ ಸ್ಥಾಪಿಸಿ ಬಹುಕೋಟಿ ರುಪಾಯಿಗಳ ವಂಚನೆ ಮಾಡಿರುವ ಕಿಲಾಡಿ, ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರಿಗೂ ಟೋಪಿ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ವಿರಾಟ್ ಬಳಿಯಿದ್ದ ಆಡಿ ಕಾರನ್ನು ಮೂರು ಕೋಟಿ ರುಪಾಯಿಗಳಿಗೆ ಕಾಲ್ ಸೆಂಟರ್ ವ್ಯಕ್ತಿ ಖರೀದಿಸಿದ್ದ ಎಂಬುದೀಗ ಬಯಲಾಗಿದೆ.

ವಿರಾಟ್ ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ

ಆಡಿ ಪ್ರಮುಖ ಪ್ರಚಾರ ರಾಯಭಾರಿ ಆಗಿರುವ ವಿರಾಟ್ ಕೊಹ್ಲಿ ಕೆಲವು ಸಮಯಗಳ ಹಿಂದೆ ಹೊಚ್ಚ ಹೊಸ ಆಡಿ ಆರ್8 ಕಾರನ್ನು ಖರೀದಿಸಿದ್ದರು. ಇದನ್ನೀಗ ಅನಾಮಿಕ ವ್ಯಕ್ತಿಗೆ ಮಾರಾಟ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ವಿರಾಟ್ ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ

ಸಾಗರ್ ಥಕ್ಕರ್ ಆಲಿಯಾಸ್ ಫಗ್ಗಿ ಎಂಬವರು ಥಾಣೆ ಕೇಂದ್ರಿತವಾಗಿ ಬಹುಕೋಟಿ ಹಗರಣದ ನಕಲಿ ಕಾಲ್ ಸೆಂಟರ್ ನಡೆಸುತ್ತಿದ್ದರು. ಇತ್ತೀಚೆಗಷ್ಟೇ ವಿರಾಟ್ ಕೊಹ್ಲಿ ಕಾರನ್ನು ಮೂರು ಕೋಟಿ ರುಪಾಯಿಗಳಿಗೆ ತಮ್ಮದಾಗಿಸಿಕೊಂಡಿದ್ದರು.

ವಿರಾಟ್ ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ

ವಿರಾಟ್ ಕೊಹ್ಲಿ ಅವರಿಂದ ಖರೀದಿಸಿದ ಆಡಿ ಕಾರನ್ನು ಸಾಗರ್ ಥಕ್ಕರ್ ಅವರು ತಮ್ಮ ಪ್ರೇಯಸಿಗೆ ಉಡುಗೊರೆಯಾಗಿ ನೀಡಿದ್ದರು ಎಂಬುದನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.

ವಿರಾಟ್ ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ

ಈ ಪ್ರಕರಣದಲ್ಲಿ ಭಾರತೀಯ ಕ್ರಿಕೆಟಿಗ ಪಾತ್ರವೇನು ಎಂಬುದನ್ನು ತನಿಖೆ ನಡೆಸಲಾಗಿದೆ. ಸಾಗರ್ ಥಕ್ಕರ್ ಹಿನ್ನಲೆ ವಿರಾಟ್ ಕೊಹ್ಲಿಗೆ ತಿಳಿದಿರಲಿಲ್ಲ ಎಂಬುದನ್ನು ಪೊಲೀಸರು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ

ಸದ್ಯ ವಿರಾಟ್ ಕೊಹ್ಲಿ ಅವರಿಂದ ಖರೀದಿಸಿದ ಕಾರನ್ನು ಪೊಲೀಸರು ವಶಪಡಿಸಕೊಂಡಿದ್ದು, ಕಾಲ್ ಸೆಂಟರ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ತೀವ್ರಗೊಳಿಸಲಾಗಿದೆ.

ವಿರಾಟ್ ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ

ಕಾರು ಈಗಲೂ ಕೊಹ್ಲಿ ಹೆಸರಿನಲ್ಲಿಯೇ ಇದ್ದು, ಮಾಲಿಕತ್ವ ಬದಲಾವಣೆ ಮಾಡಿಕೊಂಡಿಲ್ಲ ಎಂಬುದು ಸಹ ತಿಳಿದು ಬಂದಿದೆ.

ವಿರಾಟ್ ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ

ಆಡಿ ಆರ್8 ಭಾರತದಲ್ಲಿ ವಿ8 ಹಾಗೂ ವಿ10 ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಈ ಪೈಕಿ ವಿ10 ಅತ್ಯಂತ ಶಕ್ತಿಶಾಲಿ 5.2 ಲೀಟರ್ ಎಂಜಿನ್ ಪಡೆದುಕೊಂಡಿದ್ದು, 602 ಅಶ್ವಶಕ್ತಿ (560 ತಿರುಗುಬಲ) ಉತ್ಪಾದಿಸುತ್ತದೆ.

ವಿರಾಟ್ ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ

ಆಡಿ ಆರ್8 ವಿ10 ಆವೃತ್ತಿಯ ಮುಂಬೈ ಎಕ್ಸ್ ಶೋ ರೂಂ ಬೆಲೆಯು ಬರೋಬ್ಬರಿ 2.47 ಕೋಟಿ ರುಪಾಯಿಗಳಾಗಿದೆ.

ವಿರಾಟ್ ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ

ಇದು ಕೇವಲ 3.2 ಸೆಕೆಂಡುಗಳಲ್ಲೇ ಗಂಟೆಗೆ 0-100 ಕೀ.ಮೀ. ವೇಗವರ್ಧಿಸುವ ಸಾಮರ್ಥ್ಯವನ್ನು ಹೊಂದಿದ್ದು, ಗಂಟೆಗೆ ಗರಿಷ್ಠ 330 ಕೀ.ಮೀ. ವೇಗದಲ್ಲಿ ಸಂಚರಿಸಲಿದೆ.

ವಿರಾಟ್ ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ

ಕ್ವಾಟ್ರೊ ಆಲ್ ವೀಲ್ ಚಾಲನಾ ವ್ಯವಸ್ಥೆಯ ಮುಖಾಂತರ ಎಲ್ಲ ನಾಲ್ಕು ಚಕ್ರಗಳಿಗೂ ಶಕ್ತಿ ರವಾನೆಯಾಗಲಿದೆ. ಅಲ್ಲದೆ 7 ಸ್ಪೀಡ್ ಎಸ್ ಟ್ರಾನಿಕ್ ಡ್ಯುಯಲ್ ಕ್ಲಚ್ ಗೇರ್ ಬಾಕ್ಸ್ ಜೋಡಣೆ ಮಾಡಲಾಗಿದೆ.

ವಿರಾಟ್ ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ

ನಿಖರವಾದ ಹಾಗೂ ಕಣ್ಮಣ ಸೆಳೆಯುವ ವಿನ್ಯಾಸವು ಆಡಿಗೆ ವರದಾನವಾಗಿದೆ. ಮುಂಭಾಗದಲ್ಲಿ ಪರಿಷ್ಕೃತ ಆಕ್ರಮಣಕಾರಿ ಗ್ರಿಲ್, ಎಲ್ ಇಡಿ ಬೆಳಕಿನ ಸೇವೆ ಹಾಗೂ ಸಂಸ್ಥೆಯ ವಿಶಿಷ್ಟ ಲೇಸರ್ ಲೈಟ್ ತಂತ್ರಜ್ಞಾನಗಳು ಪ್ರಮುಖ ಆಕರ್ಷಣೆಯಾಗಲಿದೆ.

ವಿರಾಟ್ ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ

ಇನ್ನು ಹಿಂಭಾಗದಲ್ಲೂ ಕ್ರೀಡಾ ಕಾರಿಗೆ ಸ್ಪೂರ್ತಿಯಾಗುವ ರೀತಿಯಲ್ಲಿ ಏರೋಡೈನಾಮಿಕ್ ವಿನ್ಯಾಸ, ಎಲ್‌ಇಡಿ ಟೈಲ್ ಲೈಟ್ ಮುಂತಾದ ಸೌಲಭ್ಯಗಳಿರಲಿದೆ.

ವಿರಾಟ್ ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ

ನೂತನ ಕಾರು ಪ್ರಮುಖವಾಗಿಯೂ ಮರ್ಸಿಡಿಸ್ ಬೆಂಝ್ ಎಎಂಜಿ ಜಿಟಿಎಸ್, ಪೋರ್ಷೆ 911 ಟರ್ಬೊ ಹಾಗೂ ಇನ್ನಷ್ಟೇ ಬಿಡುಗಡೆಯಾಗಲಿರುವ ನಿಸ್ಸಾನ್ ಜಿಟಿಆರ್ ಮಾದರಿಗಳಿಗೆ ಪ್ರತಿಸ್ಪರ್ಧೆಯನ್ನು ಒಡ್ಡುತ್ತಿದೆ.

ವಿರಾಟ್ ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ

ವಿರಾಟ್ ಕೊಹ್ಲಿ ಆಗಲೇ ಆಡಿ ಆರ್8 ಹೊರತಾಗಿ ಎ8ಎಲ್ ಡಬ್ಲ್ಯು12 ಕ್ವಾಟ್ರೊ, ಆರ್8 ಎಲ್‌ಎಂಎಕ್ಸ್ ಸೀಮಿತ ಆವತ್ತಿ, ಆಡಿ ಆರ್8 ವಿ10 ಹಾಗೂ ಆಡಿ ಕ್ಯೂ7 ಕಾರುಗಳ ಒಡೆಯರಾಗಿದ್ದಾರೆ.

ವಿರಾಟ್ ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ

ಈ ಪೈಕಿ ಆರ್8 ಎಲ್‌ಎಂಎಕ್ಸ್ ಸೀಮಿತ ಆವತ್ತಿಯು ಎಲ್ ಇಡಿ ಹಾಗೂ ಲೇಸರ್ ಹೈ ಬೀಮ್ ಲೈಟಿಂಗ್ ತಂತ್ರಜ್ಞಾನವನ್ನು ಒಳಗೊಂಡಿದೆ.

ವಿರಾಟ್ ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ

5.2 ಲೀಟರ್ ವಿ10 ಎಂಜಿನ್ ನಿಂದ ನಿಯಂತ್ರಿಸಲ್ಪಡುವ ಆಡಿ ಆರ್ ಎಲ್ ಎಂಎಕ್ಸ್ ಮಾದರಿಯು ಬರೋಬ್ಬರಿ 570 ಅಶ್ವಶಕ್ತಿ (540 ತಿರುಗುಬಲ) ಉತ್ಪಾದಿಸುತ್ತದೆ. 7 ಸ್ಪೀಡ್ ಎಸ್ ಟ್ರಾನಿಕ್ ಗೇರ್ ಬಾಕ್ಸ್ ಸಹ ಇದರಲ್ಲಿರಲಿದ್ದು, ಆಲ್ ವೀಲ್ ಡ್ರೈವಿಂಗ್ ವ್ಯವಸ್ಥೆಯನ್ನು ಹೊಂದಿದೆ.

ವಿರಾಟ್ ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ

ನಾಲ್ಕು ಉಂಗುರಗಳ ಈ ಆಡಿ ರೂಪದರ್ಶಿಯ ದೆಹಲಿ ಹಾಗೂ ಮುಂಬೈ ಎಕ್ಸ್ ಶೋ ರೂಂ ಬೆಲೆ 2.97 ಕೋಟಿ ರು.ಗಳಿಷ್ಟಿದೆ.

Most Read Articles

Kannada
English summary
Thane Fake Call Center Purchased Rs 3-cr Audi R-8 From Virat Kohli
Story first published: Thursday, November 3, 2016, 12:40 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X