ಕೇದಾರನಾಥ ಯಾತ್ರಿಗಳ ಸಹಾಯಕ್ಕೆ ಮಾಸ್ಟರ್ ಪ್ಲಾನ್: ವೃದ್ದರಿಗೆ, ಹೆಲಿಕಾಪ್ಟರ್ ಮೂಲಕ ಥಾರ್ ಇಳಿಸಿದ ಸರ್ಕಾರ!
ಉತ್ತರ ಭಾರತದ ಅತೀ ಕಷ್ಟವಾದ ತೀರ್ಥಯಾತ್ರೆಗಳಲ್ಲಿ ಕೇದಾರನಾಥ ಯಾತ್ರೆ ಸಹ ಒಂದು. ಇಲ್ಲಿಗೆ ವರ್ಷಂಪ್ರತಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಕೇದಾರನಾಥನ ದರ್ಶನವನ್ನು ಪಡೆದು ಪಾವನವಾಗಲು ತೀರ್ಥಯಾತ್ರೆಗಳನ್ನು ಕೈಗೊಳ್ಳುತ್ತಾರೆ. ಇಲ್ಲಿಗೆ ಬರುವವರಲ್ಲಿ ಬಹುತೇಕ ಎಲ್ಲಾ ವಯೋಮಾನದವರೂ ಸಹ ಇದ್ದು, ವೃದ್ದರನ್ನೂ ಸಹ ನಾವು ಕಾಣಬಹುದಾಗಿದೆ. ಇನ್ನು ಕೇದಾರನಾಥನ ದರ್ಶನಕ್ಕಾಗಿ ಸಾಕಷ್ಟು ದೂರ ಪಾದಯಾತ್ರೆ ಮಾಡಬೇಕಾಗಿದ್ದು, ಇಂತಹ ಸಂಛಧರ್ಭದಲ್ಲಿ ಹಲವರು ಅಲ್ಲಲ್ಲಿ ಕುಸಿದು ಬೀಳುವುದನ್ನೂ ಸಹ ನಾವು ನೋಡಿದ್ದೇವೆ. ಇದೆಲ್ಲಾ ಸಮಸ್ಯೆಗಳನ್ನು ಬಗೆ ಹರಿಸುವುದಕ್ಕಾಗಿ ಉತ್ತರಾಖಂಡ ಸರ್ಕಾರ ಹೊಸ ಉಪಾಯವೊಂದನ್ನು ಮಾಡಿದೆ.
ಹೌದು, ಈ ವರ್ಷದ ಕೇದಾರನಾಥ ತೀರ್ಥಯಾತ್ರೆಯನ್ನು ಉತ್ತೇಜಿಸುವ ಸಲುವಾಗಿ ಕೇದಾರನಾಥಕ್ಕೆ ಬಲಿಷ್ಟ ಆಫ್‌ರೋಡ್ ವಾಹನವಾಗ ಮಹೀಂದ್ರಾ ಥಾರ್ (Mahindra Thar) ಅನ್ನು ಬಳಸಲು ಆರಂಭಿಸಿದ್ದಾರೆ. ಇದಕ್ಕಾಗಿ ಸರ್ಕಾರವು ಮಹೀಂದ್ರಾ ಥಾರ್ ಅನ್ನು ಯುದ್ದ ಹೆಲಿಕಾಪ್ಟರ್ ಮೂಲಕ ಕೇದಾರನಾಥಕ್ಕೆ ವಾಯು ಮಾರ್ಗವಾಗಿ ಸಾಗಿಸಲಾಗಿದ್ದು, ಇನ್ನು ಮುಂದೆ ವಯಸ್ಕ ತೀರ್ಥ ಯಾತ್ರಿಗರಿಗೆ ಇದು ಸಹಾಯ ಮಾಡಲಿದೆ.

ಮಾಹಿತಿಗಳ ಪ್ರಕಾರ ಒಂದು ಚಿನೂಕ್ ಹೆಲಿಕಾಪ್ಟರ್ ಅನ್ನು ಇದಕ್ಕಾಗಿ ಬಳಸಲಾಗಿದೆ. ಚಾರ್ ಧಾಮ್ ಯಾತ್ರೆಗಳನ್ನು ಕೈಗೊಳ್ಳುವವರಿಗೆ ಈ ಥಾರ್ ಕಾರುಗಳನ್ನು ಬಳಸಲಾಗುತ್ತದೆ ಎಂದು ತಿಳಿದು ಬಂದಿದೆ. ಈ ಚಾರ್ ಧಾಮ್‌ಗಳಲ್ಲಿ ಯಮುನೋತ್ರಿ, ಗಂಗೋತ್ರಿ, ಕೇದಾರನಾಥ ಮತ್ತು ಬದ್ರಿನಾಥಗಳನ್ನು ಒಳಗೊಂಡಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ.
ಇನ್ನು ರುದ್ರಪ್ರಯಾಗದಲ್ಲಿ ಮಹೀಂದ್ರಾ ಥಾರ್ ಅನ್ನು ಇಳಿಸಲಾಗಿರುವ ಯೋಜನೆಯ ಹಿಂದಿನ ಪ್ರಮುಖ ಕಾರಣವೇನೆಂದರೆ, ಈಗಾಗಲೇ ತಿಳಿಸಿದಂತೆ ವಯಸ್ಸಾದ ಯಾತ್ರಿಗಳಿಗೆ ತಮ್ಮ ಗುರಿಯನ್ನು ತಲುಪಲು ಸಹಾಯ ಮಾಡಲು ಮತ್ತು ಮಹೀಂದ್ರಾ ಥಾರ್‌ಗಳು ಎಂತಹ ಪ್ರದೇಶದಲ್ಲಿಯೂ ಚಲಿಸಲು ಯೋಗ್ಯವಾಗಿರುವ ಮತ್ತು ಸಾಮರ್ಥ್ಯ ಹೊಂದಿರುವ ಕಾರಾಗಿದ್ದು, ಈ ಕಾರಣದಿಂದಲೇ ಇದನ್ನು ಆಯ್ಕೆ ಮಾಡಲಾಗಿದೆ.

ಈ ಮಹೀಂದ್ರಾ ಥಾರ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಇದು ಹಲವು ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿದೆ. ಇದರಲ್ಲಿ ಮೊದಲಿಗೆ 2.0 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಆಗಿದೆ. ಈ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು 2.2 ಲೀಟರ್ ಟರ್ಬೊ-ಡೀಸೆಲ್ ಎಂಜಿನ್ 130 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇದು ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 4 ಸ್ಟಾರ್ ಸೇಫ್ಚಿ ರೇಟಿಂಗ್ ಪಡೆದುಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿ ಗುರುತಿಸಿಕೊಂಡ ನಂತರ ಈ ಥಾರ್ ಎಸ್‍ಯುವಿಗೆ ಮತ್ತಷ್ಟು ಬೇಡಿಕೆ ಪಡೆದುಕೊಂಡಿದೆ. ಈ ಎಸ್‍ಯುವಿಯ ವೈಟಿಂಗ್ ಪಿರೇಡ್ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ನಿರ್ಧಾರವಾಗಲಿದೆ.

ಈ ಥಾರ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ ಹಲವಾರು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ ಹೊಂದಿದೆ. ಇದರೊಂದಿಗೆ ಕ್ರೂಸ್ ಕಂಟ್ರೋಲ್, 255/65 18-ಇಂಚಿನ ಆಲ್ ಟೆರೆನ್ ಟೈರ್ಸ್, ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್ ಅನ್ನು ಹೊಂದಿದೆ.
ಇನ್ನು ಈ ಎಸ್‍ಯುವಿಯು ರೋಲ್ ಓವರ್ ಮಿಟಿಗೆಷನ್, ತ್ರೀ ಪಾಯಿಂಟ್ ಸಿಲ್ಟ್ ಬೆಲ್ಟ್ ಮತ್ತು ರಿಯರ್ ವ್ಯೂ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಥಾರ್ ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿದೆ. ಈ ಮಹೀಂದ್ರಾ ಥಾರ್ ಎಸ್‍ಯುವಿಯು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








