'ಜೈ ಶ್ರೀರಾಮ್' ಘೋಷಣೆ ಕೂಗಿ ಫಾರ್ಚೂನರ್ ಕಾರನ್ನು ಎತ್ತಲು ಪ್ರಯ್ನತ್ನಿಸಿದ ಅಜಾನುಬಾಹು ದಿ ಗ್ರೇಟ್ ಖಲಿ

ಭಾರತದ ದೈತ್ಯ, ಅಜಾನುಬಾಹು ದಿ ಗ್ರೇಟ್ ಖಲಿ (The Great Khali) ಬಗ್ಗೆ ಕೇಳದವರೂ ಯಾರೂ ಇರಲ್ಲ. ದಿ ಗ್ರೇಟ್ ಖಾಲಿ ಎಂದೇ ಡಬ್ಲ್ಯೂಡಬ್ಲ್ಯೂಇ (WWE) ಪಂದ್ಯಾಟಗಳಲ್ಲಿ ಪ್ರಸಿದ್ಧರಾಗಿರುವ ರೆಸ್ಟ್ಲರ್ ದಲೀಪ್ ಸಿಂಗ್ ರಾಣಾ ತಮ್ಮ ಅಸಾಧಾರಣ ಎತ್ತರ, ಅದ್ಭುತ ಮೈಕಟ್ಟಿನಿಂದ ವಿಶ್ವಪ್ರಸಿದ್ಧಿ ಪಡೆದಿದ್ದಾರೆ. ಡಬ್ಲ್ಯೂಡಬ್ಲ್ಯೂಇ ಸ್ಪರ್ಧೆಯಲ್ಲಿ ಅದರ ಪ್ರತಿಷ್ಠಿತ ಹೆವಿವೇಟ್ ಚಾಂಪಿಯನ್ ಶಿಪ್ ಗೆದ್ದ ಮೊಟ್ಟ ಮೊದಲ ಭಾರತೀಯ.

ಅಜಾನುಬಾಹು ದಿ ಗ್ರೇಟ್ ಖಲಿ ಅವರು ಟೊಯೊಟಾ ಫಾರ್ಚೂನರ್ (Toyota Fortuner) ಎಸ್‍ಯುವಿಯನ್ನು ಎತ್ತಲು ಪ್ರಯತ್ನಿಸಿರುವ ವೀಡಿಯೋ ವೈರಲ್ ಆಗಿದೆ. ಈ ವೀಡಿಯೋವನ್ನು ಅವರೇ ಸೋಷಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡಿದ್ದಾರೆ. ಈ ವೀಡಿಯೋದಲ್ಲಿ ಖಲಿ ಅವರು ಟೊಯೊಟಾ ಫಾರ್ಚೂನರ್ ಎಸ್‍ಯುವಿಯನ್ನು ಜೈ ಶ್ರೀರಾಮ್ ಎಂದುಘೋಷಣೆ ಕೂಗಿ ಎತ್ತಲು ಯತ್ನಿಸಿದರು. ಆದರೆ, ಕಾರನ್ನು ಎತ್ತಲು ಸಾಧ್ಯವಾಗಲಿಲ್ಲ. ಆದರೂ ಅವರ ಪ್ರಯತ್ನ ಶ್ಲಾಘನೀಯ.

The Great Khali

ಆದರೆ ಅವರ ಈ ಕಾರಿನ ಆಯ್ಕೆಯು ತಪ್ಪಾಗಿತ್ತು. ಟೊಯೊಟಾ ಫಾರ್ಚುನರ್ ಕೇವಲ ಸಾಮಾನ್ಯ ಎಸ್‍ಯುವಿ ಅಲ್ಲ, ಇದು ಅತ್ಯುತ್ತಮ ಆಫ್-ರೋಡ್ ಸಾಮರ್ಥ್ಯದ ಎಸ್‍ಯುವಿ ಮಾದರಿಯಾಗಿದೆ. ಈ ಕಾರಣದಿಂದಾಗಿ ಅದರ ತೂಕವೂ ತುಂಬಾ ಹೆಚ್ಚಾಗಿದೆ ಎಂಬುದು ಗಮನಿಸಬೇಕಾದ ಸಂಗತಿ. ಹೆಚ್ಚು ನಿರ್ದಿಷ್ಟವಾಗಿ ಹೇಳುವುದಾದರೆ, ತೂಕವು 2,500 ಕೆಜಿಗಿಂತ ಹೆಚ್ಚು ಇದೆ. ಕೇವಲ 2 ವೀಲ್ ಡ್ರೈವ್ ಫಾರ್ಚುನರ್ ಮಾತ್ರ ಈ ತೂಕವನ್ನು ಹೊಂದಿದೆ.

ಇನ್ನು ಫಾರ್ಚೂನರ್ ಎಸ್‍ಯುವಿ 4 ವೀಲ್ ಡ್ರೈವ್ ಮಾದರಿಯು 2,735 ಕೆಜಿಗಿಂತ ಹೆಚ್ಚು ತೂಕವಿದೆ ಎಂದು ಹೇಳಲಾಗುತ್ತದೆ. ಇಂತಹ ಬೃಹತ್ ತೂಕದ ಕಾರನ್ನು ಯಾವುದೇ ಸಲಕರಣೆಗಳಿಲ್ಲದೆ ಎತ್ತಲು ಗ್ರೇಟ್ ಖಲಿ ಪ್ರಯತ್ನಿಸಿದರು. ಇಷ್ಟು ಭಾರವಾದ ಕಾರನ್ನು ಎತ್ತಲು ಹತ್ತು ಜನರಿದ್ದರೂ ಕಷ್ಟ. ಈ ವೀಡಿಯೋ 32 ಮಿಲಿಯನ್‌ಗೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ.

The Great Khali

ಟೊಯೊಟಾ ಫಾರ್ಚೂನರ್ ಎಸ್‍ಯುವಿಗೆ ಬಗ್ಗೆ ಹೇಳುವುದಾದರೆ, ಫುಲ್ ಸೈಜ್ ಎಸ್‌ಯುವಿ (Full Size Suv) ವಿಭಾಗದಲ್ಲಿ ಫಾರ್ಚೂನರ್ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. ಪ್ರತಿ ತಿಂಗಳ ಪೂರ್ಣ ಗಾತ್ರದ ಎಸ್‌ಯುವಿ ವಿಭಾಗದ ಮಾರಾಟದಲ್ಲಿ ಟೊಯೊಟಾ ಫಾರ್ಚೂನರ್ ತನ್ನ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿ ಅಗ್ರಸ್ಥಾನದಲ್ಲಿ ಮುಂದುವರೆಯುತ್ತಿದೆ. 7-ಸೀಟುಗಳ ಪ್ರಸ್ತುತ ಜನರೇಷನ್ ಫಾರ್ಚೂನರ್ ಅನ್ನು 2016 ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು.

ಫಾರ್ಚೂನರ್ ಜಿಆರ್ ಸ್ಪೋರ್ಟ್ ರೂಪಾಂತರವನ್ನು ಶ್ರೇಣಿಗೆ ಸೇರಿಸಲಾಯಿತು. ಟೊಯೊಟಾ ಫಾರ್ಚುನರ್ ಎಸ್‍ಯುವಿಯ ಲೆಜೆಂಡರ್ ಆವೃತ್ತಿಯು ಮಾರಾಟದಲ್ಲಿದೆ ಮತ್ತು ಇದು 4X4 ಆಯ್ಕೆಯೊಂದಿಗೆ ಸಹ ಲಭ್ಯವಿದೆ. ಟೊಯೊಟಾ ಲೆಜೆಂಡರ್‌ನ 4×4 ರೂಪಾಂತರವನ್ನು ಫಾರ್ಚುನರ್‌ನ ಶ್ರೇಣಿಗೆ ಸೇರಿಸಿತು. ಈ ಫಾರ್ಚುನರ್‌ನ ಜಿಆರ್-ಸ್ಪೋರ್ಟ್ ರೂಪಾಂತರವನ್ನು ಕೂಡ ಬಿಡುಗಡೆಗೊಳಿಸಿತ್ತು.

ಈ ಫಾರ್ಚುನರ್ ಎಸ್‍ಯುವಿಯ ಬೆಲೆಗಳಲ್ಲಿನ ಹೆಚ್ಚಳವನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಯನ್ನು ಮಾಡಿಲ್ಲ. ಫಾರ್ಚೂನರ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯು ಸಂಯೋಜಿತ ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ನವೀಕರಿಸಿದ ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳನ್ನು ಒಳಗೊಂಡಿವೆ. ಈ ಫಾರ್ಚುನರ್ ಎಸ್‍ಯುವಿ ಕ್ರೋಮ್ ಸರೌಂಡ್‌ನೊಂದಿಗೆ ದೊಡ್ಡ ಫ್ರಂಟ್ ಗ್ರಿಲ್, ಫಾಗ್ ಲ್ಯಾಂಪ್‌ಗಳಿಗಾಗಿ ಹೊಸ ಹೌಸಿಂಗ್‌ಗಳೊಂದಿಗೆ ನವೀಕರಿಸಿದ ಫ್ರಂಟ್ ಬಂಪರ್ ಅನ್ನು ಹೊಂದಿದೆ.

ಇದರಲ್ಲಿ 18 ಇಂಚಿನ ಅಲಾಯ್ ವ್ಹೀಲ್ ಗಳು ಮತ್ತು ಹಿಂಭಾಗದಲ್ಲಿ ಎಲ್ಇಡಿ ಟೈಲ್ ಲ್ಯಾಂಪ್ ಗಳನ್ನು ಹೊಂದಿವೆ. ಟೊಯೊಟಾ ಫಾರ್ಚುನರ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ ಒಳಭಾಗದಲ್ಲಿ ಈಗ ಹೆಚ್ಚು ಪ್ರೀಮಿಯಂ ಆಗಿ ನವೀಕರಿಸಿದ್ದು, ಕೆಲವು ಹೊಸ ಫೀಚರ್ಸ್ ಅನ್ನು ಹೊಂದಿದೆ. ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋಗಳೊಂದಿಗಿನ ಹೊಸ 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಕನೆಕ್ಟಿವಿಟಿ ಕಾರು ತಂತ್ರಜ್ಞಾನವನ್ನು ಹೊಂದಿದೆ.

ಟೊಯೊಟಾ ಫಾರ್ಚುನರ್ ಎಸ್‌ಯುವಿ, ಸುರಕ್ಷತೆಯಲ್ಲಿಯೂ ಅತ್ಯಾಧುನಿಕವಾಗಿದೆ. ಗ್ಲೋಬಲ್ ಎನ್‌ಸಿಎಪಿ (Global NCAP)ಯಿಂದ 4 ಸ್ಟಾರ್ ರೇಟಿಂಗ್ ಪಡೆದಿದೆ. 7-ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟ್ರಾಕ್ಷನ್ ಕಂಟ್ರೋಲ್, ಹಿಲ್ ಅಸಿಸ್ಟ್ ನಂತಹ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.

Article Published On: Friday, January 19, 2024, 19:06 [IST]
English summary
The great khali tries to lift toyota fortuner suv viral video details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+