Just In
- 1 hr ago
2023ರಿಂದ ಭಾರತದಲ್ಲಿ ಮಾರಾಟಗೊಳ್ಳಲಿದೆ ಜೈವಿಕ ಇಂಧನ ಒಳಗೊಂಡ ಇ20 ಪೆಟ್ರೋಲ್ ಮಾದರಿ
- 2 hrs ago
ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಸಂಚಲನ ಸೃಷ್ಟಿಸಲು ಹೊಸ ರೂಪದಲ್ಲಿ ಬರುತ್ತಿದೆ ಮಾರುತಿ ಆಲ್ಟೋ ಕೆ10
- 2 hrs ago
ಹೊಸ ಆಕ್ಟಿವಾ ಟೀಸರ್ ಬಿಟ್ಟು ನಿರೀಕ್ಷೆ ಹೆಚ್ಚಿಸಿದ ಹೋಂಡಾ: ಆಕ್ಟಿವಾ 7G ಆಗಿರಬಹುದೇ?
- 3 hrs ago
ಇವಿ ಸ್ಕೂಟರ್ಗಳ ಬೆಲೆ ನಿಯಂತ್ರಿಸಲು ಬೃಹತ್ ಯೋಜನೆಗೆ ಚಾಲನೆ ನೀಡಿದ ಓಲಾ ಎಲೆಕ್ಟ್ರಿಕ್
Don't Miss!
- Finance
ಪೇಟಿಎಂ ಷೇರು ಶೇಕಡ 6ರಷ್ಟು ಕುಸಿತ, ಕಾರಣವೇನು?
- Sports
ಆ ಒಂದು ಕ್ರಮಾಂಕಕ್ಕೆ ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳಿ: ಟೀಮ್ ಇಂಡಿಯಾಗೆ ಸಬಾ ಕರೀಮ್ ಸಲಹೆ
- News
ಬಿಜೆಪಿ ನಾಯಕರಿಗೆ 'ಈಗಲೇ ಬಿಟ್ಟು ಹೊರಡಿ' ಎಂಬ ಸಂದೇಶ ನೀಡುತ್ತಿದ್ದಾರೆ ನಿತೀಶ್ ಕುಮಾರ್
- Technology
ಭಾರತದಲ್ಲಿ ವಿವೋ V25 ಪ್ರೊ ಸ್ಮಾರ್ಟ್ಫೋನಿನ ಲಾಂಚ್ ಡೇಟ್ ಬಹಿರಂಗ!
- Movies
ರಶ್ಮಿಕಾ ಆಯ್ತು, ಅನನ್ಯಾ ಪಾಂಡೆ ಕಡೆ ವಾಲಿದ ವಿಜಯ್ ದೇವರಕೊಂಡ!
- Lifestyle
ವಿಶ್ವ ಆನೆ ದಿನ 2022: ಆನೆಗಳ ಕುರಿತ ಈ ಆಸಕ್ತಿಕರ ಸಂಗತಿಗಳು ಗೊತ್ತಿದೆಯೇ?
- Travel
75ನೇ ಸ್ವಾತೊಂತ್ರೋತ್ಸವವನ್ನು ಸ್ಮರಿಸುತ್ತಾ ಸ್ವಾತಂತ್ರ್ಯ ಹೋರಾಟದೊಡನೆ ಸಂಬಂಧವಿರುವ ಭಾರತದ ಈ ಸ್ಮಾರಕಗಳು
- Education
CAT 2022 Preparation Tips : ಕ್ಯಾಟ್ ಪರೀಕ್ಷೆಗೆ ಸಿದ್ಧತೆ ನಡೆಸಲು ಸಲಹೆಗಳು ಇಲ್ಲಿವೆ
ಭಾರತದಲ್ಲಿ ಬಿಡುಗಡೆಯಾಗುವ ಮುನ್ನವೇ ಬಹುಬೇಡಿಕೆಯ ಕಾರನ್ನು ಪಡೆದುಕೊಂಡ ರಾಜಕಾರಣಿ
ಟೊಯೊಟಾ ಕಿರ್ಲೋಸ್ಕರ್ ಕಂಪನಿಯು ತನ್ನ ಹೊಸ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆಯಾಗುವ ಮೊದಲೇ ಇದನ್ನು ರಾಜಕಾರಣಿಯೊಬ್ಬರು ಕಾರನ್ನು ಖರೀದಿಸಿದರು, ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು ಕಸ್ಟಮೈಸ್ ಮಾಡಿ ಬಳಸಲು ಪ್ರಾರಂಭಿಸಿದ್ದಾರೆ.

ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟವಾಗುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಈ ಎಸ್‍ಯುವಿಯು ಭರ್ಜರಿ ಬೇಡಿಕೆಯನ್ನು ಪಡೆದುಕೊಂಡಿದೆ. ಈ ಎಸ್‍ಯುವಿಗೆ ಭರ್ಜರಿ ಬೇಡಿಕೆಯನ್ನು ಹೊಂದಿರುವುದರಿಂದ ಕೆಲವು ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಗಮನಾರ್ಹವಾದ ನಾಲ್ಕು ವರ್ಷಗಳ ಕಾಯುವ ಅವಧಿಯನ್ನು ಹೊಂದಿದೆ. ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಈಗಾಗಲೇ ಭಾರತದಲ್ಲಿದೆ ಮತ್ತು ಕೆ.ಎನ್. ನೆಹರು ಎಂಬ ರಾಜಕಾರಣಿಯ ಒಡೆತನದಲ್ಲಿದೆ.

ಕೊಯಮತ್ತೂರಿನಲ್ಲಿ ಈ ವರ್ಷದ ಆರಂಭದಲ್ಲಿ ಕಾಣಿಸಿಕೊಂಡ ಟೊಯೊಟಾ ಲ್ಯಾಂಡ್ ಕ್ರೂಸರ್ ಇದೇ ಆಗಿರಬಹುದು. ಟೊಯೊಟಾ ಎಲ್ಲಾ ಹೊಸ ಲ್ಯಾಂಡ್ ಕ್ರೂಸರ್‌ನ ಅಧಿಕೃತ ಬೆಲೆಗಳನ್ನು ಈ ವರ್ಷದ ಕೊನೆಯಲ್ಲಿ ಹಬ್ಬದ ಸೀಸನ್ ನಲ್ಲಿ ಪ್ರಕಟಿಸಲಿದೆ. ಅಧಿಕೃತ ಬಿಡುಗಡೆಯ ಮೊದಲು ಎಸ್‍ಯುವಿಯನ್ನು ಖಾಸಗಿಯಾಗಿ ಆಮದು ಮಾಡಿಕೊಂಡಿದ್ದಾರೆ .

ಟೊಯೊಟಾ ತನ್ನ 'ಸಹಾರಾ' ಆವೃತ್ತಿಯಲ್ಲಿ ಸೀಮಿತ ಸಂಖ್ಯೆಯ ಲ್ಯಾಂಡ್ ಕ್ರೂಸರ್ ಎಲ್ಸಿ300 ಅನ್ನು ಭಾರತಕ್ಕೆ ಆಮದು ಮಾಡಿಕೊಳ್ಳುತ್ತದೆ. ಐಷಾರಾಮಿ ಮತ್ತು ಸೌಕರ್ಯದ ಉತ್ತಮ ಮಿಶ್ರಣವನ್ನು ನೀಡುವ ಗುರಿಯನ್ನು ಹೊಂದಿರುವ ಲ್ಯಾಂಡ್ ಕ್ರೂಸರ್ ಎಲ್ಸಿ300 ಸಹಾರಾ ಆವೃತ್ತಿಯು ಒಂಬತ್ತು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.

ಈ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಬೈ-ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, 18-ಇಂಚಿನ ಮಿಷಿನ್ ಅಲಾಯ್ ವ್ಹೀಲ್ ಗಳು ಮತ್ತು ಮುಂಭಾಗದ ಗ್ರಿಲ್‌ನಲ್ಲಿ ಕ್ರೋಮ್ ಫಿನಿಶ್‌ನಲ್ಲಿ ಬರುವ ನಿರೀಕ್ಷೆಯಿದೆ.

ರಾಜಕಾರಣಿ ಕೆ.ಎನ್. ನೆಹರು ತಮಿಳುನಾಡು ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನೆಹರು ಅವರ ಹಿಂದಿನ ಕಾರುಗಳು ಲ್ಯಾಂಡ್ ಕ್ರೂಸರ್‌ಗಳಾಗಿವೆ. ಲ್ಯಾಂಡ್ ಕ್ರೂಸರ್ ಎಸ್‍ಯುವಿ ತಮ್ಮ ವಿಶ್ವಾಸಾರ್ಹತೆ, ದೃಢತೆ ಮತ್ತು ಸೌಕರ್ಯಗಳಿಗೆ ವಿಶ್ವಪ್ರಸಿದ್ಧವಾಗಿವೆ. ಹೊಸ ಲ್ಯಾಂಡ್ ಕ್ರೂಸರ್ ಪ್ರಪಂಚದಾದ್ಯಂತ ಹೆಚ್ಚು ಬೇಡಿಕೆಯಿರುವ ಎಸ್‍ಯುವಿಗಳಲ್ಲಿ ಒಂದಾಗಿದೆ.

ಟೊಯೊಟಾ ಭಾರತದಲ್ಲಿ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಎಸ್‍ಯುವಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಿದ್ದಾರೆ. ಆದರೆ ಈ ಎಸ್‍ಯುವಿಯು ಬೇಡಿಕೆಯ ಕಾರಣ ಅದನ್ನು ಶೀಘ್ರದಲ್ಲೇ ಸ್ಥಗಿತಗೊಳಿಸಿತು. ವರದಿಗಳ ಪ್ರಕಾರ, ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300ನ ಮೊದಲ ಬ್ಯಾಚ್ ಈಗಾಗಲೇ ಮಾರಾಟವಾಗಿದೆ.

ಈ ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಲ್‌ಸಿ300 ಈ ವರ್ಷದ ಆಗಸ್ಟ್‌ನಲ್ಲಿ ಭಾರತದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಹಿಂದಿನ ಫೆಬ್ರವರಿಯಲ್ಲಿ, ಟೊಯೊಟಾ ವಿತರಕರು ವಿ6 ಡೀಸೆಲ್ ರೂಪಾಂತರಕ್ಕಾಗಿ ಬುಕ್ಕಿಂಗ್ ತೆಗೆದುಕೊಳ್ಳುತ್ತಿದ್ದರು. ಮೊದಲ ಬ್ಯಾಚ್ ಮಾರಾಟವಾಗಿದೆ. ಈ ಟೊಯೊಟಾ ಲ್ಯಾಂಡ್ ಕ್ರೂಸರ್ ಬೃಹತ್ ಗಾತ್ರದ ಆಫ್-ರೋಡ್ ಎಸ್‍ಯುವಿಯಾಗಿದೆ.

ಟೊಯೊಟಾ ಕಂಪನಿಯು ಐಕಾನಿಕ್ ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು 1951 ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿತು.ಇದುವರೆಗೂ 170 ದೇಶಗಳಲ್ಲಿ ಲ್ಯಾಂಡ್ ಕ್ರೂಸರ್‌ನ 1.04 ಕೋಟಿ ಯೂನಿಟ್‌ಗಳನ್ನು ಮಾರಾಟ ಮಾಡಿದೆ. ನ್ಯೂ ಜನರೇಷನ್ ಮಾದರಿಯನ್ನು ಹಿಂದಿನದಕ್ಕಿಂತ ಹೆಚ್ಚು ಆಧುನಿಕ ಮತ್ತು ಪ್ರೀಮಿಯಂ ಮಾದರಿಯಾಗಿದೆ. ಲ್ಯಾಂಡ್ ಕ್ರೂಸರ್' ಬ್ರ್ಯಾಂಡ್ ಹೆಸರು ಇಂದಿಗೂ ಜನಪ್ರಿಯ ಬ್ರ್ಯಾಂಡ್ ಆಗಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಟೊಯೊಟಾ ತನ್ನ ಲ್ಯಾಂಡ್ ಕ್ರೂಸರ್ ಎಸ್‍ಯುವಿಯನ್ನು 1951ರಲ್ಲಿ ಬಿಡುಗಡೆಗೊಳಿಸಿತ್ತು. ಇನ್ನು ಕಳೆದ ಕೆಲವು ವರ್ಷಗಳಿಗಿಂದ ಭಾರತೀಯ ಮಾರುಕಟ್ಟೆಯಲ್ಲಿ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಜನಪ್ರಿಯತೆ ಕಡಿಮೆಯಾಗಿತ್ತು. ಆದರೆ ಈ ಟೊಯೊಟಾ ಲ್ಯಾಂಡ್ ಕ್ರೂಸರ್ ಒಂದು ಕಾಲದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಿದ ಎಸ್‍ಯುವಿ ಇದಾಗಿದೆ.

ಈ ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಎರಡು ಎಂಜಿನ್ ಆಯ್ಕೆಗಳನ್ನು ಹೊಂದಿದೆ. ಇದು 3.5 ಎಲ್ ವಿ6 ಟ್ವಿನ್-ಟರ್ಬೊ ಪೆಟ್ರೋಲ್ ಮತ್ತು 3.3 ಎಲ್ ವಿ6 ಟ್ವಿನ್-ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಗಳಾಗಿವೆ. ಇದರಲ್ಲಿ 3.5-ಲೀಟರ್ ವಿ6 ಟ್ವಿನ್-ಟರ್ಬೊ ಎಂಜಿನ್ ಅನ್ನು 409 ಬಿಹೆಚ್‍ಪಿ ಪವರ್ ಮತ್ತು 650 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಇನ್ನು ನ್ಯೂ ಜನರೇಷನ್ ಟೋಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯಲ್ಲಿ 3.5-ಲೀಟರ್ ವಿ6 ಟ್ವಿನ್-ಟರ್ಬೊ ಎಂಜಿನ್ ಅನ್ನು ಅಳವಡಿಸಲಾಗಿದೆ, ಈ ಎಂಜಿನ್ 409 ಬಿಹೆಚ್‍ಪಿ ಪವರ್ ಮತ್ತು 650 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.ಈ ಎಂಜಿನ್ ನೊಂದಿಗೆ 10-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ. ಈ ಗೇರ್ ಬಾಕ್ಸ್ ಇಂಧನ ಬಳಕೆ ಮತ್ತು ಇಂಗಾಲದ ಹೊರಸೂಸುವಿಕೆಯನ್ನು ಹಿಂದಿನದಕ್ಕಿಂತ ಶೇ.10 ಕಡಿಮೆ ಮಾಡುತ್ತದೆ ಎಂದು ಕಂಪನಿ ಹೇಳಿದೆ,

ಈ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಹೊಸ ಟಿಎನ್‌ಜಿಎ (ಟೊಯೊಟಾ ನ್ಯೂ ಗ್ಲೋಬಲ್ ಆರ್ಕಿಟೆಕ್ಚರ್) ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದ ಬ್ರಾಂಡ್‌ನ ಮೊದಲ ಬಾಡಿ-ಆನ್-ಫ್ರೇಮ್ ವಾಹನ ಇದಾಗಿದೆ, ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯಲ್ಲಿ ಕೆಲವು ಕಾಸ್ಮೆಟಿಕ್ ಬದಲಾವಣೆಗಳನ್ನು ಮಾಡಲಾಗಿದೆ. ಈ ಬ್ರ್ಯಾಂಡ್‌ನ ಹೊಸ ಪ್ರಮುಖ ಎಸ್‍ಯುವಿ ಹೆಚ್ಚು ಪ್ರಮುಖವಾದ ಗ್ರಿಲ್, ಹೊಸ ಲೈಟಿಂಗ್ ಸೆಟಪ್, ಪರಿಷ್ಕೃತ ಟೈಲ್‌ಗೇಟ್ ಮತ್ತು ಹೊಸದಾಗಿ ವಿನ್ಯಾಸಗೊಳಿಸಲಾದ ಟೈಲ್‌ಲ್ಯಾಂಪ್‌ಗಳನ್ನು ಹೊಂದಿವೆ.

ಈ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಹೊಸ ಟಿಎನ್‌ಜಿಎ (ಟೊಯೊಟಾ ನ್ಯೂ ಗ್ಲೋಬಲ್ ಆರ್ಕಿಟೆಕ್ಚರ್) ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದ ಬ್ರಾಂಡ್‌ನ ಮೊದಲ ಬಾಡಿ-ಆನ್-ಫ್ರೇಮ್ ವಾಹನ ಇದಾಗಿದೆ, ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯಲ್ಲಿ ಕೆಲವು ಕಾಸ್ಮೆಟಿಕ್ ಬದಲಾವಣೆಗಳನ್ನು ಹೊಂದಿವೆ. ಈ ಬ್ರ್ಯಾಂಡ್‌ನ ಹೊಸ ಪ್ರಮುಖ ಎಸ್‍ಯುವಿ ಹೆಚ್ಚು ಪ್ರಮುಖವಾದ ಗ್ರಿಲ್, ಹೊಸ ಲೈಟಿಂಗ್ ಸೆಟಪ್, ಪರಿಷ್ಕೃತ ಟೈಲ್‌ಗೇಟ್ ಮತ್ತು ಹೊಸದಾಗಿ ವಿನ್ಯಾಸಗೊಳಿಸಲಾದ ಟೈಲ್‌ಲ್ಯಾಂಪ್‌ಗಳನ್ನು ಪಡೆದುಕೊಂಡಿವೆ.

ಈ ಹೊಸ ಟೊಯೊಟಾ ಲ್ಯಾಂಡ್ ಕ್ರೂಸರ್ ವಿಶ್ವದ ಮೊದಲ ಎಲೆಕ್ಟ್ರಾನಿಕ್ ಕೈನೆಟಿಕ್ ಡೈನಾಮಿಕ್ ಸಸ್ಪೆಂಕ್ಷನ್ ಸಿಸ್ಟಮ್ (ಇ-ಕೆಡಿಎಸ್ಎಸ್) ಅನ್ನು ಒಳಗೊಂಡಿದೆ. ಮಲ್ಟಿ-ಟೆರೈನ್ ಮಾನಿಟರ್ ಅನ್ನು ಒಳಗೊಂಡಿರುವ ಬ್ರ್ಯಾಂಡ್‌ನ ಮೊದಲ ಮಾದರಿಯಾಗಿದೆ, ಇನ್ನು ಟೊಯೊಟಾ ಕಂಪನಿಯು ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಲ್ಯಾಂಡ್ ಕ್ರೂಸರ್ ಎಸ್‍ಯುವಿಯ ಆಫ್-ರೋಡ್ ಪರ್ಫಾಮೆನ್ಸ್ ವೀಡಿಯೊವನ್ನು ಇತ್ತೀಚೆಗೆ ಹಂಚಿಕೊಂಡಿತ್ತು. ಈ ವೀಡಿಯೊಗಳಲ್ಲಿನ ವಾಯ್ಸ್‌ಓವರ್ ಕೇವಲ ಜಪಾನೀಸ್‌ನಲ್ಲಿ ಮಾತ್ರವಿದೆ. ಆದರೆ ವೀಡಿಯೊದಲ್ಲಿ ಲ್ಯಾಂಡ್ ಕ್ರೂಸರ್ ಎಷ್ಟು ಸಮರ್ಥ ಆಫ್-ರೋಡರ್ ಎಂದು ತಿಳಿಯುತ್ತದೆ. ಈ ವೀಡಿಯೋದಲ್ಲಿ ಲ್ಯಾಂಡ್ ಕ್ರೂಸರ್ ಎಸ್‍ಯುವಿ ಬೆಟ್ಟ, ಗುಡ್ಡಗಳ ಜೊತೆಯಲ್ಲಿ ಮರಳಿನಲ್ಲಿ ಸಾಗುವುದನ್ನು ಪ್ರದರ್ಶಿಸಿದ್ದಾರೆ. ಇನ್ನು ಈ ಎಸ್‍ಯುವಿಯು ಜಿಗಿಯುವುದನ್ನು ಪ್ರದರ್ಶಿಸಲಾಗಿತ್ತು.

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ
ಈ ನ್ಯೂ ಜನರೇಷನ್ ಟೊಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಭಾರತದಲ್ಲಿ ಬಿಡುಗಡೆಯಾಗುವ ಮುನ್ನವೇ ರಾಜಕಾರಣಿಯೊಬ್ಬರು ಪಡೆದುಕೊಂಡಿದ್ದಾರೆ. ಈ ನ್ಯೂ ಜನರೇಷನ್ ಟೋಯೊಟಾ ಲ್ಯಾಂಡ್ ಕ್ರೂಸರ್ ಎಸ್‍ಯುವಿಯು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಬಹುದು.