Just In
- 42 min ago
ಭಾರತದಲ್ಲಿ ಸ್ಥಗಿತಗೊಂಡ ಜನಪ್ರಿಯ ಮಾರುತಿ ಸುಜುಕಿ ಎಸ್-ಕ್ರಾಸ್ ಕಾರು
- 3 hrs ago
ಮೊದಲು ಭಾರತದಲ್ಲಿ ಮಾರಾಟಕ್ಕೆ ಅನುಮತಿಸಿ, ಬಳಿಕ ಸ್ಥಾವರವನ್ನು ಸ್ಥಾಪಿಸುತ್ತೇವೆ: ಟೆಸ್ಲಾ ಸಿಇಒ ಎಲನ್ ಮಸ್ಕ್
- 4 hrs ago
ವಾರದ ಸುದ್ದಿ: ವಾಹನ ವಿಮೆ ಹೆಚ್ಚಳ, ಇವಿ ಉತ್ಪಾದನೆಗೆ ಸಿದ್ದವಾದ ಓಲಾ, ಇವಿ6 ಸೇಫ್ಟಿ ರೇಟಿಂಗ್ಸ್ ಬಹಿರಂಗ..
- 19 hrs ago
ಕಾರಿನ ಡ್ಯಾಶ್ಬೋರ್ಡ್ ಲೈಟ್ಗಳನ್ನು ಸರಿಪಡಿಸುವುದು ಹೇಗೆ?: ಇಲ್ಲಿವೆ ಕೆಲವು ಟಿಪ್ಸ್
Don't Miss!
- News
ಶಿವಮೊಗ್ಗ; ಈ ಬಡಾವಣೆ ಜನರಿಗೆ ಮಳೆಗಾಲದ ಪ್ರವಾಹ ಆತಂಕ!
- Sports
IPL 2022 Final: ಗುಜರಾತ್, ರಾಜಸ್ಥಾನ್ ನಡುವೆ ಟ್ರೋಫಿ ಎತ್ತಿಹಿಡಿಯುವ ತಂಡವನ್ನು ಹೆಸರಿಸಿದ ರೈನಾ
- Technology
ಪ್ರಸ್ತುತ ನೀವು ಖರೀದಿಸಬಹುದಾದ ಮಧ್ಯಮ ಶ್ರೇಣಿಯ ಅತ್ಯುತ್ತಮ ಸ್ಮಾರ್ಟ್ಫೋನ್ಗಳು!
- Movies
ಕನ್ನಡ ಚಿತ್ರರಂಗದಲ್ಲಿ ಶತ್ರುಗಳೇ ಇಲ್ಲದ ಏಕೈಕ ಸ್ಟಾರ್.. ಕನ್ನಡದ ರೆಬೆಲ್ ಸ್ಟಾರ್!
- Lifestyle
ಮೇ 29 ರಿಂದ ಜೂನ್ 4ರ ವಾರ ಭವಿಷ್ಯ: ಮಿಥುನ, ಸಿಂಹ, ಕುಂಭ ರಾಶಿಯವರು ಆರೋಗ್ಯದ ಬಗ್ಗೆ ಜಾಗರೂಕರಾಗಿರಿ
- Finance
ಆಧಾರ್ ಕಾರ್ಡ್ ನೋಂದಾಯಿತ ಎಷ್ಟು ಸಿಮ್ ಕಾರ್ಡ್ ಜೋಡಣೆ ಸಾಧ್ಯ?
- Education
BCWD Dolu And Nadaswara Music Training : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಾಯು ಮಾಲಿನ್ಯ ನಿಯಂತ್ರಿಸಲು ಹೊಸ ಕ್ರಮಕ್ಕೆ ಮುಂದಾದ ಮಾಲಿನ್ಯ ನಿಯಂತ್ರಣ ಮಂಡಳಿ
ಭಾರತದಲ್ಲಿ ವಾಯು ಮಾಲಿನ್ಯ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ನಿಂದ ಚಲಿಸುವ ವಾಹನಗಳು ವಾಯು ಮಾಲಿನ್ಯದ ಸಮಸ್ಯೆಗೆ ಪ್ರಮುಖ ಕಾರಣವಾಗುತ್ತಿವೆ. ವಾಯು ಮಾಲಿನ್ಯದಿಂದಾಗಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟವು ತೀವ್ರವಾಗಿ ಹದಗೆಟ್ಟಿದೆ.

ಈ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಸಾಧ್ಯವಾದರೆ ಎರಡು ದಿನ ದೆಹಲಿಯಲ್ಲಿ ಲಾಕ್ ಡೌನ್ ಜಾರಿಗೊಳಿಸುವಂತೆ ಸೂಚನೆ ನೀಡಿತ್ತು. ದೆಹಲಿ ಮಾತ್ರವಲ್ಲದೇ ಭಾರತದ ಹಲವು ನಗರಗಳು ವಾಯು ಮಾಲಿನ್ಯ ಸಮಸ್ಯೆಯನ್ನು ಎದುರಿಸುತ್ತಿವೆ. ಇದರಿಂದ ದಕ್ಷಿಣ ಭಾರತದ ರಾಜ್ಯಗಳೂ ಸಹ ಹೊರತಾಗಿಲ್ಲ. ಆಯಾ ರಾಜ್ಯ ಸರ್ಕಾರಗಳು ವಾಯು ಮಾಲಿನ್ಯ ನಿಯಂತ್ರಿಸಲು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿವೆ.

ಈಗ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿಯು ವಾಯು ಮಾಲಿನ್ಯ ಸಮಸ್ಯೆ ನಿಯಂತ್ರಣಕ್ಕೆ ಕಠಿಣ ನಿರ್ಧಾರ ಕೈಗೊಂಡಿದೆ. ಇದರನ್ವಯ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿಯ ನೌಕರರು ಪ್ರತಿ ಬುಧವಾರದಂದು ಪೆಟ್ರೋಲ್ ಹಾಗೂ ಡೀಸೆಲ್‌ನಲ್ಲಿ ಚಲಿಸುವ ವಾಹನಗಳಲ್ಲಿ ಕಚೇರಿಗೆ ಬರಬಾರದು ಎಂದು ಸುತ್ತೋಲೆ ಹೊರಡಿಸಲಾಗಿದೆ.

ಇದರಿಂದ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯ ಆವರಣದಲ್ಲಿ ವಾಯು ಮಾಲಿನ್ಯ ಸಮಸ್ಯೆ ಕಡಿಮೆಯಾಗುವ ನಿರೀಕ್ಷೆಗಳಿವೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಉದಯನ್, ವಾಹನಗಳಿಂದ ಹೊರಸೂಸುವ ಕಾರ್ಬನ್ ಮಾನಾಕ್ಸೈಡ್, ನೈಟ್ರೋಜನ್ ಆಕ್ಸೈಡ್ ಮತ್ತು ಸಲ್ಫರ್ ಡೈಆಕ್ಸೈಡ್ ಆರೋಗ್ಯಕ್ಕೆ ಹಾನಿಕಾರಕ.

ಈ ಹಿನ್ನೆಲೆಯಲ್ಲಿ ಎಲ್ಲಾ ಮಾಲಿನ್ಯ ನಿಯಂತ್ರಣ ಮಂಡಳಿ ನೌಕರರು ಬುಧವಾರ ಇಂಧನ ವಾಹನಗಳನ್ನು ಬಳಸಬಾರದು ಎಂದು ತಿಳಿಸಿದ್ದಾರೆ. ಇದರಿಂದ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಆವರಣದಲ್ಲಿ ಪ್ರತಿ ಬುಧವಾರ ವಾಯು ಮಾಲಿನ್ಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಗಳಿವೆ. ವಾಯು ಮಾಲಿನ್ಯ ಪ್ರಮಾಣವು ಸುಮಾರು 20% ನಷ್ಟು ಕಡಿಮೆಯಾಗಬಹುದು ಎಂದು ಅಧಿಕಾರಿಗಳು ಭಾವಿಸುತ್ತಾರೆ.

ಮಾಲಿನ್ಯ ನಿಯಂತ್ರಣ ಮಂಡಳಿ ನೌಕರರು ಪೆಟ್ರೋಲ್, ಡೀಸೆಲ್ ವಾಹನಗಳ ಬದಲು ಬಸ್ ಗಳಂತಹ ಸಾರ್ವಜನಿಕ ಸಾರಿಗೆ ಹಾಗೂ ಸೈಕಲ್, ಎಲೆಕ್ಟ್ರಿಕ್ ವಾಹನಗಳಂತಹ ಸ್ವಂತ ವಾಹನಗಳನ್ನು ಬಳಸಬಹುದು. ನೌಕರರು ಎಲೆಕ್ಟ್ರಿಕ್ ವಾಹನಗಳನ್ನು ಬಳಸಲು ಅನುಮತಿ ನೀಡಲಾಗಿದೆ. ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿಯ ಈ ಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿಯ ಈ ಕ್ರಮವು ತಮಿಳುನಾಡು ಸರ್ಕಾರದ ಇತರೆ ಇಲಾಖೆಗಳಿಗೆ ನಿದರ್ಶನವಾಗುವುದರಲ್ಲಿ ಎರಡು ಮಾತಿಲ್ಲ. ಅಧಿಕಾರಿಗಳು ಈ ಆದೇಶವನ್ನು ಸಮರ್ಪಕವಾಗಿ ಜಾರಿಗೊಳಿಸುವ ಬಗ್ಗೆ ನಿಗಾ ವಹಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಭಾರತದಲ್ಲಿ ಕೆಲವು ರಾಜಕಾರಣಿಗಳು ಹಾಗೂ ಅಧಿಕಾರಿಗಳು ಈಗಾಗಲೇ ಎಲೆಕ್ಟ್ರಿಕ್ ವಾಹನಗಳನ್ನು ಬಳಸಿ ಇತರರಿಗೆ ಮಾದರಿಯಾಗಿದ್ದಾರೆ.

ಇದರಿಂದ ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿ, ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೆಚ್ಚಲಿದೆ. ಆದರೆ ಎಲೆಕ್ಟ್ರಿಕ್ ವಾಹನಗಳ ಬಳಕೆಯಲ್ಲಿ ಭಾರತವು ಚೀನಾ ಹಾಗೂ ಕೆಲವು ಯುರೋಪಿಯನ್ ರಾಷ್ಟ್ರಗಳಂತೆ ಇನ್ನೂ ಅಭಿವೃದ್ಧಿ ಹೊಂದಿಲ್ಲ ಎಂಬುದು ಗಮನಾರ್ಹ. ಆದರೂ ಮುಂಬರುವ ವರ್ಷಗಳಲ್ಲಿ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಗಣನೀಯವಾಗಿ ಹೆಚ್ಚಾಗುವ ನಿರೀಕ್ಷೆಗಳಿವೆ.

ಕೇಂದ್ರ ಸರ್ಕಾರ ಹಾಗೂ ವಿವಿಧ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿವೆ. ಈಗ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿಯನ್ನು ನೀಡಲಾಗುತ್ತಿದೆ. ರಸ್ತೆ ತೆರಿಗೆಯಿಂದ ವಿನಾಯಿತಿ ಹಾಗೂ ನೋಂದಣಿ ಶುಲ್ಕದಿಂದ ವಿನಾಯಿತಿಯಂತಹ ಹಲವು ಕೊಡುಗೆಗಳನ್ನು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ನೀಡಲಾಗುತ್ತಿದೆ.

ಈ ರೀತಿಯ ಕೊಡುಗೆಗಳಿಂದ ಹಾಗೂ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿರುವ ಕಾರಣ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಮುಂದಾಗುತ್ತಿದ್ದಾರೆ. ಭಾರತದಲ್ಲಿ ಸದ್ಯಕ್ಕೆ ಎಲೆಕ್ಟ್ರಿಕ್ ಸ್ಕೂಟರ್‌ಗಳು ಹೆಚ್ಚು ಮಾರಾಟವಾಗುತ್ತಿವೆ. ಆದರೆ ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಬೈಕ್ ಹಾಗೂ ಎಲೆಕ್ಟ್ರಿಕ್ ಕಾರುಗಳ ಬಳಕೆ ತೀರಾ ಕಡಿಮೆ ಎಂದೇ ಹೇಳಬಹುದು.

ಆದರೆ ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ಬೈಕ್ ಹಾಗೂ ಎಲೆಕ್ಟ್ರಿಕ್ ಕಾರು ಸೇರಿದಂತೆ ಎಲೆಕ್ಟ್ರಿಕ್ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ನಿರೀಕ್ಷೆಗಳಿವೆ. ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ತನ್ನ ಫೇಮ್ 2 ಯೋಜನೆಯಡಿಯಲ್ಲಿ ಸಬ್ಸಿಡಿ ನೀಡುತ್ತದೆ. ಇದರ ಜೊತೆಗೆ ದೆಹಲಿ ಹಾಗೂ ಗುಜರಾತ್ ನಂತಹ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ಸಬ್ಸಿಡಿ ನೀಡುತ್ತವೆ.

ಎಲೆಕ್ಟ್ರಿಕ್ ವಾಹನಗಳು ಪೂರ್ತಿಯಾಗಿ ಚಾರ್ಜ್ ಆದ ನಂತರ ಕಡಿಮೆ ದೂರ ಚಲಿಸುತ್ತವೆ ಎಂಬ ಕಾರಣಕ್ಕೆ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ಇದರ ಜೊತೆಗೆ ಇವಿ ಚಾರ್ಜಿಂಗ್ ಕೇಂದ್ರಗಳು ಸಹ ಸಾಕಷ್ಟು ಸಂಖ್ಯೆಯಲ್ಲಿಲ್ಲ. ವಾಹನ ಸವಾರರ ಆತಂಕವನ್ನು ನಿವಾರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇವಿ ಚಾರ್ಜಿಂಗ್ ಕೇಂದ್ರಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ತೆರೆಯಲು ಮುಂದಾಗುತ್ತಿವೆ.
ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.