ರಾಂಗ್ ಸೈಡ್ ಮೂಲಕ ರೋಗಿಯನ್ನು ಆಸ್ಪತ್ರೆಗೆ ಸೇರಿಸಿದ ಟ್ರಾಫಿಕ್ ಪೊಲೀಸರು

ಭಾರತದಲ್ಲಿ ವಾಹನಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಆದರೆ ಅದಕ್ಕೆ ಸರಿಯಾಗಿ ರಸ್ತೆಗಳನ್ನು ವಿಸ್ತರಿಸುತ್ತಿಲ್ಲ. ಇದರಿಂದಾಗಿ ಟ್ರಾಫಿಕ್ ಜಾಮ್‌ ಸಮಸ್ಯೆ ಉಂಟಾಗುತ್ತಿದೆ. ಕೆಲವೊಮ್ಮೆ ಆಂಬ್ಯುಲೆನ್ಸ್‌ಗಳು ಸಹ ಈ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿಕೊಳ್ಳುತ್ತವೆ.

ರಾಂಗ್ ಸೈಡ್ ಮೂಲಕ ರೋಗಿಯನ್ನು ಆಸ್ಪತ್ರೆಗೆ ಸೇರಿಸಿದ ಟ್ರಾಫಿಕ್ ಪೊಲೀಸರು

ಕೆಲವೊಮ್ಮೆ ಟ್ರಾಫಿಕ್ ಜಾಮ್‌ಗಳಿಗೆ ಪ್ರತಿಭಟನೆಗಳೂ ಸಹ ಕಾರಣವಾಗುತ್ತವೆ. ಈಗ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ದೆಹಲಿ ಹಾಗೂ ಸುತ್ತ ಮುತ್ತವಿರುವ ನಗರಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ರೈತರು ಭಾರತ್ ಬಂದ್'ಗೆ ಕರೆ ನೀಡಿದ ಸಂದರ್ಭದಲ್ಲಿ ಪ್ರತಿಭಟನಾಕಾರರು ರಸ್ತೆಗಳನ್ನು ತಡೆದ ಕಾರಣ ದೇಶದ ವಿವಿಧ ಭಾಗಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.

ರಾಂಗ್ ಸೈಡ್ ಮೂಲಕ ರೋಗಿಯನ್ನು ಆಸ್ಪತ್ರೆಗೆ ಸೇರಿಸಿದ ಟ್ರಾಫಿಕ್ ಪೊಲೀಸರು

ಹೈದರಾಬಾದ್'ನಲ್ಲಿಯೂ ಇದೇ ರೀತಿಯ ಪರಿಸ್ಥಿತಿ ಉಂಟಾಗಿತ್ತು. ಭಾರತ್ ಬಂದ್ ಸಂದರ್ಭದಲ್ಲಿ ಹೈದರಾಬಾದ್‌ನ ಯುವಕನೋರ್ವನ ತಾಯಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್ ಲಭ್ಯವಿರಲಿಲ್ಲ. ಇದರಿಂದ ಯುವಕನು ದ್ವಿಚಕ್ರ ವಾಹನದಲ್ಲಿಯೇ ತನ್ನ ತಾಯಿಯನ್ನು ವೈದ್ಯರ ಬಳಿಗೆ ಕರೆದೊಯ್ಯಲು ಮುಂದಾಗಿದ್ದಾನೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ರಾಂಗ್ ಸೈಡ್ ಮೂಲಕ ರೋಗಿಯನ್ನು ಆಸ್ಪತ್ರೆಗೆ ಸೇರಿಸಿದ ಟ್ರಾಫಿಕ್ ಪೊಲೀಸರು

ಆದರೆ ಭಾರತ್ ಬಂದ್‌ನಿಂದ ನಡೆಯುತ್ತಿದ್ದ ಪ್ರತಿಭಟನೆಯಿಂದಾಗಿ ಭಾರೀ ಸಂಚಾರ ದಟ್ಟಣೆ ಉಂಟಾಗಿತ್ತು. ಈ ಸಂಚಾರ ದಟ್ಟಣೆಯಲ್ಲಿ ಯುವಕ ಹಾಗೂ ಆತನ ತಾಯಿ ಸಿಕ್ಕಿಬಿದ್ದರು. ಯುವಕನ ತಾಯಿಯ ಆರೋಗ್ಯ ಹದಗೆಡುತ್ತಿದ್ದನ್ನು ಗಮನಿಸಿದ ಪೊಲೀಸರು ಯುವಕ ಹಾಗೂ ಆತನ ತಾಯಿಯ ನೆರವಿಗೆ ಧಾವಿಸಿದ್ದಾರೆ.

ಕ್ಲಾಸಿಕ್ ಬೈಕ್ ಪ್ರಿಯರಿಗಾಗಿ ಬಿಡುಗಡೆಯಾದ ರಾಯಲ್ ಎನ್‌ಫೀಲ್ಡ್ ಹೊಸ ಮಿಟಿಯೊರ್ 350 ಹೇಗಿದೆ? ಈ ವಿಡಿಯೋ ನೋಡಿ..

ಸಾಯಿ ತೇಜ ಎಂಬ ಯುವಕನ ತಾಯಿ ಭಾರತಿ ಬೆಳಿಗ್ಗೆ 9 ಗಂಟೆಗೆ ಮೂರ್ಛೆ ಹೋದರು. ತಕ್ಷಣವೇ ಆತ ಹತ್ತಿರದಲ್ಲಿರುವ ಆಸ್ಪತ್ರೆಯ ಆಂಬ್ಯುಲೆನ್ಸ್'ಗೆ ಕರೆ ಮಾಡಿದ್ದಾನೆ. ಮತ್ತೊಮ್ಮೆ ಕರೆ ಮಾಡಿದಾಗ ಆಂಬ್ಯುಲೆನ್ಸ್ ರೋಗಿಯನ್ನು ಕರೆತರಲು ಹೊರಟಿದೆ ಎಂದು ಹೇಳಿದ್ದಾರೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ರಾಂಗ್ ಸೈಡ್ ಮೂಲಕ ರೋಗಿಯನ್ನು ಆಸ್ಪತ್ರೆಗೆ ಸೇರಿಸಿದ ಟ್ರಾಫಿಕ್ ಪೊಲೀಸರು

ಸಾಯಿ ತೇಜ ಹಲವು ಆಸ್ಪತೆಗಳ ಆಂಬ್ಯುಲೆನ್ಸ್'ಗಳಿಗೆ ಕರೆ ಮಾಡಿದ್ದಾನೆ. ಎಷ್ಟು ಹೊತ್ತಾದರೂ ಆಂಬ್ಯುಲೆನ್ಸ್ ಬಾರದ ಕಾರಣ ಬೇರೆ ದಾರಿಯಿಲ್ಲದೆ ತನ್ನ ತಾಯಿಯನ್ನು ದ್ವಿಚಕ್ರ ವಾಹನದಲ್ಲಿಯೇ ಆಸ್ಪತ್ರೆಗೆ ಕರೆದೊಯ್ದಿದ್ದಾನೆ.

ರಾಂಗ್ ಸೈಡ್ ಮೂಲಕ ರೋಗಿಯನ್ನು ಆಸ್ಪತ್ರೆಗೆ ಸೇರಿಸಿದ ಟ್ರಾಫಿಕ್ ಪೊಲೀಸರು

ಆದರೆ ಆತನಿಗೆ ಪ್ರತಿಭಟನೆಯಿಂದಾಗಿ ಸಂಚಾರ ದಟ್ಟಣೆ ಉಂಟಾದ ಬಗ್ಗೆ ತಿಳಿದಿರಲಿಲ್ಲ. ಇದರಿಂದಾಗಿ ಟ್ರಾಫಿಕ್ ಜಾಮ್'ನಲ್ಲಿ ಸಿಲುಕಿದ್ದಾನೆ. ಈ ಬಗ್ಗೆ ಮಾತನಾಡಿರುವ ಸಾಯಿ ತೇಜ, ರಸ್ತೆ ಅಪಘಾತದಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿರಬಹುದು ಎಂದು ನಾನು ಭಾವಿಸಿದ್ದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ರಾಂಗ್ ಸೈಡ್ ಮೂಲಕ ರೋಗಿಯನ್ನು ಆಸ್ಪತ್ರೆಗೆ ಸೇರಿಸಿದ ಟ್ರಾಫಿಕ್ ಪೊಲೀಸರು

ಆದರೆ ಪ್ರತಿಭಟನೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದ್ದ ಕಾರಣಕ್ಕೆ ಯಾವುದೇ ವಾಹನಗಳು ಚಲಿಸುತ್ತಿರಲಿಲ್ಲ ಎಂದು ನಂತರ ತಿಳಿಯಿತು ಎಂದು ಹೇಳಿದ್ದಾನೆ. ತನ್ನ ತಾಯಿಯ ಆರೋಗ್ಯ ಹದಗೆಡುತ್ತಿದ್ದ ಕಾರಣ ಸಾಯಿ ತೇಜ ಟ್ರಾಫಿಕ್ ಪೊಲೀಸರ ನೆರವನ್ನು ಕೋರಿದ್ದಾನೆ.

ರಾಂಗ್ ಸೈಡ್ ಮೂಲಕ ರೋಗಿಯನ್ನು ಆಸ್ಪತ್ರೆಗೆ ಸೇರಿಸಿದ ಟ್ರಾಫಿಕ್ ಪೊಲೀಸರು

ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಸಾಯಿ ತೇಜ ಅವರ ತಾಯಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಕಂಟ್ರೋಲ್ ರೂಂನಿಂದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ರಾಂಗ್ ಸೈಡ್ ಮೂಲಕ ರೋಗಿಯನ್ನು ಆಸ್ಪತ್ರೆಗೆ ಸೇರಿಸಿದ ಟ್ರಾಫಿಕ್ ಪೊಲೀಸರು

ಘಟನಾ ಸ್ಥಳಕ್ಕೆ ತೆರಳಿ ಸಾಯಿ ತೇಜ ಹಾಗೂ ಆತನ ತಾಯಿಯನ್ನು ರಸ್ತೆಯ ಎದುರು ಭಾಗಕ್ಕೆ ಸ್ಥಳಾಂತರಿಸಿದ್ದಾರೆ. ನಂತರ ಅಲ್ಲಿನ ಸಂಚಾರ ದಟ್ಟಣೆಯನ್ನು ಸರಿಪಡಿಸಿ ಆಸ್ಪತ್ರೆಗೆ ಹೋಗಲು ವ್ಯವಸ್ಥೆ ಮಾಡಿದ್ದಾರೆ.

ರಾಂಗ್ ಸೈಡ್ ಮೂಲಕ ರೋಗಿಯನ್ನು ಆಸ್ಪತ್ರೆಗೆ ಸೇರಿಸಿದ ಟ್ರಾಫಿಕ್ ಪೊಲೀಸರು

ಇದರಿಂದಾಗಿ ಪೊಲೀಸರೇ ರಾಂಗ್ ಸೈಡ್'ನಲ್ಲಿ ರೋಗಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಆಂಬ್ಯುಲೆನ್ಸ್ ಟ್ರಾಫಿಕ್ ಜಾಮ್'ನಲ್ಲಿ ಸಿಲುಕಿದ್ದ ಬಗ್ಗೆ ಹಲವಾರು ಜನರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Traffic cops helps techie to take his mom to hospital on two wheeler. Read in Kannada.
Story first published: Saturday, December 12, 2020, 12:02 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X