ಅಪಘಾತಗಳಿಗೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ಕೇಂದ್ರ ಸಾರಿಗೆ ಇಲಾಖೆ

ವಿಶ್ವದ ಅತಿಹೆಚ್ಚು ಅಪಘಾತಗಳು ಸಂಭವಿಸುವ ದೇಶಗಳಲ್ಲಿ ಭಾರತವು ಇದ್ದು, ಇದಕ್ಕೆ ಉತ್ತಮ ಉದಾಹರಣೆಯೆಂಬಂತೆ ಇತ್ತೀಚಿನ ವರದಿಯೊಂದು ಪು‍ಷ್ಠಿ ನೀಡಿದೆ. ಕಳೆದ ಕೆಲವು ವರ್ಷಗಳಿಂದ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿರುವ ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಬಹಿರಂಗಪಡಿಸಿದೆ.

ಉದಾಹರಣೆಗೆ 2021 ರಲ್ಲಿ ಒಟ್ಟು ರಸ್ತೆ ಅಪಘಾತಗಳಲ್ಲಿ ದ್ವಿಚಕ್ರ ವಾಹನ ಸವಾರರ ಸಾವಿನ ಪಾಲು ಶೇಕಡಾ 45.1 ರಷ್ಟಿತ್ತು, ಈ ಅಂಕಿ ಅಂಶಗಳು ಸರ್ಕಾರವು ಈ ವಿಷಯದ ಬಗ್ಗೆ ವಾರ್ಷಿಕ ವರದಿಯನ್ನು ಪ್ರಕಟಿಸಲು ಪ್ರಾರಂಭಿಸಿದ ನಂತರ ಅತ್ಯಧಿಕವಾಗಿದೆ. ದ್ವಿಚಕ್ರ ವಾಹನ ಅಪಘಾತಗಳು 2019 ರಲ್ಲಿ ಶೇ 37.1 ರಷ್ಟಿದ್ದು, 56,136 ಸಾವುಗಳು ಸಂಭವಿಸಿವೆ. 2021 ರಲ್ಲಿ ಈ ಅಂಕಿ ಅಂಶವು 69,635 ರಷ್ಟಕ್ಕೆ ಏರಿದೆ.

 ಅಪಘಾತಗಳಿಗೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ಕೇಂದ್ರ ಸಾರಿಗೆ ಇಲಾಖೆ

ಅಂದರೆ ಒಟ್ಟು ರಸ್ತೆ ಅಪಘಾತಗಳು ಶೇ 45.1% ರಷ್ಟು ಹೆಚ್ಚಾಗಿವೆ. ಇನ್ನು ಪಾದಚಾರಿಗಳ ಸಾವಿನ ಸಂಖ್ಯೆಯು 2019 ರಲ್ಲಿ 25,858 (ರಸ್ತೆಯಲ್ಲಿನ ಒಟ್ಟು ಸಾವುಗಳು ಶೇ 17.1) ನಿಂದ ಕಳೆದ ವರ್ಷ 29,124 ಸಾವುಗಳಿಗೆ ಏರಿದೆ. ಕಳೆದ ವರ್ಷ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ ಒಟ್ಟು 69,385 ದ್ವಿಚಕ್ರ ವಾಹನ ಸವಾರರ ಪೈಕಿ ಸುಮಾರು 47,000 ಜನರು ಹೆಲ್ಮೆಟ್ ಧರಿಸಿರಲಿಲ್ಲ ಎಂದು ವರದಿ ತಿಳಿಸಿದೆ.

ಅಪಘಾತದಲ್ಲಿ ಸಾವನ್ನಪ್ಪಿದ ಸವಾರರ ಪಾಲು ಪಿಲಿಯನ್ ಸವಾರರಿಗಿಂತ ಸುಮಾರು ಎರಡೂವರೆ ಪಟ್ಟು ಹೆಚ್ಚು, ಕಳೆದ ವರ್ಷ 13,716 ಪಿಲಿಯನ್ ಸವಾರರು ಸಾವನ್ನಪ್ಪಿದರೆ 32,877 ದ್ವಿಚಕ್ರ ವಾಹನ ಸವಾರರು ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಹೆಲ್ಮೆಟ್ ಧರಿಸದ ಕಾರಣ ಉತ್ತರ ಪ್ರದೇಶದಲ್ಲಿ ದ್ವಿಚಕ್ರ ವಾಹನ ಅಪಘಾತಗಳಲ್ಲಿ 6,445 ಸಾವುಗಳಾಗಿವೆ ಎಂದು ವರಿದಿ ತಿಳಿಸಿದೆ. ತಮಿಳುನಾಡಿನಲ್ಲಿ ಇಂತಹ 5,888 ಸಾವುಗಳು ದಾಖಲಾಗಿದ್ದರೆ, ಮಹಾರಾಷ್ಟ್ರದಲ್ಲಿ 4,966 ಸಾವುಗಳು ದಾಖಲಾಗಿವೆ.

 ಅಪಘಾತಗಳಿಗೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ಕೇಂದ್ರ ಸಾರಿಗೆ ಇಲಾಖೆ

ಇಂತಹ ಮಾರಣಾಂತಿಕ ಅಪಘಾತಗಳ ಹಿಂದೆ ಅತಿವೇಗವು ಹೆಚ್ಚು ವ್ಯಾಪಕವಾದ ಕಾರಣವಾಗಿದ್ದು, ತಪ್ಪಾದ ಲೇನ್ / ಸೈಡ್ ಡ್ರೈವಿಂಗ್, ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಕೆ, ಕುಡಿದು ವಾಹನ ಚಲಾಯಿಸುವುದು ಮತ್ತು ಟ್ರಾಫಿಕ್ ಸಿಗ್ನಲ್‌ಗಳನ್ನು ಜಂಪ್ ಮಾಡುವುದಾಗಿದೆ ಎಂದು ವರದಿ ಹೇಳಿದೆ. ಒಂದು ಅಂದಾಜಿನ ಪ್ರಕಾರ, ದೇಶದಲ್ಲಿ ಪ್ರತಿ ಗಂಟೆಗೆ 53 ರಸ್ತೆ ಅಪಘಾತಗಳು ಸಂಭವಿಸುತ್ತಿವೆ ಮತ್ತು ಪ್ರತಿ ನಾಲ್ಕು ನಿಮಿಷಗಳಿಗೊಮ್ಮೆ ಒಬ್ಬ ವ್ಯಕ್ತಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾನೆ.

ಭಾರತದಲ್ಲಿ ಅತಿ ಹೆಚ್ಚು ರಸ್ತೆ ಅಪಘಾತಗಳು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸುತ್ತಿವೆ. ಅಂಕಿಅಂಶಗಳ ಪ್ರಕಾರ ದ್ವಿಚಕ್ರ ವಾಹನ ಚಾಲಕರೇ ರಸ್ತೆ ಅಪಘಾತಗಳಲ್ಲಿ ಹೆಚ್ಚಾಗಿ ಸಾವನ್ನಪ್ಪುತ್ತಿದ್ದಾರೆ. ರಸ್ತೆಯಲ್ಲಿ ದ್ವಿಚಕ್ರ ವಾಹನ ಚಾಲಕರ ಸುರಕ್ಷತೆಯನ್ನು ಹೆಚ್ಚಿಸಲು ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಈಗ 150 ಸಿಸಿ ಅಥವಾ ಅದಕ್ಕಿಂತ ಹೆಚ್ಚಿನ ಎಂಜಿನ್ ಸಾಮರ್ಥ್ಯದ ದ್ವಿಚಕ್ರ ವಾಹನಗಳಿಗೆ ಸ್ಟ್ಯಾಂಡರ್ಡ್ ಫಿಟ್ಮೆಂಟ್ ಆಗಿ ಎಬಿಎಸ್ ಬ್ರೇಕಿಂಗ್ ಕಡ್ಡಾಯ ಮಾಡಲಾಗಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಇನ್ನು 125 ಸಿಸಿ ಅಥವಾ ಅದಕ್ಕಿಂತ ಕಡಿಮೆ ಸಾಮರ್ಥ್ಯದ ದ್ವಿಚಕ್ರ ವಾಹನಗಳಲ್ಲಿ ಕಾಂಬಿ ಬ್ರೇಕ್ ಸಿಸ್ಟಮ್ (ಸಿಬಿಎಸ್) ಅನ್ನು ಒದಗಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇದಲ್ಲದೆ, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ದಂಡವನ್ನು ಹೆಚ್ಚಿಸಿದೆ. ರಸ್ತೆ ಮತ್ತು ವಾಹನ ಶಿಕ್ಷಣ, ಎಂಜಿನಿಯರಿಂಗ್, ಕಾನೂನು ಮತ್ತು ತುರ್ತು ಆರೈಕೆಯ ಆಧಾರದ ಮೇಲೆ ರಸ್ತೆ ಸುರಕ್ಷತೆಯ ಸಮಸ್ಯೆಯನ್ನು ಪರಿಹರಿಸಲು ಸಾರಿಗೆ ಸಚಿವಾಲಯವು ಬಹು ಆಯಾಮದ ಕಾರ್ಯತಂತ್ರವನ್ನು ರೂಪಿಸಿದೆ ಎಂದು ಈ ಹಿಂದೆಯೇ ಗಡ್ಕರಿ ಹೇಳಿದ್ದರು.

ಎಲ್ಲಾ ಕಾರುಗಳಲ್ಲಿ ಆರು ಏರ್‌ಬ್ಯಾಗ್ ಕಡ್ಡಾಯ
ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರು ಎಲ್ಲಾ ಕಾರು ತಯಾರಕ ಕಂಪನಿಗಳು ತಮ್ಮ ಕಾರುಗಳಲ್ಲಿ ಕನಿಷ್ಠ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿರುವಂತೆ ಆದೇಶ ನೀಡಿದ್ದಾರೆ. ಎಂಟು ಪ್ರಯಾಣಿಕರನ್ನು ಹೊತ್ತೊಯ್ಯುವ ವಾಹನಗಳಲ್ಲಿ ಆರು ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸುವ ಕರಡು ಅಧಿಸೂಚನೆಯನ್ನು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಅನುಮೋದಿಸಿತ್ತು. ಸಂಸತ್ತಿನಲ್ಲಿ ಇತ್ತೀಚಿನ ಪ್ರಕಟಣೆಯು ಟೈಮ್‌ಲೈನ್ ಅನ್ನು ನೀಡದಿದ್ದರೂ, ಹೊಸ ಕಾರುಗಳನ್ನು (ಅಕ್ಟೋಬರ್ 1, 2022 ರಿಂದ ತಯಾರಿಸಿದರೆ) ಹೊಸ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ ಎಂದು ಕರಡು ಅಧಿಸೂಚನೆಯಲ್ಲಿ ಹೇಳಲಾಗಿದೆ.

Most Read Articles

Kannada
English summary
Transport department revealed shocking information regarding accidents
Story first published: Friday, December 30, 2022, 18:39 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X