ವಾಹನ ಚಾಲನೆ ವೇಳೆ ಮೊಬೈಲ್ ಬಳಸಿ ಅಪಘಾತಕ್ಕೆ ಕಾರಣನಾದ ಟ್ರಕ್ ಚಾಲಕ

ಸಂಚಾರ ನಿಯಮಗಳನ್ನು ಉಲ್ಲಂಘಿಸುವುದರಿಂದ, ಕುಡಿದು ವಾಹನ ಚಾಲನೆ ಮಾಡುವುದರಿಂದ ಅಪಘಾತಗಳು ಸಂಭವಿಸುತ್ತವೆ. ಇವುಗಳ ಜೊತೆಗೆ ವಾಹನ ಚಾಲನೆ ವೇಳೆ ಮೊಬೈಲ್ ಬಳಸುವುದು ಸಹ ಅಪಘಾತಗಳಿಗೆ ಕಾರಣವಾಗುತ್ತದೆ.

ವಾಹನ ಚಾಲನೆ ವೇಳೆ ಮೊಬೈಲ್ ಬಳಸಿ ಅಪಘಾತಕ್ಕೆ ಕಾರಣನಾದ ಟ್ರಕ್ ಚಾಲಕ

ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರ ವರೆಗೆ ಎಲ್ಲರೂ ಮೊಬೈಲ್ ಫೋನ್'ಗಳಿಗೆ ವ್ಯಸನಿಯಾಗಿದ್ದಾರೆ. ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಫೋನ್'ಗಳನ್ನು ಬಳಸುತ್ತಲೇ ಇರುತ್ತೇವೆ. ವಾಹನ ಚಾಲನೆ ವೇಳೆ ಮೊಬೈಲ್ ಫೋನ್ ಬಳಕೆ ಅಪಾಯಕಾರಿ ಎಂದು ಪೊಲೀಸರು ಎಚ್ಚರಿಕೆ ನೀಡುತ್ತಲೇ ಇರುತ್ತಾರೆ.

ವಾಹನ ಚಾಲನೆ ವೇಳೆ ಮೊಬೈಲ್ ಬಳಸಿ ಅಪಘಾತಕ್ಕೆ ಕಾರಣನಾದ ಟ್ರಕ್ ಚಾಲಕ

ಜೊತೆಗೆ ವಾಹನ ಚಾಲನೆ ವೇಳೆ ಮೊಬೈಲ್ ಫೋನ್ ಬಳಸುವವರಿಗೆ ದಂಡ ವಿಧಿಸುತ್ತಲೇ ಇರುತ್ತಾರೆ. ಆದರೂ ಜನರು ವಾಹನ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸುತ್ತಲೇ ಇದ್ದಾರೆ. ಈ ಲೇಖನದಲ್ಲಿ ವಾಹನ ಚಾಲನೆ ವೇಳೆ ಮೊಬೈಲ್ ಫೋನ್ ಬಳಸಿದ ಕಾರಣಕ್ಕೆ ಸಂಭವಿಸಿದ ಅಪಘಾತದ ಬಗೆಗಿನ ಮಾಹಿತಿಯನ್ನು ನೋಡೋಣ.

ವಾಹನ ಚಾಲನೆ ವೇಳೆ ಮೊಬೈಲ್ ಬಳಸಿ ಅಪಘಾತಕ್ಕೆ ಕಾರಣನಾದ ಟ್ರಕ್ ಚಾಲಕ

ಮೊಬೈಲ್ ಬಳಸಿ ವಾಹನ ಚಲಾಯಿಸುವುದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಸಸೆಕ್ಸ್ ಪೊಲೀಸರು ಈ ವೀಡಿಯೊವನ್ನು ಅಪ್ ಲೋಡ್ ಮಾಡಿದ್ದಾರೆ.

ವಾಹನ ಚಾಲನೆ ವೇಳೆ ಮೊಬೈಲ್ ಬಳಸಿ ಅಪಘಾತಕ್ಕೆ ಕಾರಣನಾದ ಟ್ರಕ್ ಚಾಲಕ

ಈ ಘಟನೆ ನಡೆದಿರುವುದು ಇಂಗ್ಲೆಂಡಿನಲ್ಲಿ. ಸೀಫೋರ್ಡ್ ಮೂಲದ 52 ವರ್ಷದ ಟ್ರಕ್ ಚಾಲಕನೊಬ್ಬ ಈ ಅಪಘಾತದಲ್ಲಿ ಭಾಗಿಯಾಗಿದ್ದಾನೆ. ಆತನಿಗೆ ಇಂಗ್ಲೆಂಡ್ ಪೊಲೀಸರು ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದಾರೆ.

ವಾಹನ ಚಾಲನೆ ವೇಳೆ ಮೊಬೈಲ್ ಬಳಸಿ ಅಪಘಾತಕ್ಕೆ ಕಾರಣನಾದ ಟ್ರಕ್ ಚಾಲಕ

ಟ್ರಕ್ ಚಾಲನೆ ಮಾಡುವಾಗ ಆತ ಮೊಬೈಲ್ ಬಳಸಿದ್ದಾನೆ. ಮೊಬೈಲ್ ಫೋನ್'ನಲ್ಲಿ ಮಗ್ನನಾಗಿದ್ದ ಆತ ಟ್ರಕ್ ಅನ್ನು ಅತಿ ವೇಗವಾಗಿ ಚಾಲನೆ ಮಾಡಿದ್ದಾನೆ. ಟ್ರಕ್ ಚಾಲನೆ ಮಾಡುತ್ತಾ ಮತ್ತೊಂದು ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾನೆ.

ವಾಹನ ಚಾಲನೆ ವೇಳೆ ಮೊಬೈಲ್ ಬಳಸಿ ಅಪಘಾತಕ್ಕೆ ಕಾರಣನಾದ ಟ್ರಕ್ ಚಾಲಕ

ಆತನ ಗಮನವೆಲ್ಲಾ ಮೊಬೈಲ್ ಫೋನ್ ಮೇಲೆ ಇದ್ದ ಕಾರಣ ಈ ಅಪಘಾತ ಸಂಭವಿಸಿದೆ. ಮತ್ತೊಂದು ಟ್ರಕ್ ಆತ ಚಾಲನೆ ಮಾಡುತ್ತಿದ್ದ ಟ್ರಕ್ ಮುಂದೆಯೇ ಸಾಗುತ್ತಿದ್ದರೂ ಆತನಿಗೆ ಅಪಘಾತವನ್ನು ತಪ್ಪಿಸಲು ಸಾಧ್ಯವಾಗಿಲ್ಲ.

ವಾಹನ ಚಾಲನೆ ವೇಳೆ ಮೊಬೈಲ್ ಬಳಸಿ ಅಪಘಾತಕ್ಕೆ ಕಾರಣನಾದ ಟ್ರಕ್ ಚಾಲಕ

ಆ ಟ್ರಕ್ ಬಹಳ ಹತ್ತಿರಕ್ಕೆ ಬಂದ ನಂತರವೇ ಆತನಿಗೆ ಪರಿಸ್ಥಿತಿಯ ಅರಿವಾಗಿದೆ. ಒಂದು ಕೈಯಲ್ಲಿ ಮೊಬೈಲ್ ಮತ್ತೊಂದು ಕೈಯಲ್ಲಿ ಸ್ಟೀಯರಿಂಗ್ ಹಿಡಿದು ಆತ ಟ್ರಕ್ ಚಾಲನೆ ಮಾಡುತ್ತಿದ್ದ.

ಅಪಘಾತವಾಗುವ ಸಂದರ್ಭದಲ್ಲಿ ಸೀಲ್ ಬೆಲ್ಟ್ ತೆಗೆದಿದ್ದಾನೆ. ಆದರೆ ಅಷ್ಟರಲ್ಲಿ ಗಂಭೀರ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಮೂವರು ಗಂಭೀರವಾಗಿಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಹನ ಚಾಲನೆ ವೇಳೆ ಮೊಬೈಲ್ ಬಳಸಿ ಅಪಘಾತಕ್ಕೆ ಕಾರಣನಾದ ಟ್ರಕ್ ಚಾಲಕ

ಜನರು ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಮೊಬೈಲ್ ಫೋನ್ ಬಳಸದೇ ಇರಲಿ ಎಂಬ ಕಾರಣಕ್ಕೆ ಹಾಗೂ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಅಲ್ಲಿನ ಪೊಲೀಸರು ಈ ವೀಡಿಯೊವನ್ನು ಯುಟ್ಯೂಬ್'ನಲ್ಲಿ ಅಪ್ ಲೋಡ್ ಮಾಡಿದ್ದಾರೆ.

Most Read Articles

Kannada
English summary
Truck driver uses mobile while driving and crashes with another truck. Read in Kannada.
Story first published: Thursday, July 29, 2021, 19:44 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X