ಓವರ್ ಟೇಕ್ ಮಾಡುವ ಭರದಲ್ಲಿ ಮುಂದಿದ್ದ ಕಾರಿಗೆ ಡಿಕ್ಕಿ ಹೊಡೆದ ಟ್ರಕ್

ಪ್ರಪಂಚದಲ್ಲಿ ಹೆಚ್ಚು ಅಪಘಾತಗಳು ಸಂಭವಿಸುವ ದೇಶಗಳಲ್ಲಿ ಭಾರತವೂ ಸಹ ಒಂದು. ಭಾರತದಲ್ಲಿ ಪ್ರತಿದಿನ ಸಾವಿರಾರು ಅಪಘಾತಗಳು ಸಂಭವಿಸುತ್ತವೆ. ಅಪಘಾತಗಳ ಸಂಖ್ಯೆಯನ್ನು ತಗ್ಗಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಓವರ್ ಟೇಕ್ ಮಾಡುವ ಭರದಲ್ಲಿ ಮುಂದಿದ್ದ ಕಾರಿಗೆ ಡಿಕ್ಕಿ ಹೊಡೆದ ಟ್ರಕ್

ಆದರೂ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿರುವುದೇ ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ. ಇತ್ತೀಚಿಗೆ ಕೇರಳದಲ್ಲಿ ನಡೆದ ಘಟನೆಯೊಂದು ಇದಕ್ಕೆ ಪುಷ್ಟಿ ನೀಡುತ್ತದೆ.

ಓವರ್ ಟೇಕ್ ಮಾಡುವ ಭರದಲ್ಲಿ ಮುಂದಿದ್ದ ಕಾರಿಗೆ ಡಿಕ್ಕಿ ಹೊಡೆದ ಟ್ರಕ್

ಕೇರಳದಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದ ಕಾರೊಂದಕ್ಕೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಈ ಘಟನೆ ಕೇರಳ ರಾಜ್ಯದ ಯಾವ ಭಾಗದಲ್ಲಿ ಸಂಭವಿಸಿತು ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ.

ಓವರ್ ಟೇಕ್ ಮಾಡುವ ಭರದಲ್ಲಿ ಮುಂದಿದ್ದ ಕಾರಿಗೆ ಡಿಕ್ಕಿ ಹೊಡೆದ ಟ್ರಕ್

ಕೇರಳದಲ್ಲಿರುವ ಬಹುತೇಕ ರಸ್ತೆಗಳು ಕಿರಿದಾಗಿದ್ದು ಅಂಕು ಡೊಂಕಾಗಿವೆ. ಆದರೆ ಈ ಅಪಘಾತ ನೇರ ರಸ್ತೆಯಲ್ಲಿಯೇ ಸಂಭವಿಸಿದೆ. ಮುಂದೆ ಚಲಿಸುತ್ತಿದ್ದ ಕಾರ್ ಅನ್ನು ಹಿಂದಿಕ್ಕುವ ಭರದಲ್ಲಿ ಟ್ರಕ್ ಕಾರಿಗೆ ಡಿಕ್ಕಿ ಹೊಡೆದಿದೆ.

ಓವರ್ ಟೇಕ್ ಮಾಡುವ ಭರದಲ್ಲಿ ಮುಂದಿದ್ದ ಕಾರಿಗೆ ಡಿಕ್ಕಿ ಹೊಡೆದ ಟ್ರಕ್

ಮಾರುತಿ ಆಲ್ಟೊ ಕಾರು ರಸ್ತೆಯ ಬದಿಯಲ್ಲಿ ಮಧ್ಯಮ ವೇಗದಲ್ಲಿ ಹೋಗುತ್ತಿದ್ದಾಗ ಅದನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸಿದ ಟ್ರಕ್ ಮುಂದೆ ಮತ್ತೊಂದು ಟ್ರಕ್ ಬಂದ ಕಾರಣ ಓವರ್ ಟೇಕ್ ಮಾಡಲು ಸಾಧ್ಯವಾಗದೇ ಹಿಂದಕ್ಕೆ ಹೋಗಲು ಪ್ರಯತ್ನಿಸಿದೆ.

ಓವರ್ ಟೇಕ್ ಮಾಡುವ ಭರದಲ್ಲಿ ಮುಂದಿದ್ದ ಕಾರಿಗೆ ಡಿಕ್ಕಿ ಹೊಡೆದ ಟ್ರಕ್

ಟ್ರಕ್ ತನ್ನ ಹಾದಿಯನ್ನು ಬಿಟ್ಟು ರಾಂಗ್ ಸೈಡ್'ನಲ್ಲಿ ಸಾಗಲು ಮುಂದಾದಾಗ ಮತ್ತೊಂದು ಟ್ರಕ್ ಬಂದಿದೆ. ಆ ಟ್ರಕ್'ಗೆ ದಾರಿ ಮಾಡಿಕೊಡಲು ಆಲ್ಟೊ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ.

ಓವರ್ ಟೇಕ್ ಮಾಡುವ ಭರದಲ್ಲಿ ಮುಂದಿದ್ದ ಕಾರಿಗೆ ಡಿಕ್ಕಿ ಹೊಡೆದ ಟ್ರಕ್

ಡಿಕ್ಕಿಯ ರಭಸಕ್ಕೆ ಕಾರು ಬಲದಿಂದ ಎಡಕ್ಕೆ ತಿರುಗಿದೆ. ಕಾರು ತಿರುಗಿದಾಗ ಅದೇ ಹಾದಿಯಲ್ಲಿ ಸಾಗಿ ಬಂದ ಮತ್ತೊಂದು ಟ್ರಕ್ ಕಾರಿನ ಮುಂಭಾಗವನ್ನು ಉಜ್ಜಿಕೊಂಡು ಮುಂದೆ ಸಾಗಿದೆ.

ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆಲ್ಟೊ ಕಾರಿನ ಒಳಗಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಆಲ್ಟೊ ಕಾರಿನ ಮುಂಭಾಗ ಹಾಗೂ ಹಿಂಭಾಗಕ್ಕೆ ಸಣ್ಣ ಪುಟ್ಟ ಹಾನಿಯಾಗಿದೆ.

ಓವರ್ ಟೇಕ್ ಮಾಡುವ ಭರದಲ್ಲಿ ಮುಂದಿದ್ದ ಕಾರಿಗೆ ಡಿಕ್ಕಿ ಹೊಡೆದ ಟ್ರಕ್

ಈ ರೀತಿಯ ಅಪಘಾತಗಳನ್ನು ತಪ್ಪಿಸಲು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಸಣ್ಣ ಪುಟ್ಟ ತಪ್ಪುಗಳು ಸಹ ಪ್ರಾಣಕ್ಕೆ ಸಂಚಕಾರ ತರುತ್ತವೆ.

Most Read Articles

Kannada
English summary
Truck hits Alto car while overtaking. Read in Kannada.
Story first published: Friday, June 11, 2021, 17:02 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X