Just In
- 31 min ago
ಅನಾವರಣವಾಯ್ತು 2021ರ ಹ್ಯುಂಡೈ ಸೊನಾಟಾ ಎನ್ ಲೈನ್ ಪರ್ಫಾಮೆನ್ಸ್ ಕಾರು
- 2 hrs ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 4 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 14 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
Don't Miss!
- News
ವಿಜಯನಗರ ಜಿಲ್ಲೆ; ಮೇಲುಸ್ತುವಾರಿಗೆ ಐಎಎಸ್ ಅಧಿಕಾರಿ ನೇಮಕ
- Movies
ಉಪೇಂದ್ರ ನಟನೆಯ ಕಬ್ಜ ಚಿತ್ರಕ್ಕೆ ಎಂಟ್ರಿ ಕೊಟ್ಟ 'ಕುರುಕ್ಷೇತ್ರ'ದ ಭೀಮ
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮದುವೆ ವಾರ್ಷಿಕೋತ್ಸವಕ್ಕೆ ಪತಿಗೆ ವಿಶೇಷ ಉಡುಗೊರೆ ನೀಡಿದ ಕಿರುತೆರೆ ನಿರೂಪಕಿ
ಲಾಸ್ಯ ತೆಲಂಗಾಣ ರಾಜ್ಯದ ಮೆಟ್ಜಲ್-ಮಲ್ಕಜ್ಗಿರಿ ಜಿಲ್ಲೆಯವರು. ಅವರು ಜನಪ್ರಿಯ ಟಿವಿ ಚಾನೆಲ್‌ನಲ್ಲಿ ನಿರೂಪಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದರು. ಆದರೆ ಕೆಲವು ಕಾರಣಗಳಿಂದಾಗಿ ಅವರು ತಮ್ಮ ವೃತ್ತಿಜೀವನವನ್ನು ತೊರೆದರು.

ವೃತ್ತಿಜೀವನವನ್ನು ತೊರೆದ ನಂತರ ಅವರು ತಾವು ಪ್ರೀತಿಸಿದವರನ್ನು ಮದುವೆಯಾದರು. ಗಂಡ ಹಾಗೂ ಮಗುವಿನೊಂದಿಗೆ ಸುಖ ಸಂಸಾರ ನಡೆಸುತ್ತಿದ್ದರು. ಈ ಹಂತದಲ್ಲಿ ಅವರನ್ನು ತೆಲುಗಿನ ಬಿಗ್ ಬಾಸ್ ಸೀಸನ್ 4 ಭಾಗವಹಿಸಲು ಆಹ್ವಾನಿಸಲಾಯಿತು.

ಈ ಆಹ್ವಾನವನ್ನು ಒಪ್ಪಿಕೊಳ್ಳಬೇಕೆ, ಬೇಡವೇ ಎಂಬ ಗೊಂದಲದ ನಡುವೆ ಬಿಗ್ ಬಾಸ್ ಸೀಸನ್ 4ನಲ್ಲಿ ಭಾಗವಹಿಸಲು ಒಪ್ಪಿಗೆ ಸೂಚಿಸಿದರು. ಈ ಮೂಲಕ ಅವರು ಮತ್ತೆ ಕಿರುತೆರೆಗೆ ಕಾಲಿಟ್ಟರು.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಬಿಗ್ ಬಾಸ್ ನಲ್ಲಿದ್ದಷ್ಟು ದಿನ ಅವರು ತಮಗೆ ನಿರ್ವಹಿಸಿದ್ದ ಕಾರ್ಯವನ್ನು ಅಚ್ಚುಕಟ್ಟಾಗಿ ನಿಭಾಯಿಸಿದರು. ಈ ಕಾರ್ಯಕ್ರಮವು ಅವರಿಗೆ ತೆಲುಗು ಚಿತ್ರೋದ್ಯಮದಲ್ಲಿ ಗಮನಾರ್ಹ ಸಂಖ್ಯೆಯ ಅಭಿಮಾನಿ ಬಳಗವನ್ನು ಸೃಷ್ಟಿಸಿತು.

ಇದಾದ ನಂತರ ಅವರನ್ನು ವಿವಿಧ ಕಾರ್ಯಕ್ರಮಗಳಿಗೆ ಆಹ್ವಾನಿಸಲಾಯಿತು. ಇತ್ತೀಚಿಗೆ ಅವರು ತಮ್ಮ ಮದುವೆಯ ವಾರ್ಷಿಕೋತ್ಸವವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಗಂಡನಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ್ದಾರೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಅವರು ತಮ್ಮ ಗಂಡನಿಗೆ ಮಹೀಂದ್ರಾ ಎಕ್ಸ್‌ಯುವಿ 500 ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಲಾಸ್ಯ ಅವರ ಈ ಸರ್ಪ್ರೈಸ್ ಗಿಫ್ಟ್ ನಿಂದಾಗಿ ಅವರ ಪತಿ ಮಂಜುನಾಥ್ ಆನಂದ ಭಾಷ್ಪ ಸುರಿಸಿದ್ದಾರೆ.

ಈ ಮೂಲಕ ತಮ್ಮ ವಿವಾಹ ವಾರ್ಷಿಕೋತ್ಸವಕ್ಕೆ ಹೊಸ ಹುರುಪು ನೀಡಿದ್ದಾರೆ. ಕಿರುತೆರೆ ನಿರೂಪಕಿ ಲಾಸ್ಯ ತಮ್ಮ ಪತಿಗೆ ಉಡುಗೊರೆಯಾಗಿ ನೀಡಿರುವ ಮಹೀಂದ್ರಾ ಎಕ್ಸ್‌ಯುವಿ 500 ಕಾರಿನ ಬೆಲೆ ರೂ.16 ಲಕ್ಷಗಳಾಗಿದೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಈ ಕಾರು ರೂ.13.81 ಲಕ್ಷಗಳಿಂದ ರೂ.18.31 ಲಕ್ಷಗಳವರೆಗಿನ ಬೆಲೆಯನ್ನು ಹೊಂದಿದೆ. ಈ ಕಾರ್ ಅನ್ನು ಡಬ್ಲ್ಯು11, ಡಬ್ಲ್ಯು9, ಡಬ್ಲ್ಯು7 ಹಾಗೂ ಡಬ್ಲ್ಯು 5 ಎಂಬ ನಾಲ್ಕು ಮಾದರಿಗಳಲ್ಲಿ ಮಾರಾಟ ಮಾಡಲಾಗುತ್ತದೆ.

ಕೆಲವು ಹೆಚ್ಚುವರಿ ಐಷಾರಾಮಿ ಫೀಚರ್'ಗಳನ್ನು ಹೊಂದಿರುವ ಮಾದರಿಯನ್ನು ಲಾಸ್ಯ ತಮ್ಮ ಪತಿಗೆ ಉಡುಗೊರೆಯಾಗಿ ನೀಡಿದ್ದಾರೆ. ಈ ಘಟನೆಯು ತೆಲುಗು ಚಿತ್ರರಂಗದಲ್ಲಿ ಮಾತ್ರವಲ್ಲದೆ ಬಿಗ್ ಬಾಸ್ ಅಭಿಮಾನಿಗಳಲ್ಲಿಯೂ ವೈರಲ್ ಆಗಿದೆ.