6 ಲಕ್ಷದ ಶ್ರೀಸಾಮಾನ್ಯರ ಮಾರುತಿ ಸ್ವಿಫ್ಟ್ ಕಾರಿನಲ್ಲಿ ನಟ ದಳಪತಿ ವಿಜಯ್.. ವಿಡಿಯೋ ವೈರಲ್!
ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ ಹಾಗೂ ಖ್ಯಾತ ಚಲನಚಿತ್ರ ನಟ ದಳಪತಿ ವಿಜಯ್ (Thalapathy Vijay), ಸೋಮವಾರ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರನ್ನು ಭೇಟಿ ಮಾಡಿದರು. ಈ ವೇಳೆ, ರಾಜ್ಯದಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವ ಕುರಿತಂತೆ ಮನವಿ ಪತ್ರ ಸಲ್ಲಿಸಿದರು. ಅಣ್ಣಾ ವಿವಿಯಲ್ಲಿ ವಿದ್ಯಾರ್ಥಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ತಮಿಳುನಾಡಿನಾದ್ಯಂತ ತೀವ್ರ ಕೋಲಾಹಲ ಸೃಷ್ಟಿಸಿದೆ. ನಟ ವಿಜಯ್ ಅವರ ಈ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ ಕೆ.ಅಣ್ಣಾಮಲೈ ಕೂಡ ಸ್ವಾಗತಿಸಿದ್ದಾರೆ.
ಸದ್ಯ ನಟ ದಳಪತಿ ವಿಜಯ್ ಸಂಪೂರ್ಣ ರಾಜಕಾರಣಿಯಾಗಿ ಬದಲಾಗಿದ್ದು, ಸಿನಿಮಾದಿಂದ ಅಂತರ ಕಾಯ್ದುಕೊಂಡಿದ್ದಾರೆ. ಜೊತೆಗೆ ಬಡ ಹಾಗೂ ಮಧ್ಯಮ ವರ್ಗದ ಜನರ ಕಷ್ಟಗಳನ್ನು ಅರಿಯಲು ಮುಂದಾಗಿದ್ದಾರೆ. ವಿಶೇಷವೆಂದರೆ ಅವರ ಬಳಿ ಕೋಟಿ-ಕೋಟಿ ಬೆಲೆ ಬಾಳುವ ವಿವಿಧ ಐಷಾರಾಮಿ ಕಾರುಗಳಿದ್ದರೂ ಶ್ರೀಸಾಮಾನ್ಯರ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನಲ್ಲಿ ರಾಜಭವನಕ್ಕೆ ಆಗಮಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ದೇಶೀಯ ಗ್ರಾಹಕರ ಖರೀದಿಗೆ ಲಭ್ಯವಿರುವ ನೂತನ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ವಿಶೇಷತೆ ಬಗ್ಗೆ ಹೇಳುವುದಾದರೆ, ಇದೊಂದು ಹ್ಯಾಚ್‌ಬ್ಯಾಕ್ ಆಗಿದೆ. ರೂ.6.49 ಲಕ್ಷದಿಂದ ರೂ.9.60 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದ್ದು, ಎಲ್ಎಕ್ಸ್ಐ, ವಿಎಕ್ಸ್ಐ ಮತ್ತು ವಿಎಕ್ಸ್ಐ (ಒ) ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ.
ಈ ಮಾರುತಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್, 1.2-ಲೀಟರ್ 3-ಸಿಲಿಂಡರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ. 24.80 ರಿಂದ 32.85 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು.

ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಕಾರು 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್, ಯುಎಸ್‌ಬಿ ಟೈಪ್-ಎ & ಟೈಪ್-ಸಿ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಒಳಗೊಂಡಿದೆ.
ನಟ ದಳಪತಿ ವಿಜಯ್ ಹಲವು ದುಬಾರಿ ಕಾರುಗಳ ಮಾಲೀಕರಾಗಿದ್ದಾರೆ. ಅವರ ಮನೆಯಲ್ಲಿರುವ ಲೆಕ್ಸಸ್ ಎಲ್ಎಂ (Lexus LM), ರೂ.2 ಕೋಟಿಯಿಂದ ರೂ.2.50 ಕೋಟಿ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 2.5-ಲೀಟರ್ ಹೈಬ್ರಿಡ್ ಪೆಟ್ರೋಲ್ ಮತ್ತು ಇ-ಸಿವಿಟಿ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದ್ದು, 4/ 7 ಆಸನ ಆಯ್ಕೆ ವ್ಯವಸ್ಥೆ ಹಾಗೂ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ವಿಜಯ್ ಅವರು, ಐಷಾರಾಮಿ ರೋಲ್ಸ್ ರಾಯ್ಸ್ ಘೋಸ್ಟ್ (Rolls Royce Ghost) ಕಾರಿನ ಒಡೆಯರೂ ಆಗಿದ್ದಾರೆ. ಈ ಕಾರು ರೂ.6.95 ಕೋಟಿಯಿಂದ ರೂ.7.95 ಕೋಟಿ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 6.75-ಲೀಟರ್ ಟ್ವಿನ್ ಟರ್ಬೊ ವಿ12 ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.
ಇವುಗಳು ಮಾತ್ರವಲ್ಲದೆ, ನಟ ದಳಪತಿ ವಿಜಯ್ ಹತ್ತಾರು ಕಾರುಗಳ ಮಾಲೀಕರು ಸಹ ಆಗಿದ್ದಾರೆ. ಲ್ಯಾಂಡ್ ರೋವರ್ ರೇಂಜ್ ರೋವರ್ ಇವೊಕ್, ಬಿಎಂಡಬ್ಲ್ಯೂ ಐ7 ಎಕ್ಸ್‌ಡ್ರೈವ್ 60, ಆಡಿ ಎ8 ಎಲ್, ಬಿಎಂಡಬ್ಲ್ಯೂ 7-ಸೀರೀಸ್, ಬಿಎಂಡಬ್ಲ್ಯೂ ಎಕ್ಸ್6, ಮರ್ಸಿಡಿಸ್ ಬೆಂಜ್ ಜಿಎಲ್ಎ, ಬಿಎಂಡಬ್ಲ್ಯೂ-5 ಸೀರೀಸ್, ಫೋರ್ಡ್ ಮಸ್ಟಾಂಗ್, ಬಿಎಂಡಬ್ಲ್ಯೂ 3-ಸೀರೀಸ್, ವೊಲ್ವೋ ಎಕ್ಸ್‌ಸಿ90 ಹಾಗೂ ಮಿನಿ ಕೂಪರ್ ಎಸ್ ಒಳಗೊಂಡಂತೆ ವಿವಿಧ ಕಾರುಗಳು ಕೂಡ ಅವರ ಮನೆಗೆ ಗ್ಯಾರೇಜ್‌ನಲ್ಲಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications