ರಸ್ತೆ ಗುಂಡಿಗಳನ್ನು ಮುಚ್ಚಿದ ಟ್ರಾಫಿಕ್ ಕಾನ್‌ಸ್ಟೆಬಲ್‌ಗಳು

ಭಾರತದಲ್ಲಿ ಸಂಭವಿಸುವ ರಸ್ತೆ ಅಪಘಾತಗಳಿಗೆ ರಸ್ತೆ ಗುಂಡಿಗಳು ಹಾಗೂ ಹದಗೆಟ್ಟ ರಸ್ತೆಗಳು ಸಹ ಕಾರಣವಾಗಿವೆ. ರಸ್ತೆ ಗುಂಡಿಗಳಿಂದ ಸಂಚಾರ ದಟ್ಟಣೆ ಸಹ ಉಂಟಾಗುತ್ತದೆ. ಅದರಲ್ಲೂ ಮುಂಬಯಿಯಂತಹ ಮಹಾ ನಗರಗಳಲ್ಲಿ ಹೆಚ್ಚು ದಟ್ಟಣೆ ಉಂಟಾಗುತ್ತದೆ.

ರಸ್ತೆ ಗುಂಡಿಗಳನ್ನು ಮುಚ್ಚಿದ ಟ್ರಾಫಿಕ್ ಕಾನ್‌ಸ್ಟೆಬಲ್‌ಗಳು

ಮುಂಬೈನಲ್ಲಿ ಸಂಚಾರ ದಟ್ಟಣೆಯನ್ನು ತಪ್ಪಿಸಲು ಇಬ್ಬರು ಟ್ರಾಫಿಕ್ ಕಾನ್‌ಸ್ಟೆಬಲ್‌ಗಳು ರಸ್ತೆ ಗುಂಡಿಗಳನ್ನು ಮುಚ್ಚಿದ್ದಾರೆ. ರಸ್ತೆ ಗುಂಡಿಗಳನ್ನು ಮುಚ್ಚುವವರು ಸಕಾಲಕ್ಕೆ ಬಾರದ ಕಾರಣ ಈ ಇಬ್ಬರು ಕಾನ್‌ಸ್ಟೆಬಲ್‌ಗಳೇ ರಸ್ತೆ ಗುಂಡಿಗಳನ್ನು ಮುಚ್ಚಿದ್ದಾರೆ. ರಸ್ತೆ ಗುಂಡಿಗಳನ್ನು ಮುಚ್ಚುತ್ತಿರುವ ಟ್ರಾಫಿಕ್ ಕಾನ್‌ಸ್ಟೆಬಲ್‌ಗಳ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ರಸ್ತೆ ಗುಂಡಿಗಳನ್ನು ಮುಚ್ಚಿದ ಟ್ರಾಫಿಕ್ ಕಾನ್‌ಸ್ಟೆಬಲ್‌ಗಳು

ಈ ಘಟನೆ ಕಳೆದ ಮಂಗಳವಾರ ಮುಂಬೈನಲ್ಲಿ ನಡೆದಿದೆ. ಸಂಜಯ್ ವಹಾ ಹಾಗೂ ಸಾಹಿಬುರೊ ಸಾವನ್ ಎಂಬುವವರೇ ರಸ್ತೆ ಗುಂಡಿಗಳನ್ನು ಮುಚ್ಚಿದ ಸಂಚಾರ ವಿಭಾಗದ ಪೊಲೀಸ್ ಕಾನ್‌ಸ್ಟೆಬಲ್‌ಗಳು.

ರಸ್ತೆ ಗುಂಡಿಗಳನ್ನು ಮುಚ್ಚಿದ ಟ್ರಾಫಿಕ್ ಕಾನ್‌ಸ್ಟೆಬಲ್‌ಗಳು

ಈ ಇಬ್ಬರು ಟ್ರಾಫಿಕ್ ಕಾನ್‌ಸ್ಟೆಬಲ್‌ಗಳು ರಸ್ತೆ ಮಧ್ಯದಲ್ಲಿದ್ದ ದೊಡ್ಡ ಗುಂಡಿಗಳಿಂದ ಸಂಚಾರ ದಟ್ಟಣೆ ಉಂಟಾಗುವುದನ್ನು ಗಮನಿಸಿದ್ದಾರೆ. ತಕ್ಷಣವೇ ಅವರು ಸಂಬಂಧಪಟ್ಟ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ರಸ್ತೆ ಗುಂಡಿಗಳನ್ನು ಮುಚ್ಚಿದ ಟ್ರಾಫಿಕ್ ಕಾನ್‌ಸ್ಟೆಬಲ್‌ಗಳು

ಆದರೆ ಘಟನಾ ಸ್ಥಳಕ್ಕೆ ಯಾರೂ ಬರಲಿಲ್ಲ. ಹತ್ತಿರದಲ್ಲೇ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಅಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಬೇಕಾದ ವಸ್ತುಗಳಿದ್ದವು. ಆವುಗಳ ಮೂಲಕ ಅವರು ರಸ್ತೆ ಗುಂಡಿಗಳನ್ನು ಮುಚ್ಚಿದ್ದಾರೆ.

ರಸ್ತೆ ಗುಂಡಿಗಳನ್ನು ಮುಚ್ಚಿದ ಟ್ರಾಫಿಕ್ ಕಾನ್‌ಸ್ಟೆಬಲ್‌ಗಳು

ಈ ಬಗ್ಗೆ ದಿ ಫ್ರೀ ಪ್ರೆಸ್ ಜರ್ನಲ್ ವರದಿ ಮಾಡಿದೆ. ವಾಹನಗಳು ತೊಂದರೆಯಿಲ್ಲದೆ ಚಲಿಸಲು ಈ ಇಬ್ಬರು ಕಾನ್‌ಸ್ಟೆಬಲ್‌ಗಳು ರಸ್ತೆ ಗುಂಡಿಗಳನ್ನು ಮುಚ್ಚಿದ್ದಾರೆ. ಈ ಇಬ್ಬರು ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಎಲ್ಲೆಡೆಯಿಂದ ಅಭಿನಂದನೆಗಳು ವ್ಯಕ್ತವಾಗುತ್ತಿವೆ.

ರಸ್ತೆ ಗುಂಡಿಗಳನ್ನು ಮುಚ್ಚಿದ ಟ್ರಾಫಿಕ್ ಕಾನ್‌ಸ್ಟೆಬಲ್‌ಗಳು

ಪ್ರತಿ ವರ್ಷ ಮುಂಬಯಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತದೆ. ಅದರಲ್ಲೂ ಕಳೆದ ಕೆಲವು ದಿನಗಳಿಂದ ಮುಂಬೈನಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದಾಗಿ ರಸ್ತೆಗಳು ಹಾನಿಗೊಳಗಾಗಿವೆ.

ರಸ್ತೆ ಗುಂಡಿಗಳನ್ನು ಮುಚ್ಚಿದ ಟ್ರಾಫಿಕ್ ಕಾನ್‌ಸ್ಟೆಬಲ್‌ಗಳು

ಈ ಸಮಸ್ಯೆ ಮುಂಬೈನಲ್ಲಿ ಮಾತ್ರವಲ್ಲದೆ ಭಾರತದ ವಿವಿಧ ನಗರಗಳಲ್ಲಿಯೂ ಉಂಟಾಗಿದೆ. ರಸ್ತೆ ನಿರ್ಮಿಸುವವರು ಲಾಭ ಗಳಿಸುವ ಸಲುವಾಗಿ ಕಡಿಮೆ ವೆಚ್ಚದಲ್ಲಿ, ಗುಣಮಟ್ಟವಿಲ್ಲದ ರಸ್ತೆಗಳನ್ನು ನಿರ್ಮಿಸುತ್ತಿರುವುದೇ ಇದಕ್ಕೆ ಒಂದು ಪ್ರಮುಖ ಕಾರಣ.

ರಸ್ತೆ ಗುಂಡಿಗಳನ್ನು ಮುಚ್ಚಿದ ಟ್ರಾಫಿಕ್ ಕಾನ್‌ಸ್ಟೆಬಲ್‌ಗಳು

ಭಾರತದಲ್ಲಿ ಪ್ರತಿ ವರ್ಷ ಸುಮಾರು 1.50 ಲಕ್ಷ ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ. ವಾಹನ ಸವಾರರು ಸಂಚಾರಿ ನಿಯಮಗಳನ್ನು ಸರಿಯಾಗಿ ಪಾಲಿಸದೇ ಇರುವುದು ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣ.

ರಸ್ತೆ ಗುಂಡಿಗಳನ್ನು ಮುಚ್ಚಿದ ಟ್ರಾಫಿಕ್ ಕಾನ್‌ಸ್ಟೆಬಲ್‌ಗಳು

ಇದರ ಜೊತೆಗೆ ಹದಗೆಟ್ಟ ರಸ್ತೆಗಳು ಸಹ ಅಪಘಾತಗಳಿಗೆ ಕಾರಣವಾಗುತ್ತಿವೆ. ಕೇಂದ್ರ ಸರ್ಕಾರವು ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ.

ರಸ್ತೆ ಗುಂಡಿಗಳನ್ನು ಮುಚ್ಚಿದ ಟ್ರಾಫಿಕ್ ಕಾನ್‌ಸ್ಟೆಬಲ್‌ಗಳು

ಇದರ ಭಾಗವಾಗಿ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರವು ಆದ್ಯತೆ ನೀಡುತ್ತಿದೆ. ಇದರಿಂದ ಮುಂಬರುವ ದಿನಗಳಲ್ಲಿ ಭಾರತದಲ್ಲಿ ಸಂಭವಿಸುವ ರಸ್ತೆ ಅಪಘಾತಗಳ ಸಂಖ್ಯೆ ಕಡಿಮೆಯಾಗುವ ಸಾಧ್ಯತೆಗಳಿವೆ.

ಗಮನಿಸಿ: ಕೆಲವು ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Two traffic cops fills road potholes in Mumbai. Read in Kannada.
Story first published: Wednesday, July 28, 2021, 19:51 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X