Just In
Don't Miss!
- Sports
ಆಸಿಸ್ ಬೌಲರ್ಗಳಿಗೆ ಪಾಂಟಿಂಗ್ ಚಾಟಿ: ಶಾರ್ದೂಲ್- ಸುಂದರ್ ಆಟಕ್ಕೆ ಮೆಚ್ಚುಗೆ
- Finance
ಪ್ರತಿ ಲೀಟರ್ ಪೆಟ್ರೋಲ್- ಡೀಸೆಲ್ ಗೆ ನೀವು ನೀಡುವ ಬೆಲೆಯಲ್ಲಿ 48% ಕೇಂದ್ರದ ಸುಂಕ
- News
ಕರ್ನಾಟಕ ಆಕ್ರಮಿತ ಪ್ರದೇಶ ಶೀಘ್ರ ಮಹಾರಾಷ್ಟ್ರಕ್ಕೆ ಸೇರ್ಪಡೆ: ಉದ್ಧವ್ ಠಾಕ್ರೆ
- Movies
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇನ್ಮುಂದೆ ಹೆಲ್ಮೆಟ್ ಹಾಕದೇ ಪೆಟ್ರೋಲ್ ಬಂಕ್‌ಗೆ ಬರಲೇಬೇಡಿ...!
ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಬಳಕೆ ಕುರಿತು ಅದೆಷ್ಟೇ ಜಾಗೃತಿ ಮೂಡಿಸಿದರೂ ಸಹ ಬಹುತೇಕ ಬೈಕ್ ಸವಾರರು ಹೆಲ್ಮೆಟ್ ಬಳಕೆ ಮಾಡುವುದೇ ಇಲ್ಲ. ಇದರಿಂದ ಕಡ್ಡಾಯ ಹೆಲ್ಮೆಟ್ ಬಳಕೆ ಕುರಿತು ಹೊಸ ಪ್ರಯೋಗಕ್ಕೆ ಮುಂದಾಗಿರುವ ಪೆಟ್ರೋಲ್ ಬಂಕ್ ಮಾಲೀಕರು ಹೆಲ್ಮೆಟ್ ಇಲ್ಲದ ಬೈಕ್ ಸವಾರರಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.

ಹೌದು, ಬೈಕ್ ಚಾಲನೆ ವೇಳೆ ಹೆಲ್ಮೆಟ್ ಬಳಕೆ ಮಾಡದ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರತಿ ವರ್ಷ ಸಾವಿರಾರು ಬೈಕ್ ಸವಾರರು ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದು, ಕೇಂದ್ರ ಸರ್ಕಾರವು ಈ ನಿಟ್ಟಿನಲ್ಲಿ ಹಲವಾರು ಕಠಿಣ ಕ್ರಮ ಕೈಗೊಳ್ಳುತ್ತಿದೆ. ಹೊಸ ಬೈಕ್ ಖರೀದಿ ವೇಳೆ ಹೆಲ್ಮೆಟ್ ವಿತರಣೆ ಸೇರಿದಂತೆ ಸರ್ಕಾರೇತರ ಸಂಸ್ಥೆಗಳು ಸಹ ಬೈಕ್ ಸವಾರರಿಗೆ ಉಚಿತವಾಗಿ ಹೆಲ್ಮೆಟ್ ವಿತರಣೆ ಮಾಡುತ್ತಿವೆ. ಇಷ್ಟೆಲ್ಲಾ ಕ್ರಮಗಳನ್ನು ಕೈಗೊಂಡರೂ ಸಹ ಹೆಲ್ಮೆಟ್ ಇಲ್ಲದೇ ಬೈಕ್ ಚಾಲನೆ ಮಾಡುವವರು ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ.

ಹೀಗಾಗಿ ಪೆಟ್ರೋಲ್ ಬಂಕ್ ಮಾಲೀಕರ ಸಂಘದವರು ಹೆಲ್ಮೆಟ್ ಇಲ್ಲದ ಬೈಕ್ ಸವಾರರ ವಿರುದ್ದ ಹೊಸ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದು, ಹೆಲ್ಮೆಟ್ ಇಲ್ಲದೇ ಪೆಟ್ರೋಲ್ ಬಂಕ್‌ಗೆ ಬರುವವರಿಗೆ ಪೆಟ್ರೋಲ್ ಹಾಕದಿರಲು ನಿರ್ಧರಿಸಲಾಗಿದೆ.

ಮುಂದಿನ ತಿಂಗಳು ಜೂನ್ 1ರಿಂದಲೇ ಹೆಲ್ಮೆಟ್ ಇಲ್ಲದೆ ಪೆಟ್ರೋಲ್ ಬಂಕ್‌ಗೆ ಬರುವ ಬೈಕ್ ಸವಾರರಿಗೆ ಪೆಟ್ರೋಲ್ ಸಿಗುವುದಿಲ್ಲ ಎಂದು ಹೇಳಲಾಗಿದ್ದು, ದೆಹಲಿ ಬಳಿಯ ನೋಯ್ಡಾದಲ್ಲಿ ಇದನ್ನು ಮೊದಲ ಹಂತವಾಗಿ ಜಾರಿಗೆ ತರಲಾಗುತ್ತಿದೆ.

ಇತ್ತೀಚೆಗೆ ನೋಯ್ಡಾದಲ್ಲಿ ಹೆಚ್ಚುತ್ತಿರುವ ಹೆಲ್ಮೆಟ್ ರಹಿತ ಬೈಕ್ ಸವಾರಿಯಿಂದ ಸಾಕಷ್ಟು ಬೈಕ್ ಸವಾರರು ಪ್ರಾಣ ಕಳೆದುಕೊಂಡಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ಮತ್ತು ಜಿಲ್ಲಾ ನ್ಯಾಯಾಲದ ಆದೇಶದ ಮೇರೆಗೆ ಪೆಟ್ರೋಲ್ ಬಂಕ್ ಮಾಲೀಕರು ಇಂತದೊಂದು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

ಮೊದಲ ಹಂತವಾಗಿ ನೋಯ್ಡಾ ನಂತರ ಗೌತಮಬುದ್ದ ನಗರಗಳಲ್ಲಿ ಈ ಕ್ರಮವನ್ನು ವಿಸ್ತರಣೆ ಮಾಡುವಂತೆ ಜಿಲ್ಲಾ ನ್ಯಾಯಾಲಯದ ನ್ಯಾ. ಬ್ರಜೆಶ್ ನರೈನ್ ಸಿಂಗ್ ಅವರು ಆದೇಶ ಹೊರಡಿಸಿದ್ದು, ಯಾವುದೇ ಕಾರಣಕ್ಕೂ ಹೆಲ್ಮೆಟ್ ಇಲ್ಲದ ಬೈಕ್ ಸವಾರರಿಗೆ ಪೆಟ್ರೋಲ್ ಮಾರಾಟ ಮಾಡುವಂತಿಲ್ಲ ಎಂದು ಪೆಟ್ರೋಲ್ ಬಂಕ್ ಮಾಲೀಕರಿಗೆ ಖಡಕ್ ಆದೇಶ ನೀಡಲಾಗಿದೆ.

ಇನ್ನು ಅಪಘಾತ ಸಂದರ್ಭದಲ್ಲಿ ಬೈಕ್ ಸವಾರರಿಗೆ ಸುರಕ್ಷತೆ ಸಿಗಲಿ ಎನ್ನುವ ಉದ್ದೇಶದಿಂದ ಕಡ್ಡಾಯವಾಗಿ ಹೆಲ್ಮೆಟ್ ಬಳಕೆ ಮಾಡುವಂತೆ ದೇಶದ ಪ್ರತಿ ನಗರದಲ್ಲೂ ಸೂಕ್ತ ಕ್ರಮ ಕೈಗೊಳ್ಳುತ್ತಿರುವ ಟ್ರಾಫಿಕ್ ಪೊಲೀಸರು, ಹೆಲ್ಮೆಟ್ ಬಳಕೆ ಮಾಡದ ಸವಾರರನ್ನು ಹಿಡಿದು ದಂಡ ವಸೂಲಿ ಮಾಡುತ್ತಿದ್ದಾರೆ.

ಆದರೂ ಕೂಡಾ ಹೆಲ್ಮೆಟ್ ಇಲ್ಲದ ಹಿನ್ನೆಲೆಯಲ್ಲಿ ಅಪಘಾತದಲ್ಲಿ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಹೊಸದಾಗಿ ಬೈಕ್ ಖರೀದಿಸುವ ಗ್ರಾಹಕರು ಕಡ್ಡಾಯವಾಗಿ ಬಿಐಎಸ್(ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್) ಪ್ರಮಾಣಿಕೃತ ಹೆಲ್ಮೆಟ್ ಅನ್ನು ಖರೀದಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಬಹುತೇಕ ಬೈಕ್ ಸವಾರರು ಸಾವಿರಾರು ಕೊಟ್ಟು ಬೈಕ್ ಖರೀದಿ ಮಾಡಿದರೂ ಸಹ ಒಂದು ಉತ್ತಮವಾದ ಹೆಲ್ಮೆಟ್ ಖರೀದಿಸಲು ಹಿಂದೇಟು ಹಾಕುತ್ತಾರೆ. ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ರಸ್ತೆ ಬದಿಯಲ್ಲಿ ಮಾರಾಟ ಮಾಡಲಾಗುವ ಅಗ್ಗದ ಬೆಲೆಯ ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನ ಖರೀದಿಸುತ್ತಾರೆ.

ಆದ್ರೆ ಅಪಘಾತಗಳ ಸಂದರ್ಭದಲ್ಲಿ ಇದರಿಂದ ಪ್ರಾಣ ಉಳಿಯುವ ಬದಲು ಪ್ರಾಣಕ್ಕೆ ಮತ್ತಷ್ಟು ಸಂಚಕಾರ ತರಲಿವೆ ಎಂಬುವುದು ಗೊತ್ತಿದ್ದರೂ ಸಹ ಅಗ್ಗದ ಬೆಲೆಯ ಹೆಲ್ಮೆಟ್‌ಗಳೇ ಹೆಚ್ಚು ಮಾರಾಟವಾಗುತ್ತಿದ್ದು, ಇಂತಹ ಪ್ರವೃತ್ತಿಯನ್ನು ತಪ್ಪಿಸಲು ದೇಶದ ವಿವಿಧ ರಾಜ್ಯಗಳಲ್ಲಿ ಹೊಸ ಕಾನೂನು ಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ.
MOST READ: ಹೆಲ್ಮೆಟ್‌ಗೂ ಬಂತೂ ವೈಪರ್, ಐಡಿಯಾ ಸೂಪರ್ರೋ ಸೂಪರ್..!

ಇದೇ ಕಾರಣಕ್ಕೆ ತಮಿಳುನಾಡು ಪೊಲೀಸರು ಹೊಸ ಬೈಕ್ ಖರೀದಿ ವೇಳೆ ಬಿಐಎಸ್ ಹೆಲ್ಮೆಟ್ ಖರೀದಿಯನ್ನು ಕಡ್ಡಾಯಗೊಳಿಸಿದರೇ, ಗುಜರಾತಿನ ರಾಜಕೋಟ್ ಪೊಲೀಸರು ತಮಿಳುನಾಡು ಪೊಲೀಸರಿಗಿಂತ ವಿಭಿನ್ನವಾದ ರೂಲ್ಸ್ ಒಂದನ್ನು ಜಾರಿಗೆ ತಂದಿದ್ದಾರೆ.

ಹೊಸದಾಗಿ ಬೈಕ್ ಖರೀದಿಸುವ ಗ್ರಾಹಕರಿಗೆ ಡೀಲರ್ಸ್‌ಗಳೇ ಉಚಿತವಾಗಿ ಉತ್ತಮ ಗುಣಮಟ್ಟದ ಹೆಲ್ಮೆಟ್‌ಗಳನ್ನು ಕಡ್ಡಾಯವಾಗಿ ವಿತರಣೆ ಮಾಡುವಂತೆ ಸೂಚನೆ ನೀಡಲಾಗಿದ್ದು, ನಿಯಮ ಪಾಲಿಸದ ಡೀಲರ್ಸ್ ವಿರುದ್ಧ ಸೂಕ್ತ ಕೈಗೊಳ್ಳಲಾಗುತ್ತಿದೆ.

ಒಟ್ಟಿನಲ್ಲಿ ಹೆಲ್ಮೆಟ್ ಇಲ್ಲದೇ ಬೈಕ್ ಸವಾರಿ ಅಭ್ಯಾಸವನ್ನು ಹೊಗಲಾಡಿಸಲು ದೇಶದ ವಿವಿಧಡೆ ಹತ್ತಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇದೀಗ ಹೆಲ್ಮೆಟ್ ಇಲ್ಲದ ಬೈಕ್ ಸವಾರರಿಗೆ ಪೆಟ್ರೋಲ್ ಮಾರಾಟ ಮಾಡದಿರಲು ನಿರ್ಧರಿಸುವುದು ಉತ್ತಮ ನಿರ್ಧಾರ ಎನ್ನಬಹುದು. ಜೊತೆಗೆ ಈ ಹೊಸ ನಿಯಮವನ್ನು ನಮ್ಮಲ್ಲೂ ಕೂಡಾ ಅಳವಡಿಸಿಕೊಳ್ಳುವುದು ಅತಿ ಅವಶ್ಯಕವಾಗಿದೆ.
Source:news18