Udupi: ಮಾರುತಿ ಸುಜುಕಿ ರಿಟ್ಜ್ ಪಲ್ಟಿ... ಪ್ರಯಾಣಿಕರು ಸುರಕ್ಷಿತ, ಅದ್ಭುತ ಈ ಕಾರು!
ದೇಶದಲ್ಲಿ ಪ್ರತಿದಿನ ನಾನಾ ಕಾರಣಗಳಿಗೆ ಒಂದಿಲ್ಲೊಂದು ರಸ್ತೆ ಅಪಘಾತಗಳು ಸಂಭವಿಸುತ್ತಿರುತ್ತವೆ. ಅನೇಕರು, ಕಾರುಗಳ ನಿರ್ಮಾಣ ಗುಣಮಟ್ಟದಿಂದಾಗಿ ಅಪಾಯದಿಂದ ಸುಲಭವಾಗಿ ಎಸ್ಕೇಪ್ ಆಗುತ್ತಾರೆ. ಉಡುಪಿ (Udupi) ಜಿಲ್ಲೆಯ ಕಾಪುನಲ್ಲಿ ಅಂತಹದ್ದೇ ಘಟನೆಯೊಂದು ನಡೆದಿದ್ದು, ಪ್ರಯಾಣಿಕರು ಪ್ರಾಯಪಯದಿಂದ ಪಾರಾಗಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ.
ಉಡುಪಿಯಿಂದ (Udupi) - ಮಂಗಳೂರು (Mangaluru) ಕಡೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೋಗುತಿದ್ದ ಮಾರುತಿ ಸುಜುಕಿ ರಿಟ್ಜ್ (Maruti Suzuki Ritz) ಕಾರು, ಕೊಪ್ಪಲಂಗಡಿ ಮಸೀದಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ, ವಿದ್ಯುತ್ ಕಂಬಕ್ಕೆ ಡಿಕ್ಕಿಯೊಡೆದಿದೆ. ಪರಿಣಾಮ ಕಾರು ಪಲ್ಟಿಯಾಗಿದ್ದು, ಅದರಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪ್ರಯಾಣದಲ್ಲಿ ಗಾಯಗಳಾಗಿವೆ. ಸೋಮವಾರ ರಾತ್ರಿ ಈ ಘಟನೆ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಕಾಪು ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ. ಇಲ್ಲಿ ಅಪಘಾತಕ್ಕೆ ತುತ್ತಾಗಿದ್ದರೂ ಪುಟ್ಟ ಮಾರುತಿ ಸುಜುಕಿ ರಿಟ್ಜ್ ಕಾರು, ಪ್ರಯಾಣಿಕರ ಜೀವವನ್ನು ಉಳಿಸಿದೆ.
ಮಾರುತಿ ಸುಜುಕಿ ರಿಟ್ಜ್ 2009ರಲ್ಲಿ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿತ್ತು. ಕೆಲವೇ ವರ್ಷಗಳ ಹಿಂದೆ, ಈ ಕಾರಿನ ಮಾರಾಟವನ್ನು ಸ್ಥಗಿತಗೊಳಿಸಲಾಯಿತು. ಆದರೂ ರಿಟ್ಜ್ ದೊಡ್ಡಮಟ್ಟದ ಜನಪ್ರಿಯತೆಯನ್ನು ಹೊಂದಿದ್ದು, ಅದಕ್ಕೆ ಮಾರಾಟ ಸಂಖ್ಯೆಯೇ ಸಾಕ್ಷಿಯಾಗಿದೆ. ಕಂಪನಿಯು 4 ಲಕ್ಷ ಯುನಿಟ್ ಕಾರುಗಳನ್ನು ಸೇಲ್ ಮಾಡಿತ್ತು. ರಿಟ್ಜ್ ಮಾರಾಟದಿಂದ ಸ್ಥಗಿತಗೊಂಡಾಗ ರೂ.4.30 ಲಕ್ಷದಿಂದ ರೂ.6.58 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿತ್ತು.
ಈ ಮಾರುತಿ ಸುಜುಕಿ ರಿಟ್ಜ್, 5 ಆಸನ ವ್ಯವಸ್ಥೆ, ಪೆಟ್ರೋಲ್ ಹಾಗೂ ಡಿಸೇಲ್ ಎಂಜಿನ್ ನೊಂದಿಗೆ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಗ್ರಾಹಕರಿಗೆ ಸಿಗುತ್ತಿತ್ತು. ಜೊತೆಗೆ 17.16 - 23.2 kmpl ಮೈಲೇಜ್ ನೀಡುತ್ತಿತ್ತು. ರಿಟ್ಜ್ ಅದ್ಬುತವಾದ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿತ್ತು. ಪ್ರಮುಖವಾಗಿ ಡ್ರೈವರ್ ಹಾಗೂ ಪ್ಯಾಸೆಂಜರ್ ಏರ್ ಬಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಂ), ಪವರ್ ಸ್ಟೀರಿಂಗ್, ಹಾಗೂ ಫಾಗ್ ಲೈಟ್ ಅನ್ನು ಪಡೆದಿತ್ತು.
ಮಾರುತಿ ಸುಜುಕಿ ರಿಟ್ಜ್ ಮಾರಾಟವನ್ನು ಸ್ಥಗಿತಗೊಳಿಸಿದ್ದರೂ ಅದರ ಜಾಗಕ್ಕೆ ಇಗ್ನಿಸ್ (Ignis) ಕಾರು ಬಂದಿದೆ. ಇದು ರೂ.5.84 ಲಕ್ಷದಿಂದ ರೂ.8.16 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 1.2 - ಲೀಟರ್ ಪೆಟ್ರೋಲ್ ಹಾಗೂ 5 - ಸ್ವೀಡ್ ಮಾನ್ಯವಲ್ ಹಾಗೂ 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದ್ದು, 20.89 kmpl ವರೆಗೆ ಮೈಲೇಜ್ ಕೊಡುತ್ತದೆ.
ಮಾರುತಿ ಸುಜುಕಿ ಇಗ್ನಿಸ್ 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications