Just In
Don't Miss!
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Movies
ಡಬ್ಬಿಂಗ್ ಸಿನಿಮಾಗಳ ಬಗ್ಗೆ ಹಿರಿಯ ನಟ ದೊಡ್ಡಣ್ಣ ಅಸಮಾಧಾನ
- News
ಕೊರೊನಾ ನಿಯಂತ್ರಣದಲ್ಲಿ ವಿಫಲ: ಇಟಲಿ ಪ್ರಧಾನಿ ಗಿಸೆಪ್ಪೆ ಕಾಂಟೆ ರಾಜೀನಾಮೆ
- Sports
ಐಎಸ್ಎಲ್: ಜೆಮ್ಷೆಡ್ಪುರ ವಿರುದ್ಧ ಕ್ಲೀನ್ ಶೀಟ್ ಗುರಿಯಲ್ಲಿ ಕೇರಳ ಬ್ಲಾಸ್ಟರ್ಸ್
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪೊಲೀಸ್ ಪಡೆ ಸೇರಲಿದೆ ಸ್ಕೋಡಾ ಕಂಪನಿಯ ಈ ಪರ್ಫಾಮೆನ್ಸ್ ಕಾರು
ಸ್ಕೋಡಾ ಕಂಪನಿಯ ನಾಲ್ಕನೇ ತಲೆಮಾರಿನ ಆಕ್ಟೀವಿಯಾ ಆರ್‍ಎಸ್ ಕಾರನ್ನು ಬ್ರಿಟನ್ ಪೊಲೀಸ್ ಪಡೆಗಾಗಿ ಸಿದ್ಧಪಡಿಸಿದೆ. ಸ್ಕೋಡಾ ಕಂಪನಿಯು ಈ ಪರ್ಫಾಮೆನ್ಸ್ ಸೆಡಾನ್ ಅನ್ನು ಪೊಲೀಸ್ ಕಾರಿನ ರೀತಿಯಲ್ಲಿ ಸಂಪೂರ್ಣವಾಗಿ ಕಸ್ಟಮೈಸ್ ಮಾಡಿದ್ದಾರೆ.

ಈ ಕಸ್ಟಮೈಸ್ ಆಕ್ಟೀವಿಯಾ ಆರ್‍ಎಸ್ ಕಾರಿನಲ್ಲಿ 360 ಡಿಗ್ರಿ ಗೋಚರತೆಯ ಎಲ್ಇಡಿ ಸಿಗ್ನಲ್ ಲ್ಯಾಂಪ್ ಗಳನ್ನು ಮುಂಭಾಗದ ಪರದೆಯಲ್ಲಿ ನಿರ್ಮಿಸಲಾಗಿದೆ, ಇದರೊಂದಿಗೆ ಟೈಲ್‌ಗೇಟ್, ಗ್ರಿಲ್ ಮತ್ತು ನಂಬರ್ ಪ್ಲೇಟ್‌ನೊಂದಿಗೆ ಪೊಲೀಸ್ ಸೇವೆಗಳಿಗಾಗಿ ಸಂಪೂರ್ಣವಾಗಿ ಕಸ್ಟಮೈಸ್ ಮಾಡಲಾಗಿದೆ. ಇದರೊಂದಿಗೆ ಮೂರು ಟೋನ್ ಸೈರನ್ ಕೂಡ ಅಳವಡಿಸಲಾಗಿದೆ.

ಈ ಪೊಲೀಸ್ ಕಾರಿನಲ್ಲಿ 2.0-ಲೀಟರ್ ಟರ್ಬೋಚಾರ್ಜ್ಡ್ ನಾಲ್ಕು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 245 ಬಿಹೆಚ್‍ಪಿ ಪವರ್ ಮತ್ತು 370 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ.
MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಈ ಪರ್ಫಾಮೆನ್ಸ್ ಸೆಡಾನ್ ಕೇವಲ 6.7 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಇನ್ನು ಸ್ಕೋಡಾ ಕಸ್ಟಮೈಸ್ ಆಕ್ಟೀವಿಯಾ ಆರ್‍ಎಸ್ ಕಾರು 250 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಪೊಲೀಸ್ ಪಡೆಯು ಮಿಂಚಿನ ವೇಗದಲ್ಲಿ ಕಾರ್ಯಚರಣೆಯನ್ನು ನಡೆಸಲು ಈ ಪರ್ಫಾಮೆನ್ಸ್ ಕಾರು ನೆರವಾಗುತ್ತದೆ.

ಇನ್ನು ಈ ಕಾರಿನಲ್ಲಿ ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್, ಟ್ರೆಪೆಜ್ ಆಕಾರದ ಎಕ್ಸಾಸ್ಟ್ ಟಿಪ್ಸ್ ಮತ್ತು ಮುಂಭಾಗದಲ್ಲಿ ಬ್ಲ್ಯಾಕ್ ಗ್ರಿಲ್‍ನಲ್ಲಿ ಆರ್‍ಎಸ್ ಬ್ಯಾಡ್ಜ್ ಹೊಂದಿರುವ ಡ್ಯುಯಲ್ ಸ್ಪ್ಲಿಟ್ ಹೆಡ್‍ಲ್ಯಾಂಪ್‍ಗಳನ್ನು ಒಳಗೊಂಡಿದೆ.
MOST READ: ಕರೋನಾ ವೈರಸ್ ಬಗ್ಗೆ ಜನ ಜಾಗೃತಿ ಮೂಡಿಸಲು ಉಬರ್ ಜೊತೆಗೆ ಕೈಜೋಡಿಸಿದ ಪೊಲೀಸ್ ಇಲಾಖೆ

ವಾಹನವು ಬೂಟ್ ಲಿಡ್ ಸ್ಪಾಯ್ಲರ್ ಮತ್ತು ಹಿಂಭಾಗದಲ್ಲಿ ಸಿ - ಆಕಾರಾದ ಟೇಲ್‍ಲ್ಯಾಂಪ್‍ಗಳನ್ನು ಒಳಗೊಂಡಿದೆ. ಇನ್ನೂ ಇಂಟಿರಿಯರ್‍ನಲ್ಲಿ ಎಲೆಕ್ಟ್ರಾನಿಕಾನಿಕಲ್ ಅಡ್ಜಂಟಬಲ್ ಫ್ರಂಟ್ ಸೀಟ್ ಮುಂಭಾಗದ ಸೀಟ್ ಅಲ್ಕಾಂಟರ್ ಲೆದರ್, ಸ್ಟ್ಯಾಂಡರ್ಡ್ ಲ್ಯಾಪ್ ಟೈಮರ್ ಮತ್ತು ಇಂಟರ್‍ನೆಟ್ ಕನೆಕ್ಟಿವಿಟಿ ಫೀಚರ್ಸ್‍ಗಳೊಂದಿಗೆ 10.25 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂ ಅನ್ನು ಅಳವಡಿಸಿದೆ.

ಸ್ಕೋಡಾ ಆಕ್ಟೀವಿಯಾ ಆರ್‍ಎಸ್ ಬ್ಲ್ಯಾಕ್ ಗ್ರಿಲ್, ಮ್ಯಾಚಿಂಗ್ ಒಆರ್‍ವಿಎಂಗಳು ದೊಡ್ಡದಾದ 19 ಇಂಚಿನ ಅಲಾಯ್ ವ್ಹೀಲ್‍ಗಳು, ವೈಡರ್ ಏರ್ ಡ್ಯಾಮ್‍ಗಳು ಮತ್ತು ಫ್ರಂಟ್ ಬಂಪರ್‍ಗಳನ್ನು ಹೊಂದಿವೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಸ್ಕೋಡಾ ಆಕ್ಟೀವಿಯಾ ಆರ್‍ಎಸ್ ಕಾರು ಇಂಟಿರಿಯರ್ ಬ್ಲ್ಯಾಕ್ ಬಣ್ಣವನ್ನು ಹೊಂದಿದೆ. ಸ್ಕೋಡಾ ಆಕ್ಟೀವಿಯಾ ಆರ್‍ಎಸ್ ಕಾರಿನಲ್ಲಿ ಮರುವಿನ್ಯಾಸಗೊಳಿಸಲಾದ ಮಲ್ಟಿಫಂಕ್ಷನ್ ಲೆದರ್ ಸ್ಪೋರ್ಟ್ಸ್ ಸ್ಟೀಯರಿಂಗ್ ವ್ಹೀಲ್ ಅನ್ನು ಹೊಂದಿದೆ. ಡಿಎಸ್ಜಿ ಫೀಚರ್ ಶಿಫ್ಟ್ ಪ್ಯಾಡಲ್ ಕೂಡ ಹೊಂದಿದೆ.

ಸಾಮಾನ್ಯ ಸ್ಕೋಡಾ ಆಕ್ಟೀವಿಯಾ ಆರ್‍ಎಸ್ ಮಾದರಿಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಕಾರುಗಳಲ್ಲಿ ಇದು ಕೂಡ ಒಂದಾಗಿದೆ. ಈ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಮರ್ಸಿಡಿಸ್ ಬೆಂಝ್ ಸಿ-ಕ್ಲಾಸ್, ಬಿಎಂಡಬ್ಲ್ಯೂ 3 ಸೀರಿಸ್ ಮತ್ತು ಜಾಗ್ವಾರ್ ಎಕ್ಸ್‌ಇ ಕಾರುಗಳಿಗೆ ಪೈಪೋಟಿ ನೀಡುತ್ತದೆ.