ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕದಿಂದ ರೂ. 3 ಲಕ್ಷ ಕೋಟಿಗೂ ಹೆಚ್ಚು ಆದಾಯ ಗಳಿಸಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ವಿಧಿಸಿರುವ ಅಬಕಾರಿ ಸುಂಕದಿಂದ ರೂ. 3.35 ಲಕ್ಷ ಕೋಟಿ ಆದಾಯ ಗಳಿಸಿದೆ. ಈ ಮಾಹಿತಿಯನ್ನು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ರಾಮೇಶ್ವರ ತೇಲಿ ರವರು ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಲಿಖಿತ ರೂಪದಲ್ಲಿ ಉತ್ತರವಾಗಿ ನೀಡಿದ್ದಾರೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕದಿಂದ ರೂ. 3 ಲಕ್ಷ ಕೋಟಿಗೂ ಹೆಚ್ಚು ಆದಾಯ ಗಳಿಸಿದ ಕೇಂದ್ರ ಸರ್ಕಾರ

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ಸಂಗ್ರಹವು 2020 - 21 ರ ಆರ್ಥಿಕ ವರ್ಷದಲ್ಲಿ ರೂ. 1.78 ಲಕ್ಷ ಕೋಟಿಗಳಿಂದ ರೂ. 3.35 ಲಕ್ಷ ಕೋಟಿಗಳಿಗೆ ಅಂದರೆ 88% ನಷ್ಟು ಹೆಚ್ಚಾಗಿದೆ ಎಂದು ಅವರು ಹೇಳಿದರು. ಈ ಸಂಗ್ರಹವು ಇನ್ನೂ ಹೆಚ್ಚಾಗುತ್ತಿತ್ತು ಎಂದು ಅವರು ಹೇಳಿದ್ದಾರೆ. ಲಾಕ್‌ಡೌನ್ ಹಾಗೂ ಇನ್ನಿತರ ನಿರ್ಬಂಧಗಳಿಂದಾಗಿ ಇಂಧನ ಮಾರಾಟವು ಕಡಿಮೆಯಾದ ಕಾರಣ ಸುಂಕ ಸಂಗ್ರಹವು ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕದಿಂದ ರೂ. 3 ಲಕ್ಷ ಕೋಟಿಗೂ ಹೆಚ್ಚು ಆದಾಯ ಗಳಿಸಿದ ಕೇಂದ್ರ ಸರ್ಕಾರ

ರಾಮೇಶ್ವರ ತೇಲಿ ರವರ ಪ್ರಕಾರ, 2018 - 19 ರಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕದ ಮೂಲಕ ರೂ. 2.13 ಲಕ್ಷ ಕೋಟಿ ಆದಾಯ ಸಂಗ್ರಹಿಸಲಾಗಿತ್ತು. ಈ ವರ್ಷದ ಆರಂಭದಿಂದಲೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಿಸಲಾಗುತ್ತಿದೆ. ಎಲ್ಲಾ ಮೆಟ್ರೋ ನಗರಗಳಲ್ಲಿ ಹಾಗೂ ಇತರ ನಗರಗಳಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ. 100 ರ ಗಡಿ ದಾಟಿದೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕದಿಂದ ರೂ. 3 ಲಕ್ಷ ಕೋಟಿಗೂ ಹೆಚ್ಚು ಆದಾಯ ಗಳಿಸಿದ ಕೇಂದ್ರ ಸರ್ಕಾರ

ಡೀಸೆಲ್ ಬೆಲೆಯು ಹಲವು ರಾಜ್ಯಗಳಲ್ಲಿ ಮೊದಲ ಬಾರಿಗೆ ಪ್ರತಿ ಲೀಟರ್‌ಗೆ ರೂ. 100 ರ ಗಡಿ ದಾಟಿದೆ. ಒಂದೂವರೆ ಡಜನ್ ಗಿಂತ ಹೆಚ್ಚು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ ಬೆಲೆ ರೂ. 100 ಗಳಿಗಿಂತ ಹೆಚ್ಚು ಬೆಲೆಗೆ ಮಾರಾಟವಾಗುತ್ತಿದ್ದರೆ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಒಡಿಶಾ ರಾಜ್ಯಗಳಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ರೂ. 100 ರ ಗಡಿ ದಾಟಿದೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕದಿಂದ ರೂ. 3 ಲಕ್ಷ ಕೋಟಿಗೂ ಹೆಚ್ಚು ಆದಾಯ ಗಳಿಸಿದ ಕೇಂದ್ರ ಸರ್ಕಾರ

ಕಳೆದ ಒಂದು ತಿಂಗಳಿನಿಂದ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ. ಕಳೆದ ಕೆಲವು ದಿನಗಳಿಂದ ಇಂಧನ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ. ಆದರೆ ಎಲ್ಲಾ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಬೆಲೆ ರೂ. 100 ಗಳ ಗಡಿ ದಾಟಿದೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕದಿಂದ ರೂ. 3 ಲಕ್ಷ ಕೋಟಿಗೂ ಹೆಚ್ಚು ಆದಾಯ ಗಳಿಸಿದ ಕೇಂದ್ರ ಸರ್ಕಾರ

ಹಿಂದೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಅಲ್ಪ ಇಳಿಕೆಯಾದ ನಂತರ ಸೆಪ್ಟೆಂಬರ್ 2 ರಿಂದ ನಾಲ್ಕು ಮಹಾನಗರಗಳಲ್ಲಿ ಇಂಧನಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ. 101.34 ಗಳಾದರೆ, ಪ್ರತಿ ಲೀಟರ್ ಡೀಸೆಲ್ ಬೆಲೆ ರೂ. 88.77 ಗಳಾಗಿದೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕದಿಂದ ರೂ. 3 ಲಕ್ಷ ಕೋಟಿಗೂ ಹೆಚ್ಚು ಆದಾಯ ಗಳಿಸಿದ ಕೇಂದ್ರ ಸರ್ಕಾರ

ಪೆಟ್ರೋಲ್ ಮೇಲೆ ವಿಧಿಸಲಾಗುವ ತೆರಿಗೆ

ವಾಹನ ಸವಾರರು ರೂ. 100 ನೀಡಿ ಖರೀದಿಸುವ ಪೆಟ್ರೋಲ್ ನಿಜವಾಗಿಯೂ ಅಷ್ಟು ಬೆಲೆಯನ್ನು ಹೊಂದಿಲ್ಲ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಪ್ರಕಾರ, ವಾಸ್ತವವಾಗಿ ಒಂದು ಲೀಟರ್ ಪೆಟ್ರೋಲ್ ಬೆಲೆ ಕೇವಲ ರೂ. 31.82 ಗಳಾಗುತ್ತದೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕದಿಂದ ರೂ. 3 ಲಕ್ಷ ಕೋಟಿಗೂ ಹೆಚ್ಚು ಆದಾಯ ಗಳಿಸಿದ ಕೇಂದ್ರ ಸರ್ಕಾರ

ಆದರೆ ಪೆಟ್ರೋಲ್ ಹಾಗೂ ಡೀಸೆಲ್ ಮೂಲಕ ಕೇಂದ್ರ ಮತ್ತು ಎಲ್ಲಾ ರಾಜ್ಯ ಸರ್ಕಾರಗಳು ತಮ್ಮ ಖಜಾನೆಯನ್ನು ತುಂಬಿಸಿಕೊಳ್ಳಲು ವಿವಿಧ ತೆರಿಗೆಗಳನ್ನು ವಿಧಿಸುತ್ತವೆ. ಪೆಟ್ರೋಲ್, ಡೀಸೆಲ್ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೊಡ್ಡ ಮೊತ್ತದ ಆದಾಯವನ್ನು ಗಳಿಸುತ್ತವೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕದಿಂದ ರೂ. 3 ಲಕ್ಷ ಕೋಟಿಗೂ ಹೆಚ್ಚು ಆದಾಯ ಗಳಿಸಿದ ಕೇಂದ್ರ ಸರ್ಕಾರ

ದೆಹಲಿಯಲ್ಲಿನ ತೆರಿಗೆಯ ಬಗ್ಗೆ ಹೇಳುವುದಾದರೆ, ದೆಹಲಿಯಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲೆ ರೂ. 32.90 ತೆರಿಗೆ ವಿಧಿಸಿದರೆ, ರಾಜ್ಯ ಸರ್ಕಾರವು ರೂ. 20.61 ತೆರಿಗೆ ವಿಧಿಸುತ್ತದೆ. ದೆಹಲಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾರೆಯಾಗಿ ಪ್ರತಿ ಲೀಟರ್ ಪೆಟ್ರೋಲ್ ಮೇಲೆ ರೂ. 53.51 ತೆರಿಗೆ ವಿಧಿಸುತ್ತವೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕದಿಂದ ರೂ. 3 ಲಕ್ಷ ಕೋಟಿಗೂ ಹೆಚ್ಚು ಆದಾಯ ಗಳಿಸಿದ ಕೇಂದ್ರ ಸರ್ಕಾರ

ಡೀಸೆಲ್ ಮೇಲೆ ವಿಧಿಸಲಾಗುವ ತೆರಿಗೆ

ಡೀಸೆಲ್ ಅನ್ನು ದುಬಾರಿ ಇಂಧನವೆಂದು ಪರಿಗಣಿಸಲಾಗುತ್ತದೆ. ಡೀಸೆಲ್ ಅನ್ನು ಹೆಚ್ಚಾಗಿ ಕೃಷಿ ಹಾಗೂ ಸರಕು ಸಾಗಾಣಿಕೆಯಲ್ಲಿ ಬಳಸಲಾಗುತ್ತದೆ. ಡೀಸೆಲ್ ಮೇಲೆ ಹೆಚ್ಚು ತೆರಿಗೆ ವಿಧಿಸಿದರೆ, ಕೃಷಿ ಸಂಬಂಧಿತ ಚಟುವಟಿಕೆಗಳು ದುಬಾರಿಯಾಗುವುದರ ಜೊತೆಗೆ ಹಣದುಬ್ಬರವೂ ಏರಿಕೆಯಾಗುತ್ತದೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕದಿಂದ ರೂ. 3 ಲಕ್ಷ ಕೋಟಿಗೂ ಹೆಚ್ಚು ಆದಾಯ ಗಳಿಸಿದ ಕೇಂದ್ರ ಸರ್ಕಾರ

ಆದರೂ ಡೀಸೆಲ್ ಮೇಲೆ ಶೇಕಡಾ 130 ರಷ್ಟು ತೆರಿಗೆ ಸಂಗ್ರಹವಾಗುತ್ತದೆ. ವಾಸ್ತವವಾಗಿ ಪ್ರತಿ ಲೀಟರ್ ಡೀಸೆಲ್ ಬೆಲೆ ರೂ. 33.46. ಆದರೆ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಮೇಲೆ ಕೇಂದ್ರ ಸರ್ಕಾರವು ರೂ. 31.80 ತೆರಿಗೆ ವಿಧಿಸಿದರೆ, ರಾಜ್ಯ ಸರ್ಕಾರವು ರೂ. 11.68 ರೂಪಾಯಿ ತೆರಿಗೆ ಸಂಗ್ರಹಿಸುತ್ತದೆ. ಈ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರತಿ ಲೀಟರ್ ಡೀಸೆಲ್ ಮೇಲೆ ಒಟ್ಟಾರೆಯಾಗಿ ರೂ. 43.48 ತೆರಿಗೆ ವಿಧಿಸುತ್ತವೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕದಿಂದ ರೂ. 3 ಲಕ್ಷ ಕೋಟಿಗೂ ಹೆಚ್ಚು ಆದಾಯ ಗಳಿಸಿದ ಕೇಂದ್ರ ಸರ್ಕಾರ

ಆಮದಿನ ಮೇಲೆ ಹೆಚ್ಚಿದ ಅವಲಂಬನೆ

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬಳಕೆಗೆ ಹೋಲಿಸಿದರೆ ಕಡಿಮೆ ಪ್ರಮಾಣದಲ್ಲಿ ಕಚ್ಚಾ ತೈಲವನ್ನು ಉತ್ಪಾದಿಸಲಾಗುತ್ತದೆ. ಮೊದಲಿಗೆ ಹೊಲಿಸಿದರೆ ತೈಲದ ಮೇಲಿನ ಅವಲಂಬನೆಯು ಗಮನಾರ್ಹವಾಗಿ ಕಡಿಮೆಯಾಗಿದೆ. ಆದರೂ ಸುಮಾರು 70% ನಷ್ಟು ಕಚ್ಚಾ ತೈಲವನ್ನು ವಿದೇಶದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕದಿಂದ ರೂ. 3 ಲಕ್ಷ ಕೋಟಿಗೂ ಹೆಚ್ಚು ಆದಾಯ ಗಳಿಸಿದ ಕೇಂದ್ರ ಸರ್ಕಾರ

ವಿದೇಶಗಳಿಂದ ಆಮದು ಮಾಡಿಕೊಳ್ಳುವ ಕಚ್ಚಾ ತೈಲವನ್ನು ದೇಶದಲ್ಲಿರುವ ತೈಲ ಸಂಸ್ಕರಣಾಗಾರದಲ್ಲಿ ಸ್ವಚ್ಛಗೊಳಿಸಲಾಗುತ್ತದೆ. ಅವುಗಳಿಂದ ಪೆಟ್ರೋಲ್, ಡೀಸೆಲ್, ಎಲ್‌ಪಿ‌ಜಿ ಗಳನ್ನು ಹೊರ ತೆಗೆಯಲಾಗುತ್ತದೆ.

Most Read Articles

Kannada
English summary
Union government collects more than rs 3 lakh crore excise duty from petrol diesel details
Story first published: Saturday, September 4, 2021, 13:42 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X