ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

2023-24ರ ವೇಳೆಗೆ ಭಾರತವು 20% ನಷ್ಟು ಎಥೆನಾಲ್ ಅನ್ನು ಪೆಟ್ರೋಲ್‌ನೊಂದಿಗೆ ಬೆರೆಸುವ ಗುರಿಯನ್ನು ಹೊಂದಿದೆ ಎಂದು ಕೇಂದ್ರ ಸಚಿವರಾದ ಪಿಯೂಷ್ ಗೋಯಲ್'ರವರು ತಿಳಿಸಿದ್ದಾರೆ.

ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಇದೇ ವೇಳೆ ಸರ್ಕಾರದ ಅಂತಿಮ ಗುರಿ ವಾಹನಗಳು 100% ನಷ್ಟು ಎಥೆನಾಲ್'ನಲ್ಲಿ ಚಲಿಸುವಂತೆ ಮಾಡುವುದು ಎಂದು ಪಿಯೂಷ್ ಗೋಯಲ್ ಹೇಳಿದ್ದಾರೆ. ಪೆಟ್ರೋಲ್‌ಗೆ ಬೆರೆಸುವ ಎಥೆನಾಲ್ ಪ್ರಮಾಣವನ್ನು ಹಂತ ಹಂತವಾಗಿ ಹೆಚ್ಚಿಸಲು ಕೇಂದ್ರ ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ.

ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ಭಾರತಕ್ಕೆ ವಿವಿಧ ರೀತಿಯ ಪ್ರಯೋಜನಗಳಾಗಲಿವೆ. ಮೊದಲ ಪ್ರಯೋಜನವೆಂದರೆ ಭಾರತವು ಆಮದು ಮಾಡಿಕೊಳ್ಳುವ ಕಚ್ಚಾ ತೈಲದ ಪ್ರಮಾಣವು ಕಡಿಮೆಯಾಗಲಿದೆ.

ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ವಿದೇಶದಿಂದ ಹೆಚ್ಚಿನ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತಿರುವುದರಿಂದ ಭಾರತದ ಆರ್ಥಿಕತೆ ಮೇಲೆ ಹೆಚ್ಚು ಹೊರೆ ಬೀಳುತ್ತಿದೆ. ಭಾರತದ ಒಟ್ಟು ಕಚ್ಚಾ ತೈಲ ಬೇಡಿಕೆಯ 85% ರಷ್ಟು ಪ್ರಮಾಣವು ವಿದೇಶದಿಂದ ಆಮದಾಗುತ್ತಿದೆ ಎಂಬುದು ಗಮನಾರ್ಹ.

ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಈ ಹಿನ್ನೆಲೆಯಲ್ಲಿ ಕಚ್ಚಾ ತೈಲ ಆಮದನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರವು ಮೊದಲಿನಿಂದಲೂ ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇವುಗಳಲ್ಲಿ ಎಥೆನಾಲ್ ಅನ್ನು ಪೆಟ್ರೋಲ್‌ನೊಂದಿಗೆ ಬೆರೆಸುವುದು ಸಹ ಸೇರಿದೆ.

ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಎರಡನೆಯ ಪ್ರಯೋಜನವೆಂದರೆ ಪೆಟ್ರೋಲ್‌ನೊಂದಿಗೆ ಎಥೆನಾಲ್ ಅನ್ನು ಹೆಚ್ಚು ಮಿಶ್ರಣ ಮಾಡುವುದರಿಂದ ಭಾರತೀಯ ರೈತರಿಗೆ ಹಲವು ರೀತಿಯಲ್ಲಿ ಲಾಭಗಳಾಗುತ್ತವೆ. ಕೃಷಿ ಬೆಳೆಗಳಾದ ಕಬ್ಬು, ಮೆಕ್ಕೆಜೋಳ ಹಾಗೂ ಆಲೂಗಡ್ಡೆಗಳಿಂದ ಎಥೆನಾಲ್ ಉತ್ಪಾದಿಸಲಾಗುತ್ತದೆ ಎಂಬುದು ಇದಕ್ಕೆ ಪ್ರಮುಖ ಕಾರಣ.

ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಮೂರನೆಯ ಪ್ರಯೋಜನವೆಂದರೆ ಎಥೆನಾಲ್ ಅನ್ನು ಪೆಟ್ರೋಲ್‌ನೊಂದಿಗೆ ಬೆರೆಸಿ ಅದನ್ನು ವಾಹನಗಳಲ್ಲಿ ಉಪಯೋಗಿಸುವುದರಿಂದ ವಾಯುಮಾಲಿನ್ಯ ಕಡಿಮೆಯಾಗುತ್ತದೆ. ಪ್ರಪಂಚದ ಅತ್ಯಂತ ಕಲುಷಿತ ದೇಶಗಳಲ್ಲಿ ಒಂದಾದ ಭಾರತಕ್ಕೆ ಎಥೆನಾಲ್ ಬಳಕೆಯು ವರದಾನವಾಗಲಿದೆ.

ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಅಮೆರಿಕಾ ಹಾಗೂ ಬ್ರೆಜಿಲ್'ನಂತಹ ದೇಶಗಳಲ್ಲಿ ಈಗಾಗಲೇ ಎಥೆನಾಲ್ ಬಳಕೆ ಪ್ರಮಾಣವು ಹೆಚ್ಚಾಗಿದೆ. ಆದರೆ ಭಾರತವು ಎಥೆನಾಲ್ ಬಳಕೆಯಲ್ಲಿ ಇನ್ನೂ ಶೈಶವಾವಸ್ಥೆಯಲ್ಲಿದೆ.

ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಭಾರತದಲ್ಲಿ ಎಥೆನಾಲ್ ಬಳಸುವ ಪ್ರಯತ್ನಗಳು ಹಲವು ವರ್ಷಗಳ ಹಿಂದೆಯೇ ಆರಂಭವಾದವು. ಆದರೆ ಈಗ ಅದರ ಬಳಕೆಯ ಪ್ರಮಾಣವು ಹೆಚ್ಚಾಗುತ್ತಿದೆ. ಭಾರತದ ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆ ಮಾಡಬೇಕೆಂಬ ಕೇಂದ್ರ ಸರ್ಕಾರದ ದೃಢ ನಿರ್ಧಾರವೇ ಇದಕ್ಕೆ ಕಾರಣ.

ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ

ಇದರ ಜೊತೆಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವ ಮೂಲಕ ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆ ಮಾಡಲು ಹಾಗೂ ವಾಯುಮಾಲಿನ್ಯ ಸಮಸ್ಯೆಗೆ ಪರಿಹಾರ ನೀಡಲು ಕೇಂದ್ರ ಸರ್ಕಾರವು ಮುಂದಾಗಿದೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Union Government to increase ethanol blending with fuel by 2023-24. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X