ವಾಹನ ಚಾಲನೆ ವೇಳೆ ಫೇಸ್ ಮಾಸ್ಕ್ ಧರಿಸುವ ಬಗ್ಗೆ ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ

ಕರೋನಾ ವೈರಸ್ ಜನ ಜೀವನವನ್ನು ತತ್ತರಿಸುವಂತೆ ಮಾಡಿದೆ. ಕರೋನಾ ವೈರಸ್ ಗೆ ಯಾವುದೇ ಲಸಿಕೆಯನ್ನು ಕಂಡು ಹಿಡಿದಿಲ್ಲ. ಕರೋನಾ ವೈರಸ್ ಹರಡದಂತೆ ತಡೆಯುವುದೇ ಇದಕ್ಕಿರುವ ಮದ್ದು. ಕರೋನಾ ವೈರಸ್ ಹರಡುವುದನ್ನು ತಡೆಯಲು ಫೇಸ್ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ವಾಹನ ಚಾಲನೆ ವೇಳೆ ಫೇಸ್ ಮಾಸ್ಕ್ ಧರಿಸುವ ಬಗ್ಗೆ ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ

ದೇಶದ ಹಲವೆಡೆ ಫೇಸ್ ಮಾಸ್ಕ್ ಧರಿಸದೇ ಓಡಾಡುವವರಿಗೆ ದಂಡ ವಿಧಿಸಲಾಗುತ್ತಿದೆ. ವಾಹನ ಚಾಲನೆ ಮಾಡುವಾಗ ಫೇಸ್ ಮಾಸ್ಕ್ ಧರಿಸದಿದ್ದರೂ ದಂಡ ವಿಧಿಸಲಾಗುತ್ತಿದೆ. ಈ ಬಗ್ಗೆ ಗೊಂದಲವೇರ್ಪಟ್ಟಿತ್ತು. ಈ ಕಾರಣಕ್ಕೆ ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ. ವಾಹನ ಚಾಲನೆ ಮಾಡುವ ವೇಳೆಯಲ್ಲಿ ಫೇಸ್ ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸುವ ಯಾವುದೇ ಸೂಚನೆಯನ್ನು ನೀಡಿಲ್ಲವೆಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ವಾಹನ ಚಾಲನೆ ವೇಳೆ ಫೇಸ್ ಮಾಸ್ಕ್ ಧರಿಸುವ ಬಗ್ಗೆ ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ

ಈ ಮಾಹಿತಿಯನ್ನು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ನೀಡಿದ್ದಾರೆ. ಏಕಾಂಗಿಯಾಗಿ ವಾಹನ ಚಲಾಯಿಸುವಾಗ ಮುಖವಾಡ ಧರಿಸುವುದನ್ನು ಕಡ್ಡಾಯಗೊಳಿಸಿ ಯಾವುದೇ ಮಾಹಿತಿ ನೀಡಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ವಾಹನ ಚಾಲನೆ ವೇಳೆ ಫೇಸ್ ಮಾಸ್ಕ್ ಧರಿಸುವ ಬಗ್ಗೆ ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ

ಕಾರಿನಲ್ಲಿ ಏಕಾಂಗಿಯಾಗಿ ಪ್ರಯಾಣಿಸುವವರು ಫೇಸ್ ಮಾಸ್ಕ್ ಧರಿಸದ ಕಾರಣಕ್ಕೆ ದೆಹಲಿ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಇದರ ಬಗ್ಗೆ ಸ್ಪಷ್ಟನೆ ನೀಡುವಂತೆ ಕೋರಿ ದೆಹಲಿಯ ಜನರು ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರವನ್ನು ಒತ್ತಾಯಿಸುತ್ತಿದ್ದರು.

ವಾಹನ ಚಾಲನೆ ವೇಳೆ ಫೇಸ್ ಮಾಸ್ಕ್ ಧರಿಸುವ ಬಗ್ಗೆ ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ

ಈ ವಿಷಯದ ಬಗ್ಗೆ ಮಾತನಾಡಿರುವ ದೆಹಲಿ ಪೊಲೀಸರು ಕಾರಿನಲ್ಲಿ ಫೇಸ್ ಮಾಸ್ಕ್ ಧರಿಸದೇ ಸಂಚರಿಸುವವರಿಗೆ ರೂ.500ಗಳ ದಂಡವನ್ನು ವಿಧಿಸುತ್ತಿದ್ದೇವೆ ಎಂದು ಹೇಳಿದರು. ಕಾರು ಸಾರ್ವಜನಿಕ ರಸ್ತೆಯಲ್ಲಿ ಸಂಚರಿಸುವ ಕಾರಣಕ್ಕೆ ದಂಡ ವಿಧಿಸಲಾಗುತ್ತಿದೆ.

MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ವಾಹನ ಚಾಲನೆ ವೇಳೆ ಫೇಸ್ ಮಾಸ್ಕ್ ಧರಿಸುವ ಬಗ್ಗೆ ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ

ದಂಡವನ್ನು ತೆಗೆದುಕೊಳ್ಳದಿರುವಂತೆ ಪೊಲೀಸ್ ಇಲಾಖೆಗೆ ಇನ್ನೂ ಲಿಖಿತ ಸೂಚನೆ ಬಂದಿಲ್ಲ. ನಾವು ಲಿಖಿತ ಮಾಹಿತಿಯನ್ನು ಪಡೆದ ತಕ್ಷಣ ಅದನ್ನು ಕಾರ್ಯಗತಗೊಳಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಹನ ಚಾಲನೆ ವೇಳೆ ಫೇಸ್ ಮಾಸ್ಕ್ ಧರಿಸುವ ಬಗ್ಗೆ ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ

ಪೊಲೀಸರ ಪ್ರಕಾರ ಸಬ್ ಇನ್ಸ್‌ಪೆಕ್ಟರ್ ಹಾಗೂ ಅವರಿಗಿಂತ ಉನ್ನತ ಹುದ್ದೆಯಲ್ಲಿರುವ ಯಾವುದೇ ಅಧಿಕಾರಿ ದಂಡವನ್ನು ವಸೂಲಿ ಮಾಡಬಹುದು. ದೆಹಲಿ ಪೊಲೀಸರು ಪ್ರತಿದಿನ ಫೇಸ್ ಮಾಸ್ಕ್ ಧರಿಸದ 1200 - 1500 ಚಾಲಕರಿಗೆ ದಂಡ ವಿಧಿಸುತ್ತಿದ್ದಾರೆ.

MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ವಾಹನ ಚಾಲನೆ ವೇಳೆ ಫೇಸ್ ಮಾಸ್ಕ್ ಧರಿಸುವ ಬಗ್ಗೆ ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ

ಕಾರಿನಲ್ಲಿ ಒಂಟಿಯಾಗಿ ಪ್ರಯಾಣಿಸುವವರು ಏಕೆ ಫೇಸ್ ಮಾಸ್ಕ್ ಧರಿಸಬೇಕು ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಕಾರಿನ ವಿಂಡೋಗಳನ್ನು ಮುಚ್ಚಿ ಕಾರಿನಲ್ಲಿ ಒಂಟಿಯಾಗಿ ಓಡಾಡಿದರೆ ಯಾರಿಗೂ ತೊಂದರೆಯಾಗುವುದಿಲ್ಲ ಎಂಬುದು ಜನರ ಅಭಿಪ್ರಾಯ.

ಸೂಚನೆ: ಈ ಲೇಖನದಲ್ಲಿ ಸಾಂದರ್ಭಿಕ ಚಿತ್ರಗಳನ್ನು ಬಳಸಲಾಗಿದೆ.

Most Read Articles

Kannada
English summary
Union health ministry clarifies about face mask. Read in Kannada.
Story first published: Friday, September 4, 2020, 13:59 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X