ಹೆದ್ದಾರಿ ನಿರ್ಮಾಣದ ಗುರಿ ಬದಲಿಸಿದ ಕೇಂದ್ರ ಸರ್ಕಾರ

ಭಾರತದಲ್ಲಿ ಪ್ರತಿ ವರ್ಷ ಸುಮಾರು 1.50 ಲಕ್ಷ ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ. ರಸ್ತೆ ಅಪಘಾತಗಳನ್ನು ತಡೆಯುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ಹೆದ್ದಾರಿ ನಿರ್ಮಾಣದ ಗುರಿ ಬದಲಿಸಿದ ಕೇಂದ್ರ ಸರ್ಕಾರ

ವಾಹನ ಚಾಲಕರು ಸಂಚಾರ ನಿಯಮಗಳನ್ನು ಉಲ್ಲಂಘಿಸುವುದರಿಂದಲೂ ರಸ್ತೆ ಅಪಘಾತಗಳು ಸಂಭವಿಸುತ್ತವೆ. ವಾಹನ ಚಾಲಕರು ಸಂಚಾರ ನಿಯಮಗಳನ್ನು ಪಾಲಿಸಲಿ ಎಂಬ ಕಾರಣಕ್ಕೆ 2019ರ ಸೆಪ್ಟೆಂಬರ್‌ನಲ್ಲಿ ಹೊಸ ಮೋಟಾರು ವಾಹನ ಕಾಯ್ದೆಯನ್ನು ಜಾರಿಗೆ ತರಲಾಯಿತು.

ಹೆದ್ದಾರಿ ನಿರ್ಮಾಣದ ಗುರಿ ಬದಲಿಸಿದ ಕೇಂದ್ರ ಸರ್ಕಾರ

ಹೊಸ ಕಾಯ್ದೆಯನ್ವಯ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಭಾರೀ ಪ್ರಮಾಣದ ದಂಡವನ್ನು ವಿಧಿಸಲಾಗುತ್ತದೆ. ಇದರಿಂದಾಗಿ ಸಂಚಾರ ನಿಯಮಗಳ ಉಲ್ಲಂಘನೆಯು ಕೆಲ ಮಟ್ಟಿಗೆ ಕಡಿಮೆಯಾಗಿದೆ. ಭಾರತದಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗಲು ಮತ್ತೊಂದು ಪ್ರಮುಖ ಕಾರಣವಿದೆ.

MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್

ಹೆದ್ದಾರಿ ನಿರ್ಮಾಣದ ಗುರಿ ಬದಲಿಸಿದ ಕೇಂದ್ರ ಸರ್ಕಾರ

ಅದುವೇ ಹದಗೆಟ್ಟ ರಸ್ತೆಗಳು. ಆದ್ದರಿಂದ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರವು ಹೆಚ್ಚು ಗಮನ ಹರಿಸುತ್ತಿದೆ. ಅಪಘಾತಗಳನ್ನು ತಪ್ಪಿಸಿ, ದೇಶದ ಆರ್ಥಿಕ ಪರಿಸ್ಥಿತಿಗಳನ್ನು ಸುಧಾರಿಸುವುದು ರಸ್ತೆ ನಿರ್ಮಾಣದ ಹಿಂದಿರುವ ಮುಖ್ಯ ಉದ್ದೇಶ. ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ರಸ್ತೆಗಳು ಪ್ರಮುಖ ಪಾತ್ರ ವಹಿಸುತ್ತವೆ.

ಹೆದ್ದಾರಿ ನಿರ್ಮಾಣದ ಗುರಿ ಬದಲಿಸಿದ ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್‌ಹೆಚ್‌ಎಐ) 2019-20ರ ಆರ್ಥಿಕ ವರ್ಷದಲ್ಲಿ 3,979 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಿದೆ. ಇದಕ್ಕಿಂತ ಮುಂಚೆ ಇಷ್ಟು ಉದ್ದದ ರಸ್ತೆಗಳನ್ನು ನಿರ್ಮಿಸಿರಲಿಲ್ಲ. ಆದ್ದರಿಂದ ಇದನ್ನು ಸಾಧನೆ ಎಂದು ಪರಿಗಣಿಸಲಾಗುತ್ತದೆ.

MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!

ಹೆದ್ದಾರಿ ನಿರ್ಮಾಣದ ಗುರಿ ಬದಲಿಸಿದ ಕೇಂದ್ರ ಸರ್ಕಾರ

ಈ ಹಿಂದೆ, 2018-19ರ ಆರ್ಥಿಕ ವರ್ಷದಲ್ಲಿ 3,380 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣವು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿರುವುದನ್ನು ಈ ಅಂಕಿ ಅಂಶಗಳಿಂದ ಕಾಣಬಹುದು.

ಹೆದ್ದಾರಿ ನಿರ್ಮಾಣದ ಗುರಿ ಬದಲಿಸಿದ ಕೇಂದ್ರ ಸರ್ಕಾರ

ಈ ಹಿನ್ನೆಲೆಯಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು ಪ್ರತಿ ದಿನ 60 ಕಿ.ಮೀ ಉದ್ದದ ರಸ್ತೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ. ಈ ಬಗ್ಗೆ ಇಲಾಖೆಯ ಸಚಿವ ನಿತಿನ್ ಗಡ್ಕರಿರವರು ಮಂಗಳವಾರ ಮಾಹಿತಿ ನೀಡಿದ್ದಾರೆ.

MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಹೆದ್ದಾರಿ ನಿರ್ಮಾಣದ ಗುರಿ ಬದಲಿಸಿದ ಕೇಂದ್ರ ಸರ್ಕಾರ

ಕೋವಿಡ್ -19 ವೈರಸ್ ಹಾವಳಿಯ ನಂತರ ದೇಶದ ಆರ್ಥಿಕತೆಯು ಶೀಘ್ರವಾಗಿ ಚೇತರಿಸಿಕೊಳ್ಳಲಿದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಕೆಲಸವನ್ನು ವೇಗಗೊಳಿಸಲು ಯೋಜಿಸುತ್ತಿದೆ. ಆರ್ಥಿಕತೆಯನ್ನು ಹೆಚ್ಚಿಸಲು ಮೂಲಸೌಕರ್ಯಗಳನ್ನು ಸುಧಾರಿಸುವ ಅಗತ್ಯವಿದೆ ಎಂದು ನಿತಿನ್ ಗಡ್ಕರಿ ಹೇಳಿದರು.

ಹೆದ್ದಾರಿ ನಿರ್ಮಾಣದ ಗುರಿ ಬದಲಿಸಿದ ಕೇಂದ್ರ ಸರ್ಕಾರ

ಈ ಬಗ್ಗೆ ಮಾತನಾಡಿದ ನಿತಿನ್ ಗಡ್ಕರಿರವರು ಈ ಮೊದಲು ದಿನಕ್ಕೆ 30 ಕಿ.ಮೀ ಉದ್ದದ ರಸ್ತೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿತ್ತು. ಆ ಗುರಿಯನ್ನು ತಲುಪಿದ್ದು, ಪ್ರತಿದಿನ 60 ಕಿ.ಮೀ ಉದ್ದದ ರಸ್ತೆಯನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದರು.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಹೆದ್ದಾರಿ ನಿರ್ಮಾಣದ ಗುರಿ ಬದಲಿಸಿದ ಕೇಂದ್ರ ಸರ್ಕಾರ

ಮೂಲಸೌಕರ್ಯಗಳನ್ನು ಸುಧಾರಿಸುವುದರಿಂದ ದೇಶದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಇದು ಆರ್ಥಿಕತೆಯನ್ನು ಮತ್ತಷ್ಟು ಉತ್ತೇಜಿಸುತ್ತದೆ. ಕೋವಿಡ್ -19 ವೈರಸ್‌ ವಿಶ್ವದ ಹಲವು ದೇಶಗಳ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂಬುದನ್ನು ಗಮನಿಸಬೇಕು.

ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್‌ಗಾಗಿ ಬಳಸಲಾಗಿದೆ.

Most Read Articles

Kannada
English summary
Union Minister Nitin Gadkari plans to set 60km target per day for national highway construction. Read in Kannada.
Story first published: Friday, April 17, 2020, 12:50 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X