Just In
- 1 hr ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 3 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 5 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 15 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- Movies
ದೀದಿ ಸಾಮ್ರಾಜ್ಯದಲ್ಲಿ ಕಮಲದ ಕೈ ಹಿಡಿದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- News
ಚಿನ್ನ ಕಳ್ಳ ಸಾಗಾಣಿಕೆ ಅನುಮಾನ; 48 ಲಕ್ಷ ವಾಚ್ ಒಡೆದ ಅಧಿಕಾರಿಗಳು!
- Sports
ಐಪಿಎಲ್ 2021: ಅಧಿಕೃತ ವೇಳಾಪಟ್ಟಿ ಬಿಡುಗಡೆ, ಮೊದಲ ಪಂದ್ಯದಲ್ಲಿ ಆರ್ಸಿಬಿಗೆ ಮುಂಬೈ ಎದುರಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಾರ್ವಜನಿಕರಲ್ಲಿ ಆಕ್ರೋಶವನ್ನುಂಟು ಮಾಡಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗೆಗಿನ ಸಚಿವರ ಹೇಳಿಕೆ
ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ದೇಶದ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ಈಗಾಗಲೇ ಶತಕದ ಗಡಿ ದಾಟಿದೆ. ಶೀಘ್ರದಲ್ಲೇ ಭಾರತದೆಲ್ಲೆಡೆ ಪೆಟ್ರೋಲ್, ಡೀಸೆಲ್ ಬೆಲೆ ರೂ.100ರ ಗಡಿ ದಾಟುವ ಸಾಧ್ಯತೆಗಳಿವೆ.

ಪೆಟ್ರೋಲ್, ಡೀಸೆಲ್ ಬೇರೆ ಏರಿಕೆಯಿಂದಾಗಿ ಜನ ಸಾಮಾನ್ಯರು ತತ್ತರಿಸಿದ್ದಾರೆ. ಇದರ ಜೊತೆಗೆ ಅಡುಗೆ ಅನಿಲದ (ಗ್ಯಾಸ್) ಬೆಲೆಯನ್ನು ರೂ. 50ಗಳಷ್ಟು ಹೆಚ್ಚಿಸಲಾಗಿದೆ. ಇದರಿಂದಾಗಿ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರಶ್ನಿಸಲಾಯಿತು. ಈ ಪ್ರಶ್ನೆಗೆ ಉತ್ತರಿಸಿದ ಅವರು ಜನರು ಪರ್ಯಾಯ ಇಂಧನಗಳಿಗೆ ಬದಲಾಗಬೇಕು ಎಂದು ಹೇಳಿದರು.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಸಚಿವರ ಈ ಉತ್ತರವು ಸಾರ್ವಜನಿಕರಲ್ಲಿ ಆಕ್ರೋಶವನ್ನುಂಟು ಮಾಡಿದೆ. ಪೆಟ್ರೋಲ್, ಡೀಸೆಲ್ ಬೆಲೆಗಳು ಗಗನಕ್ಕೇರುತ್ತಿರುವುದರಿಂದ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗುತ್ತದೆ. ಜೊತೆಗೆ ಬಸ್ ಪ್ರಯಾಣ ದರವೂ ಏರಿಕೆಯಾಗಲಿದೆ.

ದಿನ ನಿತ್ಯ ಕಾರು, ಬಸ್ ಬಳಸುವವರು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದಾಗಿ ವಾಹನಗಳನ್ನು ಬಳಸಲು ಹಿಂದೆ ಮುಂದೆ ನೋಡುವಂತಾಗಿದೆ. ವಿರೋಧ ಪಕ್ಷಗಳು ಸರ್ಕಾರದ ಈ ಕ್ರಮವನ್ನು ಜನ ವಿರೋಧಿ ಎಂದು ಹೇಳಿವೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆಗೊಳಿಸುವಂತೆ ಒತ್ತಾಯಿಸಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಇಳಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುತ್ತಿಲ್ಲ.

ಇಷ್ಟು ಸಾಲದೆಂಬಂತೆ ಇತ್ತೀಚಿನ ಕೇಂದ್ರ ಬಜೆಟ್'ನಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸಲಾಗಿದೆ. ಈಗ ಪೆಟ್ರೋಲ್ ಮೇಲೆ 61% ಹಾಗೂ ಡೀಸೆಲ್ ಬೆಲೆ 56%ನಷ್ಟು ತೆರಿಗೆ ವಿಧಿಸಲಾಗುತ್ತಿದೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಹೆಚ್ಚಿನ ತೆರಿಗೆ ವಿಧಿಸುತ್ತಿರುವ ಕಾರಣಕ್ಕೆ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿದೆ. ಭಾರತವು ಪೆಟ್ರೋಲ್, ಡೀಸೆಲ್ ಅನ್ನು ಪರಿಷ್ಕರಿಸಿ ವಿದೇಶಗಳಿಗೆ ರಫ್ತು ಮಾಡುತ್ತದೆ. ಭಾರತವು ರಫ್ತು ಮಾಡುವ ದೇಶಗಳಲ್ಲಿ ಶ್ರೀಲಂಕಾ ಕೂಡ ಒಂದು. ಶ್ರೀಲಂಕಾದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ರೂ. 62ಗಳಾಗಿದೆ.

ಇನ್ನು ಭಾರತದಿಂದ ಇಂಧನವನ್ನು ಖರೀದಿಸುವ ಬಾಂಗ್ಲಾದೇಶದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ರೂ.78ಗಳಾಗಿದೆ. ರಫ್ತು ಮಾಡುವ ದೇಶಗಳಲ್ಲಿಯೇ ಕಡಿಮೆ ಬೆಲೆಗೆ ಮಾರಾಟವಾಗುತ್ತಿದ್ದು, ಇಲ್ಲಿ ಹೆಚ್ಚಿನ ದರ ವಿಧಿಸಲಾಗುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿದಂತೆ, ಭಾರತದಲ್ಲಿಯೂ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗುತ್ತದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಇಳಿದರೂ ಸಹ ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲೆ ವಿಶೇಷ ಹೆಚ್ಚುವರಿ ತೆರಿಗೆಯನ್ನು ವಿಧಿಸುತ್ತಿದೆ.

ಇದರಿಂದಾಗಿ ತೈಲ ಬೆಲೆ ಇಳಿಕೆಯ ಪ್ರಯೋಜನವು ಜನ ಸಾಮಾನ್ಯರಿಗೆ ಸಿಗದಂತಾಗಿದೆ. ಇದೇ ವೇಳೆ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚುತ್ತಿರುವ ಕಾರಣಕ್ಕೆ ಜನರು ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಗಬೇಕೆಂದು ಕೇಂದ್ರ ಸಚಿವರು ಹೇಳಿದ್ದಾರೆ.