ಆನ್‌ಲೈನ್‌ ಸೇವೆಗಳನ್ನು ಪಡೆಯಲು ಆಧಾರ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ

ಆಧಾರ್ ಕಾರ್ಡ್ ಕಡ್ಡಾಯವಲ್ಲವೆಂದು ಹೇಳಲಾಗಿದ್ದರೂ ಕೆಲವು ಸೇವೆಗಳನ್ನು ಪಡೆಯಲು ಆಧಾರ್ ಕಾರ್ಡ್ ಸಲ್ಲಿಸುವುದು ಕಡ್ಡಾಯವಾಗಿದೆ. ಅದರಲ್ಲೂ ಸರ್ಕಾರದ ಅನುದಾನ ಪಡೆಯಲು ಹಾಗೂ ಇತರ ಕೆಲವು ಸೇವೆಗಳನ್ನು ಪಡೆಯಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ.

ಆನ್‌ಲೈನ್‌ ಸೇವೆಗಳನ್ನು ಪಡೆಯಲು ಆಧಾರ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ

ಈ ಹಿನ್ನೆಲೆಯಲ್ಲಿ ತಾನು ನೀಡುವ ಎಲ್ಲಾ ಸೇವೆಗಳಿಗೆ ಕೇಂದ್ರ ರಸ್ತೆ ಸಾರಿಗೆ ಇಲಾಖೆಯು ಆಧಾರ್ ಕಾರ್ಡ್ ಅನ್ನು ಕಡ್ಡಾಯಗೊಳಿಸಿದೆ. ನೇರವಾದ ಸೇವೆಗಳನ್ನು ಪಡೆಯದೇ ಆನ್‌ಲೈನ್‌ನಲ್ಲಿ ಸೇವೆಯನ್ನು ಪಡೆಯುವವರಿಗೆ ಮಾತ್ರ ಈ ನಿಯಮವು ಅನ್ವಯಿಸುತ್ತದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಆನ್‌ಲೈನ್‌ ಸೇವೆಗಳನ್ನು ಪಡೆಯಲು ಆಧಾರ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ

ಆರ್‌ಟಿಒ ಕಚೇರಿಗಳು ನೀಡುವ ಆನ್‌ಲೈನ್ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಸಾರಿಗೆ ಇಲಾಖೆಯು, ನೇರ ಸಂಪರ್ಕವಿಲ್ಲದೆ ಆನ್‌ಲೈನ್ ಮೂಲಕ 16 ರೀತಿಯ ವಿವಿಧ ಸೇವೆಗಳನ್ನು ನೀಡುತ್ತದೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಆನ್‌ಲೈನ್‌ ಸೇವೆಗಳನ್ನು ಪಡೆಯಲು ಆಧಾರ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ

ಸಾರಿಗೆ ಇಲಾಖೆಯು ಆನ್‌ಲೈನ್‌ ಮೂಲಕ ಡ್ರೈವಿಂಗ್ ಲೈಸೆನ್ಸ್ ನವೀಕರಣ, ವಿಳಾಸ ಬದಲಾವಣೆ, ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡುವುದು, ಲರ್ನರ್ ಲೈಸೆನ್ಸ್ ನೀಡುವುದು ಸೇರಿದಂತೆ ವಿವಿಧ ರೀತಿಯ ಸೇವೆಗಳನ್ನು ನೀಡುತ್ತದೆ.

ಆನ್‌ಲೈನ್‌ ಸೇವೆಗಳನ್ನು ಪಡೆಯಲು ಆಧಾರ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ

ಈ ಸೇವೆಗಳನ್ನು ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ ಎಂದು ಸಾರಿಗೆ ಇಲಾಖೆಯು ಅಧಿಸೂಚನೆಯನ್ನು ಹೊರಡಿಸಿದೆ. ಅಕ್ರಮಗಳನ್ನು ತಪ್ಪಿಸಲು ಆಧಾರ್ ಕಾರ್ಡ್ ಅನ್ನು ಕಡ್ಡಾಯಗೊಳಿಸಲಾಗಿದೆ ಎಂದು ಹೇಳಲಾಗಿದೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಆನ್‌ಲೈನ್‌ ಸೇವೆಗಳನ್ನು ಪಡೆಯಲು ಆಧಾರ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ

ಇದರ ಜೊತೆಗೆ ಆನ್‌ಲೈನ್ ಸೇವೆಗಳಿಗೆ ಚುರುಕು ಮುಟ್ಟಿಸಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದೆ ಎಂದು ವರದಿಯಾಗಿದೆ. ಆಧಾರ್ ಕಾರ್ಡ್ ಹೊಂದಿಲ್ಲದವರು ಅಥವಾ ಆಧಾರ್ ಕಾರ್ಡ್ ಸಲ್ಲಿಸಲು ಬಯಸದವರು ನೇರವಾಗಿ ಆರ್‌ಟಿಒ ಕಚೇರಿಗಳಿಗೆ ತೆರಳಿ ಈ ಸೇವೆಗಳನ್ನು ಪಡೆಯುವಂತೆ ಸೂಚಿಸಲಾಗಿದೆ.

ಆನ್‌ಲೈನ್‌ ಸೇವೆಗಳನ್ನು ಪಡೆಯಲು ಆಧಾರ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ

ಆರ್‌ಟಿಒ ಕಚೇರಿಗಳಿಗೆ ತೆರಳಿ ಈ ಸೇವೆಗಳನ್ನು ಪಡೆಯಲು ಬಯಸುವವರಿಗೆ ಆಧಾರ್ ಕಾರ್ಡ್ ಅನ್ನು ಕಡ್ಡಾಯಗೊಳಿಸಿಲ್ಲ. ಸರ್ಕಾರದ ಆನ್‌ಲೈನ್ ಸೇವೆಯನ್ನುಪಡೆಯುವ ಬಹುತೇಕ ಜನರು ನಕಲಿ ದಾಖಲೆಗಳನ್ನು ನೀಡಿ ವಂಚಿಸುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿವೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಆನ್‌ಲೈನ್‌ ಸೇವೆಗಳನ್ನು ಪಡೆಯಲು ಆಧಾರ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ

ಈ ಹಿನ್ನೆಲೆಯಲ್ಲಿ ಕೇಂದ್ರ ಸಾರಿಗೆ ಇಲಾಖೆಯು ತನ್ನ ಸೇವೆಗಳನ್ನು ಆನ್‌ಲೈನ್ ಮೂಲಕ ಪಡೆಯಲು ಬಯಸುವವರಿಗೆ ಆಧಾರ್ ಕಾರ್ಡ್ ನೀಡುವುದನ್ನು ಕಡ್ಡಾಯಗೊಳಿಸಿದೆ.

Most Read Articles

Kannada
English summary
Union transport ministry mandates Aadhar card for its online services. Read in Kannada.
Story first published: Tuesday, February 9, 2021, 20:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X