ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ಚಿಕಿತ್ಸೆ ಸಿಗುವಂತೆ ಮಾಡಲಿದೆ ಈ ಹೊಸ ಯೋಜನೆ

ದೇಶಾದ್ಯಂತವಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ವೈದ್ಯಕೀಯ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು ಹೊಸ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ.

ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ಚಿಕಿತ್ಸೆ ಸಿಗುವಂತೆ ಮಾಡಲಿದೆ ಈ ಹೊಸ ಯೋಜನೆ

ಈ ಹಿನ್ನೆಲೆಯಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು ಅಪಘಾತದ ಸಂದರ್ಭದಲ್ಲಿ ಪೊಲೀಸರಿಗೆ ಹಾಗೂ ಆಂಬುಲೆನ್ಸ್‌ಗಳಿಗೆ ತಕ್ಷಣವೇ ಮಾಹಿತಿ ಲಭ್ಯವಾಗುವಂತೆ ಮಾಡಲು ಸುಧಾರಿತ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ. ಈ ಹೊಸ ಅತ್ಯಾಧುನಿಕ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.

ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ಚಿಕಿತ್ಸೆ ಸಿಗುವಂತೆ ಮಾಡಲಿದೆ ಈ ಹೊಸ ಯೋಜನೆ

ಈ ಹೊಸ ಯೋಜನೆಯಡಿ ಗಾಯಾಳುಗಳನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲು ಜಿಪಿಎಸ್ ಸೌಲಭ್ಯ ಹೊಂದಿರುವ ಆಂಬ್ಯುಲೆನ್ಸ್ ಸಿದ್ಧವಾಗಲಿದೆ. ರಸ್ತೆ ಸುರಕ್ಷತೆಯನ್ನು ಸುಧಾರಿಸಲು ಹೊಸ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯ ಕಾರ್ಯದರ್ಶಿ ಗಿರಿಧರ್ ಅರಮನೆ ಹೇಳಿದ್ದಾರೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ಚಿಕಿತ್ಸೆ ಸಿಗುವಂತೆ ಮಾಡಲಿದೆ ಈ ಹೊಸ ಯೋಜನೆ

ಪೊಲೀಸರನ್ನು, ಆಂಬ್ಯುಲೆನ್ಸ್‌ಗಳನ್ನು ಹಾಗೂ ಆಸ್ಪತ್ರೆಗಳನ್ನು ಒಂದೇ ನೆಟ್‌ವರ್ಕ್ ಅಡಿಯಲ್ಲಿ ತರುವುದರಿಂದ ರಸ್ತೆ ಅಪಘಾತಕ್ಕೆ ಒಳಗಾದವರಿಗೆ ತಕ್ಷಣವೇ ಚಿಕಿತ್ಸೆ ನೀಡಬಹುದು ಎಂದು ಅವರು ಹೇಳಿದರು.

ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ಚಿಕಿತ್ಸೆ ಸಿಗುವಂತೆ ಮಾಡಲಿದೆ ಈ ಹೊಸ ಯೋಜನೆ

ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ. ಭಾರತವು ಪ್ರತಿವರ್ಷ ಹೆಚ್ಚು ಅಪಘಾತಗಳನ್ನು ದಾಖಲಿಸುವ ದೇಶಗಳಲ್ಲಿ ಒಂದಾಗಿದೆ. ಭಾರತದಲ್ಲಿ ಸರಿ ಸುಮಾರು 1.50 ಲಕ್ಷ ಜನರು ರಸ್ತೆ ಅಪಘಾತಗಳಿಂದ ಸಾವನ್ನಪ್ಪುತ್ತಿದ್ದಾರೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ಚಿಕಿತ್ಸೆ ಸಿಗುವಂತೆ ಮಾಡಲಿದೆ ಈ ಹೊಸ ಯೋಜನೆ

ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ಸಕಾಲದಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಲು ಸಾಧ್ಯವಾಗದೇ ಇರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಈ ಕಾರಣಕ್ಕೆ ರಸ್ತೆಅಪಘಾತಗಳಲ್ಲಿ ಸಾವನ್ನಪ್ಪುವವರ ಸಂಖ್ಯೆಯನ್ನು ಕಡಿಮೆ ಮಾಡುವ ಸಲುವಾಗಿ ಈ ಹೊಸ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.

ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ಚಿಕಿತ್ಸೆ ಸಿಗುವಂತೆ ಮಾಡಲಿದೆ ಈ ಹೊಸ ಯೋಜನೆ

ಇದರ ಜೊತೆಗೆ ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ಕೇಂದ್ರ ಸರ್ಕಾರವು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಜನರ ಪ್ರತಿಭಟನೆಯ ನಡುವೆಯೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಸಂಚಾರ ಉಲ್ಲಂಘನೆಗಾಗಿ ಭಾರೀ ಪ್ರಮಾಣದ ದಂಡ ವಿಧಿಸುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ಚಿಕಿತ್ಸೆ ಸಿಗುವಂತೆ ಮಾಡಲಿದೆ ಈ ಹೊಸ ಯೋಜನೆ

ಹೊಸ ಮೋಟಾರು ವಾಹನ ಕಾಯ್ದೆಯನ್ನು 2019ರ ಸೆಪ್ಟೆಂಬರ್‌ನಲ್ಲಿ ಜಾರಿಗೊಳಿಸಲಾಯಿತು. ಹೊಸ ಕಾಯ್ದೆಯು ಜಾರಿಯಾದ ನಂತರ ಭಾರತದಾದ್ಯಂತ ರಸ್ತೆ ಅಪಘಾತಗಳ ಸಂಖ್ಯೆಯಲ್ಲಿ 3.86%ನಷ್ಟು ಇಳಿಕೆಯಾಗಿದೆ.

ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ಚಿಕಿತ್ಸೆ ಸಿಗುವಂತೆ ಮಾಡಲಿದೆ ಈ ಹೊಸ ಯೋಜನೆ

ಕೇಂದ್ರ ಸರ್ಕಾರವು ಹೊಸ ಮೋಟಾರು ವಾಹನ ಕಾಯ್ದೆಯ ಜೊತೆಗೆ ಇನ್ನೂ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ವಾಹನಗಳಲ್ಲಿ ವಿವಿಧ ಸುರಕ್ಷತಾ ಸಾಧನಗಳಾದ ಏರ್‌ಬ್ಯಾಗ್ ಹಾಗೂ ಎಬಿಎಸ್ ಅನ್ನು ಕಡ್ಡಾಯಗೊಳಿಸಿರುವುದು ಇದಕ್ಕೆ ಉದಾಹರಣೆಯಾಗಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ಚಿಕಿತ್ಸೆ ಸಿಗುವಂತೆ ಮಾಡಲಿದೆ ಈ ಹೊಸ ಯೋಜನೆ

ಈ ಸುರಕ್ಷತಾ ಸಾಧನಗಳು ವಾಹನಗಳ ಸುರಕ್ಷತೆಯನ್ನು ಹೆಚ್ಚಿಸುತ್ತವೆ. ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಸಂಚಾರ ನಿಯಮಗಳನ್ನು ವಾಹನ ಸವಾರರುಸರಿಯಾಗಿ ಪಾಲಿಸಿದರೆ ಭಾರತದಲ್ಲಿ ರಸ್ತೆ ಅಪಘಾತಗಳ ಸಾಕಷ್ಟು ಸಂಖ್ಯೆಯಲ್ಲಿ ಕಡಿಮೆಯಾಗಲಿದೆ.

Most Read Articles

Kannada
English summary
Union transport ministry new scheme to provide immediate treatment to road accident victims. Read in Kannada.
Story first published: Tuesday, February 9, 2021, 14:34 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X