ರಸ್ತೆ ಸುರಕ್ಷತೆಗಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಲು ಮುಂದಾದ ಸಾರಿಗೆ ಇಲಾಖೆ

ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು, ದೇಶದಲ್ಲಿ ಚಾಲಕ ಮತ್ತು ರಸ್ತೆ ಸುರಕ್ಷತೆ ತಂತ್ರಜ್ಞಾನಗಳಿಗೆ ಸಂಬಂಧಿಸಿದಂತೆ ಐಐಟಿ ಮದ್ರಾಸ್ ಹಾಗೂ ಡಿಜಿಟಲ್ ಟೆಕ್ ಕಂಪನಿಯಾದ MapmyIndia ಗಳ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಸಹಭಾಗಿತ್ವದಲ್ಲಿ ನಾಗರಿಕರಿಗಾಗಿ ಉಚಿತ ಬಳಕೆಯ ನ್ಯಾವಿಗೇಷನ್ ಅಪ್ಲಿಕೇಶನ್ ಅನ್ನು ಆರಂಭಿಸಲಾಗುವುದು. ಈ ಅಪ್ಲಿಕೇಷನ್ ರಸ್ತೆಯಲ್ಲಿರುವ ಅಪಘಾತಗಳ ಅಪಾಯಗಳ ಬಗ್ಗೆ ಎಚ್ಚರಿಕೆ ನೀಡುತ್ತದೆ.

ರಸ್ತೆ ಸುರಕ್ಷತೆಗಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಲು ಮುಂದಾದ ಸಾರಿಗೆ ಇಲಾಖೆ

ಈ ನ್ಯಾವಿಗೇಷನ್ ಅಪ್ಲಿಕೇಶನ್ ಸೇವೆಯು ಅಪಘಾತ ಪೀಡಿತ ಪ್ರದೇಶಗಳು, ಸ್ಪೀಡ್ ಬ್ರೇಕರ್‌ಗಳು, ಚೂಪಾದ ವಕ್ರಾಕೃತಿಗಳು, ರಸ್ತೆ ಗುಂಡಿ ಸೇರಿದಂತೆ ಇತರ ಅಪಾಯಗಳ ಬಗ್ಗೆ ಚಾಲಕರಿಗೆ ಧ್ವನಿ ಹಾಗೂ ದೃಶ್ಯ ರೂಪದಲ್ಲಿ ಎಚ್ಚರಿಕೆಗಳನ್ನು ನೀಡುತ್ತದೆ. ಈ ಉಪಕ್ರಮವು ದೇಶದಲ್ಲಿ ರಸ್ತೆ ಅಪಘಾತಗಳಿಂದ ಉಂಟಾಗುವ ಅಪಘಾತಗಳು ಹಾಗೂ ಸಾವುಗಳನ್ನು ಕಡಿಮೆ ಮಾಡುವ ರಸ್ತೆ ಸಾರಿಗೆ ಇಲಾಖೆಯ ಒಂದು ಭಾಗವಾಗಿದೆ.

ರಸ್ತೆ ಸುರಕ್ಷತೆಗಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಲು ಮುಂದಾದ ಸಾರಿಗೆ ಇಲಾಖೆ

MOVE ಎಂಬ ಹೆಸರಿನ ಈ ಅಪ್ಲಿಕೇಶನ್ ಅನ್ನು MapmyIndia ಕಂಪನಿ ಅಭಿವೃದ್ಧಿಪಡಿಸಿದೆ. ಈ ಮೊಬೈಲ್ ಅಪ್ಲಿಕೇಶನ್, 2020 ರಲ್ಲಿ ಕೇಂದ್ರ ಸರ್ಕಾರದ ಆತ್ಮನಿರ್ಭರ್ ಆಪ್ ಇನ್ನೋವೇಶನ್ ಚಾಲೆಂಜ್ ಪ್ರಶಸ್ತಿಯನ್ನು ಸಹ ಗೆದ್ದಿದೆ. ಅಪಘಾತಗಳು, ಅಸುರಕ್ಷಿತ ಪ್ರದೇಶಗಳು, ರಸ್ತೆ ಮತ್ತು ಸಂಚಾರ ಸಮಸ್ಯೆಗಳನ್ನು ನಕ್ಷೆಯಲ್ಲಿ ವರದಿ ಮಾಡಲು ಹಾಗೂ ಪ್ರಸಾರ ಮಾಡಲು ನಾಗರಿಕರು ಮತ್ತು ಅಧಿಕಾರಿಗಳು ಈ ಸೇವೆಯನ್ನು ಬಳಸಬಹುದು.

ರಸ್ತೆ ಸುರಕ್ಷತೆಗಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಲು ಮುಂದಾದ ಸಾರಿಗೆ ಇಲಾಖೆ

ಈ ಅಪ್ಲಿಕೇಷನ್ ನಲ್ಲಿರುವ ಡೇಟಾವನ್ನು ಐಐಟಿ ಮದ್ರಾಸ್ ಹಾಗೂ MapmyIndia ಗಳು ವಿಶ್ಲೇಷಿಸುತ್ತವೆ. ಭವಿಷ್ಯದಲ್ಲಿ ರಸ್ತೆ ಪರಿಸ್ಥಿತಿಗಳನ್ನು ಸುಧಾರಿಸಲು ಕೇಂದ್ರ ಸರ್ಕಾರವು ಈ ಮಾಹಿತಿಯನ್ನು ಬಳಸುತ್ತದೆ. ಕಳೆದ ತಿಂಗಳು ಸಾರಿಗೆ ಇಲಾಖೆಯು ವಿಶ್ವಬ್ಯಾಂಕ್‌ ಧನಸಹಾಯದೊಂದಿಗೆ ಐಐಟಿ ಮದ್ರಾಸ್‌ನ ಸಂಶೋಧಕರು ರಚಿಸಿದ ಡೇಟಾ ಚಾಲಿತ ರಸ್ತೆ ಸುರಕ್ಷತೆ ಮಾದರಿಯನ್ನು ಅಧಿಕೃತವಾಗಿ ಅಳವಡಿಸಿಕೊಂಡಿದೆ.

ರಸ್ತೆ ಸುರಕ್ಷತೆಗಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಲು ಮುಂದಾದ ಸಾರಿಗೆ ಇಲಾಖೆ

32 ಕ್ಕೂ ಹೆಚ್ಚು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ರಸ್ತೆಗಳನ್ನು ಸುರಕ್ಷಿತವಾಗಿಸಲು ಮತ್ತು ತುರ್ತು ಪ್ರತಿಕ್ರಿಯೆಯನ್ನು ಸುಧಾರಿಸಲು, ಸಂಸ್ಥೆಯು ಅಭಿವೃದ್ಧಿಪಡಿಸಿದ ಇಂಟಿಗ್ರೇಟೆಡ್ ರಸ್ತೆ ಅಪಘಾತ ಡೇಟಾಬೇಸ್ (iRAD) ಮಾದರಿಯನ್ನು ಬಳಸುತ್ತವೆ. ಐಐಟಿ ತಂಡವು 2030 ರ ವೇಳೆಗೆ ರಸ್ತೆ ಅಪಘಾತದ ಪ್ರಮಾಣವನ್ನು 50% ನಷ್ಟು ಕಡಿಮೆ ಮಾಡಲು ಹಾಗೂ ರಸ್ತೆ ಅಪಘಾತಗಳಿಂದ ಉಂಟಾಗುವ ಸಾವಿನ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ವಿವಿಧ ರಾಜ್ಯ ಸರ್ಕಾರಗಳೊಂದಿಗೆ ಒಪ್ಪಂದಗಳಿಗೆ ಸಹಿ ಹಾಕಿದೆ.

ರಸ್ತೆ ಸುರಕ್ಷತೆಗಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಲು ಮುಂದಾದ ಸಾರಿಗೆ ಇಲಾಖೆ

ರಸ್ತೆ ಬಳಕೆದಾರರ ಸುರಕ್ಷತೆಯನ್ನು ಹೆಚ್ಚಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಸಹ ರಸ್ತೆ ಸುರಕ್ಷತೆಯ ಅಗತ್ಯವನ್ನು ಪದೇ ಪದೇ ಒತ್ತಿ ಹೇಳಿದ್ದಾರೆ. ರಸ್ತೆಯಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಖಾತ್ರಿಪಡಿಸುವ ಪ್ರಯತ್ನದಲ್ಲಿ ಎಲ್ಲಾ ಹೆದ್ದಾರಿ ಯೋಜನೆಗಳಲ್ಲಿ ಫ್ಲೈಓವರ್‌ಗಳು, ಅಂಡರ್‌ಪಾಸ್‌ಗಳು, ಫುಟ್‌ಓವರ್ ಸೇತುವೆಗಳನ್ನು ನಿರ್ಮಿಸಲಾಗುತ್ತಿದೆ.

ರಸ್ತೆ ಸುರಕ್ಷತೆಗಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಲು ಮುಂದಾದ ಸಾರಿಗೆ ಇಲಾಖೆ

ಹೆದ್ದಾರಿಗಳ ರಸ್ತೆ ಸುರಕ್ಷತಾ ಲೆಕ್ಕ ಪರಿಶೋಧನೆ ನಡೆಸುವಂತೆಯೂ ಆದೇಶ ನೀಡಲಾಗಿದೆ. ಇದರ ಅಡಿಯಲ್ಲಿ ಹೆದ್ದಾರಿಗಳಲ್ಲಿರುವ ಬ್ಲಾಕ್ ಸ್ಪಾಟ್ ಗಳನ್ನು ತೆಗೆದುಹಾಕಲಾಗುತ್ತಿದೆ. ಈ ಹಿಂದೆ ಕೇಂದ್ರ ರಸ್ತೆ ಸಾರಿಗೆ ಇಲಾಖೆಯು 4,500 ಬ್ಲಾಕ್ ಸ್ಪಾಟ್ ಗಳನ್ನು ಗುರುತಿಸಿತ್ತು. ಕಳೆದ ವರ್ಷದ ನವೆಂಬರ್‌ನಿಂದ ದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಲೆಕ್ಕ ಪರಿಶೋಧನೆ ನಡೆಸಲಾಗುತ್ತಿದೆ.

ರಸ್ತೆ ಸುರಕ್ಷತೆಗಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಲು ಮುಂದಾದ ಸಾರಿಗೆ ಇಲಾಖೆ

ಇದರ ಅಡಿಯಲ್ಲಿ ಸ್ವತಂತ್ರ ರಸ್ತೆ ಸುರಕ್ಷತಾ ತಜ್ಞರ ತಂಡಕ್ಕೆ ರಾಷ್ಟ್ರೀಯ ಹೆದ್ದಾರಿ ಯೋಜನೆಯ ಲೆಕ್ಕಪರಿಶೋಧನೆಯ ಕಾರ್ಯವನ್ನು ವಹಿಸಲಾಗಿದೆ. ಹೆದ್ದಾರಿಗಳ ಸುರಕ್ಷತೆಯಲ್ಲಿರುವ ಲೋಪಗಳನ್ನು ಪತ್ತೆಹಚ್ಚಲು ಇದು ನೆರವಾಗುತ್ತದೆ. ಇದರ ನಂತರ ಆಡಿಟ್ ವರದಿಯಲ್ಲಿನ ತಜ್ಞರ ಸಲಹೆಗಳು ಹಾಗೂ ಕ್ರಮಗಳನ್ನು ನಿರ್ಮಾಣ ಕಂಪನಿಗಳು ಕಾರ್ಯಗತಗೊಳಿಸಬೇಕಾಗುತ್ತದೆ.

ರಸ್ತೆ ಸುರಕ್ಷತೆಗಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಲು ಮುಂದಾದ ಸಾರಿಗೆ ಇಲಾಖೆ

ದೇಶದಲ್ಲಿ ಅತಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುವ 14 ರಾಜ್ಯಗಳನ್ನು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು ಗುರುತಿಸಿದ್ದು, ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ರೂ. 7,270 ಕೋಟಿ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಹದಿನಾಲ್ಕು ರಾಜ್ಯಗಳು ದೇಶದ ಒಟ್ಟು ರಸ್ತೆ ಅಪಘಾತಗಳ 85% ನಷ್ಟನ್ನು ಹೊಂದಿವೆ.

ರಸ್ತೆ ಸುರಕ್ಷತೆಗಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಲು ಮುಂದಾದ ಸಾರಿಗೆ ಇಲಾಖೆ

ಉತ್ತರ ಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ಕರ್ನಾಟಕ, ರಾಜಸ್ಥಾನ, ತಮಿಳುನಾಡು, ಆಂಧ್ರಪ್ರದೇಶ, ಗುಜರಾತ್, ಬಿಹಾರ, ತೆಲಂಗಾಣ, ಪಶ್ಚಿಮ ಬಂಗಾಳ, ಒಡಿಶಾ, ಹರಿಯಾಣ ಹಾಗೂ ಅಸ್ಸಾಂ ರಾಜ್ಯಗಳು ರಸ್ತೆ ಸುರಕ್ಷತೆ ಗುರಿಯನ್ನು ಹೊಂದಬೇಕಾಗಿದೆ. ರಸ್ತೆ ಅಪಘಾತಗಳನ್ನು ತಡೆಗಟ್ಟಲು ಹಾಗೂ ಸಾವಿನ ಪ್ರಮಾಣವನ್ನು ಕಡಿಮೆ ಮಾಡುವ ಉದ್ದೇಶದಿಂದ ತಳಮಟ್ಟದಲ್ಲಿ ರಸ್ತೆ ಸುರಕ್ಷತೆಯನ್ನು ಸುಧಾರಿಸಲು ಈ ಯೋಜನೆಯು ರಾಜ್ಯ ಸರ್ಕಾರಗಳಿಗೆ ನೆರವಾಗುತ್ತದೆ.

ರಸ್ತೆ ಸುರಕ್ಷತೆಗಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಲು ಮುಂದಾದ ಸಾರಿಗೆ ಇಲಾಖೆ

ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯ ಪ್ರಕಾರ 2020 ರಲ್ಲಿ ರಸ್ತೆ ಉಬ್ಬು ಹಾಗೂ ರಸ್ತೆ ಗುಂಡಿಗಳಿಂದ 3,564 ರಸ್ತೆ ಅಪಘಾತಗಳು ಸಂಭವಿಸಿವೆ. 2019 ರಲ್ಲಿ ಈ ಅಂಕಿ ಅಂಶವು ಇದಕ್ಕಿಂತ ಹೆಚ್ಚಾಗಿತ್ತು. ಆ ವರ್ಷ 4,775 ರಸ್ತೆ ಅಪಘಾತಗಳು ರಸ್ತೆ ಉಬ್ಬು ಹಾಗೂ ರಸ್ತೆ ಗುಂಡಿಗಳಿಂದ ಸಂಭವಿಸಿದ್ದವು. ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು ಈ ಬಗ್ಗೆ ಸಂಸತ್ತಿನಲ್ಲಿ ಮಾಹಿತಿ ನೀಡಿದೆ.

ರಸ್ತೆ ಸುರಕ್ಷತೆಗಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಲು ಮುಂದಾದ ಸಾರಿಗೆ ಇಲಾಖೆ

ಹೆದ್ದಾರಿಗಳ ಕಳಪೆ ನಿರ್ವಹಣೆಯಿಂದ ಎಷ್ಟು ರಸ್ತೆ ಅಪಘಾತಗಳು ಸಂಭವಿಸಿವೆ ಎಂಬ ತೆಲುಗು ದೇಶಂ ಪಕ್ಷದ ಸಂಸದ ಜಯದೇವ್ ಕಲಾ ರವರ ಪ್ರಶ್ನೆಗೆ ಸಂಸತ್ತಿನಲ್ಲಿ ಈ ಮಾಹಿತಿ ನೀಡಲಾಗಿದೆ. ಇದೇ ವೇಳೆ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು ರಸ್ತೆ ಅಪಘಾತಗಳಿಗೆ ಹಲವಾರು ಕಾರಣಗಳನ್ನು ನೀಡಿದೆ. ಇದರ ಪ್ರಕಾರ ಕೆಟ್ಟ ಬೆಳಕು, ಕೆಟ್ಟ ಹವಾಮಾನ, ಕೆಟ್ಟ ರಸ್ತೆಗಳು, ಅತಿ ವೇಗದ ಚಾಲನೆ, ಡ್ರೈವಿಂಗ್ ತಪ್ಪುಗಳು, ಓವರ್‌ಲೋಡ್, ಚಾಲನೆ ಮಾಡುವಾಗ ಸೆಲ್ ಫೋನ್ ಬಳಕೆಗಳಿಂದ ರಸ್ತೆ ಅಪಘಾತಗಳು ಸಂಭವಿಸುತ್ತಿವೆ.

ರಸ್ತೆ ಸುರಕ್ಷತೆಗಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಲು ಮುಂದಾದ ಸಾರಿಗೆ ಇಲಾಖೆ

ಇದರ ಜೊತೆಗೆ ಕುಡಿದು ವಾಹನ ಚಲಾಯಿಸುವುದು, ಸಿಗ್ನಲ್ ಜಂಪ್ ಮಾಡುವುದು, ಓವರ್‌ಟೇಕ್ ಮಾಡುವುದು ಸೇರಿದಂತೆ ವಿವಿಧ ಕಾರಣಗಳಿಗೆ ರಸ್ತೆ ಅಪಘಾತಗಳು ಸಂಭವಿಸುತ್ತವೆ. ಈ ಬಗ್ಗೆ ಮಾತನಾಡಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿರವರು ಕಳೆದ 5 ವರ್ಷಗಳಿಗೆ ಹೋಲಿಸಿದರೆ 2020 ರಲ್ಲಿ ರಸ್ತೆ ಉಬ್ಬುಗಳು ಹಾಗೂ ರಸ್ತೆ ಗುಂಡಿಗಳಿಂದ ಸಂಭವಿಸುವ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.

ರಸ್ತೆ ಸುರಕ್ಷತೆಗಾಗಿ ಹೊಸ ಆ್ಯಪ್ ಅಭಿವೃದ್ಧಿಪಡಿಸಲು ಮುಂದಾದ ಸಾರಿಗೆ ಇಲಾಖೆ

ವರದಿಗಳ ಪ್ರಕಾರ, 2016ರಲ್ಲಿ ಹದಗೆಟ್ಟ ರಸ್ತೆಗಳಿಂದಾಗಿ 6,424 ರಸ್ತೆ ಅಪಘಾತಗಳು ಸಂಭವಿಸಿವೆ. ಇನ್ನು 2017 ರಲ್ಲಿ 9,423, 2018 ರಲ್ಲಿ 4,869 ರಸ್ತೆ ಅಪಘಾತಗಳು ಸಂಭವಿಸಿದ್ದರೆ, 2019 ರಲ್ಲಿ 4,775 ರಸ್ತೆ ಅಪಘಾತಗಳು ಸಂಭವಿಸಿವೆ. ಭಾರತದಲ್ಲಿ ಕೆಟ್ಟ ರಸ್ತೆಗಳಿಂದಾಗಿ ಸಂಭವಿಸುವ ರಸ್ತೆ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬುದು ಈ ಅಂಕಿ ಅಂಶಗಳಿಂದ ದೃಢಪಟ್ಟಿದೆ.

Most Read Articles

Kannada
English summary
Union transport ministry to launch new app to increase safety on highways details
Story first published: Tuesday, December 21, 2021, 10:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X