Just In
Don't Miss!
- Lifestyle
ಭಾನುವಾರದ ದಿನ ಭವಿಷ್ಯ: ಈ ದಿನ ನಿಮ್ಮ ರಾಶಿಫಲ ಹೇಗಿದೆ ನೋಡಿ
- Sports
ಐಪಿಎಲ್ನಲ್ಲಿ ಕೆಟ್ಟ ದಾಖಲೆ ಬರೆದ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ
- Finance
ಶಾಲೆಯನ್ನ ಅರ್ಧಕ್ಕೆ ತೊರೆದು, 8,000 ರೂ. ವೇತನ ಪಡೆಯುತ್ತಿದ್ದ ನಿಖಿಲ್ ಕಾಮತ್ ಶತಕೋಟ್ಯಧಿಪತಿ ಆಗಿದ್ದೇಗೆ?
- News
ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರ ಬಿಗಿ ರೂಲ್ಸ್
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಅಜಯ್ ದೇವಗನ್-ಅಮಿತಾಭ್ ಸಿನಿಮಾದ ಚಿತ್ರೀಕರಣಕ್ಕೆ ಕೊರೊನಾ ಅಡ್ಡಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಟೋಲ್ ಸಿಬ್ಬಂದಿ ಜೊತೆಗೆ ವಾಗ್ವಾದಕ್ಕಿಳಿದ ಜಿಲ್ಲಾ ನ್ಯಾಯಾಧೀಶರು
ಟೋಲ್ ಪ್ಲಾಜಾಗಳಲ್ಲಿ ಟೋಲ್ ಶುಲ್ಕ ಸಂಗ್ರಹಿಸಲು ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಲಾಗಿದೆ. ಫಾಸ್ಟ್‌ಟ್ಯಾಗ್ ಬಳಸದ ವಾಹನಗಳಿಗೆ ಎರಡು ಪಟ್ಟು ಹೆಚ್ಚು ಶುಲ್ಕ ವಿಧಿಸಲಾಗುತ್ತದೆ. ಹಲವು ರಾಜಕೀಯ ಪಕ್ಷಗಳ ಮುಖಂಡರು ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಿರುವುದನ್ನು ಹಗಲು ದರೋಡೆ ಎಂದು ಟೀಕಿಸುತ್ತಿದ್ದಾರೆ.

ಬಹುತೇಕ ಜನರಿಗೆ ಆಕ್ರೋಶವಿದ್ದರೂ ಬೇರೆ ದಾರಿ ಕಾಣದೇ ಫಾಸ್ಟ್‌ಟ್ಯಾಗ್ ಮೂಲಕ ಟೋಲ್ ಶುಲ್ಕವನ್ನು ಪಾವತಿಸುತ್ತಿದ್ದಾರೆ. ಬಡ ಜನರು ಹಾಗೂ ಜನ ಸಾಮಾನ್ಯರು ಸಹ ಟೋಲ್ ಪ್ಲಾಜಾ ದಾಟುವಾಗ ಟೋಲ್ ಶುಲ್ಕ ಪಾವತಿಸಲೇ ಬೇಕಾಗಿದೆ.

ಹಲವು ಸಂದರ್ಭಗಳಲ್ಲಿ ಟೋಲ್ ಪ್ಲಾಜಾ ಸಿಬ್ಬಂದಿ ಹಾಗೂ ವಾಹನ ಸವಾರರ ನಡುವೆ ಮಾತಿನ ಚಕಮಕಿ ನಡೆಯುತ್ತದೆ. ಹೀಗೆ ಬಹುತೇಕ ಬಾರಿ ಟೋಲ್ ಸಿಬ್ಬಂದಿ ಜೊತೆ ವಾಗ್ವಾದ ನಡೆಸುವವರು ಉನ್ನತ ಸ್ಥಾನಗಲ್ಲಿರುವವರೇ ಆಗಿರುತ್ತಾರೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಇದಕ್ಕೆ ಪುಷ್ಟಿ ನೀಡುವಂತಹ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಮಾರುತಿ ಸುಜುಕಿ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ತಾವು ಟೋಲ್ ಪಾವತಿಸುವುದಿಲ್ಲವೆಂದು ಟೋಲ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿರುವ ಘಟನೆ ವರದಿಯಾಗಿದೆ.

ಉತ್ತರ ಪ್ರದೇಶದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ತಮ್ಮ ಬಳಿ ಟೋಲ್ ಶುಲ್ಕ ಪಾವತಿಸಿಕೊಳ್ಳದೇ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಬೇಕು ಎಂದು ಟೋಲ್ ಸಿಬ್ಬಂದಿ ಜೊತೆ ವಾಗ್ವಾದಕ್ಕಿಳಿದಿದ್ದ ಬಗ್ಗೆ ವರದಿಯಾಗಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಟೋಲ್ ಸಿಬ್ಬಂದಿ ತಮ್ಮ ಗುರುತಿನ ಚೀಟಿಯನ್ನು ತೋರಿಸುವಂತೆ ನ್ಯಾಯಾಧೀಶರನ್ನು ಕೇಳಿಕೊಂಡಿದ್ದಾರೆ. ಗುರುತಿನ ಚೀಟಿ ನೋಡಿದ ನಂತರ ಹೆಚ್ಚುವರಿ ನ್ಯಾಯಾಧೀಶರಿಗೆ ಟೋಲ್ ಶುಲ್ಕದಿಂದ ವಿನಾಯಿತಿ ನೀಡಲಾಗುವುದಿಲ್ಲವೆಂದು ಹೇಳಿದ್ದಾರೆ.

ಜಿಲ್ಲಾ ನ್ಯಾಯಾಧೀಶರು ಟೋಲ್ ಪ್ಲಾಜಾದ ಮೇಲ್ವಿಚಾರಕರನ್ನು ಕರೆದು ಅವರೊಂದಿಗೆ ಸುದೀರ್ಘ ಅವಧಿಯವರೆಗೆ ಮಾತನಾಡಿದ್ದಾರೆ. ಅಲ್ಲಿನ ಮೇಲ್ವಿಚಾರಕರು ಸಹ ಟೋಲ್ ಶುಲ್ಕ ಪಾವತಿಸಬೇಕೆಂದು ಹೇಳಿದ್ದಾರೆ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಟೋಲ್ ಶುಲ್ಕದಿಂದ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನ್ಯಾಯಾಧೀಶರಿಗೆ ಮಾತ್ರ ವಿನಾಯಿತಿ ನೀಡಲಾಗುತ್ತದೆ. ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಿಗೆ ನೀಡಲಾಗುವುದಿಲ್ಲವೆಂದು ತಿಳಿಸಿದ್ದಾರೆ.

ಕೊನೆಗೆ ನ್ಯಾಯಾಧೀಶರು ರೂ.80 ಟೋಲ್ ಶುಲ್ಕ ಪಾವತಿಸಿ ಅಲ್ಲಿಂದ ತೆರಳಿದ್ದಾರೆ. ನ್ಯಾಯಾಧೀಶರು ಹಾಗೂ ಟೋಲ್ ಸಿಬ್ಬಂದಿ ನಡುವೆ ನಡೆದ ವಾಗ್ವಾದದ ಕಾರಣಕ್ಕೆ ನ್ಯಾಯಾಧೀಶರ ಕಾರಿನ ಹಿಂದೆ ನಿಲ್ಲಿಸಿದ್ದ ಇತರ ವಾಹನಗಳು ಬಹಳ ಸಮಯ ಕಾಯಬೇಕಾಯಿತು.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಟ್ರಾಫಿಕ್ ಜಾಮ್ ಉಂಟಾದ್ದ ಕಾರಣಕ್ಕೆ ವಾಹನಗಳಿಂದ ಟೋಲ್ ಶುಲ್ಕ ಸಂಗ್ರಹಿಸುವಂತಿಲ್ಲವೆಂದು ನ್ಯಾಯಾಧೀಶರು ವಾದಿಸಿದ್ದಾರೆ. ಆದರೆ ನ್ಯಾಯಾಧೀಶರೇ ಟೋಲ್ ಶುಲ್ಕ ಪಾವತಿಸಿ ಅಲ್ಲಿಂದ ತೆರಳಿದ್ದಾರೆ.

ಟೋಲ್ ಶುಲ್ಕ ಭರಿಸಲಾಗದ ಪರಿಸ್ಥಿತಿಯಲ್ಲಿರುವ ಅನೇಕ ಜನರು ಟೋಲ್ ಶುಲ್ಕ ಪಾವತಿಸುತ್ತಿದ್ದಾರೆ. ಆದರೆ ಉನ್ನತ ಹುದ್ದೆಗಳಲ್ಲಿರುವ ವ್ಯಕ್ತಿಗಳು ಟೋಲ್ ಶುಲ್ಕದಿಂದ ವಿನಾಯಿತಿ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಟೋಲ್ ಶುಲ್ಕದಿಂದ ವಿನಾಯಿತಿ ನೀಡುವಂತೆ ಉತ್ತರ ಪ್ರದೇಶದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಟೋಲ್ ಸಿಬ್ಬಂದಿ ಜೊತೆಗೆ ವಾಗ್ವಾದ ನಡೆಸಿದ್ದಕ್ಕೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗಿದೆ. ಈ ಬಗ್ಗೆಕಾರ್ ಟಾಕ್ ವರದಿ ಮಾಡಿದೆ.