ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ, ಭಾರೀ ಪ್ರಮಾಣದ ದಂಡ ವಿಧಿಸಲು ಮುಂದಾದ ಸರ್ಕಾರ

ಭಾರತದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಾಹನ ಸವಾರರು ಸಂಚಾರಿ ನಿಯಮಗಳನ್ನು ಉಲ್ಲಂಘಿಸುವುದೇ ಇದಕ್ಕೆ ಪ್ರಮುಖ ಕಾರಣ. ಲಾಕ್ ಡೌನ್ ಅವಧಿಯಲ್ಲಿಯೂ ಸಹ ರಸ್ತೆ ಅಪಘಾತಗಳ ಸಂಖ್ಯೆ ಕಡಿಮೆಯಾಗಿರಲಿಲ್ಲ.

ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ, ಭಾರೀ ಪ್ರಮಾಣದ ದಂಡ ವಿಧಿಸಲು ಮುಂದಾದ ಸರ್ಕಾರ

ಲಾಕ್ ಡೌನ್ ಅವಧಿಯಲ್ಲಿ ದೇಶದ ಬಹುತೇಕ ರಸ್ತೆಗಳು ನಿರ್ಜನವಾಗಿದ್ದವು. ಜನರ ಸಂಚಾರದ ಮೇಲೆ ನಿರ್ಬಂಧ ಹೇರಲಾಗಿತ್ತು. ಇದೇ ಸಂದರ್ಭವನ್ನು ತಮ್ಮ ಅನುಕೂಲಕ್ಕೆ ಬಳಸಿಕೊಂಡ ಕೆಲವರು ಖಾಲಿ ರಸ್ತೆಗಳು ಇರುವುದೇ ತಮಗಾಗಿ ಎಂಬಂತೆ ಅತಿ ವೇಗವಾಗಿ ವಾಹನಗಳನ್ನು ಚಲಾಯಿಸಿದರು. ಇದರಿಂದಾಗಿ ಲಾಕ್ ಡೌನ್ ಅವಧಿಯಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಏರಿಕೆಯಾಯಿತು.

ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ, ಭಾರೀ ಪ್ರಮಾಣದ ದಂಡ ವಿಧಿಸಲು ಮುಂದಾದ ಸರ್ಕಾರ

ಕರೋನಾ ವೈರಸ್ ಕರ್ತವ್ಯದಲ್ಲಿ ನಿರತರಾಗಿದ್ದ ಪೊಲೀಸರು ಸಂಚಾರ ನಿಯಮ ಉಲ್ಲಂಘನೆಗಳ ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಳ್ಳಲ್ಲಿಲ್ಲ. ಈ ಕಾರಣಕ್ಕೆ ವಾಹನ ಸವಾರರು ಸಂಚಾರಿ ನಿಯಮಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಉಲ್ಲಂಘಿಸಿದರು.

MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ, ಭಾರೀ ಪ್ರಮಾಣದ ದಂಡ ವಿಧಿಸಲು ಮುಂದಾದ ಸರ್ಕಾರ

ಇದರಿಂದಾಗಿ ರಸ್ತೆ ಅಪಘಾತ ಪ್ರಮಾಣವು ಮತ್ತೆ ಹೆಚ್ಚಾದ ಕಾರಣ ಪೊಲೀಸರ ಮೇಲೆ ಒತ್ತಡ ಉಂಟಾಗಿರುವುದು ಸುಳ್ಳಲ್ಲ. ಈ ಕಾರಣಕ್ಕೆ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.

ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ, ಭಾರೀ ಪ್ರಮಾಣದ ದಂಡ ವಿಧಿಸಲು ಮುಂದಾದ ಸರ್ಕಾರ

ಉತ್ತರಪ್ರದೇಶ ಪೊಲೀಸರು ವಾಹನ ಚಾಲನೆ ಮಾಡುವಾಗ ಸೆಲ್ ಫೋನ್ ಬಳಸುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸಿ ಸಿಕ್ಕಿ ಬೀಳುವವರಿಗೆ ರೂ.10 ಸಾವಿರ ದಂಡ ವಿಧಿಸಲು ಮುಂದಾಗಿದ್ದಾರೆ.

MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ, ಭಾರೀ ಪ್ರಮಾಣದ ದಂಡ ವಿಧಿಸಲು ಮುಂದಾದ ಸರ್ಕಾರ

ಮೊದಲ ಬಾರಿಗೆ ಸಿಕ್ಕಿಬಿದ್ದರೆ, ರೂ.1,000 ದಂಡ ವಿಧಿಸಲಾಗುವುದು. ಎರಡನೇ ಬಾರಿ ಸಿಕ್ಕಿಬಿದ್ದರೆ ಹತ್ತು ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಉತ್ತರ ಪ್ರದೇಶ ಸಾರಿಗೆ ಇಲಾಖೆಯು ಅಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದೆ.

ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ, ಭಾರೀ ಪ್ರಮಾಣದ ದಂಡ ವಿಧಿಸಲು ಮುಂದಾದ ಸರ್ಕಾರ

ಭಾರತದಲ್ಲಿ ಹೆಚ್ಚಿನ ಸಂಖ್ಯೆಯ ರಸ್ತೆ ಅಪಘಾತಗಳು ಸಂಭವಿಸಲು ಮುಖ್ಯ ಕಾರಣ ಅಜಾಗರೂಕ ಚಾಲನೆ. ಇದರಲ್ಲಿ ಮೊಬೈಲ್ ಫೋನ್‌ ಬಳಕೆ ಮಾಡುತ್ತಾ ವಾಹನ ಚಾಲನೆ ಮಾಡುವುದರಿಂದ ಹೆಚ್ಚಿನ ಸಂಖ್ಯೆಯ ಅಪಘಾತಗಳಾಗುತ್ತಿವೆ.

MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ, ಭಾರೀ ಪ್ರಮಾಣದ ದಂಡ ವಿಧಿಸಲು ಮುಂದಾದ ಸರ್ಕಾರ

ಈ ಕಾರಣಕ್ಕೆ ಉತ್ತರ ಪ್ರದೇಶ ಸಾರಿಗೆ ಇಲಾಖೆ ಈ ಉಲ್ಲಂಘನೆಗೆ ಗರಿಷ್ಠ ದಂಡ ವಿಧಿಸಲು ಮುಂದಾಗಿದೆ. ಭಾರೀ ಪ್ರಮಾಣದ ದಂಡವನ್ನು ವಿಧಿಸಲು ಮುಂದಾಗಿರುವ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ, ಭಾರೀ ಪ್ರಮಾಣದ ದಂಡ ವಿಧಿಸಲು ಮುಂದಾದ ಸರ್ಕಾರ

ಕರೋನಾ ವೈರಸ್ ಕಾರಣದಿಂದಾಗಿ ಈಗಾಗಲೇ ಹಲವಾರು ಜನರು ಉದ್ಯೋಗಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೊತೆಗೆ ಆರ್ಥಿಕ ಬಿಕ್ಕಟ್ಟು ಸಹ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಇಷ್ಟು ಪ್ರಮಾಣದ ದಂಡ ವಿಧಿಸುವುದು ಎಷ್ಟು ಸರಿ ಎಂಬ ಪ್ರಶ್ನೆ ಎದುರಾಗಿದೆ.

Most Read Articles

Kannada
English summary
UP government to impose fine up to Rs.10000 for using mobile phones while driving. Read in Kannada.
Story first published: Monday, August 3, 2020, 10:14 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X