Expressway: ಕರ್ನಾಟಕದಲ್ಲಿ 3 ಹೊಸ ಎಕ್ಸ್‌ಪ್ರೆಸ್‌ವೇಗಳು ಸಿದ್ದಗೊಳ್ಳುತ್ತಿವೆ.. ಊರಿಗೆ ಹೋಗುವುದು ಸುಲಭ!

ಕೇಂದ್ರ ಸರ್ಕಾರ ಮೂಲಸೌಕರ್ಯ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸುತ್ತಿದ್ದು, ಭಾರೀ ವೇಗದಲ್ಲಿ ದೇಶದ ನಾನಾ ಭಾಗಗಳಲ್ಲಿ ಎಕ್ಸ್‌ಪ್ರೆಸ್‌ವೇಗಳನ್ನು ಅಭಿವೃದ್ಧಿಪಡಿಸುತ್ತಿದೆ. ಕರ್ನಾಟಕದಲ್ಲಿಯೂ ಹೊಸ ಎಕ್ಸ್‌ಪ್ರೆಸ್‌ವೇಗಳು ಸಿದ್ಧಗೊಳ್ಳುತ್ತಿವೆ. ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದ್ದು, ಅತಿ ಶೀಘ್ರದಲ್ಲಿಯೇ ಉದ್ಘಾಟನೆಗೊಳ್ಳುವ ನಿರೀಕ್ಷೆಯಿದೆ. ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್‌ವೇ ಹಾಗೂ ಬೆಂಗಳೂರು-ಪುಣೆ ಎಕ್ಸ್‌ಪ್ರೆಸ್‌ವೇಗಳ ನಿರ್ಮಾಣಕ್ಕೂ ಸಿದ್ಧತೆಗಳು ನಡೆದಿದೆ. ಬನ್ನಿ.. ಈ ನೂತನ ಹೆದ್ದಾರಿಗಳು ಏನೇನು ವಿಶೇಷತೆಗಳನ್ನು ಹೊಂದಿವೆ ಎಂಬುದರ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ (Bengaluru-Chennai Expressway): ಈ ಹೆದ್ದಾರಿ ಸರಿ ಸುಮಾರು 262 ಕಿ.ಮೀ ಉದ್ದವಿದ್ದು, ಕರ್ನಾಟಕದಲ್ಲಿ 71 ಕಿ.ಮೀ ಹಾದು ಹೋಗಲಿದೆ. ರಾಜ್ಯದಲ್ಲಿ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದ್ದು, ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನಲ್ಲಿ ಸಾಕಷ್ಟು ಕೆಲಸಗಳು ಬಾಕಿ ಉಳಿದಿದೆ. ಈ ರಸ್ತೆ ನಿರ್ಮಾಣದ ಕೆಲಸಗಳು ಸುಸೂತ್ರವಾಗಿ ನಡೆದರೆ, 2025ರ ಆಗಸ್ಟ್‌ ನಂತರ ಲೋಕಾರ್ಪಣೆ ಕೂಡ ಆಗಲಿದೆ.

Upcoming 3 New Expressway In Karnataka Details

ನೂತನ ಎಕ್ಸ್‌ಪ್ರೆಸ್‌ವೇ ಕರ್ನಾಟಕದಲ್ಲಿ ಬೆಂಗಳೂರು ಗ್ರಾಮಾಂತರ & ಕೋಲಾರ, ಆಂಧ್ರ ಪ್ರದೇಶದ ಚಿತ್ತೂರು, ತಮಿಳುನಾಡಿನ ರಾಣಿಪೇಟೆ ಹಾಗೂ ಶ್ರೀಪೆರಂಬದೂರುಗಳಲ್ಲಿ ಹಾದು ಹೋಗಲಿದೆ. ಈ ಹೆದ್ದಾರಿ ನಿರ್ಮಾಣದಿಂದ ಬೆಂಗಳೂರು ಹಾಗೂ ಚೆನ್ನೈ ನಡುವಿನ ಪ್ರಯಾಣದ ಅವಧಿಯು 2 ರಿಂದ 3 ಗಂಟೆಗಳಿಗೆ ಇಳಿಕೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್‌ವೇ (Bengaluru-Mangaluru Expressway): ಈ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಹೆದ್ದಾರಿ ಸಚಿವಾಲಯ ಮುಂದಾಗಿದ್ದು, ಡಿಪಿಆರ್ ಸಿದ್ದಪಡಿಸುವ ಕೆಲಸದಲ್ಲಿ ತೊಡಗಿದೆ ಎಂದು ವರದಿಯಾಗಿದೆ. ಹೊಸ ಎಕ್ಸ್‌ಪ್ರೆಸ್‌ವೇ 335 ಕಿ.ಮೀ ಉದ್ದವಿರಲಿದ್ದು, 4 ಇಲ್ಲವೇ 6 ಲೈನ್‌ಗಳನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. 2028ರ ಮೊದಲು ಎಕ್ಸ್‌ಪ್ರೆಸ್‌ವೇ ನಿರ್ಮಾಣದ ಕೆಲಸಗಳು ಆರಂಭವಾಗುವ ಸಾಧ್ಯತೆಯಿದೆ.

ಈ ಹೊಸ ಎಕ್ಸ್‌ಪ್ರೆಸ್‌ವೇ ತುಮಕೂರು & ಹಾಸನ ಜಿಲ್ಲೆಗಳನ್ನು ಸಂಪರ್ಕಿಸಲಿದೆ. ಸದ್ಯ, ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸಲು 7 ರಿಂದ 8 ಗಂಟೆ ಬೇಕಾಗುತ್ತದೆ. ನೂತನ ಹೆದ್ದಾರಿ ನಿರ್ಮಾಣವಾದರೆ, ಈ ದೂರವನ್ನು ಆದಷ್ಟು ಬೇಗನೆ ಕ್ರಮಿಸಬಹುದು. ಈ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ & ರಾಜ್ಯ ಲೋಕೋಪಯೋಗಿ ಇಲಾಖೆ ಸಹಯೋಗದಲ್ಲಿ ನಿರ್ಮಾಣಗೊಳಿಸಲು ಉದ್ದೇಶಿಸಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು-ಪುಣೆ ಎಕ್ಸ್‌ಪ್ರೆಸ್‌ವೇ (Bengaluru-Pune Expressway): ಈ ಹೆದ್ದಾರಿ ನಿರ್ಮಾಣಕ್ಕೂ ತಯಾರಿಗಳು ನಡೆಯುತ್ತಿವೆ. ಇದು ಕರ್ನಾಟಕದ 9 ಹಾಗೂ ಮಹಾರಾಷ್ಟ್ರದ 3 ಜಿಲ್ಲೆಗಳಲ್ಲಿ ಹಾದು ಹೋಗಲಿದೆ ಎಂದು ಗೊತ್ತಾಗಿದೆ. ನೂತನ ಹೆದ್ದಾರಿಯನ್ನು 8 ಲೈನ್‌ಗಳಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. 2028ರ ಅಂತ್ಯದೊಳಗೆ ವಾಹನ ಸಂಚಾರಕ್ಕೆ ಮುಕ್ತಗೊಳ್ಳುವ ನಿರೀಕ್ಷೆಯಿದೆ.

ಹೊಸ ಬೆಂಗಳೂರು-ಪುಣೆ ಎಕ್ಸ್‌ಪ್ರೆಸ್‌ವೇ, 700 ಕಿ.ಮೀ ಉದ್ದವಿರಲಿದೆ. ಈ ರಸ್ತೆಯಲ್ಲಿ ವಾಹನಗಳ ಗರಿಷ್ಠ ವೇಗವನ್ನು 120 ಕೆಎಂಪಿಹೆಚ್‌ಗೆ ಮಿತಿಗೊಳಿಸಬಹುದು ಎಂದು ತಿಳಿದುಬಂದಿದೆ. ನೂತನ ಹೆದ್ದಾರಿ ನಿರ್ಮಾಣದ ನಂತರ, ಬೆಂಗಳೂರು & ಪುಣೆ ನಡುವೆ ಪ್ರಸ್ತುತವಿರುವ 15 ಗಂಟೆ ಪ್ರಯಾಣದ ಅವಧಿ 7 ಗಂಟೆಗಳಿಗೆ ಕಡಿಮೆಯಾಗಲಿದೆ ಎನ್ನಲಾಗಿದೆ. ಡಿಪಿಆರ್ ತಯಾರಾದ ಬಳಿಕ, ಭೂ ಸ್ವಾಧೀನ ಸೇರಿದಂತೆ ಮತ್ತಿತರ ಪ್ರಕ್ರಿಯೆಗಳು ಆರಂಭವಾಗಲಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, January 17, 2025, 10:07 [IST]
English summary
Upcoming 3 new expressway in karnataka details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+