ಮತ್ತಷ್ಟು ಕಠಿಣವಾಗಲಿದೆ ಸಂಚಾರ ನಿಯಮ, ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಮುಂದಾದ ಸರ್ಕಾರ

ಭಾರತದಲ್ಲಿ ರಸ್ತೆ ಅಪಘಾತದಿಂದಾಗಿ ವಿಶ್ವದಲ್ಲಿಯೇ ಅತಿ ಹೆಚ್ಚು ಸಾವುಗಳು ಸಂಭವಿಸುತ್ತವೆ. ಭಾರತದಲ್ಲಿ ಪ್ರತಿವರ್ಷ ರಸ್ತೆ ಅಪಘಾತದಿಂದ ಸುಮಾರು 1.50 ಲಕ್ಷ ಜನರು ಸಾವನ್ನಪ್ಪುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣವೆಂದರೆ ವಾಹನ ಸವಾರರು ಸಂಚಾರ ನಿಯಮಗಳನ್ನು ಉಲ್ಲಂಘಿಸುವುದು.

ಮತ್ತಷ್ಟು ಕಠಿಣವಾಗಲಿದೆ ಸಂಚಾರ ನಿಯಮ, ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಮುಂದಾದ ಸರ್ಕಾರ

ಎಲ್ಲಾ ವಾಹನ ಸವಾರರು ಸಂಚಾರ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಿ ಎಂಬ ಕಾರಣದಿಂದಾಗಿ ಕೇಂದ್ರ ಸರ್ಕಾರವು ಹೊಸ ಮೋಟಾರು ವಾಹನ ಕಾಯ್ದೆಯನ್ನು 2019ರ ಸೆಪ್ಟೆಂಬರ್ 1ರಂದು ಜಾರಿಗೆ ತಂದಿದೆ. ಈ ಕಾಯ್ದೆಯನ್ವಯ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರಿಗೆ ಬಾರಿ ಪ್ರಮಾಣದ ದಂಡವನ್ನು ವಿಧಿಸಲಾಗುವುದು.

ಮತ್ತಷ್ಟು ಕಠಿಣವಾಗಲಿದೆ ಸಂಚಾರ ನಿಯಮ, ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಮುಂದಾದ ಸರ್ಕಾರ

ಸರ್ಕಾರವು ಯಾವುದೇ ಕಾನೂನನ್ನು ಜಾರಿಗೆ ತಂದರೂ ಅವುಗಳನ್ನು ಸರಿಯಾಗಿ ಅನುಷ್ಟಾನಗೊಳಿಸುವ ಜವಾಬ್ದಾರಿ ಪೊಲೀಸರ ಮೇಲಿರುತ್ತದೆ. ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರು ಪೊಲೀಸರಿಗೆ ಲಂಚ ನೀಡಿ ಭಾರೀ ಪ್ರಮಾಣದ ದಂಡ ವಿಧಿಸುತ್ತಿರುವುದರಿಂದ ತಪ್ಪಿಸಿಕೊಳ್ಳುತ್ತಿದ್ದಾರೆ.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಮತ್ತಷ್ಟು ಕಠಿಣವಾಗಲಿದೆ ಸಂಚಾರ ನಿಯಮ, ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಮುಂದಾದ ಸರ್ಕಾರ

ಪೊಲೀಸರ ವಿರುದ್ಧ ಸಾಕಷ್ಟು ದೂರುಗಳು ಕೇಳಿಬಂದಿದ್ದವು. ಇದಕ್ಕೆ ಕಡಿವಾಣ ಹಾಕಲು ಉತ್ತರ ಪ್ರದೇಶ ಸರ್ಕಾರವು ಮುಂದಾಗಿದೆ. ಜೂನ್ 15ರಿಂದ ಉತ್ತರ ಪ್ರದೇಶದ ಯಾವುದೇ ಭಾಗದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರಿಗೆ ಇ-ಚಲನ್ ನೀಡಲಾಗುವುದು.

ಮತ್ತಷ್ಟು ಕಠಿಣವಾಗಲಿದೆ ಸಂಚಾರ ನಿಯಮ, ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಮುಂದಾದ ಸರ್ಕಾರ

ಸದ್ಯಕ್ಕೆ ಲಖನೌ, ಗಾಜಿಯಾಬಾದ್, ಗೌತಮ ಬುದ್ಧ ನಗರ, ವಾರಣಾಸಿ, ಆಗ್ರಾ, ಬರೇಲಿ, ಪ್ರಯಾಗರಾಜ್ ಹಾಗೂ ಕಾನ್ಪುರಗಳಲ್ಲಿ ಮಾತ್ರ ಇ-ಚಲನ್ ನೀಡಲಾಗುತ್ತಿದೆ. ಉಳಿದೆಡೆ ಸ್ಥಳದಲ್ಲಿಯೇ ದಂಡ ವಿಧಿಸಲಾಗುತ್ತಿದೆ. ಇದು ಭ್ರಷ್ಟಾಚಾರಕ್ಕೂ ದಾರಿ ಮಾಡಿಕೊಟ್ಟಿದೆ.

MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಮತ್ತಷ್ಟು ಕಠಿಣವಾಗಲಿದೆ ಸಂಚಾರ ನಿಯಮ, ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಮುಂದಾದ ಸರ್ಕಾರ

ಜೂನ್ 15 ರಿಂದ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರಿಗೆ ಇ-ಚಲನ್ ನೀಡಲಾಗುವುದು. ಉತ್ತರಪ್ರದೇಶದಲ್ಲಿ ಒಟ್ಟು 75 ಜಿಲ್ಲೆಗಳಿದ್ದು, ಈ ಎಲ್ಲಾ ಜಿಲ್ಲೆಗಳಲ್ಲೂ ಜೂನ್ 15ರಿಂದ ಇ-ಚಲನ್ ನೀಡಲಾಗುವುದು. ಕೈಯಿಂದ ಬರೆಯಲಾಗುವ ಚಲನ್‌ಗಳನ್ನು ಸ್ಥಗಿತಗೊಳಿಸಲಾಗುವುದು.

ಮತ್ತಷ್ಟು ಕಠಿಣವಾಗಲಿದೆ ಸಂಚಾರ ನಿಯಮ, ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಮುಂದಾದ ಸರ್ಕಾರ

ಇದರಿಂದ ಪಾರದರ್ಶಕತೆ ಕಾಯ್ದುಕೊಳ್ಳಲಾಗುವುದು. ಈ ಬಗ್ಗೆ ಮಾತನಾಡಿರುವ ಉತ್ತರ ಪ್ರದೇಶದ ಹಿರಿಯ ಪೊಲೀಸ್ ಇಲಾಖೆ ಅಧಿಕಾರಿಗಳು, ಸಮಗ್ರ ಇ-ಚಲನ್ ವ್ಯವಸ್ಥೆಯು ಮೋಟಾರು ಸಂಚಾರ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಪಾರದರ್ಶಕತೆಯನ್ನು ತರಲಿದೆ. ಇ-ಚಲನ್ ವಿತರಿಸಿದ ನಂತರ ವಾಹನ ಮಾಲೀಕರು ಎಸ್‌ಎಂಎಸ್ ಮೂಲಕ ಮಾಹಿತಿ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.

MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಮತ್ತಷ್ಟು ಕಠಿಣವಾಗಲಿದೆ ಸಂಚಾರ ನಿಯಮ, ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಮುಂದಾದ ಸರ್ಕಾರ

ಇ-ಚಲನ್‌ನಿಂದ ನಿಯಮಿತವಾಗಿ ನಿಯಮಗಳನ್ನು ಉಲ್ಲಂಘಿಸುವ ವಾಹನ ಚಾಲಕರನ್ನು ಸುಲಭವಾಗಿ ಪತ್ತೆ ಹಚ್ಚಬಹುದು. ನಿಯಮಗಳನ್ನು ಉಲ್ಲಂಘಿಸುವವರಿಗೆ ಇ-ಚಲನ್ ಜೊತೆಗೆ ಫೋಟೋಗಳನ್ನು ಕಳುಹಿಸಲಾಗುತ್ತದೆ.

ಮತ್ತಷ್ಟು ಕಠಿಣವಾಗಲಿದೆ ಸಂಚಾರ ನಿಯಮ, ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಮುಂದಾದ ಸರ್ಕಾರ

ಇದರ ಜೊತೆಗೆ ಕರ್ತವ್ಯದಲ್ಲಿರುವ ಪೊಲೀಸರಿಗೆ ಪೋರ್ಟಬಲ್ ಕ್ಯಾಮೆರಾ ನೀಡಲಾಗುವುದು. ಇದರಿಂದ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರು ಹಾಗೂ ಅವರ ವಾಹನಗಳ ಫೋಟೋಗಳನ್ನು ತೆಗೆಯಲು ಸಾಧ್ಯವಾಗಲಿದೆ.

MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!

ಮತ್ತಷ್ಟು ಕಠಿಣವಾಗಲಿದೆ ಸಂಚಾರ ನಿಯಮ, ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಮುಂದಾದ ಸರ್ಕಾರ

ನಂತರ ಈ ಫೋಟೋಗಳನ್ನು ಪೊಲೀಸ್ ಇಲಾಖೆಯ ಡೇಟಾಬೇಸ್‌ಗೆ ಕಳುಹಿಸಲಾಗುತ್ತದೆ. ಇದರಿಂದ ಪದೇ ಪದೇ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರನ್ನು ಪತ್ತೆಹಚ್ಚಲು ಅನುಕೂಲವಾಗಲಿದೆ.

ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್‌ಗಾಗಿ ಬಳಸಲಾಗಿದೆ.

Most Read Articles

Kannada
English summary
Uttar Pradesh Police to use e-challans for traffic violations across state. Read in Kannada.
Story first published: Tuesday, June 9, 2020, 12:23 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X