ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿ ಕ್ರೌರ್ಯ ಮೆರೆದ ಪೊಲೀಸರು

ಇತ್ತೀಚಿನ ದಿನಗಳಲ್ಲಿ ಉತ್ತರ ಪ್ರದೇಶ ಪೊಲೀಸರು ದೇಶಾದ್ಯಂತ ಸುದ್ದಿಯಾಗುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ವಿಕಾಸ್ ದುಬೆ ಎನ್ ಕೌಂಟರ್ ಪ್ರಕರಣದಿಂದ ಸುದ್ದಿಯಾಗಿದ್ದರು. ಕಾನ್ಪುರದಲ್ಲಿ ನಡೆದ ಅಪಹರಣ ಹಾಗೂ ಕೊಲೆ ಪ್ರಕರಣದ ಬಗ್ಗೆ ವರದಿಯಾಗಿದೆ.

ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿ ಕ್ರೌರ್ಯ ಮೆರೆದ ಪೊಲೀಸರು

ಇದಲ್ಲದೆ ಗೋರಖ್‌ಪುರ ಗ್ರಾಮಾಂತರ ಪ್ರದೇಶದಲ್ಲಿಯೂ ಅಪಹರಣ ಹಾಗೂ ಸುಲಿಗೆ ಪ್ರಕರಣಗಳು ವರದಿಯಾಗಿವೆ. ಈ ಘಟನೆಗಳಿಂದ ಉತ್ತರ ಪ್ರದೇಶಪೊಲೀಸರ ಮೇಲೆ ಒತ್ತಾಡವುಂಟಾಗಿದೆ. ಆದರೆ ಉತ್ತರಾಖಂಡ ಪೊಲೀಸರ ವರ್ತನೆ ಈ ಘಟನೆಗಳಿಗೆ ವ್ಯತಿರಿಕ್ತವಾಗಿದೆ. ಉತ್ತರಾಖಂಡ ಪೊಲೀಸರು ಮಾನವೀಯತೆಯನ್ನು ಮರೆತಂತೆ ವರ್ತಿಸಿದ್ದಾರೆ.

ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿ ಕ್ರೌರ್ಯ ಮೆರೆದ ಪೊಲೀಸರು

ಪೊಲೀಸರ ಕ್ರೌರ್ಯವನ್ನು ಎತ್ತಿ ತೋರಿಸುವ ಈ ಘಟನೆ ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ರುದ್ರಪುರ ನಗರದಲ್ಲಿ ನಡೆದಿದೆ. ಈ ಘಟನೆಯಲ್ಲಿ ಉತ್ತರಾಖಂಡ ಪೊಲೀಸ್ ಸಿಟಿ ಪ್ಯಾಟ್ರೋಲ್ ಘಟಕದವರು ಬೈಕ್ ಸವಾರಿ ಮಾಡುವಾಗ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬನಿಗೆ ಥಳಿಸಿದ್ದಾರೆ.

MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿ ಕ್ರೌರ್ಯ ಮೆರೆದ ಪೊಲೀಸರು

ಇಷ್ಟು ಸಾಲದೆಂಬಂತೆ ಪೊಲೀಸ್ ಸಿಬ್ಬಂದಿ ಯುವಕನ ಹಣೆಗೆ ಕೀಲಿಗಳಿಂದ ಹಲ್ಲೆ ಮಾಡಿದ್ದು, ಯುವಕನಿಗೆ ರಕ್ತಸ್ರಾವವಾಗಿದೆ. ನಂತರ ಯುವಕನನ್ನು ಚಿಕಿತ್ಸೆಗಾಗಿಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿ ಕ್ರೌರ್ಯ ಮೆರೆದ ಪೊಲೀಸರು

ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ರುದ್ರಾಪುರ ಪ್ರದೇಶದಲ್ಲಿದ್ದ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಈ ಯುವಕನನ್ನು ತಡೆದು ನಿಲ್ಲಿಸಿದ್ದಾರೆ. ಈ ಯುವಕ ಸಂಚಾರ ನಿಯಮಗಳನ್ನು ಪಾಲಿಸುತ್ತಿರಲಿಲ್ಲ.

MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿ ಕ್ರೌರ್ಯ ಮೆರೆದ ಪೊಲೀಸರು

ಈ ಕಾರಣಕ್ಕೆ ಪೊಲೀಸ್ ಸಿಬ್ಬಂದಿ ಹಾಗೂ ಯುವಕನ ನಡುವೆ ವಾಗ್ವಾದ ನಡೆದಿದೆ. ಅಲ್ಲಿಯೇ ಇದ್ದ ಪೊಲೀಸರೊಬ್ಬರು ಯುವಕನ ಬೈಕ್‌ನಿಂದ ಕೀಯನ್ನು ತೆಗೆದುಕೊಂಡು ಯುವಕನ ಹಣೆಯ ಮೇಲೆ ಹಲ್ಲೆ ನಡೆಸಿದ್ದಾರೆ.

ಕೀಯಿಂದ ಹಲ್ಲೆ ನಡೆಸಿದ ಕಾರಣಕ್ಕೆ ಯುವಕ ಗಾಯಗೊಂಡಿದ್ದು, ಆತನನ್ನು ಪ್ರಥಮ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೀಡಿಯೊದಲ್ಲಿ ಯುವಕನ ಹಣೆಯ ಮೇಲೆ ಕೀಯಿಂದ ಗಾಯಗಳಾಗಿರುವುದನ್ನು ಕಾಣಬಹುದು.

MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿ ಕ್ರೌರ್ಯ ಮೆರೆದ ಪೊಲೀಸರು

ಈ ಗಾಯದಿಂದಾಗಿ ರಕ್ತಸ್ರಾವವಾಗುತ್ತಿರುವುದನ್ನು ಸಹ ಕಾಣಬಹುದು. ಈ ಘಟನೆಯ ನಂತರ ಅಲ್ಲಿನ ಶಾಸಕರು ಸ್ಥಳಕ್ಕೆ ಧಾವಿಸಿ ಆ ಪ್ರದೇಶದಿಂದ ಸಿಟಿ ಪ್ಯಾಟ್ರೋಲ್ ಘಟಕವನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿದ್ದಾರೆ. ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ.

Most Read Articles

Kannada
English summary
Uttarakhand police assaults bike rider with key on his forehead. Read in Kannada.
Story first published: Wednesday, July 29, 2020, 16:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X