Vande Metro: ವಂದೇ ಮೆಟ್ರೋ ಬರುತ್ತೆ, ನಿಮ್ಮೂರಿಗೆ ಇನ್ನೂ ಕೆಲವೇ ಗಂಟೆಗಳಲ್ಲಿ ಹೋಗಬಹುದು!

ದೇಶದಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ (Vande Bharat Express) ಹೈಸ್ಪೀಡ್ ರೈಲುಗಳಾಗಿ ಖ್ಯಾತಿಗಳಿಸಿವೆ. ಸಾಮಾನ್ಯ ರೈಲುಗಳಿಗಿಂತ ವೇಗವಾಗಿ ಚಲಿಸಿ, ಪ್ರಯಾಣಿಕರಿಗೆ ಬೇಗನೇ ನಿರ್ದಿಷ್ಟ ಗಮ್ಯ ಸ್ಥಾನವನ್ನು ತಲುಪಿಸುತ್ತವೆ. ಆದರೆ, ಈ ರೈಲುಗಳಲ್ಲಿ ರಾತ್ರಿ ವೇಳೆ ಹಾಗೂ ಹತ್ತಿರದ ಸಂಚಾರಕ್ಕೆ ಬಳಸಲಾಗುತ್ತಿಲ್ಲ.

ಅದಕ್ಕೆ ಪರಿಹಾರವಾಗಿ ರೈಲ್ವೆ ಇಲಾಖೆ ವಂದೇ ಭಾರತ್ ಸ್ಲೀಪರ್ (Vande Bharat sleeper) ಮತ್ತು ವಂದೇ ಮೆಟ್ರೋ (Vande Metro) ರೈಲುಗಳನ್ನು ಓಡಿಸಲು ಸಿದ್ಧತೆ ನಡೆಸುತ್ತಿದೆ. ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಮುಂದಿನ ವರ್ಷದ ಮಾರ್ಚ್‌ ತಿಂಗಳಲ್ಲಿ ದೇಶವು ತನ್ನ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಸಾಕ್ಷಿಯಾಗಲಿದೆ. ಚೆನ್ನೈನಲ್ಲಿರುವ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್‌)ಯಲ್ಲಿ ಈ ರೈಲನ್ನು ತಯಾರಿಸಲಾಗುತ್ತಿದೆ.

Vande Metro: ವಂದೇ ಮೆಟ್ರೋ ಬರುತ್ತೆ, ನಿಮ್ಮೂರಿಗೆ ಇನ್ನೂ ಕೆಲವೇ ಗಂಟೆಗಳಲ್ಲಿ ಹೋಗಬಹುದು!

'ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಸ್ಲೀಪರ್ ಕೋಚ್ ಅನ್ನು ಈ ಹಣಕಾಸು ವರ್ಷದಲ್ಲಿ ಲೋಕಾರ್ಪಣೆ ಮಾಡಲಾಗುತ್ತದೆ. ಮೊದಲ ರೈಲು ಉತ್ಪಾದನೆಯ ಹಂತದಲ್ಲಿದ್ದು, 2024ರ ಮಾರ್ಚ್ ವೇಳೆಗೆ ಸಿದ್ಧಗೊಳ್ಳಲಿದೆ' ಎಂದು ಐಸಿಎಫ್‌ನ ಜನರಲ್ ಮ್ಯಾನೇಜರ್ ಬಿಜಿ ಮಲ್ಯ ಹೇಳಿದ್ದಾರೆ. ಸ್ಲೀಪರ್ ರೈಲಿನ ಜೊತೆಗೆ ಐಸಿಎಫ್, ಕಡಿಮೆ ದರದಲ್ಲಿ ಪ್ರಯಾಣಿಸಬಹುದಾದ ವಂದೇ ಮೆಟ್ರೋ ರೈಲನ್ನು ಅಭಿವೃದ್ಧಿಪಡಿಸುವ ಕೆಲಸದಲ್ಲೂ ನಿರತವಾಗಿದೆ.

ವಂದೇ ಮೆಟ್ರೋ 12 ಬೋಗಿಗಳನ್ನು ಒಳಗೊಂಡಿರುವ ರೈಲು ಆಗಿದ್ದು, ಇದನ್ನು ಹತ್ತಿರದ ಪ್ರಯಾಣಕ್ಕಾಗಿ ಉಪಯೋಗ ಮಾಡಲು ರೈಲ್ವೆ ಇಲಾಖೆ ತೀರ್ಮಾನ ಮಾಡಿದೆ. ಈ ರೈಲು, 2024ರ ವೇಳೆಗೆ ಪ್ರಯಾಣಿಕರಿಗೆ ಸಿಗಲಿದೆ. ಉದಾಹರಣೆಗೆ ಇಂತಹ ರೈಲುಗಳನ್ನು ತುಮಕೂರು - ಬೆಂಗಳೂರು, ಮೈಸೂರು - ಬೆಂಗಳೂರು ನಡುವೆ ಕಾರ್ಯಾಚರಣೆ ನಡೆಸಬಹುದು.

Vande Metro: ವಂದೇ ಮೆಟ್ರೋ ಬರುತ್ತೆ, ನಿಮ್ಮೂರಿಗೆ ಇನ್ನೂ ಕೆಲವೇ ಗಂಟೆಗಳಲ್ಲಿ ಹೋಗಬಹುದು!

ಪ್ರಸ್ತುತ, ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲುಗಳಲ್ಲಿ ಆಸನ ವ್ಯವಸ್ಥೆ ಮಾತ್ರ ಇದ್ದು, ಕುಳಿತುಕೊಂಡು ಹೋಗಬಹುದು. ಇವುಗಳಿಂದ ರಾತ್ರಿಯ ಪ್ರಯಾಣ ಸಾಧ್ಯವಾಗುವುದಿಲ್ಲ. ಆ ಕಾರಣಕ್ಕೆ, ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳಲ್ಲಿ ಸ್ಲೀಪರ್ ಕೋಚ್ ಪರಿಚಯಿಸಲಾಗುತ್ತಿದೆ. ಇದರಿಂದ ಪ್ರಯಾಣಿಕರಿಗೆ ದೊಡ್ಡಮಟ್ಟದಲ್ಲಿ ಅನುಕೂಲವಾಗಲಿದೆ ಎಂದು ಹೇಳಬಹುದು.

ಸದ್ಯ, ರಾಜ್ಯದಲ್ಲಿ ಎರಡು ಪ್ರಮುಖ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಕಾರ್ಯಾಚರಣೆ ನಡೆಸುತ್ತಿವೆ. ಬೆಂಗಳೂರು - ಹುಬ್ಬಳ್ಳಿ - ಧಾರವಾಡ ನಡುವೆ ಸಂಚರಿಸುವ ರೈಲು, ಮಂಗಳವಾರ ಹೊರತುಪಡಿಸಿ, ವಾರದ ಎಲ್ಲ ದಿನಗಳಲ್ಲಿ ಓಡಾಟ ನಡೆಸುತ್ತಿದೆ. 7 ಗಂಟೆ ಪ್ರಯಾಣದ ಅವಧಿಯಿದೆ. ಮತ್ತೊಂದು ರೈಲು ಚೆನ್ನೈ - ಬೆಂಗಳೂರು - ಮೈಸೂರು ಮಾರ್ಗದಲ್ಲಿ ಸಂಚರಿಸುತ್ತದೆ.

ಕರ್ನಾಟಕದಲ್ಲಿ ಮತ್ತಷ್ಟು ವಂದೇ ಭಾರತ್ ರೈಲುಗಳು ಶೀಘ್ರದಲ್ಲೇ ಓಡಾಟ ನಡೆಸಲಿವೆ. ಹೊಸಪೇಟೆ - ಬೆಂಗಳೂರು, ಶಿವಮೊಗ್ಗ - ಬೆಂಗಳೂರು ಹಾಗೂ ಮಂಗಳೂರು - ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ನೀರಿಕ್ಷೆಯಿದ್ದು, ಕೆಲವೇ ದಿನಗಳಲ್ಲಿ ಈ ಭಾಗದ ಜನರಿಗೆ ಸಿಹಿಸುದ್ದಿ ಸಿಗಲಿದೆ. ಈ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳ ವಿಶೇಷತೆಗಳ ಬಗ್ಗೆ ಮಾತನಾಡುವುದಾದರೆ, ಇವು ಗಂಟೆಗೆ 180 ಕಿಮೀ ವೇಗದಲ್ಲಿ ಚಲಿಸುವ ಸಾಮರ್ಥ್ಯ ಹೊಂದಿವೆ.

ಆದರೆ, ಸುರಕ್ಷತೆ ದೃಷ್ಟಿಯಿಂದ ಅದರ ವೇಗವನ್ನು 160 ಕಿಮೀ.ಗೆ ಸೀಮಿತಗೊಳಿಸಲಾಗಿದೆ. ಈ ರೈಲಿಗೆ ಪ್ರತ್ಯೇಕ ಎಂಜಿನ್ ಇಲ್ಲ. ಪ್ರಯಾಣಿಕರ ಅನುಕೂಲಕ್ಕಾಗಿ ವೈ-ಫೈ ಸೌಲಭ್ಯವಿದ್ದು, ಸಂಪೂರ್ಣ ಹವಾ ನಿಯಂತ್ರಣ ವ್ಯವಸ್ಥೆಯಿರುವ ಈ ರೈಲಿನ ಸೀಟುಗಳು ಆರಾಮದಾಯವಾಗಿವೆ. ಜೈವಿಕ ಶೌಚಾಲಯ, ಸ್ವಯಂಚಾಲಿತ ಬಾಗಿಲು ಹಾಗೂ ಅಗ್ನಿ ನಿರೋಧಕ ಸಾಧನಗಳಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, September 16, 2023, 18:46 [IST]
English summary
Vande bharat sleeper vande metro maybe launch next year
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+